ಬಿಗ್ ನ್ಯೂಸ್
Dharmasthala-BIG BREAKING:ಧರ್ಮಸ್ಥಳ ಕೇಸಿನಲ್ಲಿ ಮಹತ್ವದ ಬೆಳವಣಿಗೆ – ಇನ್ನೆರಡು ಪ್ರಕರಣಗಳು ಎಸ್ ಐಟಿಗೆ ವರ್ಗಾವಣೆ
ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಧರ್ಮಸ್ಥಳದ ನಿಗೂಢ ಸಾವುಗಳ ಸರಣಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳೀಯ ಠಾಣೆಯಲ್ಲಿ ದಾಖಲಾಗಿದ್ದ ಅಸಹಜ ಸಾವು ಪ್ರಕರಣ (ಯುಡಿಆರ್) ಹಾಗೂ ಪ್ರತ್ಯೇಕ ದೂರು ಅರ್ಜಿಯೊಂದರ ತನಿಖೆಯನ್ನು ಪ್ರಣವ್ ಮೊಹಾಂತಿ ನೇತೃತ್ವದ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವರ್ಗಾಯಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರು (ಡಿಜಿಪಿ ಮತ್ತು ಐಜಿಪಿ) ಮಹತ್ವದ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಧರ್ಮಸ್ಥಳದ ನಿಗೂಢ ಸಾವುಗಳ ಸರಣಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳೀಯ ಠಾಣೆಯಲ್ಲಿ ದಾಖಲಾಗಿದ್ದ ಅಸಹಜ ಸಾವು ಪ್ರಕರಣ (ಯುಡಿಆರ್) ಹಾಗೂ ಪ್ರತ್ಯೇಕ ದೂರು ಅರ್ಜಿಯೊಂದರ ತನಿಖೆಯನ್ನು ಪ್ರಣವ್ ಮೊಹಾಂತಿ ನೇತೃತ್ವದ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವರ್ಗಾಯಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರು (ಡಿಜಿಪಿ ಮತ್ತು ಐಜಿಪಿ) ಮಹತ್ವದ ಆದೇಶ ಹೊರಡಿಸಿದ್ದಾರೆ.
ಪ್ರಕರಣದ ಸೂಕ್ಷ್ಮತೆ ಹಾಗೂ ಗಂಭೀರತೆಯನ್ನು ಪರಿಗಣಿಸಿ, ಕೂಲಂಕಷ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉನ್ನತ ಪೊಲೀಸ್ ಮೂಲಗಳು ಖಚಿತಪಡಿಸಿವೆ.
ಪ್ರಕರಣದ ಹಿನ್ನೆಲೆ:
ಅನಾಮಿಕ ವ್ಯಕ್ತಿಯೊಬ್ಬರು ನೀಡಿದ ಮಾಹಿತಿಯ ಮೇರೆಗೆ ಎಸ್‌ಐಟಿ ತಂಡವು ಧರ್ಮಸ್ಥಳ ವ್ಯಾಪ್ತಿಯಲ್ಲಿ ಉತ್ಖನನ ನಡೆಸುತ್ತಿತ್ತು. ಅಸಹಜ ಸಾವು (ಯು.ಡಿ.ಆರ್. ಸಂಖ್ಯೆ 35/2025) ಪ್ರಕರಣವನ್ನು ಕಲಂ 174 (3) & (VI) ಸಿ.ಆರ್.ಪಿ.ಸಿ ಅಡಿಯಲ್ಲಿ ದಾಖಲಿಸಿಕೊಳ್ಳಲಾಗಿತ್ತು. ಇದೀಗ ಈ ಪ್ರಕರಣದ ತನಿಖಾ ಜವಾಬ್ದಾರಿಯನ್ನು ಸಂಪೂರ್ಣವಾಗಿ ಎಸ್‌ಐಟಿಗೆ ವಹಿಸಲಾಗಿದೆ.
ಜಯಂತ್ ದೂರು ಸಹ ಹಸ್ತಾಂತರ
ಇದೇ ವೇಳೆ, ಬೆಳ್ತಂಗಡಿ ತಾಲ್ಲೂಕಿನ ಇಚಿಲಂಪಾಡಿ ನಿವಾಸಿ ಜಯಂತ್ ಟಿ. ಎಂಬುವವರು ನೀಡಿದ್ದ ದೂರು ಅರ್ಜಿಯನ್ನೂ ಎಸ್‌ಐಟಿಗೆ ವರ್ಗಾಯಿಸಲಾಗಿದೆ. ಜಯಂತ್ ಅವರು ಮೊದಲು ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ದೂರು ನೀಡಲು ತೆರಳಿದ್ದರು. ನಿಯಮಾನುಸಾರ, ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸುವಂತೆ ಅಧಿಕಾರಿಗಳು ಸೂಚಿಸಿದ್ದರು. ಅದರಂತೆ, ಆಗಸ್ಟ್ 4ರಂದು ಧರ್ಮಸ್ಥಳ ಠಾಣೆಯಲ್ಲಿ ಅವರು ಸಲ್ಲಿಸಿದ್ದ ದೂರರ್ಜಿಯನ್ನು (ಸಂಖ್ಯೆ 200/DPS/2025) ಸ್ವೀಕರಿಸಲಾಗಿತ್ತು.
ತನಿಖೆ ಇನ್ನು ಎಸ್‌ಐಟಿ ಹೆಗಲಿಗೆ
ಡಿಜಿಪಿ ಅವರ ಆದೇಶದ ಹಿನ್ನೆಲೆಯಲ್ಲಿ, ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದ ಪ್ರಥಮ ಮಾಹಿತಿ ವರದಿ (ಎಫ್‌ಐಆರ್), ಮಹಜರು, ಇದುವರೆಗಿನ ತನಿಖಾ ವರದಿಗಳು ಸೇರಿದಂತೆ ಎಲ್ಲಾ ದಾಖಲೆಗಳನ್ನು ಕೂಡಲೇ ಎಸ್‌ಐಟಿಗೆ ಹಸ್ತಾಂತರಿಸುವಂತೆ ಧರ್ಮಸ್ಥಳ ಪೊಲೀಸರಿಗೆ ಸೂಚಿಸಲಾಗಿದೆ.
ಈಗಾಗಲೇ ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಎಸ್‌ಐಟಿ, ಈ ಎರಡೂ ಪ್ರಕರಣಗಳನ್ನು ಕೈಗೆತ್ತಿಕೊಳ್ಳುವ ಮೂಲಕ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಲಿದೆ. ಈ ನಿರ್ಧಾರದಿಂದ ಪ್ರಕರಣದ ಹಿಂದಿನ ಸತ್ಯಾಸತ್ಯತೆ ಶೀಘ್ರದಲ್ಲಿಯೇ ಬಯಲಾಗಲಿದೆ ಎಂಬ ನಿರೀಕ್ಷೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.
ಸ್ಥಳೀಯ
Subrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು
ಎರಡು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಮನೆಗೆ ರಾತ್ರಿ ವೇಳೆ ಭೇಟಿ ನೀಡಿ ಊಟ ಮಾಡಿ, ದಿನಸಿ ಸಾಮಗ್ರಿಗಳನ್ನು ಪಡೆದು ತೆರಳಿದ್ದ ನಾಲ್ವರು ನಕ್ಸಲರ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್ ಜೈಲಿನಿಂದ ಕರೆತರಲಾದ ಮೂವರು ಮಾಜಿ ನಕ್ಸಲರಿಂದ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.
ಸುಬ್ರಹ್ಮಣ್ಯ, ನ.23: ಎರಡು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಮನೆಗೆ ರಾತ್ರಿ ವೇಳೆ ಭೇಟಿ ನೀಡಿ ಊಟ ಮಾಡಿ, ದಿನಸಿ ಸಾಮಗ್ರಿಗಳನ್ನು ಪಡೆದು ತೆರಳಿದ್ದ ನಾಲ್ವರು ನಕ್ಸಲರ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್ ಜೈಲಿನಿಂದ ಕರೆತರಲಾದ ಮೂವರು ಮಾಜಿ ನಕ್ಸಲರಿಂದ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.
2024ರ ಮಾರ್ಚ್ 23ರಂದು ರಾತ್ರಿ ನಾಲ್ವರು ನಕ್ಸಲರು ಐನೆಕಿದು ಗ್ರಾಮದ ಮನೆಯೊಂದಕ್ಕೆ ಭೇಟಿ ನೀಡಿ ಊಟ ಮಾಡಿದ್ದಲ್ಲದೆ, ದಿನಸಿ ಸಾಮಗ್ರಿಗಳನ್ನು ಪಡೆದುಕೊಂಡು ತೆರಳಿದ್ದರು. ಇದಕ್ಕೂ ಎರಡು ದಿನಗಳ ಮೊದಲು ಕಲ್ಮಕಾರು ಭಾಗದ ಕಡಮಕಲ್ ಎಸ್ಟೇಟ್‌ಗೂ ನಕ್ಸಲರು ಭೇಟಿ ನೀಡಿದ್ದರು ಎನ್ನಲಾಗಿತ್ತು.
ಈ ಘಟನೆ ಆ ಸಂದರ್ಭದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ನಕ್ಸಲ್ ನಿಗ್ರಹ ಪಡೆಗಳು ಈ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದವು. ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಫ್‌ಐಆರ್‌ನಲ್ಲಿ ನಕ್ಸಲರ ಭೇಟಿಯ ಬಗ್ಗೆ ಉಲ್ಲೇಖಿಸಲಾಗಿದ್ದರೂ, ಯಾರ ಹೆಸರನ್ನೂ ದಾಖಲಿಸಿರಲಿಲ್ಲ.
ಬಳಿಕ ಕರ್ನಾಟಕ ಸರಕಾರದ ಪ್ರಸ್ತಾವನೆಯಂತೆ ಶರಣಾಗಿದ್ದ ಈ ನಕ್ಸಲರು ತ್ರಿಶೂರ್ ಜೈಲಿನಲ್ಲಿದ್ದರು. ಪ್ರಕರಣದ ತನಿಖೆ ಹಾಗೂ ನ್ಯಾಯಾಲಯದ ವಿಚಾರಣೆಯ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸರು ತ್ರಿಶೂರ್‌ಗೆ ತೆರಳಿ ನ.17ರಂದು ಮಾಜಿ ನಕ್ಸಲರಾದ ರವೀಂದ್ರ, ಸುಂದರಿ ಮತ್ತು ದಿಶಾ ಅವರನ್ನು ವಶಕ್ಕೆ ಪಡೆದಿದ್ದರು.
ನಂತರ ಕರ್ನಾಟಕ ಹೈಕೋರ್ಟ್‌ಗೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದ ಪೊಲೀಸರು, ಮೂವರನ್ನು ಐನೆಕಿದು ಗ್ರಾಮದ ತೋಟದಮಜಲು ಪ್ರದೇಶಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ನಕ್ಸಲರು ತಾವು ಭೇಟಿ ನೀಡಿದ್ದ ಮನೆ ಹಾಗೂ ದಿನಸಿ ಸಾಮಗ್ರಿಗಳನ್ನು ಪಡೆದುಕೊಂಡಿದ್ದ ಸ್ಥಳವನ್ನು ಪೊಲೀಸರಿಗೆ ತೋರಿಸಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳ ಮಹಜರು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮೂವರನ್ನು ಮತ್ತೆ ಹೈಕೋರ್ಟ್‌ಗೆ ಹಾಜರುಪಡಿಸಿ, ಅಲ್ಲಿಂದ ತ್ರಿಶೂರ್ ಜೈಲಿಗೆ ಕರೆದೊಯ್ದು ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
WhatsApp Web: WhatsApp Web ಬಳಕೆದಾರರೇ ಎಚ್ಚರ..! ಟ್ಯಾಬ್ ಮುಚ್ಚಿದರೆ ಸಾಲದು, ಲಾಗೌಟ್ ಆಗದಿದ್ದರೆ ನಿಮ್ಮ ಖಾಸಗಿ ಚಾಟ್ ಬೇರೆಯವರ ಪಾಲು; ಕೇಂದ್ರ ಸರಕಾರದಿಂದ ಮಹತ್ವದ ಎಚ್ಚರಿಕೆ
ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ಕಂಪ್ಯೂಟರ್‌ಗಳಲ್ಲಿ WhatsApp Web ಬಳಸುವಾಗ ಎಚ್ಚರಿಕೆ ವಹಿಸುವಂತೆ ಕೇಂದ್ರ ಸರಕಾರದ ಸೈಬರ್ ಅಪರಾಧ ನಿಗ್ರಹ ಘಟಕವಾದ ಇಂಡಿಯನ್ ಸೈಬರ್ ಕ್ರೈಂ ಕೋಆರ್ಡಿನೇಷನ್ ಸೆಂಟರ್ (I4C) ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.
ಹೊಸದಿಲ್ಲಿ: ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ಕಂಪ್ಯೂಟರ್‌ಗಳಲ್ಲಿ WhatsApp Web ಬಳಸುವಾಗ ಎಚ್ಚರಿಕೆ ವಹಿಸುವಂತೆ ಕೇಂದ್ರ ಸರಕಾರದ ಸೈಬರ್ ಅಪರಾಧ ನಿಗ್ರಹ ಘಟಕವಾದ ಇಂಡಿಯನ್ ಸೈಬರ್ ಕ್ರೈಂ ಕೋಆರ್ಡಿನೇಷನ್ ಸೆಂಟರ್ (I4C) ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.
ಈ ಕುರಿತು ಹೊಸ ಸಲಹಾಸೂಚಿ ಬಿಡುಗಡೆ ಮಾಡಿರುವ ನ್ಯಾಷನಲ್ ಸೈಬರ್ ಕ್ರೈಂ ಕೋಆರ್ಡಿನೇಷನ್ ಸೆಂಟರ್‌ನ ನ್ಯಾಷನಲ್ ಸೈಬರ್ ಕ್ರೈಂ ಥ್ರೆಟ್ ಅನಾಲಿಟಿಕ್ಸ್ ಯೂನಿಟ್, ಕಂಪ್ಯೂಟರ್‌ನಲ್ಲಿ WhatsApp Web ಲಾಗಿನ್ ಆಗಿಯೇ ಉಳಿದಿದ್ದರೆ ಅನಧಿಕೃತ ವ್ಯಕ್ತಿಗಳು ಬಳಕೆದಾರರ ಖಾಸಗಿ ಸಂದೇಶಗಳು, ಸಂಪರ್ಕ ಸಂಖ್ಯೆಗಳು ಹಾಗೂ ಗ್ರೂಪ್ ಚಾಟ್‌ಗಳನ್ನು ವೀಕ್ಷಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಅಷ್ಟೇ ಅಲ್ಲದೆ, ಬಳಕೆದಾರರ ಖಾತೆಯನ್ನು ದುರುಪಯೋಗಪಡಿಸಿಕೊಂಡು ಅವರ ಹೆಸರಿನಲ್ಲಿ ಇತರರಿಗೆ ಸಂದೇಶಗಳನ್ನು ಕಳುಹಿಸುವ ಮೂಲಕ ವಂಚನೆ ಹಾಗೂ ವಿವಿಧ ಸೈಬರ್ ಹಗರಣಗಳನ್ನು ನಡೆಸುವ ಅಪಾಯವೂ ಇದೆ ಎಂದು ಎಚ್ಚರಿಸಿದೆ.
ಟ್ಯಾಬ್ ಮುಚ್ಚಿದರೆ ಸಾಲದು, ಲಾಗೌಟ್ ಆಗಲೇಬೇಕು!
ಬಹುತೇಕ ಬಳಕೆದಾರರು WhatsApp Web ಬಳಸಿದ ಬಳಿಕ ಬ್ರೌಸರ್ ವಿಂಡೋ ಅಥವಾ ಟ್ಯಾಬ್ ಮುಚ್ಚುವುದರಿಂದ ಖಾತೆ ಲಾಗೌಟ್ ಆಗುತ್ತದೆ ಎಂದು ಭಾವಿಸುತ್ತಾರೆ. ಆದರೆ, ಕೇವಲ ಟ್ಯಾಬ್ ಮುಚ್ಚುವುದರಿಂದ ಲಾಗಿನ್ ಅವಧಿ ಅಂತ್ಯಗೊಳ್ಳುವುದಿಲ್ಲ. ಹೀಗಾಗಿ ಪ್ರತಿ ಬಾರಿ ಬಳಕೆ ಮುಗಿದ ತಕ್ಷಣ ಖಾತೆಯಿಂದ ಲಾಗೌಟ್ ಆಗುವುದು ಕಡ್ಡಾಯ ಎಂದು ಸಲಹೆ ನೀಡಿದೆ.
ಇತರರೂ ಬಳಸಬಹುದಾದ ಕಚೇರಿ ಕಂಪ್ಯೂಟರ್‌ಗಳು, ಹಂಚಿಕೆಯ ಕಂಪ್ಯೂಟರ್‌ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿನ ಸಾಧನಗಳಲ್ಲಿ WhatsApp Web ಬಳಸುವಾಗ ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಅಲ್ಲದೆ, ಇಂತಹ ಕಂಪ್ಯೂಟರ್‌ಗಳಲ್ಲಿ ಸರಕಾರಿ, ಸಾಂಸ್ಥಿಕ, ಹಣಕಾಸು, ಗೌಪ್ಯ ಅಥವಾ ಇತರ ಸೂಕ್ಷ್ಮ ಮಾಹಿತಿಗಳನ್ನು ಹಂಚಿಕೊಳ್ಳಬಾರದು ಎಂದು ಸೂಚಿಸಿದೆ.
ಸೈಬರ್ ಕೆಫೆಗಳು, ಹೋಟೆಲ್‌ಗಳ ವ್ಯವಹಾರ ಕೇಂದ್ರಗಳು, ಸಾರ್ವಜನಿಕ ಸ್ಥಳಗಳು ಹಾಗೂ ಬಾಡಿಗೆಗೆ ಪಡೆದ ಕಂಪ್ಯೂಟರ್‌ಗಳಂತಹ ವಿಶ್ವಾಸಾರ್ಹವಲ್ಲದ ಸಾಧನಗಳಲ್ಲಿ WhatsApp Webಗೆ ಲಾಗಿನ್ ಆಗುವುದನ್ನು ಸಾಧ್ಯವಾದಷ್ಟು ತಪ್ಪಿಸಬೇಕು. ಅನಿವಾರ್ಯವಾಗಿ ಬಳಸಬೇಕಾದರೆ ಇನ್‌ಕಾಗ್ನಿಟೊ ಅಥವಾ ಪ್ರೈವೇಟ್ ಬ್ರೌಸಿಂಗ್ ಮೋಡ್ ಬಳಸುವಂತೆ ಶಿಫಾರಸು ಮಾಡಿದೆ.
ಈ ಲಕ್ಷಣಗಳು ಕಂಡುಬಂದರೆ ಎಚ್ಚರ!
ತಮ್ಮ ಖಾತೆಯಿಂದ ತಮಗೆ ತಿಳಿಯದೆಯೇ ಸಂದೇಶಗಳು ರವಾನೆಯಾಗುವುದು, ಸಂಪರ್ಕದಲ್ಲಿರುವವರಿಂದ ಅಸಹಜ ಪ್ರತಿಕ್ರಿಯೆಗಳು ಬರುವುದು ಅಥವಾ ಖಾತೆಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದರೆ ತಕ್ಷಣ ಎಚ್ಚರಿಕೆ ವಹಿಸಬೇಕು. ಇವು ಖಾತೆಗೆ ಅನಧಿಕೃತ ಪ್ರವೇಶವಾಗಿರುವ ಸೂಚನೆಗಳಾಗಿರಬಹುದು ಎಂದು ತಿಳಿಸಿದೆ.
ಇದರೊಂದಿಗೆ ಡಿಜಿಟಲ್ ಸಾಧನಗಳು, ಕಂಪ್ಯೂಟರ್‌ಗಳು, ಬ್ರೌಸರ್‌ಗಳು ಹಾಗೂ ಭದ್ರತಾ ಸಾಫ್ಟ್‌ವೇರ್‌ಗಳನ್ನು ಕಾಲಕಾಲಕ್ಕೆ ಅಪ್‌ಡೇಟ್ ಮಾಡಬೇಕು. ಅನುಮಾನಾಸ್ಪದ ಡೌನ್‌ಲೋಡ್‌ಗಳು, ಅಪರಿಚಿತ ಫೈಲ್‌ಗಳು ಹಾಗೂ ಕ್ರ್ಯಾಕ್ ಮಾಡಿದ ಸಾಫ್ಟ್‌ವೇರ್‌ಗಳನ್ನು ಬಳಸಬಾರದು ಎಂದು ಸಲಹೆ ನೀಡಿದೆ.
ಒಟ್ಟಿನಲ್ಲಿ, WhatsApp Web ಬಳಕೆ ಮುಗಿದ ಬಳಿಕ ಕಡ್ಡಾಯವಾಗಿ ಲಾಗೌಟ್ ಆಗುವುದು, ಅಪರಿಚಿತ ಹಾಗೂ ವಿಶ್ವಾಸಾರ್ಹವಲ್ಲದ ಕಂಪ್ಯೂಟರ್‌ಗಳಲ್ಲಿ ಲಾಗಿನ್ ಆಗುವುದನ್ನು ತಪ್ಪಿಸುವುದು ಮತ್ತು ಖಾತೆಯಲ್ಲಿನ ಅಸಹಜ ಚಟುವಟಿಕೆಗಳ ಮೇಲೆ ನಿಗಾ ಇಡುವ ಮೂಲಕ ಖಾತೆ ದುರುಪಯೋಗ ಹಾಗೂ ಹಣಕಾಸು ವಂಚನೆಗಳ ಅಪಾಯವನ್ನು ಕಡಿಮೆ ಮಾಡಬಹುದು ಎಂದು I4C ತಿಳಿಸಿದೆ.
ಬಿಗ್ ನ್ಯೂಸ್
High Court notice-ಜಾರಿಯಾಗದ ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಧನಕೀರ್ತಿ ಅರಿಗ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎನ್. ವಿನಯ್ ವಾದ ಮಂಡಿಸಿ, ಪ್ರಕರಣದ 10ನೇ ಪ್ರತಿವಾದಿಯಾಗಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಈಗಾಗಲೇ ಗಡೀಪಾರು ಆದೇಶ ಹೊರಡಿಸಲಾಗಿದೆ. ಆದರೆ, ಈ ಆದೇಶವನ್ನು ಪ್ರಶ್ನಿಸಿ ಅರ್ಜಿಗಳು ಸಲ್ಲಿಕೆಯಾಗಿದ್ದರೂ ಅದನ್ನು ಇನ್ನೂ ಜಾರಿಗೊಳಿಸಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು, ಪ್ರಕರಣದ 1ರಿಂದ 9ನೇ ಪ್ರತಿವಾದಿಗಳಾಗಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), ಎಡಿಜಿಪಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಬಂಟ್ವಾಳ ಡಿವೈಎಸ್ಪಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದರು.
-
ಶಿಕ್ಷಣ18 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು18 hours agoGirish Mattannavar-ಸೌಜನ್ಯ ಪ್ರಕರಣ: ಎಸ್‌ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್24 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಬಿಗ್ ನ್ಯೂಸ್20 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು19 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ18 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ17 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
-
ಅಪರಾಧ2 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ















