Connect with us

ಬಿಗ್ ನ್ಯೂಸ್

Dharmasthala-ಧರ್ಮಸ್ಥಳ ಸಮಾಧಿ ಅಗೆತ ಪ್ರಕರಣದಲ್ಲಿ ಟಿಸ್ಟ್; ಇಂದು ಯಾವ ಸ್ಥಳದಲ್ಲಿ ನಡೆಯಲಿದೆ ಉತ್ಖನನ?

Published

on



Ad Widget

Ad Widget

Ad Widget

Ad Widget

ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಧರ್ಮಸ್ಥಳದ ನೇತ್ರಾವತಿ ನದಿ ತೀರದ ಸಮಾಧಿ ಅಗೆತ ಪ್ರಕರಣವು ಮಂಗಳವಾರ ಮಹತ್ವದ ತಿರುವು ಪಡೆದುಕೊಂಡಿದೆ. ನಿಗದಿತ 11ನೇ ಸ್ಥಳದ ಬದಲು ಅನಾಮಿಕ ದೂರುದಾರ ಸೂಚಿಸಿದ ಅನಿರೀಕ್ಷಿತ ಸ್ಥಳದಲ್ಲಿ ಉತ್ಖನನ ನಡೆಸಿದಾಗ ಸಂಪೂರ್ಣ ಮಾನವ ಅಸ್ಥಿಪಂಜರವೊಂದು ಪತ್ತೆಯಾಗಿದ್ದು, ಇದು ವಿಶೇಷ ತನಿಖಾ ತಂಡದ (ಎಸ್ಐಟಿ) ತನಿಖೆಯ ದಿಕ್ಕನ್ನೇ ಬದಲಿಸಿದೆ.

Ad Widget

Ad Widget

Ad Widget

Ad Widget

ಧರ್ಮಸ್ಥಳ: ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಧರ್ಮಸ್ಥಳದ ನೇತ್ರಾವತಿ ನದಿ ತೀರದ ಸಮಾಧಿ ಅಗೆತ ಪ್ರಕರಣವು ಮಂಗಳವಾರ ಮಹತ್ವದ ತಿರುವು ಪಡೆದುಕೊಂಡಿದೆ. ನಿಗದಿತ 11ನೇ ಸ್ಥಳದ ಬದಲು ಅನಾಮಿಕ ದೂರುದಾರ ಸೂಚಿಸಿದ ಅನಿರೀಕ್ಷಿತ ಸ್ಥಳದಲ್ಲಿ ಉತ್ಖನನ ನಡೆಸಿದಾಗ ಸಂಪೂರ್ಣ ಮಾನವ ಅಸ್ಥಿಪಂಜರವೊಂದು ಪತ್ತೆಯಾಗಿದ್ದು, ಇದು ವಿಶೇಷ ತನಿಖಾ ತಂಡದ (ಎಸ್ಐಟಿ) ತನಿಖೆಯ ದಿಕ್ಕನ್ನೇ ಬದಲಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ದೂರುದಾರ ಗುರುತಿಸಿದ್ದ 13 ಸ್ಥಳಗಳಲ್ಲಿ ಒಂದೊಂದಾಗಿ ಉತ್ಖನನ ನಡೆಸುತ್ತಿದ್ದ ಎಸ್ಐಟಿ, ನಿಗದಿತ ವೇಳಾಪಟ್ಟಿಯಂತೆ ಮಂಗಳವಾರ 11ನೇ ಪಾಯಿಂಟ್ನಲ್ಲಿ ಕಾರ್ಯಾಚರಣೆ ನಡೆಸಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ತನಿಖಾ ತಂಡವನ್ನು ಸಂಪರ್ಕಿಸಿದ ದೂರುದಾರ, ಆ ಸ್ಥಳವನ್ನು ಬಿಟ್ಟು ನದಿ ತೀರದ ಕಾಡಿನ ಮತ್ತೊಂದು ಭಾಗಕ್ಕೆ ಕರೆದೊಯ್ದಿದ್ದಾನೆ. ಈ ಅನಿರೀಕ್ಷಿತ ನಡೆಯಿಂದ ಆರಂಭದಲ್ಲಿ ಗೊಂದಲ ಉಂಟಾದರೂ, ಆತನ ಸೂಚನೆಯಂತೆ ಉತ್ಖನನ ನಡೆಸಿದಾಗ ತನಿಖೆಗೆ ಮಹತ್ವದ ಸಾಕ್ಷ್ಯ ಲಭ್ಯವಾಗಿದೆ.

Ad Widget

Ad Widget <> Ad Widget

ಪತ್ತೆಯಾದ ಸಂಪೂರ್ಣ ಅಸ್ಥಿಪಂಜರ
ದೂರುದಾರ ತೋರಿಸಿದ ಹೊಸ ಸ್ಥಳದಲ್ಲಿ ಮಣ್ಣು ಅಗೆಯುತ್ತಿದ್ದಂತೆ, ಅಸ್ಥಿಪಂಜರ ಮೂಳೆಗಳು ಪತ್ತೆಯಾಗಿದೆ. ಇದುವರೆಗಿನ ಉತ್ಖನನದಲ್ಲಿ ಸಿಕ್ಕಿದ ಕುರುಹುಗಳಿಗಿಂತ ಇದು ಹೆಚ್ಚು ಮಹತ್ವದ್ದಾಗಿದ್ದು, ಪ್ರಕರಣದ ತನಿಖೆಗೆ ನಿರ್ಣಾಯಕ ಸಾಕ್ಷ್ಯವಾಗುವ ಎಲ್ಲ ಸಾಧ್ಯತೆಗಳಿವೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ. ಪತ್ತೆಯಾದ ಅಸ್ಥಿಪಂಜರವನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ (ಫೊರೆನ್ಸಿಕ್) ಬೆಂಗಳೂರಿಗೆ ಕಳುಹಿಸಲು ತಂಡವು ಸಿದ್ಧತೆ ನಡೆಸಿದೆ.



Ad Widget

ಇಂದಿನ ಕಾರ್ಯಾಚರಣೆ ಎಲ್ಲಿ?
ನಿನ್ನೆಯ ಅನಿರೀಕ್ಷಿತ ಬೆಳವಣಿಗೆಯ ಹಿನ್ನೆಲೆಯಲ್ಲಿ, ಇಂದಿನ ಕಾರ್ಯಾಚರಣೆಯ ಸ್ಥಳದ ಬಗ್ಗೆಯೂ ತೀವ್ರ ಕುತೂಹಲ ಮೂಡಿದೆ. ಈವರೆಗೆ ನದಿ ತೀರದ ತಗ್ಗು ಪ್ರದೇಶಗಳಲ್ಲಿ ಉತ್ಖನನ ನಡೆಸಲಾಗುತ್ತಿತ್ತು. ಆದರೆ, ಅಸ್ಥಿಪಂಜರ ಪತ್ತೆಯಾದ ಸ್ಥಳವು ತುಸು ಎತ್ತರದ ಪ್ರದೇಶವಾಗಿದ್ದರಿಂದ, ಇಂದಿನಿಂದ ಎತ್ತರದ ಗುಡ್ಡಗಾಡು ಪ್ರದೇಶಗಳಲ್ಲಿ ಉತ್ಖನನ ನಡೆಸಲು ಎಸ್ಐಟಿ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ದೂರುದಾರ ನೀಡುವ ಹೊಸ ಸುಳಿವಿನ ಮೇಲೆ ಇಂದಿನ ಕಾರ್ಯಾಚರಣೆಯು ಅವಲಂಬಿತವಾಗಿದೆ.

Ad Widget

Ad Widget

ಒಟ್ಟಿನಲ್ಲಿ, ಅನಾಮಿಕ ದೂರುದಾರನೊಬ್ಬನ ಸುಳಿವು ಇಡೀ ಪ್ರಕರಣದ ತನಿಖಾ ಹಾದಿಯನ್ನೇ ಬದಲಾಯಿಸಿದ್ದು, ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ನಿನ್ನೆ ಪತ್ತೆಯಾದ ಅಸ್ಥಿಪಂಜರದ ಗುರುತು ಪತ್ತೆ ಹಚ್ಚುವುದು ಹಾಗೂ ಸಾವಿಗೆ ಕಾರಣವೇನು ಎಂಬುದನ್ನು ಕಂಡುಹಿಡಿಯುವುದು ಎಸ್ಐಟಿಗೆ ಎದುರಾಗಿರುವ ಬಹುದೊಡ್ಡ ಸವಾಲಾಗಿದೆ. ಈ ಬೆಳವಣಿಗೆಯು ಪ್ರಕರಣದ ಕುರಿತಾದ ಸಾರ್ವಜನಿಕರ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಮಂಗಳೂರು

MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ

Published

on



Ad Widget

Ad Widget

Ad Widget

Ad Widget

MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.

Ad Widget

Ad Widget <> Ad Widget

ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.



Ad Widget

ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

Ad Widget

Ad Widget

ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.

EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.

Ad Widget
Continue Reading

ಮಂಗಳೂರು

Mangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು

Published

on



Ad Widget

Ad Widget

Ad Widget

Ad Widget

ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು, ಅ 9: ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (Albert Rego) ಅವರು ಕಳೆದ ಜುಲೈ 19ರಂದು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದೀಗ ಕುಂಟಿಕಾನ ಸಮೀಪದ ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಹೂತು ಹಾಕಿರುವ ಅವರ ಶವವನ್ನು ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ನೆರವಿನಿಂದ ಪರಿಶೀಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಸ್ನೇಹಿತನ ದೂರಿನಿಂದ ಬಯಲಿಗೆ ಬಂದ ಅನುಮಾನ



Ad Widget

ಆಲ್ಬರ್ಟ್ ರೇಗೋ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಅವರ ಸ್ನೇಹಿತ ಹೆರಾಲ್ಡ್ ಪಿರೇರಾ ಅವರು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾವಿನ ಬಗ್ಗೆ ಸ್ಥಳೀಯರಿಗೆ ಹಾಗೂ ಕುಟುಂಬದ ಇತರ ಸದಸ್ಯರಿಗೆ ಮಾಹಿತಿ ನೀಡದೆ, ಆಪ್ತರ ಮೂಲಕ ಮಗಳು ಮಾಯಾ ರೇಗೋ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಾ ರೇಗೋ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

Ad Widget

Ad Widget

ಆಸ್ತಿಗಾಗಿ ಕಿರುಕುಳ ನೀಡಿದ್ದ ಆರೋಪ

ಆಲ್ಬರ್ಟ್ ರೇಗೋ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಸಾಕಷ್ಟು ಆಸ್ತಿ ಸಂಪಾದಿಸಿದ್ದರು ಎನ್ನಲಾಗಿದೆ. ಅವರ ಇಬ್ಬರು ಮಕ್ಕಳು ಬೇರೆ ಬೇರೆ ಕಡೆ ನೆಲೆಸಿದ್ದರೆ, ಮಾಯಾ ರೇಗೋ ಮಾತ್ರ ಅವರೊಂದಿಗೆ ವಾಸವಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಬಲವಂತವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಳ್ಳಲು ಯತ್ನಿಸಿದ್ದಾಳೆ ಎಂಬುದು ದೂರುದಾರರ ಆರೋಪ. ತನಗೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿರುವ ಬಗ್ಗೆ ಆಲ್ಬರ್ಟ್ ಅವರು ಸ್ನೇಹಿತರ ಬಳಿ ಹೇಳಿಕೊಂಡಿದ್ದರು. ತನಗೇನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮಗಳ ಕಿರುಕುಳವೇ ಕಾರಣವಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದರು ಎಂದು ಹೆರಾಲ್ಡ್ ಪಿರೇರಾ ದೂರಿನಲ್ಲಿ ತಿಳಿಸಿದ್ದಾರೆ.

ಮಾದಕ ವ್ಯಸನದ ಆರೋಪವನ್ನೂ ಮಾಯಾ ರೇಗೋ ವಿರುದ್ಧ ಮಾಡಲಾಗಿದ್ದು, ಹಣ ಮತ್ತು ಆಸ್ತಿಯ ವಿಚಾರವಾಗಿ ಇತರರ ನೆರವಿನಿಂದ ತಂದೆಯನ್ನು ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕೃತ್ಯಕ್ಕೆ ಬೋಂದೆಲ್‌ನ ವೈದ್ಯರೊಬ್ಬರು ಹಾಗೂ ಪೊಲೀಸ್ ಪೇದೆಯೊಬ್ಬರು ಸಹಕರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಆದರೆ, ಈ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.

ಅಸ್ಥಿಪಂಜರದ ಪರೀಕ್ಷೆಯಿಂದ ಸಿಗಲಿದೆಯೇ ಸುಳಿವು?

ಪ್ರಕರಣದ ತನಿಖೆಯಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಇದೀಗ ಸಾವಿನ ನೈಜ ಕಾರಣ ಪತ್ತೆಹಚ್ಚಲು ಹೂತು ಹಾಕಿರುವ ಶವವನ್ನು ಹೊರತೆಗೆಯುವ ನಿರ್ಧಾರ ಕೈಗೊಂಡಿದ್ದಾರೆ. ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಆಗಮಿಸಿ ಪ್ರಕ್ರಿಯೆಗೆ ಮುಂದಾಗಿದ್ದಾರೆ.

ಮಾಯಾ ರೇಗೋ ಹಾಗೂ ದೂರುದಾರರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.

ಎರಡು ತಿಂಗಳ ಹಿಂದೆ ನಡೆದ ಸಾವು ಕೊಲೆ ಕೃತ್ಯವೇ? ಸಾವಿನ ಹಿಂದಿದೆಯಾ ಆಸ್ತಿ ವಿವಾದ ? ಎಂಬ ಪ್ರಶ್ನೆಗಳಿಗೆ ವಿಧಿವಿಜ್ಞಾನ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ. ಸದ್ಯ ಪ್ರಕರಣದ ಆರೋಪಗಳು ತನಿಖಾ ಹಂತದಲ್ಲಿದ್ದು, ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆ ನಿರ್ಣಾಯಕವಾಗಲಿವೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading