Connect with us

ಕಾರ್ಯಕ್ರಮಗಳು

Dr. Shreepati Rao-ಚಾಟ್‌ಜಿಪಿಟಿ ನಂಬಬೇಡಿ, ವೈದ್ಯರನ್ನು ಸಂಪರ್ಕಿಸಿ- ಡಾ.ಶ್ರೀಪತಿ ರಾವ್| ಕರ್ನಾಟಕ ಪತ್ರಕರ್ತರ ಸಂಘದಿಂದ ಉಚಿತ ವೈದ್ಯಕೀಯ ಶಿಬಿರ

Published

on

Ad Widget

Ad Widget

Ad Widget

Ad Widget

ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ಘಟಕದ ವತಿಯಿಂದ ರೋಟರಿ ಕ್ಲಬ್ ಪುತ್ತೂರು ಮತ್ತು ರೋಟರ್‍ಯಾಕ್ಟ್ ಕ್ಲಬ್ ಪ್ರಗತಿ ಪಾರಾಮೆಡಿಕಲ್ ಸಹಯೋಗದೊಂದಿಗೆ ಆಯೋಜಿಸಿದ ಉಚಿತ ವೈದ್ಯಕೀಯ ಶಿಬಿರ ಆ.6 ರಂದು ಬೊಳುವಾರಿನ ಯೂನಿಯನ್ ಬ್ಯಾಂಕ್ ಮುಂಭಾಗದಲ್ಲಿರುವ ಫಿಯೋನಿಕ್ಸ್ ಕ್ಲಿನಿಕ್‌ನಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ಘಟಕದ ವತಿಯಿಂದ ರೋಟರಿ ಕ್ಲಬ್ ಪುತ್ತೂರು ಮತ್ತು ರೋಟರ್‍ಯಾಕ್ಟ್ ಕ್ಲಬ್ ಪ್ರಗತಿ ಪಾರಾಮೆಡಿಕಲ್ ಸಹಯೋಗದೊಂದಿಗೆ ಆಯೋಜಿಸಿದ ಉಚಿತ ವೈದ್ಯಕೀಯ ಶಿಬಿರ ಆ.6 ರಂದು ಬೊಳುವಾರಿನ ಯೂನಿಯನ್ ಬ್ಯಾಂಕ್ ಮುಂಭಾಗದಲ್ಲಿರುವ ಫಿಯೋನಿಕ್ಸ್ ಕ್ಲಿನಿಕ್‌ನಲ್ಲಿ ನಡೆಯಿತು.

Ad Widget

Ad Widget alt="Ad Widget"/>

Ad Widget

ಶಿಬಿರ ಉದ್ಘಾಟಿಸಿ ಮಾತನಾಡಿದ ರೋಟರಿ ಕ್ಲಬ್ ಪುತ್ತೂರಿನ ಮಾಜಿ ಅಧ್ಯಕ್ಷ ಡಾ.ಶ್ರೀಪತಿ ರಾವ್, ಇತ್ತೀಚಿನ ದಿನಗಳಲ್ಲಿ ಇಡೀ ಜಗತ್ತನೇ ಆಳುತ್ತಿರುವ ಚಾಟ್‌ಜಿಪಿಟಿ ವೈದ್ಯಕೀಯ ಕ್ಷೇತ್ರದ ಮೇಲೂ ಕೆಟ್ಟ ಪರಿಣಾಮ ಬೀರಿದೆ. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಕ್ಲೀನಿಕ್‌ಗಳಿಗೆ ಹೋಗುತ್ತಿದ್ದ ಜನರು ಇಂದು ಚಾಟ್‌ಜಿಪಿಟಿ ಮೊರೆ ಹೋಗುತ್ತಿರುವುದು ಕಳವಳಕಾರಿ ಸಂಗತಿ. ಯಾವುದೇ ಆರೋಗ್ಯ ಸಮಸ್ಯೆ ಬಂದರೂ ಚಾಟ್‌ಜಿಪಿಟಿಯಲ್ಲಿ ಪರಿಹಾರ ಕಂಡುಕೊಳ್ಳಲು ಮುಂದಾಗಿರುವುದು ವಿಷಾದನೀಯ ಎಂದರು.

Ad Widget

Ad Widget <> Ad Widget

ಪ್ರಸ್ತುತ ದಿನಮಾನಸಗಳಲ್ಲಿ ಇಂದಿನ ವೈದ್ಯರಿಗೆ ಕ್ಲಿನಿಕಲ್ ಮೆಡಿಸಿನ್ ಏನೆಂದು ತಿಳಿದಿಲ್ಲ. ಇದನ್ನು ಕಲಿಸುವ ಶಿಕ್ಷಕರ ಕೊರತೆಯೇ ಇದಕ್ಕೆ ಕಾರಣ. ಹಿಂದಿನ ದಿನಗಳಲ್ಲಿ ಈ ಕ್ಲಿನಿಕಲ್ ಮೆಡಿಕಲ್ ಮೂಲಕ ರೋಗಿಗಳನ್ನು ಗುಣಪಡಿಸುತ್ತಿದ್ದೇವು. ಆದರೆ ಈಗ ಚಾಟ್‌ಜಿಪಿಟಿ ಮೂಲಕ ಗುಣಪಡಿಸಿಕೊಳ್ಳುತ್ತಿದ್ದಾರೆ. ಯಾವುದೇ ಆರೋಗ್ಯ ಸಮಸ್ಯೆ ಬಂದರೂ ವೈದ್ಯರನ್ನು ಸಂಪರ್ಕಿಸಿ ಪರೀಕ್ಷಿಸಿಯೇ ಔಷಧಿ ಪಡೆದುಕೊಳ್ಳಬೇಕು. ಚಾಟ್‌ಜಿಪಿಟಿ ಔಷಧಿಗಳನ್ನು ನಂಬಬಾರದು ಎಂದು ಕಿವಿ ಮಾತು ಹೇಳಿದರು.

ಮುಖ್ಯ ಅತಿಥಿ ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಡಾ.ಶ್ರೀಪ್ರಕಾಶ್ ಮಾತನಾಡಿ, ಭೂಮಿಯಲ್ಲಿ ಹುಟ್ಟಿದ ನಾವು ಗಾಳಿ, ನೀರು, ಆಹಾರ ಎಲ್ಲವನ್ನೂ ಸೇವಿಸುತ್ತೇವೆ. ಹೀಗಾಗಿ ಪರಿಸರವನ್ನು ಸ್ವಚ್ಛವಾಗಿಡಬೇಕು. ಪರಿಸರ ಹದಗೆಟ್ಟರೆ ಮನುಷ್ಯರು ಆರೋಗ್ಯ ಸಮಸ್ಯೆಗೆ ಸಿಲುಕುತ್ತಾರೆ. ಆರೋಗ್ಯವೇ ಭಾಗ್ಯ ಎನ್ನುತ್ತೇವೆ. ಆದರೆ ನಮ್ಮ ಸುತ್ತಮುತ್ತಲಿನ ಪರಿಸರ ಎಷ್ಟು ಸ್ವಚ್ಛವಾಗಿಟ್ಟುಕೊಂಡಿದ್ದೇವೆ ಎಂದು ನಮ್ಮನ್ನು ನಾವೇ ಪ್ರಶ್ನಿಸಿಕೊಳ್ಳಬೇಕಾಗಿದೆ ಎಂದರು.

Ad Widget

Ad Widget

ಮನುಷ್ಯನಿಗೆ ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ಮುಖ್ಯ. ಹೀಗಾಗಿ ವ್ಯಾಯಾಮ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು, ಜಂಕ್‌ಫುಡ್ ಸೇವಿಸುವುದನ್ನು ನಿಲ್ಲಿಸಬೇಕು, ಫ್ರಿಡ್ಜ್‌ನಲ್ಲಿಟ್ಟ ಆಹಾರ ಸೇವಿಸಬಾರದು, ಪೌಷ್ಟಿಕ ಆಹಾರ ಸೇವಿಸಬೇಕು. ಹಿರಿಯರ ಕಾಲದ ಗುಣಮಟ್ಟದ ಆಹಾರ ಪದ್ಧತಿ ಅಳವಡಿಸಿಕೊಳ್ಳಬೇಕು. ಆ ಮೂಲಕ ನಾವೆಲ್ಲರೂ ಆರೋಗ್ಯಯುತವಾಗಿ ಬಾಳೋಣ ಎಂದರು.

ಉಗುಳುವುದರಿಂದ ಹರಡುವುದು ರೋಗ:

ಕಂಡಕಂಡಲ್ಲಿ ಕಸ ಎಸೆಯುವ ಮನುಷ್ಯರು ಎಲ್ಲೆಂದರಲ್ಲಿ ಉಗುಳುವ ದುರಾಭ್ಯಾಸವನ್ನೂ ಹೊಂದಿದ್ದಾರೆ. ಧಾರ್ಮಿಕ ಕೇಂದ್ರಗಳ ಆವರಣ, ರಸ್ತೆ, ಬಸ್ ನಿಲ್ದಾಣ, ಮನೆ ಅಂಗಳ ಸೇರಿದಂತೆ ಅನೇಕ ಕಡೆಗಳಲ್ಲಿ ಉಗುಳುತ್ತಾರೆ. ಇದು ಕಾಯಿಲೆ ಹರಡುತ್ತದೆ ಎಂಬುದನ್ನು ಎಲ್ಲರೂ ತಿಳಿದುಕೊಳ್ಳಬೇಕು. ಈ ಬಗ್ಗೆ ಜಾಗೃತಿ ಮೂಡಿಸಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಲ್ಲಿಸುವ ಪ್ರಯತ್ನ ಮಾಡಬೇಕಿದೆ. ಇದು ಈಡೇರಿದರೆ ಶೇ.೫೦ ರಷ್ಟು ಕಾಯಿಲೆ ಯುದ್ಧ ಗೆದ್ದಂತೆ ಎಂದು ಡಾ.ಶ್ರೀಪ್ರಕಾಶ್ ಹೇಳಿದರು.
ಫಿಯೋನಿಕ್ಸ್ ಕ್ಲಿನಿಕ್‌ನ ಡಾ.ಅವಿಲ್ ಗೊನ್ಸಾಲ್ವಿಸ್ ಮತ್ತು ಡಾ.ಅಲೆನ್ ಪಿಂಟೋ ಅವರು ಉಚಿತ ಆರೋಗ್ಯ ತಪಾಸಣೆ, ಬಿಪಿ ಶುಗರ್ ಪರೀಕ್ಷೆ ನಡೆಸಿದರು. ಪ್ರಗತಿ ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸಹಕರಿಸಿದರು. ಅಲ್ಲದೆ, ಆರೋಗ್ಯ ಸಮಸ್ಯೆ ಕಂಡುಬಂದವರಿಗೆ ಉಚಿತವಾಗಿ ಔಷಧಿ ವಿತರಿಸಲಾಯಿತು.

ರೋಟರಿ ಕ್ಲಬ್‌ನ ಶ್ರೀಕಾಂತ್ ಕೊಳತ್ತಾಯ, ಝೆವಿಯರ್ ಡಿ’ಸೋಜಾ, ಎಂ.ಜಿ.ರಫೀಕ್, ಹೆರಾಲ್ಡ್ ಮಾಡ್ತಾ, ರೋಟರ್‍ಯಾಕ್ಟ್ ಕ್ಲಬ್ ಪ್ರಗತಿ ಪ್ಯಾರಾಮೆಡಿಕಲ್ ಪ್ರಾಂಶುಪಾಲೆ ಪ್ರೀತಾ ಹೆಗ್ಡೆ, ಡಾ.ಅವಿಲ್ ತಂದೆ ಅಲ್ವಿನ್ ಗೊನ್ಸಾಲ್ವಿಸ್, ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ಘಟಕದ ಸ್ಥಾಪಕಾಧ್ಯಕ್ಷ ಉಮೇಶ್ ಮಿತ್ತಡ್ಕ, ಕಾರ್ಯದರ್ಶಿ ಆದಿತ್ಯ ಭಟ್, ಸಂಘಟನಾ ಕಾರ್ಯದರ್ಶಿ ಅಶ್ವಥ್, ಖಜಾಂಜಿ ಅಕ್ಷತಾ, ಪದಾಧಿಕಾರಿಗಳಾದ ಗೋಪಾಲಕೃಷ್ಣ ಮಾಡಾವು, ಆಸೀಫ್ ಆನೆಮಜಲು, ಚಂದ್ರಕಾಂತ್ ಉರ್ಲಾಂಡಿ, ಪ್ರಜ್ವಲ್ ಬೇಕಲ್, ತಾರನಾಥ್ ಹೊಸವಳಿಕೆ, ಪ್ರೀತಾ, ಜಯಲಕ್ಷ್ಮೀ, ನರೇಶ್ ಜೈನ್, ಶಿಬಿರದಲ್ಲಿ ಪಾಲ್ಗೊಂಡಿದ್ದರು. ಶ್ರೀಧರ್ ರೈ ಕೋಡಂಬು ಸ್ವಾಗತಿಸಿ, ಡಾ.ಅವಿಲ್ ಗೊನ್ಸಾಲ್ವಿಸ್ ವಂದಿಸಿದರು. ಕರ್ನಾಟಕ ಪತ್ರಕರ್ತರ ಸಂಘದ ಮಾಜಿ ಕಾರ್ಯದರ್ಶಿ ಲಕ್ಷ್ಮೀಕಾಂತ್ ರೈ ಅನಿಕೂಟೆಲು ನಿರೂಪಿಸಿದರು.

ನಿರೀಕ್ಷೆಗೂ ಮೀರಿದ ಸ್ಪಂದನೆ

ನಾವು ಆಯೋಜಿಸಿದ ಚೊಚ್ಚಲ ಉಚಿತ ವೈದ್ಯಕೀಯ ಶಿಬಿರಕ್ಕೆ ನಿರೀಕ್ಷೆಗೂ ಮೀರಿ ಸ್ಪಂದನೆ ದೊರಕಿದೆ ಎಂದು ಫಿಯೋನಿಕ್ಸ್ ಕ್ಲಿನಿಕ್‌ನ ಡಾ.ಅವಿಲ್ ಗೊನ್ಸಾಲ್ವಿಸ್ ಹೇಳಿದರು. 50 ಮಂದಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ಔಷಧಿ ವಿತರಣೆ ಮಾಡಲು ಯೋಜಿಸಲಾಗಿತ್ತು. ಆದರೆ 63 ಮಂದಿ ಈ ಶಿಬಿರವನ್ನು ಸದುಪಯೋಗ ಮಾಡಿಕೊಂಡಿದ್ದಾರೆ ಎಂದರು.

Ad Widget
Click to comment

Leave a Reply

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಕಾರ್ಯಕ್ರಮಗಳು

Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ

Published

on

Ad Widget

Ad Widget

Ad Widget

Ad Widget

ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.

Ad Widget

Ad Widget <> Ad Widget

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

Ad Widget

Ad Widget

ವೇದಿಕೆಯಲ್ಲಿ ಉದ್ಯಮಿ ಜಯಕುಮಾರ್ ನಾಯರ್, ಸ್ವರ್ಣೋದ್ಯಮಿ ಈಶ್ವರ ಮುರಳಿ ಹಾಗೂ ದೀಪೋತ್ಸವ ಸಮಿತಿ ಉಪಾಧ್ಯಕ್ಷ ಕರುಣಾಕರ ರೈ ದೇರ್ಲ ಉಪಸ್ಥಿತರಿದ್ದರು.

ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಂದಿಸಿದರು. ಸಂಚಾಲಕ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2026

Published

on

Ad Widget

Ad Widget

Ad Widget

Ad Widget

ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget alt="Ad Widget"/>

Ad Widget

ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್‌ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

Ad Widget

Ad Widget <> Ad Widget

ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.

Ad Widget

Ad Widget

ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.

ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!