ಕೊಡಗು
Madikeri-ಮಡಿಕೇರಿ: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ; ಆಕ್ರೋಶಗೊಂಡ ಭಕ್ತರಿಂದ ಪ್ರತಿಭಟನೆ
ಕೆಲ ಯೂಟ್ಯೂಬರ್ಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ಕೊಡಗಿನಲ್ಲಿ ಪ್ರತಿಭಟನೆ ನಡೆಸಿದೆ.
ಮಡಿಕೇರಿ: ಕೆಲ ಯೂಟ್ಯೂಬರ್ಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ಕೊಡಗಿನಲ್ಲಿ ಪ್ರತಿಭಟನೆ ನಡೆಸಿದೆ.
ಮಡಿಕೇರಿ ನಗರದ ಗಾಂಧಿ ಮೈದಾನದಲ್ಲಿ ಸೇರಿದ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ಸಂಘಟನೆಯ ಸದಸ್ಯರು, ಅಪಪ್ರಚಾರ ನಡೆಸುತ್ತಿರುವವರನ್ನ ಬಂಧಿಸುವಂತೆ ಆಗ್ರಹಿಸಿದ್ದಾರೆ.
ಈಗಾಗಲೇ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳದಲ್ಲಿ ತನಿಖೆ ನಡೆಸುತ್ತಿದ್ದಾರೆ. ಆ ತನಿಖೆ ಪೂರ್ಣಗೊಳ್ಳುವವರೆಗೆ ಎಲ್ಲರೂ ತಾಳ್ಮೆಯಿಂದ ಇರಬೇಕಾಗುತ್ತದೆ. ಆದ್ರೆ ಕೆಲವರು ಶ್ರೀಕ್ಷೇತ್ರದ ಬಗ್ಗೆ ಹಾಗೂ ಧರ್ಮಾಧಿಕಾರಿಗಳ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ. ಅಲ್ಲದೇ ಹಿಂದೂ ದೇವಾಲಯದ ಮೇಲೆ ಬೌದ್ಧಿಕ ದಾಳಿ ನಡೆಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಗಿರೀಶ ಮಟ್ಟಣ್ಣನವರ್ ಕೇವಲವಾಗಿ ಮಾತನಾಡುತ್ತಾ ಕೆಸರೆರಚುವ ಪ್ರಯತ್ನ ನಡೆಸುತ್ತಿದ್ದಾರೆ. ಇನ್ನೂ ಭಕ್ತರ ಮೌನಕ್ಕೆ ಅವಕಾಶ ಇಲ್ಲ. ಭಕ್ತವೃಂದ ಎದ್ದು ನಿಂತಿದೆ. ಸುಳ್ಳು ಆರೋಪ ಮಾಡುವ ಯೂಟೂಬರ್ಗಳನ್ನ ಕೂಡಲೇ ಬಂಧಿಸಬೇಕು ಎಂದು ಅಕ್ರೋಶ ಹೋರಹಾಕಿದ್ದಾರೆ. ಇನ್ನೂ ಇದೇ ಸಂದರ್ಭ ಜಿಲ್ಲಾಧಿಕಾರಿ ವೆಂಕಟರಾಜ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಧರ್ಮಸ್ಥಳದಲ್ಲಿ ಯೂಟ್ಯೂಬರ್ಗಳ ಮೇಲೆ ಹಲ್ಲೆ
ಧರ್ಮಸ್ಥಳದಲ್ಲಿ ಆ.6ರಂದು ಸಂಜೆ ಯೂಟ್ಯೂಬರ್ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದರು. ಬಳಿಕ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಇದೇ ವೇಳೆ ವರದಿ ಮಾಡಲು ಹೋಗಿದ್ದ ಖಾಸಗಿ ವಾಹಿನಿ ವರದಿಗಾರ ಹಾಗೂ ಕ್ಯಾಮೆರಾಮ್ಯಾನ್ ಮೇಲೆಯೂ ಹಲ್ಲೆ ನಡೆಸಲಾಗಿತ್ತು. ಧರ್ಮಸ್ಥಳ ಕ್ಷೇತ್ರ ಅಪಪ್ರಚಾರ ಸಹಿಸಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದರು. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆಯೇ ಪೊಲೀಸರು ಲಾಠಿಚಾರ್ಜ್ ಮಾಡಿ ಚದುರಿಸಲು ಪ್ರಯತ್ನಿಸಿದರು. ಆದರೆ, ಇದಕ್ಕೆ ಬಗ್ಗದ ಪ್ರತಿಭಟನಾಕಾರರು ಪೊಲೀಸ್ ಠಾಣೆ ಮುಂದೆ ಧರಣಿ ಕೂತಿದ್ದರು. ಕ್ಷೇತ್ರದ ತೇಜೋವಧೆ ಮಾಡುವವರನ್ನು ಬಂಧಿಸಿ ಎಂದು ಒತ್ತಾಯಿಸಿದ್ದರು.
ಅಪರಾಧ
Madikeri-ಗಾಂಜಾ ಸೇವಿಸಿದವನಿಗೆ ವಿಭಿನ್ನ ಶಿಕ್ಷೆ: ದಿನವಿಡೀ ಟ್ರಾಫಿಕ್ ಕರ್ತವ್ಯ ನಿರ್ವಹಿಸಿದ ಆರೋಪಿ
ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಮಡಿಕೇರಿ, ನ.17: ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಗಾಂಜಾ ಸೇವನೆ ಮಾಡಿದ ಆರೋಪದಡಿ ಸಿದ್ದಾಪುರ ನಿವಾಸಿ ಆಸೀಮ್ ಎಂಬಾತನಿಗೆ ನ್ಯಾಯಾಲಯ ₹5,000 ದಂಡ ವಿಧಿಸಿತ್ತು. ಇದರೊಂದಿಗೆ ಸಮುದಾಯ ಸೇವೆಯನ್ನೂ ಶಿಕ್ಷೆಯ ಭಾಗವಾಗಿ ನೀಡುವಂತೆ ಆದೇಶಿಸಿತ್ತು.
ದಿನವಿಡೀ ಸಂಚಾರ ನಿಯಂತ್ರಣ ಕರ್ತವ್ಯ
ನ್ಯಾಯಾಲಯದ ಆದೇಶದಂತೆ ನವೆಂಬರ್ 15ರಂದು ಆಸೀಮ್ ಸಿದ್ದಾಪುರ ಪಟ್ಟಣದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದರ ಜೊತೆಗೆ ಪಾದಚಾರಿಗಳ ಸಂಚಾರವನ್ನೂ ನಿಯಂತ್ರಿಸಿ ದಿನವಿಡೀ ಕರ್ತವ್ಯ ನಿರ್ವಹಿಸುವ ಮೂಲಕ ನ್ಯಾಯಾಲಯ ವಿಧಿಸಿದ್ದ ಸಮುದಾಯ ಸೇವೆಯ ಶಿಕ್ಷೆಯನ್ನು ಪೂರ್ಣಗೊಳಿಸಿದರು.
ಸಾಮಾಜಿಕ ಜವಾಬ್ದಾರಿ ಮೂಡಿಸುವ ಉದ್ದೇಶ
ಅಪರಾಧಿಗಳಿಗೆ ಕೇವಲ ದಂಡ ಅಥವಾ ಜೈಲು ಶಿಕ್ಷೆ ವಿಧಿಸುವ ಬದಲು, ಸಾರ್ವಜನಿಕ ಸೇವೆಯಲ್ಲಿ ತೊಡಗಿಸುವ ಮೂಲಕ ಅವರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ತಮ್ಮ ತಪ್ಪಿನ ಅರಿವು ಮೂಡಿಸುವ ಉದ್ದೇಶದಿಂದ ನ್ಯಾಯಾಲಯ ಇಂತಹ ವಿಭಿನ್ನ ಶಿಕ್ಷೆಯನ್ನು ವಿಧಿಸಿದೆ.
ಇದೇ ವರ್ಷದ ಮಾರ್ಚ್ನಲ್ಲಿ ಕಡೂರು ಉಪವಿಭಾಗದಲ್ಲಿ ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಯೊಬ್ಬರಿಗೆ ರಸ್ತೆ ಬದಿಯಲ್ಲಿ ನಿಂತು ಸಂಚಾರ ನಿಯಮಗಳ ಜಾಗೃತಿ ಫಲಕ ಹಿಡಿಯುವಂತೆ ನ್ಯಾಯಾಲಯ ಆದೇಶಿಸಿತ್ತು.
ಸಿದ್ದಾಪುರದಲ್ಲಿ ಜಾರಿಗೊಂಡಿರುವ ಈ ವಿಭಿನ್ನ ಶಿಕ್ಷೆಯ ಮಾದರಿ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದ್ದು, ಅಪರಾಧಿಗಳಿಗೆ ಪಾಠ ಕಲಿಸುವುದರ ಜೊತೆಗೆ ಸಮಾಜಮುಖಿ ಚಿಂತನೆ ಬೆಳೆಸುವ ಪ್ರಯತ್ನವಾಗಿ ಮೆಚ್ಚುಗೆಗೆ ಪಾತ್ರವಾಗಿದೆ.
ಕೊಡಗು
Madikeri-ಮಡಿಕೇರಿ: ಅಡಿಕೆ ಹಾಳೆ ತಟ್ಟೆ, ಪೇಪರ್ ಕಪ್ ನಿಷೇಧ: ನಗರಸಭೆ ಆದೇಶಕ್ಕೆ ವ್ಯಾಪಾರಸ್ಥರು ಶಾಕ್..!
ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ಮಡಿಕೇರಿ: ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ನಿಷೇಧಕ್ಕೆ ಕಾರಣವೇನು?:
ನಗರಸಭೆಯ ಮಾಹಿತಿ ಪ್ರಕಾರ, ಪೇಪರ್ ಕಪ್ ಮತ್ತು ಅಡಿಕೆ ಹಾಳೆ ತಟ್ಟೆಗಳು ನೈಸರ್ಗಿಕವಾಗಿ ಕರಗುವ ವಸ್ತುಗಳೇ ಆದರೂ, ಅವುಗಳು ಸಂಪೂರ್ಣವಾಗಿ ಮಣ್ಣಿನಲ್ಲಿ ವಿಲೀನವಾಗಲು ದೀರ್ಘ ಸಮಯ ತೆಗೆದುಕೊಳ್ಳುತ್ತವೆ. ಇದರಿಂದ ನಗರದ ಕಸ ವಿಲೇವಾರಿ ಪ್ರಕ್ರಿಯೆಯಲ್ಲಿ ಸಮಸ್ಯೆಗಳು ಉಂಟಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಗರಸಭೆಯ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಂಡು ಈ ನಿಷೇಧ ಜಾರಿಗೊಳಿಸಲಾಗಿದೆ. ಇತ್ತೀಚೆಗಷ್ಟೇ ನಗರಸಭೆಯು ಒಂದು ಮತ್ತು ಅರ್ಧ ಲೀಟರ್ ನೀರಿನ ಬಾಟಲಿಗಳನ್ನು ನಿಷೇಧಿಸಿ ಗಮನ ಸೆಳೆದಿತ್ತು.
ಸಾರ್ವಜನಿಕರ ಮತ್ತು ವ್ಯಾಪಾರಸ್ಥರ ಆಕ್ರೋಶ:
ನಗರಸಭೆಯ ಈ ಹೊಸ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ನೀರಿನ ಬಾಟಲಿ ನಿಷೇಧಕ್ಕೆ ಬೆಂಬಲ ನೀಡಿದ್ದ ಜನತೆ, ಅಡಿಕೆ ಹಾಳೆ ಮತ್ತು ಪೇಪರ್ ತಟ್ಟೆಗಳ ನಿಷೇಧವನ್ನು ಖಂಡಿಸಿದ್ದಾರೆ.
“ಅಡಿಕೆ ಹಾಳೆ ಮತ್ತು ಪೇಪರ್ ಉತ್ಪನ್ನಗಳು ನೈಸರ್ಗಿಕವಾಗಿದ್ದು, ಮಣ್ಣಿನಲ್ಲಿ ಸುಲಭವಾಗಿ ಕರಗುತ್ತವೆ. ಮದುವೆ, ದೇವಸ್ಥಾನಗಳ ಉತ್ಸವ, ಕ್ರೀಡಾಕೂಟ ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಇವುಗಳ ಬಳಕೆಯೇ ಹೆಚ್ಚು. ಇವುಗಳನ್ನು ನಿಷೇಧಿಸುವುದು ಎಷ್ಟರ ಮಟ್ಟಿಗೆ ಸರಿ?” ಎಂದು ವ್ಯಾಪಾರಸ್ಥರು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, “ಸ್ಥಳೀಯವಾಗಿ ಮಾರಾಟ ನಿಷೇಧಿಸಿದರೂ ಪ್ರವಾಸಿಗರು ಹೊರಗಿನಿಂದ ಅಡಿಕೆ ತಟ್ಟೆ, ಪೇಪರ್ ಕಪ್ಗಳನ್ನು ತರುತ್ತಾರೆ, ಅವರನ್ನು ತಡೆಯುವುದು ಹೇಗೆ?” ಎಂದು ಜನರು ನಗರಸಭೆಯನ್ನು ಪ್ರಶ್ನಿಸುತ್ತಿದ್ದಾರೆ.
ಉಡುಪಿ
Helpline-ನೇಪಾಲ ಜಲಪ್ರಳಯ: ಉಡುಪಿ, ಕೊಡಗು ಯಾತ್ರಿಕರ ರಕ್ಷಣೆಗೆ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ
ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ/ಮಡಿಕೇರಿ: ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ ಜಿಲ್ಲೆಯವರಿಗೆ ಸೂಚನೆ:
ಉಡುಪಿ ಜಿಲ್ಲೆಯಿಂದ ಪ್ರವಾಸ ಅಥವಾ ಯಾತ್ರೆಗೆ ತೆರಳಿ ನೇಪಾಲದ ನೆರೆ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವವರ ವಿವರಗಳನ್ನು ತಕ್ಷಣವೇ ಜಿಲ್ಲಾಡಳಿತಕ್ಕೆ ನೀಡಲು ಕೋರಲಾಗಿದೆ. ಸಂಕಷ್ಟದಲ್ಲಿರುವವರ ಹೆಸರು, ವಿಳಾಸ, ಪ್ರಸ್ತುತ ಇರುವ ನಿಖರ ಸ್ಥಳ ಮತ್ತು ಮೊಬೈಲ್ ಸಂಖ್ಯೆಯನ್ನು ಕೆಳಗಿನ ಸಂಖ್ಯೆಗಳಿಗೆ ತಿಳಿಸಬಹುದು:
ಸಹಾಯವಾಣಿ: 1077
ದೂರವಾಣಿ: 0820-2574802
ಕೊಡಗು ಜಿಲ್ಲೆಯವರಿಗೆ ಸೂಚನೆ:
ಕೊಡಗು ಜಿಲ್ಲೆಯ ಯಾರಾದರೂ ಯಾತ್ರಿಕರು ನೇಪಾಲದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದರೆ, ಅವರ ಕುಟುಂಬದವರು ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕು. ಮಾಹಿತಿಗಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ:
ದೂರವಾಣಿ ಸಂಖ್ಯೆಗಳು: 08272-221077, 08272-221099
ಮೊಬೈಲ್/ವಾಟ್ಸಾಪ್ ಸಂಖ್ಯೆ: 8550001077
ಸಂಕಷ್ಟದಲ್ಲಿರುವವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
-
Uncategorized18 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ನಿಧನ ವಾರ್ತೆ23 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಕ್ರೈಂ4 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ಅಂತರ ರಾಜ್ಯ23 hours agoPunjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
-
ರಾಜಕೀಯ23 hours agoRural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!
-
ಅಂತರ ರಾಜ್ಯ23 hours agoSreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
-
ನಿಧನ ವಾರ್ತೆ4 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಬಿಗ್ ನ್ಯೂಸ್4 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ















