Connect with us

ಸ್ಥಳೀಯ

Mukkuru-ಮುಕ್ಕೂರು : ನೇಸರ ವಾರ್ಷಿಕ ಪ್ರಶಸ್ತಿ-2025; ಸಮಾಜ ಸೇವಾ ವಿಭಾಗದಲ್ಲಿ ರಕ್ಷಿತ್ ಕುಮಾರ್ ಪೆರುವಾಜೆ ಆಯ್ಕೆ; ಆ.27 ರಂದು ಮುಕ್ಕೂರು ಗಣೇಶೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ

Published

on



Ad Widget

Ad Widget

Ad Widget

Ad Widget

ಕಳೆದ ಒಂಭತ್ತು ವರ್ಷಗಳಿಂದ ಸಮಾಜಮಖಿ ಚಿಂತನೆಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ ಈ ವರ್ಷದಿಂದ ತಾಲೂಕು ಮಟ್ಟದ ನೇಸರ ವಾರ್ಷಿಕ ಪ್ರಶಸ್ತಿ ಪ್ರಧಾನಿಸಲಿದ್ದು ಈ ಬಾರಿ ಸಮಾಜ ಸೇವಾ ವಿಭಾಗದಲ್ಲಿ ರಕ್ಷಿತ್ ಕುಮಾರ್ ಪೆರುವಾಜೆ ಅವರು ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಮುಕ್ಕೂರು : ಕಳೆದ ಒಂಭತ್ತು ವರ್ಷಗಳಿಂದ ಸಮಾಜಮಖಿ ಚಿಂತನೆಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ ಈ ವರ್ಷದಿಂದ ತಾಲೂಕು ಮಟ್ಟದ ನೇಸರ ವಾರ್ಷಿಕ ಪ್ರಶಸ್ತಿ ಪ್ರಧಾನಿಸಲಿದ್ದು ಈ ಬಾರಿ ಸಮಾಜ ಸೇವಾ ವಿಭಾಗದಲ್ಲಿ ರಕ್ಷಿತ್ ಕುಮಾರ್ ಪೆರುವಾಜೆ ಅವರು ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಆ.27 ರಂದು ಮುಕ್ಕೂರು ವಠಾರದಲ್ಲಿ ನಡೆಯಲಿರುವ 16 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ದ.ಕ.ಲೋಕಸಭಾ ಕ್ಷೇತ್ರದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರು ಪ್ರಶಸ್ತಿ ಪ್ರಧಾನಿಸಲಿದ್ದಾರೆ. ಪೆರುವಾಜೆ ಗ್ರಾ.ಪಂ.ಅಧ್ಯಕ್ಷ, ಗಣೇಶೋತ್ಸವ ಸಮಿತಿ ಗೌರವ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನ ಸಮಿತಿ ಸದಸ್ಯ ಅಶೋಕ್ ನೆಕ್ರಾಜೆ ಸಹಿತ ವಿವಿಧ ಗಣ್ಯರು ಉಪಸ್ಥಿತರಿರಲಿದ್ದಾರೆ.

Ad Widget

Ad Widget <> Ad Widget

ರಕ್ಷಿತ್ ಕುಮಾರ್ ಪೆರುವಾಜೆ ಅವರು ಜಲಧಿ ಇವೆಂಟ್ಸ್ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ಬೆಳ್ಳಾರೆ ಡಾ.ಶಿವರಾಮ ಕಾರಂತ ಸರಕಾರಿ ಪ್ರಥಮ‌ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಭಾವೈಕ್ಯ ಯುವಕ ಮಂಡಲ ಪೆರುವಾಜೆ, ಲಯನ್ಸ್ ಕ್ಲಬ್ ಸಹಿತ ವಿವಿಧ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದಾರೆ.



Ad Widget

ರಕ್ಷಿತ್ ಕುಮಾರ್ ಅವರು ತಾನು ದುಡಿದ ಆದಾಯದಲ್ಲಿ ಒಂದು ಅಂಶವನ್ನು ಸಮಾಜ ಸೇವೆಗಾಗಿ ಮೀಸಲಿರಿಸಿದ್ದು ಶಾಲಾ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಸಾಮಾಗ್ರಿ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕ ಭರಿಸುವಿಕೆ ಸಹಿತ ಹತ್ತಾರು ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದಾರೆ.

Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget <> Ad Widget

ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕೆ. ವಿ. ನಿಖಿಲ್ ಕುಮಾರ್, ನಿಹಾಲ್ ಸಿ. ರೈ. ದ್ವಿತೀಯ ಪಿಯುಸಿ ಅಭಿಲಾಷ್, ವಿಕ್ರಮ್ ಎ. ಜಿ ಹಾಗೂ ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿ ಆತ್ಮಿಕಾ, ಎಚ್. ಮನ್ಮಿತಾ, ಶರಣ್ಯಾ ಎಚ್. ಎನ್ ಭಾಗವಹಿಸಿರುತ್ತಾರೆ.



Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗು ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Continue Reading

ಸ್ಥಳೀಯ

Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Published

on



Ad Widget

Ad Widget

Ad Widget

Ad Widget

ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget

Ad Widget

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget alt="Ad Widget"/>

Ad Widget

ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

Ad Widget

Ad Widget <> Ad Widget

ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.



Ad Widget
Ad Widget
Continue Reading

ಸ್ಥಳೀಯ

Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು

Published

on



Ad Widget

Ad Widget

Ad Widget

Ad Widget

ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.

Ad Widget

Ad Widget <> Ad Widget

ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.



Ad Widget

ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Ad Widget

Ad Widget

ಈ ಸಂದರ್ಭದಲ್ಲಿ ಅಶ್ರಫ್ ಚಾರ್ಮಾಡಿ, ಫಾರೂಕ್ ಕಕ್ಕಿಂಜೆ ಗಾಂಧಿನಗರ, ನೌಫಲ್ ಕಕ್ಕಿಂಜೆ ಗಾಂಧಿನಗರ ಹಾಗೂ ಬಸ್ ನಿರ್ವಾಹಕ ಸಂತೋಷ್ ಸಂಗಪ್ಪ ಗೌಡ ಅವರು ಸಹಕರಿಸಿದರು. ಚಾಲಕ ಕಿರಣ್ ಅವರ ಸಮಯಪ್ರಜ್ಞೆ ಹಾಗೂ ಸಹಪ್ರಯಾಣಿಕರ ಮಾನವೀಯ ನೆರವಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading