Connect with us

ಬಿಗ್ ನ್ಯೂಸ್

Belthangady-ಸುವರ್ಣ ನ್ಯೂಸ್ ನ ಅಜಿತ್ ಹನುಮಕ್ಕನವರ್ ವಿರುದ್ಧ ಸುಳ್ಳು ವರದಿ ಪ್ರಸಾರ ಮಾಡಿದ ಆರೋಪ – ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲು

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಪಾಂಗಳದಲ್ಲಿ ಯೂಟ್ಯೂಬ್‌ ವರದಿಗಾರರ ಮೇಲೆ ಹಲ್ಲೆ ನಡೆದಿದ್ದು ಅಲ್ಲಿಗೆ ಆಗಮಿಸಿದ ಸುವರ್ಣ ನ್ಯೂಸ್‌ ವರದಿಗಾರ ಮತ್ತು ಕ್ಯಾಮರಮ್ಯಾನ್‌ ಮೇಲೆ ತಿಮರೋಡಿ ಹಾಗೂ ಗಿರೀಶ್‌ ಮಟ್ಟಣ್ಣವರ್‌ ಅವರು ಹಲ್ಲೆ ನಡೆಸಿರುವುದಾಗಿ ಸುಳ್ಳು ವರದಿ ಮಾಡಿರುವ ಸುವರ್ಣ ನ್ಯೂಸ್‌ ಚಾನೆಲ್‌ನ ಅಜಿತ್‌, ಹನುಮಕ್ಕನವರ್, ವರದಿಗಾರ ಹಾಗೂ ಕ್ಯಾಮರಮ್ಯಾನ್ ವಿರುದ್ಧ ಪ್ರತ್ಯಕ್ಷದರ್ಶಿಯಾದ ಉಜಿರೆಯ ಗಣೇಶ್ ಶೆಟ್ಟಿ ಎಂಬವರು ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದಾರೆ.‌

Ad Widget

Ad Widget

Ad Widget

Ad Widget

ಧರ್ಮಸ್ಥಳ, ಆ.6: ಧರ್ಮಸ್ಥಳದ ಪಾಂಗಳದಲ್ಲಿ ಯೂಟ್ಯೂಬ್‌ ವರದಿಗಾರರ ಮೇಲೆ ಹಲ್ಲೆ ನಡೆದಿದ್ದು ಅಲ್ಲಿಗೆ ಆಗಮಿಸಿದ ಸುವರ್ಣ ನ್ಯೂಸ್‌ ವರದಿಗಾರ ಮತ್ತು ಕ್ಯಾಮರಮ್ಯಾನ್‌ ಮೇಲೆ ತಿಮರೋಡಿ ಹಾಗೂ ಗಿರೀಶ್‌ ಮಟ್ಟಣ್ಣವರ್‌ ಅವರು ಹಲ್ಲೆ ನಡೆಸಿರುವುದಾಗಿ ಸುಳ್ಳು ವರದಿ ಮಾಡಿರುವ ಸುವರ್ಣ ನ್ಯೂಸ್‌ ಚಾನೆಲ್‌ನ ಅಜಿತ್‌, ಹನುಮಕ್ಕನವರ್, ವರದಿಗಾರ ಹಾಗೂ ಕ್ಯಾಮರಮ್ಯಾನ್ ವಿರುದ್ಧ ಪ್ರತ್ಯಕ್ಷದರ್ಶಿಯಾದ ಉಜಿರೆಯ ಗಣೇಶ್ ಶೆಟ್ಟಿ ಎಂಬವರು ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದಾರೆ.‌

Ad Widget

Ad Widget

Ad Widget alt="Ad Widget"/>

Ad Widget

ದೂರಿನಲ್ಲೇನಿದೆ?
ಧರ್ಮಸ್ಥಳದ ಪಾಂಗಳದಲ್ಲಿ ಆಗಸ್ಟ್ 06 ರಂದು ಸಂಜೆ 7:30 ಗಂಟೆ ಸುಮಾರಿಗೆ ಗಾಯಗೊಂಡಿದ್ದ ವ್ಯಕ್ತಿಗಳಾದ ಸಂಚಾರಿ ಸುಡಿಯೋ ವರದಿಗಾರ ಸಂತೋಷ್ ಕುಮಾರ್, ರಾಮ್ ಪೇಜ್ ವರದಿಗಾರ ಅಜಯ್ ಅಂಚನ್, ಯುನೈಟೆಡ್ ಮೀಡಿಯಾ ವರದಿಗಾರ ಅಭಿಷೇಕ್ ಮತ್ತು ಕ್ಯಾಮರಾಮನ್ ಅಜಯ್ ರವರನ್ನು ಗಣೇಶ್ ಶೆಟ್ಟಿಯವರು ಉಜಿರೆಯ ಬೆನಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದಿದ್ದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ, ಗಾಯಾಳುಗಳ ಸ್ಥಿತಿಯನ್ನು ತಿಳಿಯಲು ಆಸ್ಪತ್ರೆಗೆ ಆಗಮಿಸಿದ ಸೌಜನ್ಯ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರು ಸುವರ್ಣ ನ್ಯೂಸ್ ವರದಿಗಾರ ಮತ್ತು ಕ್ಯಾಮರಾಮನ್‌ನಿಂದ ತೀವ್ರ ಆಕ್ಷೇಪಕ್ಕೆ ಒಳಗಾದರು.



Ad Widget

ಸುವರ್ಣ ನ್ಯೂಸ್ ತಂಡವು ಆಸ್ಪತ್ರೆಯ ಆವರಣದಲ್ಲಿ ಬೈಟ್ ತೆಗೆದುಕೊಳ್ಳಲು ಒತ್ತಾಯಿಸಿದಾಗ, ಗಿರೀಶ್ ಮಟ್ಟಣ್ಣನವರು, “ಇದು ಆಸ್ಪತ್ರೆಯ ಆವರಣ, ಇಲ್ಲಿ ಸಾಕಷ್ಟು ಜನರಿದ್ದಾರೆ. ಸುವರ್ಣ ನ್ಯೂಸ್‌ನ ಅಜಿತ್ ಜೈನ್ ಸುಳ್ಳು ವರದಿಗಳನ್ನು ಪ್ರಸಾರ ಮಾಡಿ, ಧರ್ಮಸ್ಥಳದ ಅತ್ಯಾಚಾರಿಗಳ ರಕ್ಷಣೆ ಮಾಡುತ್ತಿದ್ದಾರೆ. ಜನರ ಆಕ್ರೋಶಕ್ಕೆ ಕಾರಣವಾಗಬಹುದು, ದಯವಿಟ್ಟು ಇಲ್ಲಿಂದ ಹೊರಡಿ,” ಎಂದು ವಿನಂತಿಸಿದರು. ಆದರೆ, ಸುವರ್ಣ ನ್ಯೂಸ್ ತಂಡವು ಈ ವಿನಂತಿಯನ್ನು ಗೌರವಿಸದೆ, ಆಸ್ಪತ್ರೆಯ ಒಳಗೆ ನುಗ್ಗಲು ಯತ್ನಿಸಿತು.

Ad Widget

Ad Widget

ಈ ವರ್ತನೆಯಿಂದ ಕುಪಿತರಾದ ಕೆಲವು ಸ್ಥಳೀಯರು, ಸುವರ್ಣ ನ್ಯೂಸ್ ತಂಡವು ಗಾಯಾಳುಗಳಿಗೆ ಮತ್ತು ಸಂಬಂಧಿಗಳಿಗೆ ತೊಂದರೆ ಉಂಟುಮಾಡಬಹುದು ಎಂದು ಪೊಲೀಸರಿಗೆ ದೂರು ನೀಡಿದರು. ಈ ವೇಳೆ, ಸುವರ್ಣ ನ್ಯೂಸ್ ವರದಿಗಾರ ಮತ್ತು ಕ್ಯಾಮರಾಮನ್, ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ತಳ್ಳಾಟಕ್ಕೆ ಯತ್ನಿಸಿದರು. ಆಗ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ರವರು ಚಾನೆಲ್ ರವರನ್ನು
ಆಸ್ಪತ್ರೆಯ ಒಳಗೆ ಕರೆದುಕೊಂಡು ಹೋಗಿ ಕೂರಿಸಿದ್ದು, ಆದರೆ ಈ ಘಟನೆಯ ಕೆಲವೇ ಕ್ಷಣಗಳಲ್ಲಿ ಸುವರ್ಣ ನ್ಯೂಸ್‌ನ ಆಂಕರ್ ಅಜಿತ್ ಹನುಮಕ್ಕನವರು, “ಮಹೇಶ್ ಶೆಟ್ಟಿ ತಿಮರೋಡಿಯಿಂದ ಸುವರ್ಣ ನ್ಯೂಸ್ ವರದಿಗಾರರ ಮೇಲೆ ಹಲ್ಲೆ” ಎಂಬ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದರು.

ಈ ಆರೋಪವನ್ನು ಸ್ಥಳೀಯರು ತೀವ್ರವಾಗಿ ಖಂಡಿಸಿದ್ದು, ಸುವರ್ಣ ನ್ಯೂಸ್ ವಾಹಿನಿ, ಅದರ ವರದಿಗಾರ ಮತ್ತು ಕ್ಯಾಮರಾಮನ್ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಅವರು ನೀಡಿದ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಈ ಘಟನೆಯು ಧರ್ಮಸ್ಥಳದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಮಾಧ್ಯಮದ ನೈತಿಕತೆಯ ಬಗ್ಗೆ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

Ad Widget
Click to comment

Leave a Reply

ಮಂಗಳೂರು

Mangalore-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ

Published

on



Ad Widget

Ad Widget

Ad Widget

Ad Widget

ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾಲೇಜು ಆಡಳಿತ ಮಂಡಳಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರು ಪ್ರತಿಭಟನಾಕಾರರಿಗೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸಿದರು.



Ad Widget

ವಿದ್ಯಾರ್ಥಿನಿಯರನ್ನು ತಳ್ಳಿದ ಆರೋಪ: ಆಕ್ರೋಶ
ಪ್ರತಿಭಟನೆ ಆರಂಭವಾದ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಪೊಲೀಸರ ಕೊರತೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿನಿಯರನ್ನು ತಳ್ಳಿದ್ದಾರೆ ಹಾಗೂ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೈ ಮುಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

Ad Widget

Ad Widget

ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪೊಲೀಸರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದರು. ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸಿದ ಕಾಲೇಜಿನ ಕ್ರಮ ಹಾಗೂ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ವರ್ತನೆ ಎರಡೂ ವಿಚಾರಗಳು ಸ್ಥಳದಲ್ಲಿ ಉದ್ವಿಗ್ನತೆಗೆ ಕಾರಣವಾದವು.

Ad Widget
Continue Reading

ಅಂತರ ರಾಜ್ಯ

Elon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್

Published

on



Ad Widget

Ad Widget

Ad Widget

Ad Widget

ಭಾರತದಲ್ಲಿ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯ ಶುಲ್ಕ ಕೈಗೆಟುಕುವಂತಿರಬೇಕು. ಸೇವೆ ದುಬಾರಿಯಾದರೆ ಗ್ರಾಹಕರು ಅದನ್ನು ಬಳಸುವುದಿಲ್ಲ ಎಂದು ಅಮೆರಿಕದ ಉದ್ಯಮಿ ಇಲಾನ್ ಮಸ್ಕ್ ಹೇಳಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಭಾರತದಲ್ಲಿ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯ ಶುಲ್ಕ ಕೈಗೆಟುಕುವಂತಿರಬೇಕು. ಸೇವೆ ದುಬಾರಿಯಾದರೆ ಗ್ರಾಹಕರು ಅದನ್ನು ಬಳಸುವುದಿಲ್ಲ ಎಂದು ಅಮೆರಿಕದ ಉದ್ಯಮಿ ಇಲಾನ್ ಮಸ್ಕ್ ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಮಸ್ಕ್, ಸ್ಪರ್ಧೆಯಿಂದಾಗಿ ಭಾರತದ ಗ್ರಾಹಕರಿಗೆ ಹೆಚ್ಚಿನ ಆಯ್ಕೆಗಳು ಲಭ್ಯವಾಗಲಿದ್ದು, ಇದರಿಂದ ಅವರಿಗೆ ಪ್ರಯೋಜನವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದರಿಂದ ಉದ್ಯಮಿ ಮುಕೇಶ್ ಅಂಬಾನಿ ಅವರ ಲಾಭ ಕಡಿಮೆಯಾಗಬಹುದಾದರೂ, ಅವರ ಗ್ರಾಹಕರು ಸಂಪೂರ್ಣವಾಗಿ ದೂರವಾಗುವುದಿಲ್ಲ ಎಂದು ಹೇಳಿದ್ದಾರೆ.

Ad Widget

Ad Widget <> Ad Widget

ಮುಕೇಶ್ ಅಂಬಾನಿ ಅವರ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ವಾದಿಸುತ್ತಿರುವವರ ವಿರುದ್ಧವೂ ಮಸ್ಕ್ ಟೀಕೆ ವ್ಯಕ್ತಪಡಿಸಿದ್ದಾರೆ. ‘ಅಂಬಾನಿ ಅವರು ನಿಗದಿಪಡಿಸಿರುವ ಕಡಿಮೆ ಶುಲ್ಕದ ಜೊತೆ ಸ್ಪರ್ಧಿಸಲು ಸ್ಟಾರ್‌ಲಿಂಕ್‌ಗೆ ಆಗಲಿಕ್ಕಿಲ್ಲ ಎಂದು ಅವರು (ಬೆಂಬಲಿಗರು) ಒಂದೆಡೆ ವಾದಿಸುತ್ತಾರೆ. ಮತ್ತೊಂದೆಡೆ, ಸ್ಟಾರ್‌ಲಿಂಕ್ ಬಹಳ ಬಲಿಷ್ಠವಾದ ಪ್ರತಿಸ್ಪರ್ಧಿ ಆಗಬಹುದು ಎಂದೂ ಹೇಳುತ್ತಾರೆ’ ಎಂದು ಮಸ್ಕ್ ವಿವರಿಸಿದ್ದಾರೆ. ಅಂಬಾನಿ ಅವರ ಆನ್‌ಲೈನ್ ಬೆಂಬಲಿಗರ ‘ಹಾಸ್ಯಾಸ್ಪದ ವಾದಗಳು’ ತಮಗೆ ಅರ್ಥಪೂರ್ಣವಾಗಿ ಕಾಣುತ್ತಿಲ್ಲ ಎಂದಿದ್ದಾರೆ.



Ad Widget

ಭಾರತದಲ್ಲಿ ತನ್ನ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆ ಆರಂಭಿಸಲು ಅಗತ್ಯ ಅನುಮತಿಗಳನ್ನು ನೀಡುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಮಸ್ಕ್ ಕಳೆದ ಕೆಲವು ದಿನಗಳಿಂದ ಮುಕೇಶ್ ಅಂಬಾನಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಆದರೆ, ಮಸ್ಕ್ ಅವರ ಆರೋಪಗಳಿಗೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈವರೆಗೆ ಬಹಿರಂಗವಾಗಿ ಪ್ರತಿಕ್ರಿಯಿಸಿಲ್ಲ.

Continue Reading

ಬಿಗ್ ನ್ಯೂಸ್

Puttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ

Published

on



Ad Widget

Ad Widget

Ad Widget

Ad Widget

ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಉತ್ತರ ಭಾಗದಲ್ಲಿ ಪೂರ್ವ-ಪಶ್ಚಿಮ ದಿಕ್ಕಿನಲ್ಲಿ 30 ಅಡಿ ಅಗಲ ಹಾಗೂ ಸುಮಾರು 1,000 ಮೀಟರ್ ಉದ್ದದ ಸಾರ್ವಜನಿಕ ರಸ್ತೆ ನಿರ್ಮಿಸುವ ಯೋಜನೆಗೆ ಸಂಬಂಧಿಸಿ ಭಕ್ತರು ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

Ad Widget

Ad Widget <> Ad Widget

ಈ ಅರ್ಜಿಯ ವಿಚಾರವಾಗಿ ಸೆ.10ರಂದು ನೀಡಿದ ಆದೇಶದಲ್ಲಿ, ಅರ್ಜಿದಾರರ ಆಕ್ಷೇಪಗಳನ್ನು ಆಲಿಸಿ ನಿಯಮಾನುಸಾರ ವಿಚಾರಣೆ ನಡೆಸಿ ಮುಂದಿನ ಆದೇಶ ಹೊರಡಿಸುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಆಯುಕ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.



Ad Widget

ರಸ್ತೆ ನಿರ್ಮಾಣಕ್ಕೆ ಇಲಾಖೆಯ ಆಯುಕ್ತರು ದೇವಸ್ಥಾನದ ಸಮಿತಿ ಅಥವಾ ಕಾರ್ಯನಿರ್ವಹಣಾಧಿಕಾರಿಗೆ ಈವರೆಗೆ ಅನುಮತಿ ನೀಡಿಲ್ಲ. ಆದರೂ, ದೇವಸ್ಥಾನದ ಬಳಿಯ ಹಿಂದಿನ ಗಣೇಶ್ ಪ್ರಸಾದ್ ಹೋಟೆಲ್‌ನಿಂದ ಮಡಿವಾಳಕಟ್ಟೆಯವರೆಗಿನ ನೂತನ ಕಾಂಕ್ರೀಟ್ ರಸ್ತೆಗೆ ಪೂರಕವಾಗಿ ನಿರ್ವಾತ ತಂತ್ರಜ್ಞಾನದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ನಗರಸಭೆ ಟೆಂಡರ್ ಪ್ರಕಟಿಸಿದೆ ಎಂದು ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.

Ad Widget

Ad Widget

ದೇವಸ್ಥಾನದ ಜಮೀನಿನಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ಇಲಾಖೆಯ ಆಯುಕ್ತರ ಅನುಮತಿ ಕಡ್ಡಾಯವಾಗಿದ್ದು, ಈ ಸಂಬಂಧ ಭಕ್ತರ ಆಕ್ಷೇಪಗಳು ಹಾಗೂ ನ್ಯಾಯಾಲಯದ ನಿರ್ದೇಶನಗಳು ಇರುವಾಗ ಟೆಂಡರ್ ಪ್ರಕ್ರಿಯೆ ಮುಂದುವರಿಸುವುದು ಸರಿಯಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.

ರಸ್ತೆ ನಿರ್ಮಾಣದ ಕುರಿತ ಸಾರ್ವಜನಿಕ ದೂರು ಮತ್ತು ಆಕ್ಷೇಪಗಳ ವಿಚಾರಣೆ ಇಲಾಖೆಯ ಆಯುಕ್ತರ ಮುಂದೆ ಇತ್ಯರ್ಥವಾಗುವವರೆಗೆ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ದೇವಸ್ಥಾನದ ಸಂರಕ್ಷಣಾ ವೇದಿಕೆ ಪುತ್ತೂರು ನಗರಸಭೆ ಪೌರಾಯುಕ್ತರನ್ನು ಒತ್ತಾಯಿಸಿದೆ. ನ್ಯಾಯಾಲಯದ ನಿರ್ದೇಶನ ಉಲ್ಲಂಘಿಸಿ ಕಾಮಗಾರಿ ಮುಂದುವರಿಸಿದರೆ ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದೂ ಎಚ್ಚರಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading