ಬಿಗ್ ನ್ಯೂಸ್
Puttur-ಪುತ್ತೂರು: ಧನ್ವಂತರಿ ಆಸ್ಪತ್ರೆ ಬಳಿ ರಸ್ತೆ ಕಾಮಗಾರಿ; ಘನ ವಾಹನಗಳ ಮಾರ್ಗ ಬದಲಾವಣೆ
ದರ್ಬೆಯ ಧನ್ವಂತರಿ ಆಸ್ಪತ್ರೆ ಬಳಿಯ ರಸ್ತೆ ರಿಪೇರಿ ಕಾಮಗಾರಿಯಿಂದಾಗಿ ಘನ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿದೆ.
ಪುತ್ತೂರು: ದರ್ಬೆಯ ಧನ್ವಂತರಿ ಆಸ್ಪತ್ರೆ ಬಳಿಯ ರಸ್ತೆ ರಿಪೇರಿ ಕಾಮಗಾರಿಯಿಂದಾಗಿ ಘನ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿದೆ.
ದರ್ಬೆಯಿಂದ ಬಸ್ ನಿಲ್ದಾಣದ ಕಡೆಗೆ ಸಂಚರಿಸುವ ಎಲ್ಲ ವಾಹನಗಳಿಗೆ ಯಥಾಸ್ಥಿತಿಯಲ್ಲಿ ಸಂಚಾರಕ್ಕೆ ಅವಕಾಶವಿದೆ. ಆದರೆ, ಗಾಂಧಿ ಕಟ್ಟೆಯಿಂದ ದರ್ಬೆ ಕಡೆಗೆ ಸಂಚರಿಸುವ ಬಸ್‌ಗಳು ಮತ್ತು ಇತರ ಭಾರಿ ವಾಹನಗಳು ಕಾಮಗಾರಿ ಮುಗಿಯುವವರೆಗೆ ಬೊಳುವಾರು-ಲಿನೇಟ್ ಜಂಕ್ಷನ್-ಅಶ್ವಿನಿ ಸರ್ಕಲ್ (ಪತ್ರಾವೋ ಸರ್ಕಲ್) ಮೂಲಕ ಬದಲಿ ಮಾರ್ಗವಾಗಿ ಸಂಚರಿಸಬೇಕಾಗಿದೆ.
ಈ ಕುರಿತು ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಸಾರ್ವಜನಿಕರಿಗೆ ತಿಳಿಯಪಡಿಸಿದ್ದು, ಸಹಕರಿಸುವಂತೆ ಕೋರಿದ್ದಾರೆ.
ಮಂಗಳೂರು
Mangalore-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ
ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾಲೇಜು ಆಡಳಿತ ಮಂಡಳಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.
ಕಾಲೇಜಿನ ಪ್ರಾಂಶುಪಾಲರು ಪ್ರತಿಭಟನಾಕಾರರಿಗೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿನಿಯರನ್ನು ತಳ್ಳಿದ ಆರೋಪ: ಆಕ್ರೋಶ
ಪ್ರತಿಭಟನೆ ಆರಂಭವಾದ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಪೊಲೀಸರ ಕೊರತೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿನಿಯರನ್ನು ತಳ್ಳಿದ್ದಾರೆ ಹಾಗೂ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೈ ಮುಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಅಂತರ ರಾಜ್ಯ
Elon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್
ಭಾರತದಲ್ಲಿ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯ ಶುಲ್ಕ ಕೈಗೆಟುಕುವಂತಿರಬೇಕು. ಸೇವೆ ದುಬಾರಿಯಾದರೆ ಗ್ರಾಹಕರು ಅದನ್ನು ಬಳಸುವುದಿಲ್ಲ ಎಂದು ಅಮೆರಿಕದ ಉದ್ಯಮಿ ಇಲಾನ್ ಮಸ್ಕ್ ಹೇಳಿದ್ದಾರೆ.
ನವದೆಹಲಿ: ಭಾರತದಲ್ಲಿ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯ ಶುಲ್ಕ ಕೈಗೆಟುಕುವಂತಿರಬೇಕು. ಸೇವೆ ದುಬಾರಿಯಾದರೆ ಗ್ರಾಹಕರು ಅದನ್ನು ಬಳಸುವುದಿಲ್ಲ ಎಂದು ಅಮೆರಿಕದ ಉದ್ಯಮಿ ಇಲಾನ್ ಮಸ್ಕ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಮಸ್ಕ್, ಸ್ಪರ್ಧೆಯಿಂದಾಗಿ ಭಾರತದ ಗ್ರಾಹಕರಿಗೆ ಹೆಚ್ಚಿನ ಆಯ್ಕೆಗಳು ಲಭ್ಯವಾಗಲಿದ್ದು, ಇದರಿಂದ ಅವರಿಗೆ ಪ್ರಯೋಜನವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದರಿಂದ ಉದ್ಯಮಿ ಮುಕೇಶ್ ಅಂಬಾನಿ ಅವರ ಲಾಭ ಕಡಿಮೆಯಾಗಬಹುದಾದರೂ, ಅವರ ಗ್ರಾಹಕರು ಸಂಪೂರ್ಣವಾಗಿ ದೂರವಾಗುವುದಿಲ್ಲ ಎಂದು ಹೇಳಿದ್ದಾರೆ.
ಮುಕೇಶ್ ಅಂಬಾನಿ ಅವರ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ವಾದಿಸುತ್ತಿರುವವರ ವಿರುದ್ಧವೂ ಮಸ್ಕ್ ಟೀಕೆ ವ್ಯಕ್ತಪಡಿಸಿದ್ದಾರೆ. ‘ಅಂಬಾನಿ ಅವರು ನಿಗದಿಪಡಿಸಿರುವ ಕಡಿಮೆ ಶುಲ್ಕದ ಜೊತೆ ಸ್ಪರ್ಧಿಸಲು ಸ್ಟಾರ್‌ಲಿಂಕ್‌ಗೆ ಆಗಲಿಕ್ಕಿಲ್ಲ ಎಂದು ಅವರು (ಬೆಂಬಲಿಗರು) ಒಂದೆಡೆ ವಾದಿಸುತ್ತಾರೆ. ಮತ್ತೊಂದೆಡೆ, ಸ್ಟಾರ್‌ಲಿಂಕ್ ಬಹಳ ಬಲಿಷ್ಠವಾದ ಪ್ರತಿಸ್ಪರ್ಧಿ ಆಗಬಹುದು ಎಂದೂ ಹೇಳುತ್ತಾರೆ’ ಎಂದು ಮಸ್ಕ್ ವಿವರಿಸಿದ್ದಾರೆ. ಅಂಬಾನಿ ಅವರ ಆನ್‌ಲೈನ್ ಬೆಂಬಲಿಗರ ‘ಹಾಸ್ಯಾಸ್ಪದ ವಾದಗಳು’ ತಮಗೆ ಅರ್ಥಪೂರ್ಣವಾಗಿ ಕಾಣುತ್ತಿಲ್ಲ ಎಂದಿದ್ದಾರೆ.
ಭಾರತದಲ್ಲಿ ತನ್ನ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆ ಆರಂಭಿಸಲು ಅಗತ್ಯ ಅನುಮತಿಗಳನ್ನು ನೀಡುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಮಸ್ಕ್ ಕಳೆದ ಕೆಲವು ದಿನಗಳಿಂದ ಮುಕೇಶ್ ಅಂಬಾನಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಆದರೆ, ಮಸ್ಕ್ ಅವರ ಆರೋಪಗಳಿಗೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈವರೆಗೆ ಬಹಿರಂಗವಾಗಿ ಪ್ರತಿಕ್ರಿಯಿಸಿಲ್ಲ.
ಬಿಗ್ ನ್ಯೂಸ್
Puttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.
ಪುತ್ತೂರು: ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಉತ್ತರ ಭಾಗದಲ್ಲಿ ಪೂರ್ವ-ಪಶ್ಚಿಮ ದಿಕ್ಕಿನಲ್ಲಿ 30 ಅಡಿ ಅಗಲ ಹಾಗೂ ಸುಮಾರು 1,000 ಮೀಟರ್ ಉದ್ದದ ಸಾರ್ವಜನಿಕ ರಸ್ತೆ ನಿರ್ಮಿಸುವ ಯೋಜನೆಗೆ ಸಂಬಂಧಿಸಿ ಭಕ್ತರು ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯ ವಿಚಾರವಾಗಿ ಸೆ.10ರಂದು ನೀಡಿದ ಆದೇಶದಲ್ಲಿ, ಅರ್ಜಿದಾರರ ಆಕ್ಷೇಪಗಳನ್ನು ಆಲಿಸಿ ನಿಯಮಾನುಸಾರ ವಿಚಾರಣೆ ನಡೆಸಿ ಮುಂದಿನ ಆದೇಶ ಹೊರಡಿಸುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಆಯುಕ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ರಸ್ತೆ ನಿರ್ಮಾಣಕ್ಕೆ ಇಲಾಖೆಯ ಆಯುಕ್ತರು ದೇವಸ್ಥಾನದ ಸಮಿತಿ ಅಥವಾ ಕಾರ್ಯನಿರ್ವಹಣಾಧಿಕಾರಿಗೆ ಈವರೆಗೆ ಅನುಮತಿ ನೀಡಿಲ್ಲ. ಆದರೂ, ದೇವಸ್ಥಾನದ ಬಳಿಯ ಹಿಂದಿನ ಗಣೇಶ್ ಪ್ರಸಾದ್ ಹೋಟೆಲ್‌ನಿಂದ ಮಡಿವಾಳಕಟ್ಟೆಯವರೆಗಿನ ನೂತನ ಕಾಂಕ್ರೀಟ್ ರಸ್ತೆಗೆ ಪೂರಕವಾಗಿ ನಿರ್ವಾತ ತಂತ್ರಜ್ಞಾನದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ನಗರಸಭೆ ಟೆಂಡರ್ ಪ್ರಕಟಿಸಿದೆ ಎಂದು ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.
ದೇವಸ್ಥಾನದ ಜಮೀನಿನಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ಇಲಾಖೆಯ ಆಯುಕ್ತರ ಅನುಮತಿ ಕಡ್ಡಾಯವಾಗಿದ್ದು, ಈ ಸಂಬಂಧ ಭಕ್ತರ ಆಕ್ಷೇಪಗಳು ಹಾಗೂ ನ್ಯಾಯಾಲಯದ ನಿರ್ದೇಶನಗಳು ಇರುವಾಗ ಟೆಂಡರ್ ಪ್ರಕ್ರಿಯೆ ಮುಂದುವರಿಸುವುದು ಸರಿಯಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.
ರಸ್ತೆ ನಿರ್ಮಾಣದ ಕುರಿತ ಸಾರ್ವಜನಿಕ ದೂರು ಮತ್ತು ಆಕ್ಷೇಪಗಳ ವಿಚಾರಣೆ ಇಲಾಖೆಯ ಆಯುಕ್ತರ ಮುಂದೆ ಇತ್ಯರ್ಥವಾಗುವವರೆಗೆ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ದೇವಸ್ಥಾನದ ಸಂರಕ್ಷಣಾ ವೇದಿಕೆ ಪುತ್ತೂರು ನಗರಸಭೆ ಪೌರಾಯುಕ್ತರನ್ನು ಒತ್ತಾಯಿಸಿದೆ. ನ್ಯಾಯಾಲಯದ ನಿರ್ದೇಶನ ಉಲ್ಲಂಘಿಸಿ ಕಾಮಗಾರಿ ಮುಂದುವರಿಸಿದರೆ ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದೂ ಎಚ್ಚರಿಸಿದೆ.
-
Uncategorized19 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized21 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized20 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized21 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized23 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
ಅಂತರ ರಾಜ್ಯ5 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
Uncategorized20 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
ಬಿಗ್ ನ್ಯೂಸ್5 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ


















