ಶಿಕ್ಷಣ
Rajeshwari K.-ಸರಕಾರಿ ಪಬ್ಲಿಕ್ ಪ್ರೌಢಶಾಲೆ ಪೂಂಜಲಕಟ್ಟೆಯಲ್ಲಿ ʻನನ್ನ ಶಾಲೆ – ನನ್ನ ಕೊಡುಗೆʼ ಕಾರ್ಯಕ್ರಮ
ಆ.06ರ ಬುಧವಾರದಂದು ಸರಕಾರಿ ಪಬ್ಲಿಕ್ ಪ್ರೌಢಶಾಲೆ ಪೂಂಜಲ ಕಟ್ಟೆ ಇಲ್ಲಿ ನನ್ನ ಶಾಲೆ – ನನ್ನ ಕೊಡುಗೆ ಎಂಬ ಕಾರ್ಯಕ್ರಮವು ನಡೆಯಿತು.“ಶಿಕ್ಷಣದ ನಿಜವಾದ ಪರಿಪೂರ್ಣತೆ, ಸಮಾಜಕ್ಕೆ ನಮ್ಮಿಂದ ಕೊಡುಗೆ ನೀಡುವಾಗ ಪ್ರಾರಂಭವಾಗುತ್ತದೆ”ಎಂಬ ಮಾತಿಗೆ ಸಾರ್ಥಕತೆ ತಂದಿರುವುದು ಕೆನರಾ ಪ್ರೌಢಶಾಲೆಯ ಹಿರಿಯ ಚಿತ್ರಕಲಾ ಶಿಕ್ಷಕಿ ಶ್ರೀಮತಿ ರಾಜೇಶ್ವರಿ ಕುಡುಪು ಅವರು.
ಆ.06ರ ಬುಧವಾರದಂದು ಸರಕಾರಿ ಪಬ್ಲಿಕ್ ಪ್ರೌಢಶಾಲೆ ಪೂಂಜಲ ಕಟ್ಟೆ ಇಲ್ಲಿ ನನ್ನ ಶಾಲೆ – ನನ್ನ ಕೊಡುಗೆ ಎಂಬ ಕಾರ್ಯಕ್ರಮವು ನಡೆಯಿತು.“ಶಿಕ್ಷಣದ ನಿಜವಾದ ಪರಿಪೂರ್ಣತೆ, ಸಮಾಜಕ್ಕೆ ನಮ್ಮಿಂದ ಕೊಡುಗೆ ನೀಡುವಾಗ ಪ್ರಾರಂಭವಾಗುತ್ತದೆ”ಎಂಬ ಮಾತಿಗೆ ಸಾರ್ಥಕತೆ ತಂದಿರುವುದು ಕೆನರಾ ಪ್ರೌಢಶಾಲೆಯ ಹಿರಿಯ ಚಿತ್ರಕಲಾ ಶಿಕ್ಷಕಿ ರಾಜೇಶ್ವರಿ ಕುಡುಪು ಅವರು.
“ನನ್ನ ಶಾಲೆ ನನ್ನ ಕೊಡುಗೆ” ಎಂಬ ಸಕಾರಾತ್ಮಕ ಯೋಜನೆಯಡಿಯಲ್ಲಿ, ಅವರು ಪ್ರೌಢಶಾಲಾ ಹಂತದಲ್ಲಿ ವಿದ್ಯಾಭ್ಯಾಸ ಮಾಡಿದ ಸರಕಾರಿ ಪ್ರೌಢಶಾಲೆ ಪೂಂಜಲ ಕಟ್ಟೆಯ ಶಾಲಾ ಮಕ್ಕಳಿಗೆ ಬಹಳ ಅಮೂಲ್ಯವಾದ ಕೊಡುಗೆಯನ್ನು ನೀಡಿದ್ದಾರೆ. ಚಿತ್ರಕಲೆ ಕ್ಷೇತ್ರದಲ್ಲಿ ತಮ್ಮ ಅನುಭವ ಹಾಗೂ ಅಧ್ಯಯನದ ಆಧಾರದ ಮೇಲೆ ಅವರೇ ಸ್ವತಃ ರಚಿಸಿರುವ ‘ಕಲಾಸಂಪದ’ ಎಂಬ ಚಿತ್ರಕಲೆ ಮಾರ್ಗದರ್ಶಿ ಪುಸ್ತಕವನ್ನು, ಈ ಶಾಲೆಯ 9ನೇ ತರಗತಿಯ ಮಕ್ಕಳಿಗೆ ಉಚಿತವಾಗಿ ವಿತರಿಸಿದ್ದಾರೆ.

ಈ ಪುಸ್ತಕದಲ್ಲಿ ಶಾಲಾ ಮಕ್ಕಳಿಗೆ ಚಿತ್ರಕಲಾ ಗ್ರೇಡ್ ಪರೀಕ್ಷೆಗೆ ತರಬೇತಿ ಹೊಂದುವ ರೀತಿಯಲ್ಲಿ ಕಲಿಕೆಯೊಂದಿಗೆ ಕಲಾಪ್ರಪಂಚವನ್ನು ಪರಿಚಯಿಸುವ ಗುರಿಯನ್ನು ಹೊಂದಿದ್ದು, ವಿವಿಧ ಚಿತ್ರಗಳು, ಕಲಾ ಅಭ್ಯಾಸಗಳು, ಆಕರ್ಷಕ ಚಟುವಟಿಕೆಗಳು ಹಾಗೂ ಸ್ಥಳೀಯ ಸಂಸ್ಕೃತಿಯ ಸ್ಪರ್ಶವನ್ನು ಹೊಂದಿದೆ. ಕಲಾಸಂಪದ ಕೃತಿಯು ಮಕ್ಕಳ ಕಲಾತ್ಮಕ ಪ್ರತಿಭೆಗಳನ್ನು ಪ್ರಚೋದನೆ ಮಾಡುವುದು ಮಾತ್ರವಲ್ಲದೆ, ಶಿಕ್ಷಕರಿಗೂ ಮಾರ್ಗದರ್ಶನ ನೀಡುತ್ತದೆ.
ರಾಜೇಶ್ವರಿಯವರು ಮಾತನಾಡಿ ನಾನು ಕಲಿತ ಶಾಲೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಗೆ ನಾನು ರಚಿಸಿದ 9ನೇ ತರಗತಿಯ ಚಿತ್ರಕಲಾ ಮಾರ್ಗದರ್ಶಿ ಪುಸ್ತಕಗಳನ್ನುಕನ್ನಡ ಮಾಧ್ಯಮದ 114 ಮಕ್ಕಳಿಗೆ ಕೊಡುಗೆಯಾಗಿ ನೀಡಲು ಅವಕಾಶ ಮಾಡಿಕೊಟ್ಟದ್ದಕ್ಕಾಗಿ, ಹಾಗೂ ನನ್ನ ವೃತ್ತಿ ಜೀವನದಲ್ಲಿ ನನ್ನ ಸಾಧನೆಯನ್ನು ಗುರುತಿಸಿ ಸನ್ಮಾನಿಸಿ ಆವಿಸ್ಮರಣೀಯ ದಿನವಾಗಿದೆ ಎಂದು ಹೇಳಿದರು.

“ಮನೆಯೇ ಮೊದಲ ಪಾಠಶಾಲೆ, ಜನನಿ ತಾನೇ ಗುರು. ಆ ಜನನಿಗೂ ಪಾಠ ಹೇಳಿದ ಗುರುವೇ ಅರಿವು” ಎಲ್ಲಾ ದಾನಕ್ಕೂ ಶ್ರೇಷ್ಠ “ವಿದ್ಯಾ ದಾನ” ಎನ್ನುವುದನ್ನು ತಿಳಿದ ದೇಶ ನಮ್ಮದು. ಅದು ವಿಶ್ವದ ಕಣ್ಣು. ಮುಂದೆ ಗುರಿ ಇರಬೇಕು ಹಿಂದೆ ಗುರು ಇರಬೇಕು. ನಂಬಿ ನಡೆದರೆ ಬದುಕು ಸಾರ್ಥಕವಾಗುತ್ತದೆ. ನಾನು ಇಷ್ಟು ಎತ್ತರಕ್ಕೆ ಬೆಳೆಯಲು ಸ್ಪೂರ್ತಿದಾಯಕ ವಾತಾವರಣವನ್ನು, ನನಗೆ ಈ ಶಾಲೆ ನೀಡಿದೆ ಎಂದರು.
ಸರಕಾರಿ ಪಬ್ಲಿಕ್ ಪ್ರೌಢಶಾಲೆ ಪೂಂಜಲ ಕಟ್ಟೆ ಶಾಲೆಯ ಹಿರಿಯ ವಿದ್ಯಾರ್ಥಿನಿಯಾಗಿರುವ ರಾಜೇಶ್ವರಿ ಕೆ ಯವರು ಮಂಗಳೂರಿನ ಡೊಂಗರಕೇರಿಯ ಅನುದಾನಿತ ಕೆನರಾ ಹೆಣ್ಮಕ್ಕಳ ಪ್ರೌಢ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕಿಯಾಗಿ ಸುಮಾರು 32 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಸಾವಿರಾರು ವಿದ್ಯಾರ್ಥಿಗಳ ಭವ್ಯ ಭವಿಷ್ಯಕ್ಕೆ ಹೊಂಗನಸಿನ ಬಣ್ಣವನ್ನು ತುಂಬಲು ಪ್ರೇರಣೆಯಾಗಿ, ಸಾಕಷ್ಟು ಪ್ರಶಸ್ತಿ ಪುರಸ್ಕಾರ ಗೌರವಗಳಿಗೆ ಭಾಜನರಾಗಿರುವುದು ನಮಗೂ ಹೆಮ್ಮೆ ತರುವ ವಿಚಾರವಾಗಿದೆ ಎಂದು ಧರಣೇಂದ್ರ ರವರು ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ಉಪ ಪ್ರಾಂಶುಪಾಲರು, ಶಾಲಾ ಶಿಕ್ಷಕ ವೃಂದದವರು ಹಾಗೂ ರಾಜೇಶ್ವರಿಯವರ ಸಹೋದರ ಈ ಶಾಲೆಯ ಹಿರಿಯ ವಿದ್ಯಾರ್ಥಿಯಾಗಿರುವ ವಸಂತ್ ಕೇದಿಗೆಯವರು ಮತ್ತು ಬೆಂಗ್ರೆ ಶಾಲೆಯ ಚಿತ್ರಕಲಾ ಶಿಕ್ಷಕರಾದ ಅಂಬಿಕಾ ರವರು ಉಪಸ್ಥಿತರಿದ್ದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
Uncategorized3 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized4 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized2 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized3 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized2 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
Uncategorized19 minutes ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ


















