ಬಿಗ್ ನ್ಯೂಸ್
Dharmasthala-ಧರ್ಮಸ್ಥಳ ಗ್ರಾ.ಪಂ ಗೆ ಎಸ್ಐಟಿ ಎಂಟ್ರಿ; ಆ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ ಅಧ್ಯಕ್ಷರ ಸಹಿತ ಉದ್ಯೋಗಿಗಳ ವಿವರ ಸಂಗ್ರಹ
1995 ರಿಂದ 2014ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಬಹುಸಂಖ್ಯೆಯ ಮೃತದೇಹಗಳ ಗುಪ್ತ ಸಮಾಧಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ, ವಿಶೇಷ ತನಿಖಾ ದಳದ (ಎಸ್.ಐ.ಟಿ) ಇನ್ಸ್‌ಪೆಕ್ಟರ್ ಸಂಪತ್ ಧರ್ಮಸ್ಥಳ ಗ್ರಾಮ ಪಂಚಾಯತ್‌ಗೆ ಇಂದು (ಆಗಸ್ಟ್ 6) ಭೇಟಿ ನೀಡಿ, ಆ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಗ್ರಾಮ ಪಂಚಾಯತ್ ಅಧಿಕಾರಿಗಳ ದಾಖಲೆಗಳನ್ನು ಸಂಗ್ರಹಿಸಿದ್ದಾರೆ.
ಧರ್ಮಸ್ಥಳ: 1995 ರಿಂದ 2014ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಬಹುಸಂಖ್ಯೆಯ ಮೃತದೇಹಗಳ ಗುಪ್ತ ಸಮಾಧಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ, ವಿಶೇಷ ತನಿಖಾ ದಳದ (ಎಸ್.ಐ.ಟಿ) ಇನ್ಸ್‌ಪೆಕ್ಟರ್ ಸಂಪತ್ ಧರ್ಮಸ್ಥಳ ಗ್ರಾಮ ಪಂಚಾಯತ್‌ಗೆ ಇಂದು (ಆಗಸ್ಟ್ 6) ಭೇಟಿ ನೀಡಿ, ಆ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಗ್ರಾಮ ಪಂಚಾಯತ್ ಅಧಿಕಾರಿಗಳ ದಾಖಲೆಗಳನ್ನು ಸಂಗ್ರಹಿಸಿದ್ದಾರೆ.
ಈ ಗಂಭೀರ ಆರೋಪದ ಕುರಿತು ತನಿಖೆ ನಡೆಸುತ್ತಿರುವ ಎಸ್.ಐ.ಟಿ ತಂಡವು, ಮಾಜಿ ಸ್ವಚ್ಛತಾ ಕಾರ್ಮಿಕನೊಬ್ಬನ ದೂರಿನ ಆಧಾರದ ಮೇಲೆ ಕಾರ್ಯಾಚರಣೆ ಆರಂಭಿಸಿದೆ. ಈ ಕಾರ್ಮಿಕನು, 1995 ರಿಂದ 2014ರವರೆಗೆ ಧರ್ಮಸ್ಥಳದಲ್ಲಿ, ಕೆಲವು ಮಹಿಳೆಯರು ಮತ್ತು ಮಕ್ಕಳ ಮೃತದೇಹಗಳನ್ನು, ಕೆಲವೊಮ್ಮೆ ಲೈಂಗಿಕ ದೌರ್ಜನ್ಯದ ಗುರುತುಗಳೊಂದಿಗೆ, ತನ್ನ ಉನ್ನತಾಧಿಕಾರಿಗಳ ಆದೇಶದ ಮೇರೆಗೆ ಗುಪ್ತವಾಗಿ ಹೂತಿಟ್ಟಿದ್ದಾಗಿ ಆರೋಪಿಸಿದ್ದಾನೆ. ಈ ದೂರಿನ ನಂತರ, ಜುಲೈ 4, 2025 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜುಲೈ 19 ರಂದು ಎಸ್.ಐ.ಟಿ ರಚನೆಯಾಗಿತ್ತು.
ಇನ್ಸ್‌ಪೆಕ್ಟರ್ ಸಂಪತ್ ಅವರು ಗ್ರಾಮ ಪಂಚಾಯತ್‌ನಿಂದ ಸಂಗ್ರಹಿಸಿದ ದಾಖಲೆಗಳು, ಆ ಅವಧಿಯಲ್ಲಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯನಿರ್ವಹಿಸಿದ್ದ ಅಧಿಕಾರಿಗಳ ವಿವರಗಳು ಮತ್ತು ಅಸಹಜ ಸಾವಿನ (ಯುಡಿಆರ್) ದಾಖಲೆಗಳನ್ನು ಒಳಗೊಂಡಿವೆ. ಈ ದಾಖಲೆಗಳು ದೂರುದಾರನ ಆರೋಪಗಳ ದೃಢೀಕರಣಕ್ಕೆ ಮತ್ತು ತನಿಖೆಯಲ್ಲಿ ಮಹತ್ವದ ಸುಳಿವುಗಳನ್ನು ಒದಗಿಸಲಿವೆ ಎಂದು ತನಿಖಾ ತಂಡ ಭಾವಿಸಿದೆ.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
ಬಿಗ್ ನ್ಯೂಸ್
ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ
ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.
ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.
ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.
-
ಮಂಗಳೂರು8 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ12 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಮಂಗಳೂರು14 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಸ್ಥಳೀಯ12 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ರಾಜಕೀಯ14 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ
-
ಅಂತರ ರಾಜ್ಯ13 hours agoFire truck-ಬಿಜೆಪಿ ಶಾಸಕನ ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಕೆ; ವಿಡಿಯೋ ವೈರಲ್ ಬಳಿಕ ₹2,700 ದಂಡ
-
ಅಂತರ ರಾಜ್ಯ7 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ9 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening


















