ಮಂಗಳೂರು
Mangaluru-ಮಂಗಳೂರು ಮೂಲದ ದಂಪತಿಗಳ 14 ವರ್ಷದ ಪುತ್ರನ ಆತ್ಮಹತ್ಯೆಗೆ ಕಾರಣವಾಯಿತೇ ವೆಬ್ ಸಿರೀಸ್ ?
ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ತೆರೆದುಕೊಳ್ಳುವ ಅಪಾಯಕಾರಿ ಜಗತ್ತಿಗೆ ಕನ್ನಡಿ ಹಿಡಿಯುವಂತಹ ಆಘಾತಕಾರಿ ಪ್ರಕರಣವೊಂದು ರಾಜಧಾನಿಯಲ್ಲಿ ನಡೆದಿದೆ. ಜಪಾನಿನ ಕುಖ್ಯಾತ ‘ಡೆತ್ ನೋಟ್’ ಎಂಬ ವೆಬ್ ಸಿರೀಸ್ನಿಂದ ತೀವ್ರವಾಗಿ ಪ್ರಭಾವಿತನಾಗಿದ್ದ ಏಳನೇ ತರಗತಿಯ ವಿದ್ಯಾರ್ಥಿಯೊಬ್ಬ, ಗಿಟಾರ್ ತಂತಿಯಿಂದಲೇ ನೇಣಿಗೆ ಶರಣಾಗಿ ತನ್ನ ಜೀವನವನ್ನು ಅಂತ್ಯಗೊಳಿಸಿದ್ದಾನೆ.
ಬೆಂಗಳೂರು: ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ತೆರೆದುಕೊಳ್ಳುವ ಅಪಾಯಕಾರಿ ಜಗತ್ತಿಗೆ ಕನ್ನಡಿ ಹಿಡಿಯುವಂತಹ ಆಘಾತಕಾರಿ ಪ್ರಕರಣವೊಂದು ರಾಜಧಾನಿಯಲ್ಲಿ ನಡೆದಿದೆ. ಜಪಾನಿನ ಕುಖ್ಯಾತ ‘ಡೆತ್ ನೋಟ್’ ಎಂಬ ವೆಬ್ ಸಿರೀಸ್ನಿಂದ ತೀವ್ರವಾಗಿ ಪ್ರಭಾವಿತನಾಗಿದ್ದ ಏಳನೇ ತರಗತಿಯ ವಿದ್ಯಾರ್ಥಿಯೊಬ್ಬ, ಗಿಟಾರ್ ತಂತಿಯಿಂದಲೇ ನೇಣಿಗೆ ಶರಣಾಗಿ ತನ್ನ ಜೀವನವನ್ನು ಅಂತ್ಯಗೊಳಿಸಿದ್ದಾನೆ.
ಮಂಗಳೂರು ಮೂಲದ , ಪ್ರಸ್ತುತ ಬನಶಂಕರಿ ಮೂರನೇ ಹಂತದ ನಿವಾಸಿ, ಖ್ಯಾತ ಸಂಗೀತಗಾರ ಗಣೇಶ್ ಪ್ರಸಾದ್ ಮತ್ತು ಜನಪದ ಗಾಯಕಿ ಸವಿತಕ್ಕ ದಂಪತಿಯ ಪುತ್ರ ಗಾಂಧಾರ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಈ ದುರಂತವು ಪೋಷಕ ಸಮುದಾಯವನ್ನು ಬೆಚ್ಚಿಬೀಳಿಸಿದ್ದು, ಮಕ್ಕಳ ಮೇಲೆ ಡಿಜಿಟಲ್ ಮಾಧ್ಯಮಗಳು ಬೀರುವ ಪ್ರಭಾವದ ಬಗ್ಗೆ ಗಂಭೀರ ಚರ್ಚೆಯನ್ನು ಹುಟ್ಟುಹಾಕಿದೆ.
ಸಿರೀಸ್ನ ಕಥೆಯೇ ದುರಂತಕ್ಕೆ ಪ್ರೇರಣೆಯೇ?
ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರ ತನಿಖೆಯ ಪ್ರಕಾರ, ಗಾಂಧಾರ್ ಒಂಟಿಯಾಗಿದ್ದಾಗ ‘ಡೆತ್ ನೋಟ್’ ಎಂಬ ಸೈಕಲಾಜಿಕಲ್ ಥ್ರಿಲ್ಲರ್ ಸಿರೀಸ್ ವೀಕ್ಷಣೆಯಲ್ಲಿ ಮುಳುಗುತ್ತಿದ್ದ. ಆ ಸಿರೀಸ್ನ ಪಾತ್ರ ಮತ್ತು ಕಥಾವಸ್ತು ಅವನ ಮೇಲೆ ಗಾಢ ಪರಿಣಾಮ ಬೀರಿತ್ತು. ಆತನ ಕೊಠಡಿಯಲ್ಲಿ ಸಿರೀಸ್ನ ಪಾತ್ರಗಳ ಚಿತ್ರಗಳು ಪತ್ತೆಯಾಗಿದ್ದು, ಇದೇ ಪ್ರೇರಣೆಯಿಂದ ಆತ ಆತ್ಮಹತ್ಯೆಯಂತಹ ಕಠೋರ ನಿರ್ಧಾರಕ್ಕೆ ಬಂದಿರಬಹುದು ಎಂದು ಪೊಲೀಸರು ಬಲವಾಗಿ ಶಂಕಿಸಿದ್ದಾರೆ.
ಮನಕಲಕಿದ ಮರಣಪತ್ರದ ಸಾಲುಗಳು
ಗಾಂಧಾರ್ ಬರೆದಿಟ್ಟ ಮರಣಪತ್ರವು ತನಿಖೆಯ ಕೇಂದ್ರಬಿಂದುವಾಗಿದೆ. ಅದರಲ್ಲಿ, “ನನ್ನಿಂದ ತಪ್ಪಾಗಿದ್ದರೆ ಕ್ಷಮಿಸಿ. 14 ವರ್ಷ ಬದುಕಿದ್ದೇನೆ, ಅದರಲ್ಲಿ ತೃಪ್ತನಾಗಿದ್ದೇನೆ. ಸಂತೋಷದಿಂದಲೇ ಕಾಲ ಕಳೆದಿದ್ದೇನೆ, ಅದು ಸಾಕು. ನಾನು ಸ್ವರ್ಗದಲ್ಲಿ ಖುಷಿಯಾಗಿರುತ್ತೇನೆ. ನನ್ನೆಲ್ಲಾ ಸ್ನೇಹಿತರನ್ನು ಪ್ರೀತಿಸುತ್ತಿದ್ದೆ ಎಂದು ತಿಳಿಸಿ. ಗುಡ್ಬೈ ಅಮ್ಮ, ಐ ಮಿಸ್ ಯೂ ಆಲ್,” ಎಂದು ಬರೆದಿದ್ದಾನೆ. ಈ ಸಾಲುಗಳು ಬಾಲಕನ ಮಾನಸಿಕ ಸ್ಥಿತಿಯನ್ನು ಪ್ರತಿಬಿಂಬಿಸುತ್ತಿದ್ದು, ಪೋಷಕರನ್ನು ಕಣ್ಣೀರಲ್ಲಿ ಮುಳುಗಿಸಿದೆ.
ಘಟನೆಯ ವಿವರ
ತಾಯಿ ಸವಿತಾ ಕಾರ್ಯಕ್ರಮ ನಿಮಿತ್ತ ವಿದೇಶ ಪ್ರವಾಸದಲ್ಲಿದ್ದಾಗ, ಗಾಂಧಾರ್ ತಂದೆ ಮತ್ತು ಅಣ್ಣನ ಜೊತೆಗಿದ್ದ. ಭಾನುವಾರ ರಾತ್ರಿ ಎಲ್ಲರೊಂದಿಗೆ ಸಹಜವಾಗಿಯೇ ಇದ್ದು, ಊಟದ ನಂತರ ತನ್ನ ಕೋಣೆಗೆ ತೆರಳಿದ್ದ. ಸೋಮವಾರ ಬೆಳಿಗ್ಗೆ, ತಂದೆ ಎಬ್ಬಿಸಲು ಹೋದಾಗ ಈ ದುರಂತ ಬೆಳಕಿಗೆ ಬಂದಿದೆ.
ಪೊಲೀಸರು ಗಾಂಧಾರ್ನ ಮೊಬೈಲ್ ಫೋನ್ ಅನ್ನು ವಿಶ್ಲೇಷಣೆಗೆ ಒಳಪಡಿಸಿದ್ದು, ಆತನ ಸ್ನೇಹಿತರು ಮತ್ತು ಪೋಷಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಶಾಲೆಯಲ್ಲಿ ಓರ್ವ ವಿದ್ಯಾರ್ಥಿನಿಗೆ ಕೀಟಲೆ ಮಾಡುತ್ತಿದ್ದ ವಿಷಯ ತಿಳಿದುಬಂದಿದೆಯಾದರೂ, ಅದು ಈ ದುರಂತಕ್ಕೆ ಮುಖ್ಯ ಕಾರಣವಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಈ ಘಟನೆಯು, ಮಕ್ಕಳು ಅಂತರ್ಜಾಲದಲ್ಲಿ ಏನು ವೀಕ್ಷಿಸುತ್ತಾರೆ ಎಂಬುದರ ಬಗ್ಗೆ ಪೋಷಕರು ನಿಗಾ ವಹಿಸಬೇಕಾದ ಅನಿವಾರ್ಯತೆಯನ್ನು ಮತ್ತೊಮ್ಮೆ ಒತ್ತಿ ಹೇಳಿದೆ.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ದಕ್ಷಿಣ ಕನ್ನಡ23 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಮಂಗಳೂರು23 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















