ಬಿಗ್ ನ್ಯೂಸ್
Vittla-ವಿಟ್ಲ: ಉದ್ಯಮಿಗೆ ಕಾರು ಡಿಕ್ಕಿ – ಗಂಭೀರ
ದ್ವಿಚಕ್ರ ವಾಹನದ ಟಯರ್ ಪಂಕ್ಚರ್ ಆದ ಕಾರಣ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ, ಅವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಪರ್ತಿಪ್ಪಾಡಿ ಬಳಿ ನಡೆದಿದೆ.
ವಿಟ್ಲ: ದ್ವಿಚಕ್ರ ವಾಹನದ ಟಯರ್ ಪಂಕ್ಚರ್ ಆದ ಕಾರಣ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ, ಅವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಪರ್ತಿಪ್ಪಾಡಿ ಬಳಿ ನಡೆದಿದೆ.
ಕುಡ್ತಮುಗೇರಿನ ‘ಪ್ರಗತಿ ಸ್ವೀಟ್ಸ್’ ಮಾಲೀಕ ಜಗನ್ನಾಥ ಶೆಟ್ಟಿಗಾರ್ ಗಾಯಗೊಂಡವರು.
ಜಗನ್ನಾಥ ಶೆಟ್ಟಿಗಾರ್ ಅವರು ತಮ್ಮ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಟಯರ್ ಪಂಕ್ಚರ್ ಆಗಿತ್ತು. ಹೀಗಾಗಿ, ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಪಕ್ಕದಲ್ಲಿ ನಿಂತಿದ್ದಾಗ, ಪುತ್ತೂರಿನಿಂದ ಸಾಲೆತ್ತೂರು ಕಡೆಗೆ ಚಲಿಸುತ್ತಿದ್ದ ಕಾರು ಅವರಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ತೀವ್ರ ಗಾಯಗೊಂಡ ಜಗನ್ನಾಥ ಶೆಟ್ಟಿಗಾರ್ ಅವರನ್ನು ಸ್ಥಳೀಯರು ತಕ್ಷಣ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ರಾಷ್ಟ್ರೀಯ
Cancer-ಕ್ಯಾನ್ಸರ್ ಔಷಧಿಗಳ ಬೆಲೆಯಲ್ಲಿ ಶೇ.70ರಷ್ಟು ಇಳಿಕೆ ಸಾಧ್ಯತೆ..! MRP ಮೇಲಿನ ಲಾಭಾಂಶ ಮಿತಿಗೆ ಕೇಂದ್ರ ಚಿಂತನೆ
ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಹೊಸದಿಲ್ಲಿ: ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಬ್ರಾಂಡೆಡ್, ಜೆನೆರಿಕ್ ಔಷಧಿಗಳಿಗೂ ಅನ್ವಯ
ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ (ನಾನ್-ಶೆಡ್ಯೂಲ್ಡ್) ಕ್ಯಾನ್ಸರ್ ಔಷಧಿಗಳಿಗೆ ಈ ಮಿತಿಯನ್ನು ಅನ್ವಯಿಸುವ ಪ್ರಸ್ತಾವನೆ ಸರಕಾರದ ಮುಂದಿದೆ. ಬ್ರಾಂಡೆಡ್, ಜೆನೆರಿಕ್, ದೇಶೀಯವಾಗಿ ತಯಾರಿಸಿದ ಹಾಗೂ ಆಮದು ಮಾಡಿಕೊಳ್ಳುವ ಕ್ಯಾನ್ಸರ್ ಔಷಧಿಗಳೂ ಇದರ ವ್ಯಾಪ್ತಿಗೆ ಬರಲಿವೆ ಎಂದು ಮೂಲಗಳು ತಿಳಿಸಿವೆ.
ಜೀವರಕ್ಷಕ ಔಷಧಿಗಳ ಬೆಲೆಯನ್ನು ಕಡಿಮೆ ಮಾಡಿ, ಸಾಮಾನ್ಯ ಜನರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ. ಪ್ರಸ್ತಾವಿತ ಬೆಲೆ ನಿಯಂತ್ರಣ ಜಾರಿಯಾದರೆ ಕ್ಯಾನ್ಸರ್ ಔಷಧಿಗಳ ಗರಿಷ್ಠ ಮಾರಾಟ ದರದಲ್ಲಿ ಶೇ.70ರಷ್ಟು ಇಳಿಕೆಯಾಗಬಹುದು ಎಂಬ ಅಂದಾಜು ವ್ಯಕ್ತವಾಗಿದೆ. ಇದರಿಂದ ಗ್ರಾಹಕರಿಗೆ ಒಟ್ಟಾರೆ ಸುಮಾರು ₹2,500 ಕೋಟಿ ಉಳಿತಾಯವಾಗುವ ನಿರೀಕ್ಷೆಯಿದೆ.
ಅಂತಿಮ ನಿರ್ಧಾರದ ನಿರೀಕ್ಷೆ
ಕ್ಯಾನ್ಸರ್ ಔಷಧಿಗಳ ಮಾರಾಟದ ಮೇಲಿನ ಲಾಭಾಂಶಕ್ಕೆ ಮಿತಿ ವಿಧಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಕುರಿತು ಪರಿಶೀಲನೆ ನಡೆಸಲು ಕ್ಯಾನ್ಸರ್ ತಜ್ಞರನ್ನು ಒಳಗೊಂಡ ಸಮಿತಿಯೊಂದನ್ನು ರಚಿಸಲಾಗಿದ್ದು, ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.
ಮುಂದಿನ ದಿನಗಳಲ್ಲಿ ಈ ಬೆಲೆ ನಿಯಂತ್ರಣ ಕ್ರಮವನ್ನು ಇನ್ನಷ್ಟು ಕ್ಯಾನ್ಸರ್ ಔಷಧಿಗಳು ಹಾಗೂ ಇತರ ಔಷಧಿಗಳಿಗೂ ವಿಸ್ತರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಈ ಪ್ರಸ್ತಾವನೆ ಜಾರಿಯಾದರೆ ಕ್ಯಾನ್ಸರ್ ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡಲು ಮತ್ತು ರೋಗಿಗಳ ಆರ್ಥಿಕ ಹೊರೆಯನ್ನು ತಗ್ಗಿಸಲು ನೆರವಾಗಬಹುದು. ಆದರೆ ಬೆಲೆ ಇಳಿಕೆಯ ಪ್ರಮಾಣ ಹಾಗೂ ಕ್ರಮ ಜಾರಿಯಾಗುವ ದಿನಾಂಕದ ಕುರಿತು ಅಧಿಕೃತ ಘೋಷಣೆ ಹೊರಬಿದ್ದ ಬಳಿಕವೇ ಸ್ಪಷ್ಟ ಚಿತ್ರಣ ದೊರೆಯಲಿದೆ.
ಸ್ಥಳೀಯ
Navuru health clinic-ನಾವೂರು ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಔಷಧ, ಉಪಕರಣಗಳು ಭಸ್ಮ; ಕಿಡಿಗೇಡಿಗಳ ಬಂಧನಕ್ಕೆ ಗ್ರಾಮಸ್ಥರ ಆಗ್ರಹ
ನಾವೂರು ಪೇಟೆಯಲ್ಲಿರುವ ಡಾ. ಪ್ರದೀಪ್ ಎ. ಅವರ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ತಗುಲಿ ಮೂರು ಕೊಠಡಿಗಳು ಹಾನಿಗೀಡಾಗಿದ್ದು, ಔಷಧಗಳು, ಹಾಸಿಗೆಗಳು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟುಹೋಗಿವೆ. ಕ್ಲಿನಿಕ್‌ಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಘಟನೆಯ ಹಿಂದಿನ ಸತ್ಯವನ್ನು ಪತ್ತೆಹಚ್ಚಿ ತಪ್ಪಿತಸ್ಥರನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಬೆಳ್ತಂಗಡಿ: ನಾವೂರು ಪೇಟೆಯಲ್ಲಿರುವ ಡಾ. ಪ್ರದೀಪ್ ಎ. ಅವರ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ತಗುಲಿ ಮೂರು ಕೊಠಡಿಗಳು ಹಾನಿಗೀಡಾಗಿದ್ದು, ಔಷಧಗಳು, ಹಾಸಿಗೆಗಳು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟುಹೋಗಿವೆ. ಕ್ಲಿನಿಕ್‌ಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಘಟನೆಯ ಹಿಂದಿನ ಸತ್ಯವನ್ನು ಪತ್ತೆಹಚ್ಚಿ ತಪ್ಪಿತಸ್ಥರನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ನಾವೂರು ಗ್ರಾಮದ ಶೇಖರ್ ಪೂಜಾರಿ ಅವರ ಮಾಲಕತ್ವದ ಸ್ವಾತಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕ್ಲಿನಿಕ್‌ನಲ್ಲಿ ಮಂಗಳವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ಗುರುವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಬೆಂಕಿಯ ತೀವ್ರತೆಗೆ ಕನ್ಸಲ್ಟೇಶನ್ ಕೊಠಡಿ ಸೇರಿದಂತೆ ಮೂರು ಕೊಠಡಿಗಳು ಹಾನಿಗೊಳಗಾಗಿವೆ. ಅಪಾರ ಪ್ರಮಾಣದ ವೈದ್ಯಕೀಯ ಸಾಮಗ್ರಿಗಳು ಹಾಗೂ ಇತರ ವಸ್ತುಗಳು ಸುಟ್ಟುಹೋಗಿದ್ದು, ಭಾರೀ ನಷ್ಟ ಸಂಭವಿಸಿದೆ. ಪಕ್ಕದಲ್ಲಿದ್ದ ಖಾಸಗಿ ಸಂಸ್ಥೆಯ ಕಚೇರಿಗೆ ಹಾನಿಯಾಗಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬೆಳ್ತಂಗಡಿ ಪೊಲೀಸರು ಹಾಗೂ ಸೋಕೋ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಟ್ಟ ವಸ್ತುಗಳು ಸೇರಿದಂತೆ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಕಿ ಅವಘಡದ ಹಿಂದಿನ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.
ಧರ್ಮಾತೀತವಾಗಿ ಬೆಂಬಲಿಸಿದ ಗ್ರಾಮಸ್ಥರು
ಘಟನೆಯನ್ನು ಖಂಡಿಸಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್, ನಾವೂರು ವತಿಯಿಂದ ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ವಿಷ್ಣುಸಹಸ್ರನಾಮ ಪಠಣ ಹಾಗೂ ವಿಶೇಷ ಪ್ರಾರ್ಥನೆ ನಡೆಸಲಾಯಿತು. ಬಳಿಕ ಕ್ಲಿನಿಕ್ ಆವರಣದಲ್ಲಿ ಸಾರ್ವಜನಿಕ ಖಂಡನಾ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಪ್ರದೀಪ್ ಎ. ಆಟಿಕುಕ್ಕೆ, “ಆಗಬಾರದ ಘಟನೆ ನಡೆದುಹೋಗಿದೆ. ಆರಂಭದಲ್ಲಿ ವಿದ್ಯುತ್ ಅವಘಡವಿರಬಹುದು ಎಂದು ಭಾವಿಸಿದ್ದೆ. ಆದರೆ ಬಳಿಕ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಧರ್ಮವನ್ನು ಮೀರಿ ಊರಿನವರು ನನ್ನೊಂದಿಗೆ ನಿಂತಿರುವುದು ಸಂತೋಷ ತಂದಿದೆ. ಔಷಧಗಳು ಭಸ್ಮವಾಗಿವೆ, ಆದರೆ ನನ್ನ ಇಚ್ಛಾಶಕ್ತಿ ಭಸ್ಮವಾಗಿಲ್ಲ” ಎಂದು ಹೇಳಿದರು.
ಘಟನೆ ನಡೆದ ರಾತ್ರಿ ಸುಮಾರು 9 ಗಂಟೆಯವರೆಗೆ ಕ್ಲಿನಿಕ್‌ನಲ್ಲಿದ್ದೆ. ಬಳಿಕ ನಡೆದ ಘಟನೆಯ ಕುರಿತು ಗುರುವಾರ ಬೆಳಗ್ಗೆ 8 ಗಂಟೆಗೆ ಮಾಹಿತಿ ಲಭಿಸಿತು. ಯಾರೊಂದಿಗೂ ವೈಯಕ್ತಿಕ ದ್ವೇಷವಿಲ್ಲ. ಪೊಲೀಸ್ ತನಿಖೆಯಿಂದ ಸತ್ಯ ಹೊರಬರಬೇಕು ಎಂದು ಅವರು ತಿಳಿಸಿದರು.
ಪೊಲೀಸ್ ಠಾಣೆಗೆ ತೆರಳಿ ಮನವಿ
ಸಭೆಯ ಬಳಿಕ ಗ್ರಾಮಸ್ಥರು ಒಟ್ಟಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ ಮನವಿ ಸಲ್ಲಿಸಿದರು. ಕ್ಲಿನಿಕ್‌ಗೆ ಬೆಂಕಿ ಹಚ್ಚಿದವರನ್ನು ಶೀಘ್ರ ಪತ್ತೆಹಚ್ಚಿ ಬಂಧಿಸಬೇಕು. ಕೃತ್ಯದ ಹಿಂದಿನ ಉದ್ದೇಶ ಹಾಗೂ ಭಾಗಿಯಾಗಿರುವವರ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ಶಾಸಕ ಹರೀಶ್ ಪೂಂಜ, ಉದ್ಯಮಿ ಶಶಿಧರ್ ಶೆಟ್ಟಿ ಬರೋಡಾ, ಮಾಜಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಸಂಪತ್ ಸುವರ್ಣ, ಜಗದೀಶ್ ಪ್ರಸಾದ್, ಶೇಖರ್ ಪೂಜಾರಿ, ತನುಜಾ ಶೇಖರ್, ಹರೀಶ್ ಸಾಲ್ಯಾನ್, ಗಣೇಶ್ ಗೌಡ, ಡಾ. ಹರಿಕಿರಣ್, ನಿವೃತ್ತ ಪ್ರಾಂಶುಪಾಲ ಟಿ.ಪಿ. ಆ್ಯಂಟನಿ, ರಾಜಶೇಖರ್ ಅಜಿ, ಜ್ಯೋತಿ ಆಸ್ಪತ್ರೆಯ ಡಾ. ಅನುಜಾ, ವಿ.ಜಿ. ಪ್ರವೀಣ್ ನಡ ಹಾಗೂ ವಿಶ್ವ ಹಿಂದೂ ಪರಿಷತ್‌ನ ವಿಜಯ ಹೊಡಿಕಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಿಗ್ ನ್ಯೂಸ್
AYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.

ವೈದ್ಯರು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಪ್ರದೀಪ್ ಎ. ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಗೆ ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಪುತ್ತೂರು ಬ್ರಾಂಚ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.
ಡಾ. ಪ್ರದೀಪ್ ನಾವೂರು ಅವರು ವೈದ್ಯಕೀಯ ಸೇವೆಯ ಜೊತೆಗೆ ಸಮಾಜದ ಆರೋಗ್ಯ ಮತ್ತು ಜಾಗೃತಿಯ ದೃಷ್ಟಿಯಿಂದ ಹಲವಾರು ಉಪನ್ಯಾಸ ಹಾಗೂ ಆರೋಗ್ಯ ಸಂಬಂಧಿತ ಕಾರ್ಯ ಕ್ರಮಗಳನ್ನು ನಡೆಸಿಕೊಂಡು ಬಂದಿದ್ದಾರೆ. ದೇವಸ್ಥಾನ,ದೈವಸ್ಥಾನ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜದೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಮುಂಚೂಣಿ ವ್ಯಕ್ತಿಯಾಗಿದ್ದಾರೆ.
ಇಂತಹ ಸಮಾಜಮುಖಿ ಹಾಗೂ ಸೇವಾಮನೋಭಾವದ ವ್ಯಕ್ತಿಯ ಆರೋಗ್ಯ ಕ್ಲಿನಿಕ್ ಗೆ ಯಾರೋ ಕಿಡಿಗೇಡಿಗಳು ದುರುದ್ದೇಶದಿಂದ ಬೆಂಕಿ ಹಚ್ಚಿರುವುದು ಅತ್ಯಂತ ಕಳವಳಕಾರಿ ಹಾಗೂ ಖಂಡನೀಯ ಸಂಗತಿಯಾಗಿದೆ. ವೈದ್ಯರು ಸಮಾಜದ ಆರೋಗ್ಯ ಕಾಪಾಡುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದು ಅವರ ಸೇವಾಕೇಂದ್ರದ ಮೇಲೆಯೇ ಇಂತಹ ಕೃತ್ಯಕ್ಕೆ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಡಾ. ಪ್ರದೀಪ್ ನಾವೂರು ಅವರು ಕೇವಲ ವೈದ್ಯರಲ್ಲ, ಸಮಾಜದ ಪ್ರತಿಯೊಬ್ಬರಿಗೂ ಅಗತ್ಯವಿರುವ ಒಬ್ಬ ಉತ್ತಮ ವ್ಯಕ್ತಿತ್ವದ ಸಮಾಜಮುಖಿ ವ್ಯಕ್ತಿ. ಅವರ ಆರೋಗ್ಯ ಸೇವೆ ಹಾಗೂ ಸಾಮಾಜಿಕ ಕಾಳಜಿ ಶ್ಲಾಘನೀಯವಾಗಿದೆ. ಇಂತಹ ವ್ಯಕ್ತಿಯ ಕ್ಲಿನಿಕ್ ಗೆ ಬೆಂಕಿ ಹಚ್ಚಿರುವುದು ಅತ್ಯಂತ ಖಂಡನೀಯ.
-
ಬಿಗ್ ನ್ಯೂಸ್20 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು24 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ಬಿಗ್ ನ್ಯೂಸ್20 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್19 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ19 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ18 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಂತರ ರಾಜ್ಯ18 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ19 hours agoCEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ


















