Connect with us

ಅಪರಾಧ

Arrested-ಮಹಿಳೆಯೆದರು ಪ್ಯಾಂಟ್ ಬಿಚ್ಚಿದವನು ಅರೆಸ್ಟ್

Published

on



Ad Widget

Ad Widget

Ad Widget

Ad Widget

ಕೆಂಗೇರಿಯಲ್ಲಿ ಮಹಿಳೆಯೊಬ್ಬರ ಎದುರು ಅಸಭ್ಯವಾಗಿ ವರ್ತಿಸಿ, ಪ್ಯಾಂಟ್ ಬಿಚ್ಚಿದ ಆರೋಪದ ಮೇಲೆ ವಿಶಾಲ್ ಮೆಗಾ ಮಾರ್ಟ್‌ನ ಕಾವಲುಗಾರ ಚಂದ್ರಹಾಸನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಕೆಂಗೇರಿಯಲ್ಲಿ ಮಹಿಳೆಯೊಬ್ಬರ ಎದುರು ಅಸಭ್ಯವಾಗಿ ವರ್ತಿಸಿ, ಪ್ಯಾಂಟ್ ಬಿಚ್ಚಿದ ಆರೋಪದ ಮೇಲೆ ವಿಶಾಲ್ ಮೆಗಾ ಮಾರ್ಟ್‌ನ ಕಾವಲುಗಾರ ಚಂದ್ರಹಾಸನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕೆಂಗೇರಿ ಉಪನಗರದ ನಿವಾಸಿ ಎಸ್. ಉಷಾರಾಣಿ ಅವರ ದೂರಿನ ಆಧಾರದ ಮೇಲೆ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.

Ad Widget

Ad Widget <> Ad Widget

ದೂರಿನ ಪ್ರಕಾರ, ಮೀನಿನ ಅಂಗಡಿ ಜಾಗದ ವಿಷಯಕ್ಕೆ ಸಂಬಂಧಿಸಿದಂತೆ ಚಂದ್ರಹಾಸನೊಂದಿಗೆ ವಾಗ್ವಾದ ನಡೆದಿತ್ತು. ಈ ಬಗ್ಗೆ ಮಾರ್ಟ್‌ನ ವ್ಯವಸ್ಥಾಪಕರಿಗೆ ದೂರು ನೀಡಲು ತೆರಳಿದಾಗ, ಆರೋಪಿಯು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.



Ad Widget

ಇದೇ ವೇಳೆ, ಚಂದ್ರಹಾಸನು ಚೂಪಾದ ವಸ್ತುವಿನಿಂದ ಮಹಿಳೆಯ ಕಿವಿ ಮತ್ತು ಕುತ್ತಿಗೆಗೆ ಗಾಯಗೊಳಿಸಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಮಹಿಳೆ ದೂರು ದಾಖಲಿಸಿದ್ದಾರೆ. ಸಾರ್ವಜನಿಕರು 112ಕ್ಕೆ ಕರೆ ಮಾಡಿದ್ದರಿಂದ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣೆ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Click to comment

Leave a Reply

ಅಪರಾಧ

Raid-ರಾಜ್ಯದ 45 ಐಸ್‌ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!

Published

on



Ad Widget

Ad Widget

Ad Widget

Ad Widget

ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಅ. 9: ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ನಾಲ್ಕು ಘಟಕಗಳಲ್ಲಿ ನಿಯಮ ಉಲ್ಲಂಘನೆ
ಪರಿಶೀಲನೆ ವೇಳೆ ಬೆಂಗಳೂರಿನ ಜಯನಗರ 3ನೇ ಬ್ಲಾಕ್‌ನ ಸಾವರ ಐಸ್‌ಕ್ರೀಂ ಕೆಫೆ, ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯ ಎಂ.ಎನ್. ಎಂಟರ್‌ಪ್ರೈಸಸ್, ಮೈಸೂರಿನ ಜಾನ್ ಕ್ಯಾಂಡಿ ಐಸ್‌ಕ್ರೀಂ ತಯಾರಿಕಾ ಘಟಕ ಹಾಗೂ ರಾಯಚೂರಿನ ಜೆಮಿನಿ ಐಸ್‌ಕ್ರೀಂ ತಯಾರಿಕಾ ಘಟಕಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿದೆ.

Ad Widget

Ad Widget <> Ad Widget

ಈ ಘಟಕಗಳ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಹಾಗೂ ಸಂಬಂಧಿತ ನಿಯಮಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.



Ad Widget

70 ಆಹಾರ ಮಾದರಿಗಳ ಸಂಗ್ರಹ
ವಿಶೇಷ ತಪಾಸಣೆಯ ಸಂದರ್ಭದಲ್ಲಿ ವಿವಿಧ ಘಟಕಗಳಿಂದ ಐಸ್‌ಕ್ರೀಂ, ಹಾಲು, ಹಾಲಿನ ಪುಡಿ, ಫ್ಲೇವರಿಂಗ್ ಪದಾರ್ಥಗಳು, ಸಕ್ಕರೆ, ಆಹಾರ ಸೇರ್ಪಡೆ ಪದಾರ್ಥಗಳು ಸೇರಿದಂತೆ ವಿವಿಧ ಕಚ್ಚಾವಸ್ತುಗಳ ಒಟ್ಟು 70 ಮಾದರಿಗಳನ್ನು ಸಂಗ್ರಹಿಸಲಾಗಿದೆ.

Ad Widget

Ad Widget

ಈ ಮಾದರಿಗಳನ್ನು ಗುಣಮಟ್ಟ ಮತ್ತು ಆಹಾರ ಸುರಕ್ಷತಾ ಮಾನದಂಡಗಳ ಪರಿಶೀಲನೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
ಪರಿಶೀಲನೆಯ ವೇಳೆ ಅವಧಿ ಮೀರಿದ ಐಸ್‌ಕ್ರೀಂ, ಹಾಲು, ಬಿಸ್ಕತ್ ಹಾಗೂ ಕೊಬ್ಬರಿ ಪುಡಿ ಪತ್ತೆಯಾಗಿವೆ. ಅಲ್ಲದೆ, ಕೆಲವು ಆಹಾರ ಉತ್ಪನ್ನಗಳ ಮೇಲೆ ಲೇಬಲಿಂಗ್ ನಿಯಮಗಳನ್ನು ಸರಿಯಾಗಿ ಪಾಲಿಸದಿರುವುದೂ ಅಧಿಕಾರಿಗಳ ಗಮನಕ್ಕೆ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ.

ಆಹಾರ ಪದಾರ್ಥಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಇಂತಹ ತಪಾಸಣೆಗಳನ್ನು ಮುಂದುವರಿಸಲಾಗುವುದು. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

Ad Widget
Continue Reading

ಸ್ಥಳೀಯ

Yatnal-ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿದ ಆರೋಪ : ಯತ್ನಾಳ್ ವಿರುದ್ಧ ಎಫ್‌ಐಆರ್

Published

on



Ad Widget

Ad Widget

Ad Widget

Ad Widget

ಜೀವಂತವಾಗಿರುವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅರ್ಜಿ ಸಲ್ಲಿಸಿದ ಆರೋಪದ ಮೇಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದೇ ರೀತಿಯ ಆರೋಪದಡಿ ಬಿಜೆಪಿ ಪಾಲಿಕೆ ಸದಸ್ಯ ಗಿರೀಶ ಪಾಟೀಲ ಹಾಗೂ ತಿಕೋಟಾದ ಆರು ಮಂದಿ ವಿರುದ್ಧವೂ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Ad Widget

Ad Widget

Ad Widget

Ad Widget

ವಿಜಯಪುರ: ಜೀವಂತವಾಗಿರುವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅರ್ಜಿ ಸಲ್ಲಿಸಿದ ಆರೋಪದ ಮೇಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದೇ ರೀತಿಯ ಆರೋಪದಡಿ ಬಿಜೆಪಿ ಪಾಲಿಕೆ ಸದಸ್ಯ ಗಿರೀಶ ಪಾಟೀಲ ಹಾಗೂ ತಿಕೋಟಾದ ಆರು ಮಂದಿ ವಿರುದ್ಧವೂ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Ad Widget

Ad Widget

Ad Widget alt="Ad Widget"/>

Ad Widget

ಯತ್ನಾಳ್ ವಿರುದ್ಧ ದೂರು
ವಿಜಯಪುರ ನಗರದ ಬಾಗವಾನ ಕಾಲೊನಿ ನಿವಾಸಿ ಅಬ್ದುಲ ರಜಾಕ ಬಾಗವಾನ್ (50) ಅವರು ಗುರುವಾರ ಜಲನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget <> Ad Widget

ತಾನು ಜೀವಂತವಾಗಿದ್ದು, ತರಕಾರಿ ವ್ಯಾಪಾರ ಮಾಡಿಕೊಂಡಿದ್ದೇನೆ. ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರನಾಗಿದ್ದು, ಮತದಾರರ ಗುರುತಿನ ಚೀಟಿಯನ್ನೂ ಹೊಂದಿದ್ದೇನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.



Ad Widget

ಆದರೆ, ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ತಾನು ಮೃತಪಟ್ಟಿರುವುದಾಗಿ ನಕಲಿ ಮರಣ ಪ್ರಮಾಣಪತ್ರವನ್ನು ಲಗತ್ತಿಸಿ, ತನ್ನ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಸೆಪ್ಟೆಂಬರ್ 3ರಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಿಗೆ ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಮೂಲಕ ವಂಚನೆ ಎಸಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Ad Widget

Ad Widget

ಪಾಲಿಕೆ ಸದಸ್ಯ ಗಿರೀಶ ಪಾಟೀಲ ವಿರುದ್ಧವೂ ಪ್ರಕರಣ
ವಿಜಯಪುರ ನಗರದ ನಿಸಾರಮಡ್ಡಿ ನಿವಾಸಿ ಜಾವೀದ್ ಇಂಡಿಕರ್ (32) ಅವರು ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ ಹಾಗೂ ಶಾಸಕ ಯತ್ನಾಳ್ ಅವರ ಬೆಂಬಲಿಗ ಗಿರೀಶ ಪಾಟೀಲ ವಿರುದ್ಧ ಗಾಂಧಿಚೌಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾನು ನಿಸಾರಮಡ್ಡಿಯಲ್ಲಿ ವಾಸವಿಲ್ಲ ಎಂಬುದಾಗಿ ಸುಳ್ಳು ದಾಖಲೆ ಸೃಷ್ಟಿಸಿ, ತನ್ನ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸುವಂತೆ ಗಿರೀಶ ಪಾಟೀಲ ಅವರು ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ್ದಾರೆ ಎಂದು ಜಾವೀದ್ ಆರೋಪಿಸಿದ್ದಾರೆ. ಈ ಸಂಬಂಧ ಅಕ್ಟೋಬರ್ 6ರಂದು ದೂರು ದಾಖಲಿಸಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ತಿಕೋಟಾದ ಆರು ಮಂದಿ ವಿರುದ್ಧ ಎಫ್‌ಐಆರ್
ತಿಕೋಟಾ ಪಟ್ಟಣದ ನಿವಾಸಿ ಹಾಜಿಲಾಲ ಕೊಟ್ಟಲಗಿ (68) ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ ಆರೋಪದ ಮೇಲೆ ಆರು ಮಂದಿ ವಿರುದ್ಧ ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಮು ಗೊಳಸಂಗಿ, ವಿನಾಯಕ ಮಮದಾಪುರ, ಮಹೇಶ ಮುಕರ್ತಿಹಾಳ, ಆನಂದ ಅಂಬಿಗೇರ, ಹುಚ್ಚಪ್ಪ ಗಾಣಿಗೇರ ಹಾಗೂ ಗೋವಿಂದ ಮುದನೂರ ವಿರುದ್ಧ ಹಾಜಿಲಾಲ ಕೊಟ್ಟಲಗಿ ಅಕ್ಟೋಬರ್ 6ರಂದು ದೂರು ನೀಡಿದ್ದಾರೆ.

ತಾನು ಮುಸ್ಲಿಂ ಎಂಬ ಕಾರಣಕ್ಕೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವ ಉದ್ದೇಶದಿಂದ ನಕಲಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Ad Widget
Continue Reading

ಅಪರಾಧ

Udupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ, ಅ.8: ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕೊಲೆಯಾದ ಉದ್ಯಮಿ ಡೇವಿಡ್ ಡಿಸೋಜಾ ಅವರ ಪುತ್ರನಿಗೆ ವಾಟ್ಸಾಪ್ ಕರೆ ಮಾಡಿರುವ ಅಪರಿಚಿತ ವ್ಯಕ್ತಿಯೊಬ್ಬ, ₹5 ಕೋಟಿ ನೀಡುವಂತೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

Ad Widget

Ad Widget <> Ad Widget

“ನಿನ್ನ ತಂದೆಯಿಂದ ನನ್ನ ಸಹೋದರನಿಗೆ ಸಾಕಷ್ಟು ನಷ್ಟವಾಗಿತ್ತು. ಆ ಕಾರಣಕ್ಕೆ ನಾನೇ ಕೊಲೆ ಮಾಡಿಸಿದ್ದೆ. ನಮಗಾಗಿರುವ ನಷ್ಟವನ್ನು ತುಂಬಿಕೊಡಲು ₹5 ಕೋಟಿ ನೀಡಬೇಕು” ಎಂದು ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Ad Widget

ಇನ್ನೊಬ್ಬ ಉದ್ಯಮಿ ಹಾಗೂ ಖಾಸಗಿ ಸಂಸ್ಥೆಯ ವ್ಯಕ್ತಿಗೂ ಹೇಮಂತ್ ಪೂಜಾರಿ ಹೆಸರಿನಲ್ಲಿ ವಾಟ್ಸಾಪ್ ಕರೆಗಳು ಬಂದಿದ್ದು, ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿವೆ.

Ad Widget

Ad Widget

25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಆರೋಪಿ
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಹೇಮಂತ್ ಪೂಜಾರಿ ಪ್ರಮುಖ ಆರೋಪಿಯಾಗಿದ್ದಾನೆ. ಆತನ ಸಹೋದರ ಹಾಗೂ ಇತರ ಸಹಚರರ ನೆರವಿನಿಂದ ಹೊರರಾಜ್ಯದ ಶೂಟರ್‌ಗಳನ್ನು ಕರೆಸಿ ಕೊಲೆ ಮಾಡಿಸಲಾಗಿದೆ ಎಂಬ ಆರೋಪ ಪ್ರಕರಣದಲ್ಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಪೂಜಾರಿಯನ್ನು ಹೊರತುಪಡಿಸಿ ಉಳಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ಕಳೆದ 25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಹೇಮಂತ್ ಪೂಜಾರಿ ಬಗ್ಗೆ ಇದುವರೆಗೂ ಸ್ಪಷ್ಟ ಸುಳಿವು ಲಭ್ಯವಾಗಿಲ್ಲ. ಈ ನಡುವೆ ಆತನ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬಂದಿರುವುದು ಪೊಲೀಸರ ಗಮನ ಸೆಳೆದಿದೆ.

ಕರೆ ಮಾಡುತ್ತಿರುವವರು ಯಾರು?
ಹೇಮಂತ್ ಪೂಜಾರಿಯೇ ಕರೆ ಮಾಡುತ್ತಿದ್ದಾನೆಯೇ ಅಥವಾ ಆತನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಬೇರೆಯವರು ಬೆದರಿಕೆ ಹಾಕುತ್ತಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕರೆಗಳ ಮೂಲ, ಹಣದ ಬೇಡಿಕೆಯ ಹಿಂದಿನ ಉದ್ದೇಶ ಹಾಗೂ ಪ್ರಕರಣಗಳ ನಡುವಿನ ಸಂಬಂಧದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading