ಶಿಕ್ಷಣ
Philo Pratibha-ಫಿಲೋಮಿನಾ ಪ.ಪೂ.ಕಾಲೇಜಿನಲ್ಲಿ ‘ಫಿಲೋ ಪ್ರತಿಭಾ- 2025’ ಪ್ರೌಢ ಶಾಲಾ ಮಟ್ಟದ ಸ್ಪರ್ಧೆ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಆಗಸ್ಟ್ 6 ರಂದು ಕಾಲೇಜಿನ ಬೆಳ್ಳಿ ಹಬ್ಬದ ಸಭಾಂಗಣದಲ್ಲಿ ನಡೆದ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಆಯೋಜಿಸಲಾದ ಜಿಲ್ಲಾಮಟ್ಟದ ‘ಫಿಲೋ ಪ್ರತಿಭಾ – 2025’ ಕಾರ್ಯಕ್ರಮವನ್ನು ಸುಳ್ಯ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೆರಾಲು ಉದ್ಘಾಟಸಿದರು.
ಪುತ್ತೂರು : ಇಂದಿನ ಈ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪ್ರತಿಯೊಂದು ಕ್ಷಣವನ್ನು ತಮ್ಮ ಕೌಶಲ್ಯ ವೃದ್ಧಿಗಾಗಿ ಉಪಯೋಗಿಸಬೇಕಾಗಿದ್ದು , ಪ್ರತಿ ವಿದ್ಯಾರ್ಥಿಯೂ ತನ್ನ ಸಾಮರ್ಥ್ಯಕ್ಕೆ ತಕ್ಕುದಾದ ಪ್ರದರ್ಶನವನ್ನು ನೀಡಬೇಕಾಗಿದೆ. ವಿಪುಲ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಯಶಸ್ಸನ್ನು ಗಳಿಸಬೇಕು ಎಂದು ಸುಳ್ಯ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೆರಾಲು ಹೇಳಿದರು.

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಆಗಸ್ಟ್ 6 ರಂದು ಕಾಲೇಜಿನ ಬೆಳ್ಳಿ ಹಬ್ಬದ ಸಭಾಂಗಣದಲ್ಲಿ ನಡೆದ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಆಯೋಜಿಸಲಾದ ಜಿಲ್ಲಾಮಟ್ಟದ ‘ಫಿಲೋ ಪ್ರತಿಭಾ – 2025’ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದ ಅವರು ಸಂತ ಫಿಲೋಮಿನಾ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ವೇದಿಕೆಯಾಗಿದ್ದು, ಪುತ್ತೂರಿನ ಹಲವಾರು ಪ್ರತಿಭೆಗಳು ಈ ಶಿಕ್ಷಣ ಸಂಸ್ಥೆಗಳ ಮೂಲಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗಳನ್ನು ಮಾಡಿದ್ದಾರೆ.

ಇಂದಿನ ಫಿಲೋ ಪ್ರತಿಭಾ ಕೂಡ ಇಂತಹುದೇ ಒಂದು ವೇದಿಕೆಯಾಗಿದ್ದು, ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಇಂದಿನ ಶಿಕ್ಷಣವು ಕೇವಲ ಜ್ಞಾನಾಧರಿತವಾಗಿರದೆ, ಕೌಶಲ್ಯ ಆಧಾರಿತ ಶಿಕ್ಷಣವಾಗಿದ್ದು, ಕೌಶಲ್ಯ ವೃದ್ಧಿಯು ನಿರಂತರ ಅಭ್ಯಾಸದ ಮೂಲಕವಷ್ಟೇ ಆಗುವಂತದ್ದು. ಹಾಗಾಗಿ ವಿದ್ಯಾರ್ಥಿಗಳು ಯಾವುದೇ ಕ್ಷಣವನ್ನು ವ್ಯರ್ಥ ಗೊಳಿಸದೆ ರಚನಾತ್ಮಕ ಕೆಲಸಗಳಿಗೆ ಸಮಯವನ್ನು ಮುಡಿಪಾಗಿಟ್ಟು ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕು ಎಂದು ಹೇಳಿದರು.

ಅಧ್ಯಕ್ಷತೆಯನ್ನು ವಹಿಸಿದ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ರೆ.ಫಾ. ಲಾರೆನ್ಸ್ ಮಸ್ಕರೇನಸ್ ಮಾತನಾಡಿ ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ಫಿಲೊ ಪ್ರತಿಭಾ ಒಂದು ಅತ್ಯುತ್ತಮ ವೇದಿಕೆಯಾಗಿದ್ದು, ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಹಲವಾರು ವರ್ಷಗಳಿಂದ ನಮ್ಮ ಸಂಸ್ಥೆ ಗುಣಮಟ್ಟದ ವಿದ್ಯಾಭ್ಯಾಸದ ಜೊತೆಗೆ, ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಒತ್ತು ನೀಡುತ್ತಿದ್ದು, ನಮ್ಮ ವಿದ್ಯಾರ್ಥಿಗಳು ಹಲವಾರು ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇಲ್ಲಿಯ ಉಪನ್ಯಾಸಕರು ಪಾಠ ಪ್ರವಚನದ ಜೊತೆಗೆ, ವಿದ್ಯಾರ್ಥಿಗಳ ಆಸಕ್ತಿಗೆ ಅನುಗುಣವಾಗಿ ಸೂಕ್ತ ಮಾರ್ಗದರ್ಶನವನ್ನು ನೀಡುತ್ತಿದ್ದು, ವಿದ್ಯಾರ್ಥಿಗಳ ಪ್ರಗತಿಗೆ ಇದು ಪೂರಕವಾಗಿದೆ. ಇಂದಿನ ಸ್ಪರ್ಧೆಗೆ ಆಗಮಿಸಿದ ತಾವೆಲ್ಲರೂ ಉತ್ತಮ ಪ್ರದರ್ಶನವನ್ನು ನೀಡುವುದರ ಮೂಲಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು.

ವೇದಿಕೆಯಲ್ಲಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆರಾಲ್ಡ್ ಡಿ’ ಕೋಸ್ಟಾ, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ದಿವ್ಯಾ ಅನಿಲ್ ರೈ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ 36 ಪ್ರೌಢಶಾಲೆಗಳ 900ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ರಸಪ್ರಶ್ನೆ, ಇಂಗ್ಲಿಷ್ ವಿಚಾರ ಸಂಕಿರಣ, ಪೆನ್ಸಿಲ್ ಸ್ಕೆಚ್, ಮಣ್ಣಿನ ಮಾದರಿ ತಯಾರಿ, ವಿಜ್ಞಾನ ಮಾದರಿ ತಯಾರಿ, ದೇಶ ಭಕ್ತಿ ಗಾಯನ, ಕೊಲಾಜ್ ತಯಾರಿಕೆ, ತ್ಯಾಜ್ಯದಿಂದ ಉಪಯುಕ್ತ ವಸ್ತು ತಯಾರಿ , ಫೇಸ್ ಪೈಂಟಿಂಗ್, ಛದ್ಮ ವೇಷ, ಲಾಂಚಿಂಗ್ ಪ್ರಾಡಕ್ಟ್, ಕನ್ನಡ ಕಂಠ ಪಾಠ, ರಂಗೋಲಿ ಹಾಗೂ ಜಾನಪದ ನೃತ್ಯ ಹೀಗೆ 14 ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರೌಢಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ‘ಫಿಲೋ ಪ್ರತಿಭಾ 2025’ ಇದರ ನಿರ್ದೇಶಕರಾದ ಸುಮಾ ಪಿ. ಆರ್ ವಂದಿಸಿ, ಉಪನ್ಯಾಸಕರಾದ ಸವಿತಾ ಮೊಂತೇರೋ ಕಾರ್ಯಕ್ರಮವನ್ನು ನಿರೂಪಿಸಿದರು
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
Uncategorized3 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized4 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized2 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized3 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized2 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
Uncategorized19 minutes ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ


















