ಧರ್ಮಸ್ಥಳದಂತಹ ಪವಿತ್ರ ಕ್ಷೇತ್ರದ ಬಗ್ಗೆ ಕೆಲವು ಯೂಟ್ಯೂಬ್ ಚಾನೆಲ್‌ಗಳು, ಸುದ್ದಿ ಪೋರ್ಟಲ್‌ಗಳು ಮತ್ತು ಸ್ವಯಂಘೋಷಿತ “ಸೋಶಿಯಲ್ ಮೀಡಿಯಾ ಹೀರೋಗಳು” ಯಾವುದೇ ಆಧಾರವಿಲ್ಲದೆ ದೂಷಣಾತ್ಮಕ […]" /> ಧರ್ಮಸ್ಥಳದಂತಹ ಪವಿತ್ರ ಕ್ಷೇತ್ರದ ಬಗ್ಗೆ ಕೆಲವು ಯೂಟ್ಯೂಬ್ ಚಾನೆಲ್‌ಗಳು, ಸುದ್ದಿ ಪೋರ್ಟಲ್‌ಗಳು ಮತ್ತು ಸ್ವಯಂಘೋಷಿತ “ಸೋಶಿಯಲ್ ಮೀಡಿಯಾ ಹೀರೋಗಳು” ಯಾವುದೇ ಆಧಾರವಿಲ್ಲದೆ ದೂಷಣಾತ್ಮಕ […]"> Kishore Kumar-ಧರ್ಮಸ್ಥಳದ ಬಗ್ಗೆ ಯೂಟ್ಯೂಬ್ ಚಾನೆಲ್‌ಗಳು, ಸುದ್ದಿ ಪೋರ್ಟಲ್‌ಗಳು ಮತ್ತು ಸ್ವಯಂಘೋಷಿತ "ಸೋಶಿಯಲ್ ಮೀಡಿಯಾ ಹೀರೋಗಳು" ಯಾವುದೇ ಆಧಾರವಿಲ್ಲದೆ ದೂಷಣಾತ್ಮಕ ವದಂತಿಗಳನ್ನು ಹರಡುತ್ತಿರುವುದು ಗಂಭೀರ ವಿಷಯ - ಎಂಎಲ್ಸಿ ಕಿಶೋರ್ ಕುಮಾರ್ ಬೊಟ್ಯಾಡಿ - Nikhara News | Kannada News Website
Connect with us

ರಾಜಕೀಯ

Kishore Kumar-ಧರ್ಮಸ್ಥಳದ ಬಗ್ಗೆ ಯೂಟ್ಯೂಬ್ ಚಾನೆಲ್‌ಗಳು, ಸುದ್ದಿ ಪೋರ್ಟಲ್‌ಗಳು ಮತ್ತು ಸ್ವಯಂಘೋಷಿತ “ಸೋಶಿಯಲ್ ಮೀಡಿಯಾ ಹೀರೋಗಳು” ಯಾವುದೇ ಆಧಾರವಿಲ್ಲದೆ ದೂಷಣಾತ್ಮಕ ವದಂತಿಗಳನ್ನು ಹರಡುತ್ತಿರುವುದು ಗಂಭೀರ ವಿಷಯ – ಎಂಎಲ್ಸಿ ಕಿಶೋರ್ ಕುಮಾರ್ ಬೊಟ್ಯಾಡಿ

Published

on

Ad Widget

Ad Widget

Ad Widget

Ad Widget

ಶಾಸಕ ಕಿಶೋರ್ ಕುಮಾರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಸಾಮಾಜಿಕ ಮಾಧ್ಯಮ ಮತ್ತು ಮಾಧ್ಯಮಗಳಲ್ಲಿ ಹರಡುತ್ತಿರುವ ವದಂತಿಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಶಾಸಕ ಕಿಶೋರ್ ಕುಮಾರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಸಾಮಾಜಿಕ ಮಾಧ್ಯಮ ಮತ್ತು ಮಾಧ್ಯಮಗಳಲ್ಲಿ ಹರಡುತ್ತಿರುವ ವದಂತಿಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಧರ್ಮಸ್ಥಳದಂತಹ ಪವಿತ್ರ ಕ್ಷೇತ್ರದ ಬಗ್ಗೆ ಕೆಲವು ಯೂಟ್ಯೂಬ್ ಚಾನೆಲ್‌ಗಳು, ಸುದ್ದಿ ಪೋರ್ಟಲ್‌ಗಳು ಮತ್ತು ಸ್ವಯಂಘೋಷಿತ “ಸೋಶಿಯಲ್ ಮೀಡಿಯಾ ಹೀರೋಗಳು” ಯಾವುದೇ ಆಧಾರವಿಲ್ಲದೆ ದೂಷಣಾತ್ಮಕ ವದಂತಿಗಳನ್ನು ಹರಡುತ್ತಿರುವುದು ಗಂಭೀರ ವಿಷಯವಾಗಿದೆ.

Ad Widget

Ad Widget <> Ad Widget

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿರುವ ಆರೋಪದ ಹಿನ್ನೆಲೆಯಲ್ಲಿ ಸರ್ಕಾರ ಎಸ್‌ಐಟಿ ತನಿಖೆ ಆರಂಭಿಸಿರುವುದು ಸ್ವಾಗತಾರ್ಹ. ತನಿಖಾ ತಂಡವು ಕಾನೂನುಬದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದು, ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಬಿಡುಗಡೆಯಾಗಿಲ್ಲ. ಆದರೆ, ಕೆಲವು ಮಾಧ್ಯಮಗಳು ಮತ್ತು ಸಮಾಜವಿರೋಧಿ ಶಕ್ತಿಗಳು ಸುಳ್ಳು ಸುದ್ದಿಗಳನ್ನು ಹರಡುತ್ತಿರುವುದು ಖಂಡನೀಯ.

ಸರ್ಕಾರದ ಕೆಲವು ವಲಯಗಳಿಂದ ಈ ಅಪಪ್ರಚಾರಕ್ಕೆ ಪರೋಕ್ಷ ಬೆಂಬಲವಿರುವುದು ದುರದೃಷ್ಟಕರ. “ಫೇಕ್ ನ್ಯೂಸ್ ಫ್ಯಾಕ್ಟರಿ” ಎಂಬ ಸಾಮಾಜಿಕ ಮಾಧ್ಯಮದ ದುರುಪಯೋಗವು ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ, ಇದು ಧರ್ಮಸ್ಥಳದ ಗೌರವಕ್ಕೆ ಮಾತ್ರವಲ್ಲ, ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಮತ್ತು ಸಂವಿಧಾನದ ಧರ್ಮನಿರಪೇಕ್ಷ ತತ್ವಕ್ಕೆ ಧಕ್ಕೆಯಾಗಿದೆ.

Ad Widget

Ad Widget

ತಮಿಳುನಾಡಿನ ಕೆಲವು ರಾಜಕೀಯ ನಾಯಕರು ಈ ಅಪಪ್ರಚಾರದ ಹಿಂದಿರಬಹುದೆಂಬ ಶಂಕೆಯಿದೆ. ಸರ್ಕಾರ ತಕ್ಷಣ ಸ್ಪಷ್ಟನೆ ನೀಡಿ, ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

ಶ್ರೀ ಕ್ಷೇತ್ರ ಧರ್ಮಸ್ಥಳವು ದಶಕಗಳಿಂದ ಅನ್ನದಾನ, ಶಿಕ್ಷಣ, ಆರೋಗ್ಯ, ಮತ್ತು ಗ್ರಾಮಾಭಿವೃದ್ಧಿಯಲ್ಲಿ ನಿಷ್ಕಾಮ ಸೇವೆ ಸಲ್ಲಿಸುತ್ತಿದೆ. ಈ ಕ್ಷೇತ್ರದ ಘನತೆಗೆ ಧಕ್ಕೆ ತರುವ ರಾಜಕೀಯ ಕುತಂತ್ರಗಳನ್ನು ಶಾಸಕರಾಗಿ ಮತ್ತು ವ್ಯಕ್ತಿಯಾಗಿ ತೀವ್ರವಾಗಿ ಖಂಡಿಸುತ್ತೇನೆ.

ಇವುಗಳ ಹಿಂದೆ ಕ್ರಿಶ್ಚಿಯನ್ ಮಿಷನರಿ ಚಟುವಟಿಕೆಗಳು ಮತ್ತು ಎಡಪಂಥೀಯ ಶಕ್ತಿಗಳ ಸಂಬಂಧವಿರಬಹುದು. ಹಿಂದೂ ಸಮಾಜವು ಧರ್ಮಸ್ಥಳದ ವಿರುದ್ಧದ ಈ ಸಂಚುಗಳನ್ನು ಜಾಗೃತಿಯಿಂದ ಮತ್ತು ಶಿಸ್ತಿನಿಂದ ಎದುರಿಸಬೇಕು.

ಮಂಜುನಾಥ ಸ್ವಾಮಿಯಲ್ಲಿ ಮತ್ತು ಅಣ್ಣಪ್ಪ ಸ್ವಾಮಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತೇನೆ, ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುವವರಿಗೆ ದೇವರು ತಕ್ಕ ಶಿಕ್ಷೆಯನ್ನು ನೀಡಲಿ. ಸತ್ಯ ಬೆಳಕಿಗೆ ಬರಲಿ, ನ್ಯಾಯ ದೊರಕಲಿ ಎಂದು ದ.ಕ., ಉಡುಪಿಯ ವಿಧಾನ ಸಭಾ ಸದಸ್ಯರಾದ ಕಿಶೋರ್ ಕುಮಾರ್ ಹೇಳಿದ್ದಾರೆ.

Ad Widget
Click to comment

Leave a Reply

ಸ್ಥಳೀಯ

Rakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ

Published

on

Ad Widget

Ad Widget

Ad Widget

Ad Widget

ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಕ್ಷಿತ್ ಶಿವರಾಂ, ವಳಾಲು ಟೋಲ್ ಗೇಟ್‌ನಲ್ಲಿ ವಾಹನ ಸವಾರರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

Ad Widget

Ad Widget <> Ad Widget

ಹೊಸ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಸಂದರ್ಭದಲ್ಲೇ ರಸ್ತೆ ತೆರಿಗೆ ಪಾವತಿಸಲಾಗುತ್ತಿದ್ದರೂ, ರಸ್ತೆ ಬಳಕೆಯ ಹೆಸರಿನಲ್ಲಿ ಮತ್ತೆ ಮತ್ತೆ ಟೋಲ್ ಶುಲ್ಕ ಹೆಚ್ಚಿಸುತ್ತಿರುವುದು ಎಷ್ಟು ಸಮಂಜಸ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ನಿಯಮಗಳ ಪ್ರಕಾರ ಎರಡು ಟೋಲ್ ಪ್ಲಾಜಾಗಳ ನಡುವೆ ನಿಗದಿತ ಅಂತರ ಇರಬೇಕು. ಆದರೆ, ಬ್ರಹ್ಮರಕೊಟ್ಟು ಟೋಲ್ ಗೇಟ್‌ನಿಂದ 35 ಕಿ.ಮೀ.ಗಿಂತ ಕಡಿಮೆ, ಕೇವಲ 32 ಕಿ.ಮೀ. ಅಂತರದಲ್ಲೇ ವಳಾಲು ಟೋಲ್ ಆರಂಭಿಸಿ ಎರಡು ಕಡೆ ಶುಲ್ಕ ವಸೂಲಿ ಮಾಡುತ್ತಿರುವುದು ನಿಯಮಬಾಹಿರ ಎಂದು ರಕ್ಷಿತ್ ಶಿವರಾಂ ದೂರಿದ್ದಾರೆ.

Ad Widget

Ad Widget

ವಳಾಲು ಭಾಗದ ಸ್ಥಳೀಯರು ಬ್ಯಾಂಕ್, ಸಹಕಾರಿ ಹಾಲು ಡಿಪೋ, ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ತೆರಳುವಂತಹ ದೈನಂದಿನ ಚಟುವಟಿಕೆಗಳಿಗೂ ಪ್ರತಿನಿತ್ಯ ₹250 ವರೆಗೆ ಟೋಲ್ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಜನವಿರೋಧಿ ಟೋಲ್ ದರ ಏರಿಕೆ ವಿರುದ್ಧ ಧ್ವನಿ ಎತ್ತದಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಟೀಕಿಸಿದ್ದಾರೆ.

ವಾಹನ ಸವಾರರಿಗೆ ಹೊರೆಯಾಗುವ ರೀತಿಯಲ್ಲಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಶ್ನಿಸುವ ಧೈರ್ಯ ಶಾಸಕರಿಗಿದೆಯೇ ಎಂದು ರಕ್ಷಿತ್ ಶಿವರಾಂ ಸವಾಲು ಹಾಕಿದ್ದಾರೆ.

ವಳಾಲು ಟೋಲ್ ದರ ಏರಿಕೆಯನ್ನು ತಕ್ಷಣ ಮರುಪರಿಶೀಲಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು. ಟೋಲ್ ದರ ನಿಗದಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದರ ಜೊತೆಗೆ ಸ್ಥಳೀಯರಿಗೆ ವಿನಾಯಿತಿ ನೀಡಬೇಕು. ಬ್ರಹ್ಮರಕೊಟ್ಟು ಟೋಲ್ ಗೇಟ್ ತೆರವುಗೊಳಿಸಬೇಕು ಹಾಗೂ ಬೆಳ್ತಂಗಡಿ ತಾಲೂಕಿನ ಪಣಕಜೆಯಲ್ಲಿ ಉದ್ದೇಶಿತ ಟೋಲ್ ಗೇಟ್ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?

Published

on

Ad Widget

Ad Widget

Ad Widget

Ad Widget

ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

Ad Widget

Ad Widget alt="Ad Widget"/>

Ad Widget

ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.

Ad Widget

Ad Widget <> Ad Widget

ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.

Ad Widget
Continue Reading

ರಾಜಕೀಯ

Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ

Published

on

Ad Widget

Ad Widget

Ad Widget

Ad Widget

ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

Ad Widget

Ad Widget <> Ad Widget

ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.

1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Ad Widget

Ad Widget

2018ರಲ್ಲಿ ರೈತರ ಸಾಲಮನ್ನಾ ಮಾಡುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನೂ 1,000 ರೂ. ಹೆಚ್ಚಳ ಮಾಡಿದ್ದೆ ಎಂದು ಸ್ಮರಿಸಿದ ಅವರು, ‘ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು ಎಂದು ಮುಖ್ಯಮಂತ್ರಿಗಳು ಕೇಳುತ್ತಾರೆ. ನನ್ನ ಸಾಕ್ಷಿಗುಡ್ಡೆ ಇರಲಿ, ನಿಮ್ಮ ಸಾಕ್ಷಿಗುಡ್ಡೆ ಎಲ್ಲಿ?’ ಎಂದು ಪ್ರಶ್ನಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!