ಮಂಗಳೂರು
Dr. Bharat Shetty-ಎಸ್ಐಟಿ ತನಿಖೆಯ ಸಂದರ್ಭದಲ್ಲಿ ಎಡಪಂಥೀಯರು, ಹಿಂದೂಯೇತರರಿಂದ ಧರ್ಮದ ವಿರುದ್ಧವೇ ಅಪನಂಬಿಕೆ ಸೃಷ್ಟಿ: ಡಾ. ಭರತ್ ಶೆಟ್ಟಿ ಕಿಡಿ
ಬೆಳ್ತಂಗಡಿಯ ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ, ಕೊಲೆ ಪ್ರಕರಣ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ನಡೆಸುತ್ತಿದ್ದು, ಈ ನಡುವೆ ಎಡಪಂತಿಯರು, ಹಿಂದೂಯೇತರ ವ್ಯಕ್ತಿಗಳು ಹಿಂದೂ ಧರ್ಮದ ಆಚಾರ ವಿಚಾರಗಳಲ್ಲಿ ಅಪ ನಂಬಿಕೆಯನ್ನು ಸೃಷ್ಟಿಸುವಂತೆ ಲಂಗು ಲಗಾಮು ಇಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಗಳನ್ನು ಹಾಕುತ್ತಿರುವುದಕ್ಕೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ, ಕೊಲೆ ಪ್ರಕರಣ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ನಡೆಸುತ್ತಿದ್ದು, ಈ ನಡುವೆ ಎಡಪಂತಿಯರು, ಹಿಂದೂಯೇತರ ವ್ಯಕ್ತಿಗಳು ಹಿಂದೂ ಧರ್ಮದ ಆಚಾರ ವಿಚಾರಗಳಲ್ಲಿ ಅಪ ನಂಬಿಕೆಯನ್ನು ಸೃಷ್ಟಿಸುವಂತೆ ಲಂಗು ಲಗಾಮು ಇಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಗಳನ್ನು ಹಾಕುತ್ತಿರುವುದಕ್ಕೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
ಕೆಲವೊಂದು ಎನ್ಜಿಒ ಸಂಘಟನೆಗಳು, ಹಿಂದೂಯೇತರ ವ್ಯಕ್ತಿಗಳು, ಎಡಪಂಥೀಯರು
ತನಿಖೆಗೂ ಮುನ್ನವೇ, ಅಪರಾಧ ಪ್ರಕರಣಗಳನ್ನು ತಾವೇ ಕಂಡುಕೊಂಡಂತೆ
ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಾವೇ ತನಿಖೆ ಮಾಡಿ ವರದಿ ಒಪ್ಪಿಸಿದ ಹಾಗೆ, ಪೋಸ್ಟ್ಗಳನ್ನು ಹಾಕುತ್ತಿದ್ದಾರೆ. ಸಮಯ ಸಾಧಕತನ ತೋರಿಸಿ, ಧರ್ಮ, ಧರ್ಮಸ್ಥಳ ಶ್ರೀ ಮಂಜುನಾಥನ ಮೇಲೆ ಮೇಲೆ ಆರೋಪ ಹೊರಿಸಲು, ತಾಮುಂದು ತಾಮುಂದು ಎಂದು ಪೋಸ್ಟ್ ಹಾಕುತ್ತಿದ್ದಾರೆ.
ಅಪರಾಧ ಪ್ರಕರಣದಲ್ಲಿ ಹಿಂದೂ ಧರ್ಮವನ್ನು ಹಿಂದು ಆಚಾರ ವಿಚಾರಗಳನ್ನು, ಧರ್ಮಸ್ಥಳ ಮಂಜುನಾಥ ಕ್ಷೇತ್ರ ದೇವಾಲಯವನ್ನು ಎಳೆದು ತಂದು ಹಿಂದೂ ಸಮಾಜದ ಜನರ ಮನಸ್ಸಿಗೆ ಘಾಸಿಯನ್ನ ಉಂಟು ಮಾಡುವ ಮೂಲಕ ವಿಕೃತ ಆನಂದವನ್ನು ಕಾಣುತ್ತಿದ್ದಾರೆ.
ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರ ಪತ್ತೆಗೆ ಎಸ್ ಐ ಟಿ ತನಿಖೆ ನಡೆಸುತ್ತಿದೆ.ಈ ನಡುವೆ ಹಿಂದೂ ಧರ್ಮ ಆಚಾರ ವಿಚಾರಗಳನ್ನು ಅವಹೇಳನ ಮಾಡಿ ನಿಕೃಷ್ಟವಾಗಿ ಕಾಣುವುದನ್ನು
ಖoಡಿಸುವುದಾಗಿ ಎಂದು ಡಾ. ಭರತ್ ಶೆಟ್ಟಿ ಹೇಳಿದ್ದಾರೆ.
ಮಂಗಳೂರು
Mangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್ಗಳು, ರೆಸ್ಟೋರೆಂಟ್ಗಳು, ಟೀ ಸ್ಟಾಲ್ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಮಂಗಳೂರು, ನ.23: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್ಗಳು, ರೆಸ್ಟೋರೆಂಟ್ಗಳು, ಟೀ ಸ್ಟಾಲ್ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಆದೇಶದ ಪ್ರಕಾರ, ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ವ್ಯಾಪಾರಿಕ ಸಂಸ್ಥೆಗಳು ಪ್ರತಿದಿನ ರಾತ್ರಿ 11:45ರಿಂದ ಮಾರನೇ ದಿನ ಬೆಳಗ್ಗೆ 5:30ರವರೆಗೆ ವ್ಯಾಪಾರ ವಹಿವಾಟು ನಡೆಸುವಂತಿಲ್ಲ. ಈ ನಿರ್ಬಂಧವು ಸಿಎಲ್-4, ಸಿಎಲ್-6(ಎ) ಹಾಗೂ ಸಿಎಲ್-7 ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ. ಅಂತಹ ಸಂಸ್ಥೆಗಳು ತಮ್ಮ ಪರವಾನಗಿಯಲ್ಲಿ ನಿಗದಿಪಡಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಆಸ್ಪತ್ರೆಗಳು, ಔಷಧ ಅಂಗಡಿಗಳು, ತುರ್ತು ಸೇವೆಗಳು, ಅಗತ್ಯ ಸಾರ್ವಜನಿಕ ಉಪಯೋಗಿತಾ ಸೇವೆಗಳು ಹಾಗೂ ಸರಕಾರ ಅಥವಾ ಸಂಬಂಧಪಟ್ಟ ಪ್ರಾಧಿಕಾರಗಳಿಂದ ವಿಶೇಷ ಅನುಮತಿ ಪಡೆದ ಸಂಸ್ಥೆಗಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.
ನಿರ್ಬಂಧಕ್ಕೆ ಕಾರಣವೇನು?
ಮಂಗಳೂರು ನಗರವು ಕರಾವಳಿ ಕರ್ನಾಟಕದ ಪ್ರಮುಖ ವಾಣಿಜ್ಯ, ಶೈಕ್ಷಣಿಕ ಹಾಗೂ ಬಂದರು ನಗರವಾಗಿದ್ದು, ವಿವಿಧ ಧರ್ಮ, ಜಾತಿ ಮತ್ತು ಸಮುದಾಯಗಳ ಜನರು ಸಹಬಾಳ್ವೆಯಿಂದ ನೆಲೆಸಿರುವ ಕೋಮು ಸೂಕ್ಷ್ಮ ಪ್ರದೇಶವಾಗಿದೆ. ನಗರದ ಹಲವು ಭಾಗಗಳಲ್ಲಿ ತಡರಾತ್ರಿಯವರೆಗೂ, ಕೆಲವೆಡೆ ಬೆಳಗಿನ ಜಾವದವರೆಗೂ ವ್ಯಾಪಾರ ವಹಿವಾಟು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಮಾದಕ ವ್ಯಸನ ಹಾಗೂ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವುದು ಮತ್ತು ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ರಾತ್ರಿ ವೇಳೆ ಅನಗತ್ಯವಾಗಿ ಜನರು ಗುಂಪುಗೂಡುವುದು, ಓಡಾಟ ನಡೆಸುವುದು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಹರಡುವ ವದಂತಿಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿವೆ. ವ್ಯಾಪಾರ ಕೇಂದ್ರಗಳು ರಾತ್ರಿ ಪೂರ್ತಿ ತೆರೆದಿರುವುದರಿಂದ ಜನಸಂದಣಿ ಹೆಚ್ಚಾಗಿ ಅಹಿತಕರ ಘಟನೆಗಳಿಗೆ ಕಾರಣವಾಗುವ ಅಪಾಯವೂ ಇದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಇದಲ್ಲದೆ, ರಾತ್ರಿ ವೇಳೆ ಅಂಗಡಿಗಳು, ಹೋಟೆಲ್ಗಳು ಹಾಗೂ ಇತರ ವ್ಯಾಪಾರ ಕೇಂದ್ರಗಳ ಸುತ್ತಮುತ್ತ ಮಾದಕ ವ್ಯಸನಿಗಳು, ಸಮಾಜಘಾತಕ ವ್ಯಕ್ತಿಗಳು ಮತ್ತು ಅನುಮಾನಾಸ್ಪದ ವ್ಯಕ್ತಿಗಳು ಅನಗತ್ಯವಾಗಿ ಓಡಾಡುವುದು, ಕಾಲಹರಣ ಮಾಡುವುದು ಕಂಡುಬರುತ್ತಿದ್ದು, ಇಂತಹ ಪರಿಸ್ಥಿತಿಗಳು ಅಪರಾಧ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ವ್ಯಾಪಾರ ಕೇಂದ್ರಗಳ ಸುತ್ತ ವಾಹನಗಳ ನಿಲುಗಡೆ, ಜೋರಾದ ಶಬ್ದ, ರಸ್ತೆಗಳಲ್ಲಿ ಅನಗತ್ಯ ಗುಂಪುಗೂಡುವಿಕೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ವಿಶೇಷವಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ವಸತಿ ಪ್ರದೇಶಗಳ ನಿವಾಸಿಗಳ ನೆಮ್ಮದಿ ಮತ್ತು ಶಾಂತಿಗೆ ಭಂಗ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ವಹಿವಾಟಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಅಪರಾಧ
Mangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
ಮಂಗಳೂರು ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು: ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು ಸರ್ಕೀಟ್ ಹೌಸ್ ಮುಂಭಾಗದ ಕದ್ರಿ ಯುದ್ಧ ಸ್ಮಾರಕದ ಬಳಿ 1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾಗವಹಿಸಿದ್ದ ಟಿ-55 ಯುದ್ಧ ಟ್ಯಾಂಕ್ನ್ನು ಸಾರ್ವಜನಿಕರ ವೀಕ್ಷಣೆಗಾಗಿ ಎತ್ತರದ ವೇದಿಕೆಯಲ್ಲಿ ಇರಿಸಲಾಗಿದೆ.
ರಾತ್ರಿ ವೇಳೆ ಇಬ್ಬರು ಯುವಕರು ಟ್ಯಾಂಕ್ ಮೇಲೆ ಹತ್ತಿ, ಅದರ ಹ್ಯಾಚ್ ತೆರೆದು ಒಳಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ತಮ್ಮ ಕಿಡಿಗೇಡಿತನದ ವರ್ತನೆಯನ್ನು ವಿಡಿಯೋ ಮಾಡಿಕೊಂಡಿರುವ ಯುವಕರು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.
ದೇಶದ ಯುದ್ಧ ಇತಿಹಾಸ ಹಾಗೂ ಸೈನಿಕರ ಶೌರ್ಯ, ತ್ಯಾಗದ ಸಂಕೇತವಾಗಿ ಇರಿಸಲಾಗಿರುವ ಟ್ಯಾಂಕ್ ಬಳಿ ಯುವಕರು ಇಂತಹ ವರ್ತನೆ ತೋರಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ
Sahyadri-ಸಹ್ಯಾದ್ರಿಯಲ್ಲಿ ವಿಟಿಯು ಕನ್ಸೋರ್ಟಿಯಂ ಇ-ಸಂಪನ್ಮೂಲಗಳ ಪ್ರಾದೇಶಿಕ ತರಬೇತಿ ಕಾರ್ಯಕ್ರಮ
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.

ವಿಟಿಯು ಕನ್ಸೋರ್ಟಿಯಂ ಮೂಲಕ ಲಭ್ಯವಿರುವ ಡಿಜಿಟಲ್ ಶೈಕ್ಷಣಿಕ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯನ್ನು ಉತ್ತೇಜಿಸಲು ಮತ್ತು ಜಾಗೃತಿಯನ್ನು ಹೆಚ್ಚಿಸಲು ಕರ್ನಾಟಕದಾದ್ಯಂತ ಎಂಜಿನಿಯರಿಂಗ್ ಸಂಸ್ಥೆಗಳ ಗ್ರಂಥಪಾಲಕರು, ಅಧ್ಯಾಪಕರು ಮತ್ತು ಶೈಕ್ಷಣಿಕ ವೃತ್ತಿಪರರನ್ನು ಪ್ರಾದೇಶಿಕ ಮಟ್ಟದ ಕಾರ್ಯಕ್ರಮವು ಒಟ್ಟುಗೂಡಿಸಿತು.
ಉದ್ಘಾಟನಾ ಸಮಾರಂಭವು ಪ್ರಥಮ ವರ್ಷದ ವಿದ್ಯಾರ್ಥಿನಿಯರಾದ ಕುಮಾರಿ ಪೂರ್ವಿ ಶೆಟ್ಟಿ ಪಿ. ಜಿ. ಮತ್ತು ಕುಮಾರಿ ಗೌತಮಿ ಆರ್. ಅವರು ನಡೆಸಿಕೊಟ್ಟ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಪ್ರಾಂಶುಪಾಲರಾದ ಡಾ. ಎಸ್. ಎಸ್. ಇಂಜಗನೇರಿ ಅವರು ಸ್ವಾಗತ ಭಾಷಣ ಮಾಡಿದರು.
ನಂತರ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ಸಿಇಎಂ (SCEM) ನ ಸಹಾಯಕ ಗ್ರಂಥಪಾಲಕರಾದ ಡಾ. ಶ್ವೇತಾ ಕುಮಾರಿ ಕೆ. ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಮಂಗಳೂರಿನ ವಿಟಿಯು (VTU) ವಿಸ್ತರಣಾ ಕೇಂದ್ರದ ವಿಶೇಷ ಅಧಿಕಾರಿ ಡಾ. ದಾಮೋದರ ನಾರಲ್ ಅವರು ಕಾರ್ಯಕ್ರಮದ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.
ಎಸ್ಸಿಇಎಂನ ಸಹ ಪ್ರಾಧ್ಯಾಪಕರಾದ ಡಾ. ಚಂದನಾ ಬಿ. ಆರ್. ಅವರು ಮುಖ್ಯ ಅತಿಥಿಗಳಾದ ಎನ್ಐಟಿಕೆ (NITK) ಸುರತ್ಕಲ್ನ ಗ್ರಂಥಪಾಲಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರನ್ನು ಪರಿಚಯಿಸಿದರು; ಬಳಿಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಿದರು. ಎಸ್ಸಿಇಎಂನ ಆಡಳಿತಾಧಿಕಾರಿ ಹಾಗೂ ಟ್ರಸ್ಟಿ ಶ್ರೀ ಕೃಷ್ಣ ಹೆಗಡೆ ಅವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಗ್ರಂಥಪಾಲಕರು ಹಾಗೂ ಕಾರ್ಯಕ್ರಮ ಸಂಯೋಜಕರಾದ ಡಾ. ಭಾರತಿ ಕೆ. ಅವರು ವಂದನಾರ್ಪಣೆ ಸಲ್ಲಿಸಿದರು. ತಾಂತ್ರಿಕ ಅವಧಿಗಳಲ್ಲಿ IEEE, PAT ಟೆಕ್ನಾಲಜಿ, GATEtutor, ProQuest, Elsevier ScienceDirect, Taylor & Francis, Emerald Publishing, Cambridge University Press, Pearson, DrillBit ಮತ್ತು Quiklrn ಸೇರಿದಂತೆ ಪ್ರಮುಖ ಶೈಕ್ಷಣಿಕ ಪ್ರಕಾಶಕರು ಮತ್ತು ಡಿಜಿಟಲ್ ಸಂಪನ್ಮೂಲ ಪೂರೈಕೆದಾರರ ಪ್ರತಿನಿಧಿಗಳಿಂದ ಪ್ರಸ್ತುತಿಗಳು ಮತ್ತು ಪ್ರದರ್ಶನಗಳು ನಡೆದವು. ಅವಧಿಗಳಲ್ಲಿ ಎಲ್ಸೆವಿಯರ್ ಅವರ ಸ್ಕೋಪಸ್ ಡೇಟಾಬೇಸ್ ಕುರಿತು ಪ್ರಸ್ತುತಿ ಮತ್ತು MAP ಸಿಸ್ಟಮ್ಸ್ ಅವರ MAP My Access System ನ ಅವಲೋಕನವೂ ಸೇರಿತ್ತು.

ಸಂಪನ್ಮೂಲ ವ್ಯಕ್ತಿಗಳು ವಿದ್ವತ್ಪೂರ್ಣ ಜರ್ನಲ್ಗಳು, ಇ-ಪುಸ್ತಕಗಳು, ಸಂಶೋಧನಾ ಡೇಟಾಬೇಸ್ಗಳು, ಪರೀಕ್ಷಾ ತಯಾರಿ ಸಂಪನ್ಮೂಲಗಳು, ಕೃತಿಚೌರ್ಯ ಪತ್ತೆ ಪರಿಕರಗಳು ಮತ್ತು ಡಿಜಿಟಲ್ ಕಲಿಕಾ ವೇದಿಕೆಗಳನ್ನು ಪ್ರವೇಶಿಸುವ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ಒದಗಿಸಿದರು. ಬೋಧನೆ, ಕಲಿಕೆ ಮತ್ತು ಸಂಶೋಧನೆಯಲ್ಲಿ ಈ ಸಂಪನ್ಮೂಲಗಳ ವೈಶಿಷ್ಟ್ಯಗಳು, ಹುಡುಕಾಟ ಸೌಲಭ್ಯಗಳು ಮತ್ತು ಪ್ರಾಯೋಗಿಕ ಅನ್ವಯಿಕೆಗಳನ್ನು ಅರ್ಥಮಾಡಿಕೊಳ್ಳಲು ಭಾಗವಹಿಸುವವರಿಗೆ ಸಂವಾದಾತ್ಮಕ ಅವಧಿಗಳು ಸಹಾಯ ಮಾಡಿದವು.
ಈ ಕಾರ್ಯಕ್ರಮದಲ್ಲಿ ವಿವಿಧ ಎಂಜಿನಿಯರಿಂಗ್ ಸಂಸ್ಥೆಗಳನ್ನು ಪ್ರತಿನಿಧಿಸುವ ಗ್ರಂಥಪಾಲಕರು ಮತ್ತು ಅಧ್ಯಾಪಕರು ಉತ್ಸಾಹದಿಂದ ಭಾಗವಹಿಸಿದ್ದರು. ಇದು ಜ್ಞಾನ ಹಂಚಿಕೆ, ವೃತ್ತಿಪರ ಸಂವಹನ ಮತ್ತು ಡಿಜಿಟಲ್ ಸಂಪನ್ಮೂಲಗಳೊಂದಿಗೆ ಶೈಕ್ಷಣಿಕ ಸಮುದಾಯದ ತೊಡಗಿಸಿಕೊಳ್ಳುವಿಕೆಯನ್ನು ಬಲಪಡಿಸಲು ಪರಿಣಾಮಕಾರಿ ವೇದಿಕೆಯಾಗಿ ಕಾರ್ಯನಿರ್ವಹಿಸಿತು.
ಈ ವಿಟಿಯು ಒಕ್ಕೂಟದ ಪ್ರಾದೇಶಿಕ ತರಬೇತಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ, ಸಹ್ಯಾದ್ರಿ ಕಾಲೇಜು ಡಿಜಿಟಲ್ ಸಾಕ್ಷರತೆಯನ್ನು ಉತ್ತೇಜಿಸುವುದು, ಸಂಶೋಧನಾ ಸಾಮರ್ಥ್ಯಗಳನ್ನು ಬಲಪಡಿಸುವುದು ಮತ್ತು ಶೈಕ್ಷಣಿಕ ಇ-ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ
ಗುಣಮಟ್ಟದ ಉನ್ನತ ಶಿಕ್ಷಣವನ್ನು ಬೆಂಬಲಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿತು.
ಈ ಕಾರ್ಯಕ್ರಮವನ್ನು ಸಹ್ಯಾದ್ರಿ ಕಾಲೇಜಿನ ಕೇಂದ್ರ ಗ್ರಂಥಾಲಯದ ಗ್ರಂಥಪಾಲಕಿ ಡಾ. ಭಾರತಿ ಕೆ. ಸಂಯೋಜಿಸಿದರು.
-
ಶಿಕ್ಷಣ17 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು17 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್23 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಬಿಗ್ ನ್ಯೂಸ್19 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು19 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ17 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ17 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
-
ಅಪರಾಧ1 hour agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ















