Connect with us

ಮಂಗಳೂರು

Dharmasthala-Big Breaking: ಧರ್ಮಸ್ಥಳ ಪ್ರಕರಣ: ಎಸ್ಐಟಿ ಗೆ ಸ್ಪೆಷಲ್ ಪವರ್..! ಬಹಳ ಅಪರೂಪದ ಪ್ರಕರಣವೆಂಬಂತೆ ಗೌಪ್ಯತೆ ಕಾಪಾಡಲು ಎಸ್ಐಟಿಗೆ ‘ಠಾಣೆಯ ಅಧಿಕಾರ’ ನೀಡಿ ಆದೇಶ – ಎಫ್ಐಆರ್ ದಾಖಲು, ಬಂಧಿಸಲು, ನ್ಯಾಯಾಲಯಕ್ಕೆ ಚಾರ್ಜ್ ಸೀಟ್ ಸಲ್ಲಿಸುವ ಅಧಿಕಾರ..!

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ಹೆಣ ಹೂತ ಆರೋಪಕ್ಕೆ ಸಂಬಂಧಿಸಿದ ತನಿಖೆಗಾಗಿ ರಾಜ್ಯ ಸರಕಾರವು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಪೊಲೀಸ್ ಠಾಣೆಯ ಎಲ್ಲ ಅಧಿಕಾರಗಳನ್ನು ನೀಡಿದೆ. ಇದರಲ್ಲಿ ಎಫ್‌ಐಆರ್ ದಾಖಲಿಸುವುದು, ಬಂಧನ, ವಶಕ್ಕೆ ಪಡೆಯುವುದು, ಕೋರ್ಟಿಗೆ ಪ್ರಾಥಮಿಕ ವರದಿಗಳು ಮತ್ತು ಚಾರ್ಜ್‌ಶೀಟ್ ಸಲ್ಲಿಸುವುದು ಸೇರಿದಂತೆ ಸಂಪೂರ್ಣ ಅಧಿಕಾರವನ್ನು ಒದಗಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ಆ.8: ಧರ್ಮಸ್ಥಳದಲ್ಲಿ ಹೆಣ ಹೂತ ಆರೋಪಕ್ಕೆ ಸಂಬಂಧಿಸಿದ ತನಿಖೆಗಾಗಿ ರಾಜ್ಯ ಸರಕಾರವು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಪೊಲೀಸ್ ಠಾಣೆಯ ಎಲ್ಲ ಅಧಿಕಾರಗಳನ್ನು ನೀಡಿದೆ. ಇದರಲ್ಲಿ ಎಫ್‌ಐಆರ್ ದಾಖಲಿಸುವುದು, ಬಂಧನ, ವಶಕ್ಕೆ ಪಡೆಯುವುದು, ಕೋರ್ಟಿಗೆ ಪ್ರಾಥಮಿಕ ವರದಿಗಳು ಮತ್ತು ಚಾರ್ಜ್‌ಶೀಟ್ ಸಲ್ಲಿಸುವುದು ಸೇರಿದಂತೆ ಸಂಪೂರ್ಣ ಅಧಿಕಾರವನ್ನು ಒದಗಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಜುಲೈ 17ರಂದು ರಾಜ್ಯ ಸರಕಾರ ನೇಮಿಸಿರುವ ವಿಶೇಷ ಎಸ್‌ಐಟಿಗೆ ಈ ಹೆಚ್ಚುವರಿ ಅಧಿಕಾರಗಳನ್ನು ನೀಡಿ ಆದೇಶ ಹೊರಡಿಸಿದೆ. ಸರಕಾರದ ಅಧೀನ ಕಾರ್ಯದರ್ಶಿಯಿಂದ ಈ ಆದೇಶವನ್ನು ಜಾರಿಗೊಳಿಸಲಾಗಿದ್ದು, ಎಸ್‌ಐಟಿಯನ್ನು ಪೊಲೀಸ್ ಠಾಣೆಯಂತೆ ಗುರುತಿಸಲಾಗಿದೆ.

Ad Widget

Ad Widget <> Ad Widget

ತಂಡದಲ್ಲಿ ನೇಮಕಗೊಂಡಿರುವ ಪೊಲೀಸ್ ಇನ್ಸ್‌ಪೆಕ್ಟರ್ ದರ್ಜೆ ಅಥವಾ ಅದಕ್ಕಿಂತ ಮೇಲಿನ ಅಧಿಕಾರಿಯನ್ನು ಬಿಎನ್‌ಎಸ್ 2023ರ ಕಲಂ 2(1) ಅಡಿಯಲ್ಲಿ ಠಾಣಾಧಿಕಾರಿಯಾಗಿ ಘೋಷಿಸಲಾಗಿದೆ. ಎಸ್‌ಐಟಿಯು ಪೊಲೀಸ್ ಠಾಣೆಗೆ ನೀಡಲಾದ ತನಿಖಾ ಕಾರ್ಯವಿಧಾನಗಳನ್ನು ಅನುಸರಿಸಿ, ಸಂಬಂಧಿತ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸುವ ಅಧಿಕಾರವನ್ನು ಪಡೆದಿದೆ.



Ad Widget

ಈಗ ಎಸ್‌ಐಟಿಯು ಸ್ವತಃ ದೂರುಗಳನ್ನು ಸ್ವೀಕರಿಸಿ ಎಫ್‌ಐಆರ್ ದಾಖಲಿಸಬಹುದು. ಈ ಹಿಂದೆ ಧರ್ಮಸ್ಥಳ ಅಥವಾ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಬೇಕಿತ್ತು, ಆದರೆ ಅಧಿಕಾರ ವ್ಯಾಪ್ತಿಯ ಕೊರತೆಯಿಂದ ಸಾಧ್ಯವಾಗಿರಲಿಲ್ಲ. ಇತ್ತೀಚೆಗೆ ಜಯನ್ ಎಂಬವರು ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸಾರ್ವಜನಿಕರಿಗೆ ಸಹಾಯವಾಣಿ ಸಂಖ್ಯೆಯನ್ನು ಒದಗಿಸಲಾಗಿದ್ದು, ಮಂಗಳೂರಿನ ಮಲ್ಲಿಕಟ್ಟೆಯ ಐಬಿಯಲ್ಲಿ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯ ಪಕ್ಕದಲ್ಲಿ ಎಸ್‌ಐಟಿಗೆ ಪ್ರತ್ಯೇಕ ಕಚೇರಿಗಳನ್ನು ಸ್ಥಾಪಿಸಲಾಗಿದೆ.

Click to comment

Leave a Reply

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಅಪರಾಧ

Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ

Published

on



Ad Widget

Ad Widget

Ad Widget

Ad Widget

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್‌ ಅಧಿಕಾರಿ ಸಂದೀಪ್‌ ರಾವ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್‌ ಗೋಯಲ್‌ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.

Ad Widget

Ad Widget <> Ad Widget

ಬಳಿಕ ಮತ್ತೊಂದು ಮೊಬೈಲ್‌ ಸಂಖ್ಯೆಯಿಂದ ವಾಟ್ಸ್‌ಆ್ಯಪ್‌ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್‌ ಪವಾರ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್‌ ಸೀಕ್ರೆಸಿ ಆ್ಯಕ್ಟ್‌’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.



Ad Widget

ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್‌ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್‌ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.

Ad Widget

Ad Widget

ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್‌ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್‌ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್‌ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.

ಸೈಬರ್‌ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್‌ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.

Ad Widget
Continue Reading

ಮಂಗಳೂರು

Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್‌ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ

Published

on



Ad Widget

Ad Widget

Ad Widget

Ad Widget

ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.

Ad Widget

Ad Widget <> Ad Widget

ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್‌ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.



Ad Widget

ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading