ಶುಕ್ರವಾರ ನಗರದ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂತ್ರಸ್ತ ಮಹಿಳೆ, ಕಳೆದ ಒಂದೂವರೆ ತಿಂಗಳಿಂದ ಹಂಪನಕಟ್ಟೆ ಮತ್ತು ಜ್ಯೋತಿ […]" /> ಶುಕ್ರವಾರ ನಗರದ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂತ್ರಸ್ತ ಮಹಿಳೆ, ಕಳೆದ ಒಂದೂವರೆ ತಿಂಗಳಿಂದ ಹಂಪನಕಟ್ಟೆ ಮತ್ತು ಜ್ಯೋತಿ […]"> Mangalore-ಮಂಗಳೂರು : ಯುನಿಸೆಕ್ಸ್ ಬ್ಯೂಟಿಪಾರ್ಲರ್ ಮಾಲಕಿಯಿಂದ ದೌರ್ಜನ್ಯ, ಬೆತ್ತಲೆ ವಿಡಿಯೋ ಚಿತ್ರಿಸಿ ಬೆದರಿಕೆ : ಬ್ಯೂಟಿಶಿಯನ್ ನಿಂದ ಗಂಭೀರ ಆರೋಪ - Nikhara News | Kannada News Website
Connect with us

ಅಪರಾಧ

Mangalore-ಮಂಗಳೂರು : ಯುನಿಸೆಕ್ಸ್ ಬ್ಯೂಟಿಪಾರ್ಲರ್ ಮಾಲಕಿಯಿಂದ ದೌರ್ಜನ್ಯ, ಬೆತ್ತಲೆ ವಿಡಿಯೋ ಚಿತ್ರಿಸಿ ಬೆದರಿಕೆ : ಬ್ಯೂಟಿಶಿಯನ್ ನಿಂದ ಗಂಭೀರ ಆರೋಪ

Published

on

Ad Widget

Ad Widget

Ad Widget

Ad Widget

ಮಂಗಳೂರು ನಗರದ ಬ್ಯೂಟಿ ಪಾರ್ಲರ್‌ನ ಮಾಲಕಿ ತನ್ನ ಮೇಲೆ ದೌರ್ಜನ್ಯ ನಡೆಸಿ, ಬೆತ್ತಲೆ ವಿಡಿಯೋ ತೆಗೆದು ಬೆದರಿಕೆ ಒಡ್ಡಿರುವುದಾಗಿ ಓರ್ವ ಮಹಿಳೆ ಮಾಧ್ಯಮಗಳ ಮುಂದೆ ಆರೋಪಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಬ್ಯೂಟಿ ಪಾರ್ಲರ್‌ನ ಮಾಲಕಿ ತನ್ನ ಮೇಲೆ ದೌರ್ಜನ್ಯ ನಡೆಸಿ, ಬೆತ್ತಲೆ ವಿಡಿಯೋ ತೆಗೆದು ಬೆದರಿಕೆ ಒಡ್ಡಿರುವುದಾಗಿ ಓರ್ವ ಮಹಿಳೆ ಮಾಧ್ಯಮಗಳ ಮುಂದೆ ಆರೋಪಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಶುಕ್ರವಾರ ನಗರದ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂತ್ರಸ್ತ ಮಹಿಳೆ, ಕಳೆದ ಒಂದೂವರೆ ತಿಂಗಳಿಂದ ಹಂಪನಕಟ್ಟೆ ಮತ್ತು ಜ್ಯೋತಿ ಸರ್ಕಲ್ ನಡುವಿನ ಯುನಿಸೆಕ್ಸ್ ಬ್ಯೂಟಿ ಪಾರ್ಲರ್‌ನಲ್ಲಿ ಬ್ಯೂಟಿಶಿಯನ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದರು.

Ad Widget

Ad Widget <> Ad Widget

ಬ್ಯೂಟಿಶಿಯನ್ ಕೋರ್ಸ್ ಪೂರೈಸಿದ್ದ ತಾನು ಕೆಲಸಕ್ಕೆ ಸೇರಿದಾಗ, ಪಾರ್ಲರ್‌ನ ಮಾಲಕರು ಗ್ರಾಹಕರೊಂದಿಗೆ ಆತ್ಮೀಯವಾಗಿರಲು ಮತ್ತು ಅವರಿಗೆ ಬೇಕಾದ ಸೇವೆಯನ್ನು ಒದಗಿಸಿ, 500 ರೂ.ನಿಂದ 1000 ರೂ.ವರೆಗೆ ಸೇವಾ ಶುಲ್ಕ ಪಡೆಯಲು ಸೂಚಿಸಿದ್ದರು. ಕಳೆದ ಸೋಮವಾರ ಪರಿಚಯದ ಪುರುಷ ಗ್ರಾಹಕರೊಬ್ಬರು ಬಂದು ಮಸಾಜ್ ಮಾಡಿಸಿಕೊಂಡ ಸಂದರ್ಭ ಮಾತನಾಡಿದ್ದನ್ನು ವಾಯ್ಸ್ ರೆಕಾರ್ಡ್ ಮಾಡಿಕೊಂಡು ಮಾಲಕರಿಗೆ ನೀಡಿದ್ದಾರೆ.

ಆ ಸಂದರ್ಭದಲ್ಲಿ, ಪಾರ್ಲರ್‌ನ ಮಾಲಕರ ಪತ್ನಿ ಬಂದು ತನಗೆ ದೈಹಿಕವಾಗಿ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆತ್ತಲೆ ವಿಡಿಯೋ ತೆಗೆದು ಬೆದರಿಕೆ ಹಾಕಿದ್ದಾರೆ. ಮರುದಿನ ತನ್ನ ಪತಿಯನ್ನು ಕರೆಸಿ ವಿಡಿಯೋ ತೋರಿಸಿ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ. ಮೂರು ವರ್ಷದ ಮಗುವಿರುವ ತಾನು ಈ ಘಟನೆಯಿಂದ ಮಾನಸಿಕವಾಗಿ ಕುಗ್ಗಿ ಆತ್ಮಹತ್ಯೆಗೆ ಯತ್ನಿಸಿದ್ದಾಗಿ, ಆದರೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಅವರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದೇನೆ ಎಂದು ಕಣ್ಣೀರಿನೊಂದಿಗೆ ವಿವರಿಸಿದರು.

Ad Widget

Ad Widget

ಪಾರ್ಲರ್‌ನಲ್ಲಿ ಕೆಲಸ ಮಾಡುವ ಇತರ ಯುವತಿಯರು ಮತ್ತು ಯುವಕರ ಮೇಲೂ ಇಂತಹ ದೌರ್ಜನ್ಯ ಮತ್ತು ಬೆದರಿಕೆ ನಡೆಯುತ್ತಿದೆ. ಆದರೆ, ಗೌರವ ಮತ್ತು ಉದ್ಯೋಗ ಕಳೆದುಕೊಳ್ಳುವ ಭಯದಿಂದ ಯಾರೂ ಮಾತನಾಡುತ್ತಿಲ್ಲ. “ನಾನು ತೀವ್ರವಾಗಿ ನೊಂದಿದ್ದೇನೆ. ಯಾವ ಮಹಿಳೆಗೂ ಇಂತಹ ಸ್ಥಿತಿ ಬರಬಾರದು,” ಎಂದು ಅವರು ಹೇಳಿದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಮಾತನಾಡಿ, “ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ಮಸಾಜ್ ದಂಧೆ ನಡೆಯುತ್ತಿದೆ ಎಂಬುದು ಸಂತ್ರಸ್ತೆಯ ಹೇಳಿಕೆಯಿಂದ ಸ್ಪಷ್ಟವಾಗಿದೆ. ಜೀವನೋಪಾಯಕ್ಕಾಗಿ ಕೆಲಸಕ್ಕೆ ಬರುವ ಮಹಿಳೆಯರು ಮತ್ತು ಯುವತಿಯರನ್ನು ಬೆದರಿಕೆಯ ಮೂಲಕ ಈ ದಂಧೆಗೆ ತಳ್ಳಲಾಗುತ್ತಿದೆ. ಈ ಬಗ್ಗೆ ಬಂದರು ಠಾಣೆಯಲ್ಲಿ ದೂರು ದಾಖಲಿಸಲಾಗಿದೆ,” ಎಂದರು.

Ad Widget
Click to comment

Leave a Reply

ಅಂತರ ರಾಜ್ಯ

FIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್‌ಫ್ಲುಯೆನ್ಸರ್ ವಹಿದಾ ದೂರು – ಎಫ್‌ಐಆರ್ ದಾಖಲು..!

Published

on

Ad Widget

Ad Widget

Ad Widget

Ad Widget

ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ‘ಬಿಗ್ ಬಾಸ್ ತಮಿಳು ಸೀಸನ್-8’ರ ವಿಜೇತ ಮುತ್ತುಕುಮಾರನ್ ಜಗದೀಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಚೆನ್ನೈ: ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ‘ಬಿಗ್ ಬಾಸ್ ತಮಿಳು ಸೀಸನ್-8’ರ ವಿಜೇತ ಮುತ್ತುಕುಮಾರನ್ ಜಗದೀಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಇನ್‌ಫ್ಲುಯೆನ್ಸರ್ ವಹಿದಾ ಅಖ್ದರ್ (Wahidha Akdhar) ನೀಡಿದ ದೂರಿನ ಆಧಾರದಲ್ಲಿ ಚೆನ್ನೈನ ವಿರುಗಂಬಾಕ್ಕಂ ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 69ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ತನಿಖೆ ಆರಂಭಿಸಿರುವ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಮುತ್ತುಕುಮಾರನ್ ಅವರಿಗೆ ಶೀಘ್ರದಲ್ಲೇ ಸಮನ್ಸ್ ಜಾರಿ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

Ad Widget

Ad Widget <> Ad Widget

ಇದೇ ವೇಳೆ, ತಮ್ಮ ವಿರುದ್ಧ ದೂರು ನೀಡಿರುವ ವಹಿದಾ ವಿರುದ್ಧವೇ ಮುತ್ತುಕುಮಾರನ್ ಪ್ರತಿದೂರು ದಾಖಲಿಸಿದ್ದಾರೆ. ವಹಿದಾ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಏನಿದು ಪ್ರಕರಣ?
‘ದಿ ಟೈಮ್ಸ್ ಆಫ್ ಇಂಡಿಯಾ’ ವರದಿಯ ಪ್ರಕಾರ, ಇನ್‌ಸ್ಟಾಗ್ರಾಮ್ ಮೂಲಕ ಮುತ್ತುಕುಮಾರನ್ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದು ಅದು ಪ್ರೀತಿಗೆ ತಿರುಗಿತ್ತು ಎಂದು ವಹಿದಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget

ದೈಹಿಕ ಸಂಪರ್ಕ ಬೆಳೆಸುವ ಮೊದಲು ಮುತ್ತುಕುಮಾರನ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ಆದರೆ, ನಂತರ ಮದುವೆಯಾಗಲು ನಿರಾಕರಿಸಿದ್ದಾರೆ ಎಂಬುದು ವಹಿದಾ ಅವರ ಆರೋಪವಾಗಿದೆ.

ಈ ಸಂಬಂಧ ವಹಿದಾ ಮೊದಲು ಚೆನ್ನೈ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಬಳಿಕ ದೂರನ್ನು ವಿರುಗಂಬಾಕ್ಕಂ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಅಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬಿಎನ್‌ಎಸ್ ಸೆಕ್ಷನ್ 69ರ ಅಡಿಯಲ್ಲಿ, ಅತ್ಯಾಚಾರದ ವ್ಯಾಪ್ತಿಗೆ ಬಾರದಿದ್ದರೂ ಮದುವೆಯಾಗುವ ಸುಳ್ಳು ಭರವಸೆ ಸೇರಿದಂತೆ ವಂಚನೆಯ ಮಾರ್ಗಗಳ ಮೂಲಕ ದೈಹಿಕ ಸಂಪರ್ಕ ಬೆಳೆಸುವುದಕ್ಕೆ ಸಂಬಂಧಿಸಿದ ಅಪರಾಧವನ್ನು ಪರಿಗಣಿಸಲಾಗುತ್ತದೆ.

ನವೆಂಬರ್ 9ರಂದು ವಹಿದಾ ಅವರು ಮುತ್ತುಕುಮಾರನ್ ಜೊತೆಗಿನ ಸಂಬಂಧದ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡ ಬಳಿಕ ಈ ವಿಚಾರ ಬಹಿರಂಗವಾಗಿತ್ತು. ಇಬ್ಬರೂ ಜೊತೆಯಾಗಿರುವ ವಿಡಿಯೊವನ್ನು ಪ್ರಕಟಿಸಿದ್ದ ಅವರು, ಮುತ್ತುಕುಮಾರನ್ ನೀಡಿದ್ದ ಭರವಸೆಗಳ ಬಗ್ಗೆ ಪ್ರಶ್ನಿಸಿದ್ದರು. ತಮ್ಮ ಪೋಸ್ಟ್‌ನಲ್ಲಿ, “ನೀನು ಹೇಳಿದ್ದೆಲ್ಲವೂ ನಿನಗೆ ಕೇವಲ ತಮಾಷೆಯಾಗಿತ್ತು” ಎಂದು ಬರೆದುಕೊಂಡಿದ್ದರು.

ಇದರ ಬೆನ್ನಲ್ಲೇ ವಹಿದಾ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಗಳೂ ಪ್ರಕಟವಾಗಿದ್ದವು. ಈ ಪ್ರಕರಣದ ಕುರಿತು ಹಿರಿಯ ಗೀತರಚನೆಕಾರ ತಾಮರೈ ಕೂಡ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿದ್ದು, ಮುತ್ತುಕುಮಾರನ್ ಅವರನ್ನು ಟೀಕಿಸಿ, ಆರೋಪಗಳ ಬಗ್ಗೆ ತಮ್ಮ ಕಡೆಯ ಸ್ಪಷ್ಟನೆ ನೀಡುವಂತೆ ಒತ್ತಾಯಿಸಿದ್ದಾರೆ.

ನಟ ವಿಜಯ್ ಸೇತುಪತಿ ನಿರೂಪಣೆಯ ‘ಬಿಗ್ ಬಾಸ್ ತಮಿಳು ಸೀಸನ್-8’ರಲ್ಲಿ ಸ್ಪರ್ಧಿಸುವ ಮೂಲಕ ಮುತ್ತುಕುಮಾರನ್ ಜನಪ್ರಿಯತೆ ಗಳಿಸಿದ್ದರು. 2025ರ ಜನವರಿ 19ರಂದು ನಡೆದ ಫಿನಾಲೆಯಲ್ಲಿ ಅವರು ಕಾರ್ಯಕ್ರಮದ ವಿಜೇತರಾಗಿ ಹೊರಹೊಮ್ಮಿದ್ದರು.

ನಟ ವಿಜಯ್ ಸೇತುಪತಿ ನಿರೂಪಣೆಯ ‘ಬಿಗ್ ಬಾಸ್ ತಮಿಳು ಸೀಸನ್ 8’ರಲ್ಲಿ ಭಾಗವಹಿಸುವ ಮೂಲಕ ಮುತ್ತುಕುಮಾರನ್ ಅಪಾರ ಜನಪ್ರಿಯತೆ ಗಳಿಸಿದ್ದರು. ಜನವರಿ 19, 2025ರಂದು ನಡೆದ ಫಿನಾಲೆಯಲ್ಲಿ ಅವರು ಶೋನ ವಿಜೇತರಾಗಿ ಹೊರಹೊಮ್ಮಿದ್ದರು.

Ad Widget
Continue Reading

ಅಪರಾಧ

Mangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ

Published

on

Ad Widget

Ad Widget

Ad Widget

Ad Widget

ಮಂಗಳೂರು ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮಂಗಳೂರು ಸರ್ಕೀಟ್ ಹೌಸ್ ಮುಂಭಾಗದ ಕದ್ರಿ ಯುದ್ಧ ಸ್ಮಾರಕದ ಬಳಿ 1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾಗವಹಿಸಿದ್ದ ಟಿ-55 ಯುದ್ಧ ಟ್ಯಾಂಕ್‌ನ್ನು ಸಾರ್ವಜನಿಕರ ವೀಕ್ಷಣೆಗಾಗಿ ಎತ್ತರದ ವೇದಿಕೆಯಲ್ಲಿ ಇರಿಸಲಾಗಿದೆ.

Ad Widget

Ad Widget <> Ad Widget

ರಾತ್ರಿ ವೇಳೆ ಇಬ್ಬರು ಯುವಕರು ಟ್ಯಾಂಕ್ ಮೇಲೆ ಹತ್ತಿ, ಅದರ ಹ್ಯಾಚ್ ತೆರೆದು ಒಳಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ತಮ್ಮ ಕಿಡಿಗೇಡಿತನದ ವರ್ತನೆಯನ್ನು ವಿಡಿಯೋ ಮಾಡಿಕೊಂಡಿರುವ ಯುವಕರು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.

ದೇಶದ ಯುದ್ಧ ಇತಿಹಾಸ ಹಾಗೂ ಸೈನಿಕರ ಶೌರ್ಯ, ತ್ಯಾಗದ ಸಂಕೇತವಾಗಿ ಇರಿಸಲಾಗಿರುವ ಟ್ಯಾಂಕ್ ಬಳಿ ಯುವಕರು ಇಂತಹ ವರ್ತನೆ ತೋರಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Ad Widget

Ad Widget

ಕದ್ರಿ ಪೊಲೀಸ್ ಠಾಣೆಯ ಎದುರಿನಲ್ಲೇ ನಡೆದಿರುವ ಈ ಘಟನೆಗೆ ಸಂಬಂಧಿಸಿದಂತೆ, ವಿಡಿಯೋದಲ್ಲಿರುವ ಯುವಕರನ್ನು ಪತ್ತೆಹಚ್ಚಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ವಲಯದಿಂದ ಆಗ್ರಹ ವ್ಯಕ್ತವಾಗಿದೆ.

Ad Widget
Continue Reading

ಅಪರಾಧ

Arrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ

Published

on

Ad Widget

Ad Widget

Ad Widget

Ad Widget

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೃತ ಯುವಕನ ಸ್ನೇಹಿತ, ಉತ್ತರ ಪ್ರದೇಶ ಮೂಲದ ಶ್ರವಣ್ ಎಂಬಾತನನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮೃತ ಯುವಕನ ಸ್ನೇಹಿತ, ಉತ್ತರ ಪ್ರದೇಶ ಮೂಲದ ಶ್ರವಣ್ ಎಂಬಾತನನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.

Ad Widget

Ad Widget <> Ad Widget

ಉತ್ತರ ಪ್ರದೇಶ ಮೂಲದ ಮನೀಶ್ ಶರ್ಮಾ (25) ಎಂಬ ಯುವಕನನ್ನು ಆತನ ಸ್ನೇಹಿತ ಶ್ರವಣ್ ಕೊಲೆ ಮಾಡಿ ಬಳಿಕ ತನ್ನ ಊರಾದ ಉತ್ತರ ಪ್ರದೇಶದ ಖುಷಿನಗರಕ್ಕೆ ಪರಾರಿಯಾಗಿದ್ದ ಎನ್ನಲಾಗಿದೆ. ಪ್ರಕರಣವನ್ನು ವ್ಯವಸ್ಥಿತ ಕೊಲೆ ಎಂದು ಶಂಕಿಸಿ ಮೃತನ ಸಹೋದರ ಸೋನು ಶರ್ಮಾ ನೀಡಿದ ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡ ಬಜಪೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಾಲದ ಇಎಂಐ ಕಟ್ಟಲು ಕೊಲೆ?
ಆರೋಪಿಗೆ ಸಾಲದ ಇಎಂಐ ಪಾವತಿಸಲು ಹಣದ ಅವಶ್ಯಕತೆ ಇದ್ದು, ಸ್ನೇಹಿತ ಮನೀಶ್ ಬಳಿ ಹಣವಿರುವುದನ್ನು ತಿಳಿದುಕೊಂಡಿದ್ದ ಎನ್ನಲಾಗಿದೆ. ಅಲ್ಲದೆ, ಮನೀಶ್‌ನ ಮೊಬೈಲ್ ಪಾಸ್‌ವರ್ಡ್‌ಗಳನ್ನು ಮೊದಲೇ ತಿಳಿದುಕೊಂಡಿದ್ದ ಶ್ರವಣ್, ಹಣ ಪಡೆಯುವ ಉದ್ದೇಶದಿಂದ ಆತನನ್ನು ಉಪಾಯವಾಗಿ ಊಟಕ್ಕೆಂದು ಕರೆದುಕೊಂಡು ಹೋಗಿದ್ದಾನೆ. ಬಳಿಕ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿ, ನಿರ್ಜನ ಪ್ರದೇಶದಲ್ಲಿ ಮೃತದೇಹವನ್ನು ಬಿಸಾಡಿದ್ದಾಗಿ ಪೊಲೀಸ್ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget

ಖಾತೆಯಿಂದ ₹63,720 ವರ್ಗಾವಣೆ
ಕೊಲೆ ಬಳಿಕ ಮನೀಶ್‌ನ ಬ್ಯಾಂಕ್ ಖಾತೆಯಲ್ಲಿದ್ದ ₹63,720 ಹಣವನ್ನು ರಾಜನ್ ಎಂಬ ವ್ಯಕ್ತಿಯ ಖಾತೆಗೆ ವರ್ಗಾಯಿಸಿ, ಬಳಿಕ ರಾಜನ್ ಮೂಲಕ ತನ್ನ ಖಾತೆಗೆ ಹಣ ಪಡೆದುಕೊಂಡಿದ್ದ ಎನ್ನಲಾಗಿದೆ. ಈ ಹಣ ವರ್ಗಾವಣೆಯ ಸುಳಿವು ಪ್ರಕರಣದ ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಿದೆ.

ಸಿಸಿಟಿವಿ ದೃಶ್ಯಗಳಿಂದ ಸುಳಿವು
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಅ.27ರಂದು ಮನೀಶ್ ಮತ್ತು ಶ್ರವಣ್ ಒಟ್ಟಿಗೆ ತೆರಳಿರುವುದು ಹಾಗೂ ಬಳಿಕ ಶ್ರವಣ್ ಒಬ್ಬನೇ ವಾಪಸ್ ಬಂದಿರುವುದು ಕಂಡುಬಂದಿತ್ತು. ಈ ಸುಳಿವುಗಳ ಆಧಾರದ ಮೇಲೆ ತನಿಖೆ ಮುಂದುವರಿದಿತ್ತು.

ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಪರಿಶೀಲಿಸಿದ ಪೊಲೀಸರಿಗೆ ಅಸ್ಥಿಪಂಜರದ ತುಂಡುಗಳು ಹಾಗೂ ತಲೆಬುರುಡೆಯ ಅವಶೇಷಗಳು ಪತ್ತೆಯಾಗಿದ್ದವು. ಸ್ಥಳದಲ್ಲಿ ದೊರೆತ ಶರ್ಟ್ ಮತ್ತು ಪ್ಯಾಂಟ್‌ಗಳನ್ನು ಮೃತನ ಸಹೋದರ ಸೋನು ಶರ್ಮಾ ಗುರುತಿಸಿದ್ದರು.

ಆರೋಪಿಯನ್ನು ಉತ್ತರ ಪ್ರದೇಶದಿಂದ ಬಂಧಿಸಿ ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!