Connect with us

ಸ್ಥಳೀಯ

Yatnal-ಒಬ್ಬ ಮುಖವಾಡದ ವ್ಯಕ್ತಿ ಮಾತುಕೇಳಿ, ಎಸ್ಐಟಿ ನೇಮಿಸಿ ಐಜಿಪಿ ಲೇವಲ್ ಅಧಿಕಾರಿ ಅಲ್ಲಿ ಕೂತು ಹಿಂದುಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ – ಯತ್ನಾಳ್

Published

on



Ad Widget

Ad Widget

Ad Widget

Ad Widget

ವಿಜಯಪುರ ಶಾಸಕ ಬಸನಗೌಡ ಯತ್ನಾಳ ಅವರು ಧರ್ಮಸ್ಥಳವನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕಮ್ಯುನಿಸ್ಟರಿಗೆ ಬೆಂಬಲ ಕೊಡುವ ಮುಖ್ಯಮಂತ್ರಿ ಸಿಕ್ಕಿರುವುದು ಈ ರಾಜ್ಯದ ದೌರ್ಭಾಗ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಬಾಗಲಕೋಟೆ (ಆ.11): ವಿಜಯಪುರ ಶಾಸಕ ಬಸನಗೌಡ ಯತ್ನಾಳ ಅವರು ಧರ್ಮಸ್ಥಳವನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕಮ್ಯುನಿಸ್ಟರಿಗೆ ಬೆಂಬಲ ಕೊಡುವ ಮುಖ್ಯಮಂತ್ರಿ ಸಿಕ್ಕಿರುವುದು ಈ ರಾಜ್ಯದ ದೌರ್ಭಾಗ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕೃಪಾಪೋಷಿತ ಎಸ್ಐಟಿ ಇದಾಗಿದೆ. ಅವರಿಗೆ ಏನೂ ಸಿಗುತ್ತಿಲ್ಲ. ಅವನು ಯಾವನೋ ಒಬ್ಬ ಮುಖವಾಡದ ವ್ಯಕ್ತಿ ಮಾತುಕೇಳಿ, ಎಸ್ಐಟಿ ನೇಮಿಸಿ, ಐಜಿಪಿ ಲೇವಲ್ ಅಧಿಕಾರಿ ಅಲ್ಲಿ ಕೂತು. ಹಿಂದುಗಳನ್ನು ಅಪಮಾನ ಮಾಡೋದನ್ನು ಗಮನಿಸಿದರೆ ದೇಶದಲ್ಲಿ ಹಿಂದುಗಳ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ದೂರಿದರು.

Ad Widget

Ad Widget <> Ad Widget

ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ಅವರಿದ್ದಂತಹ ದೇಶದಲ್ಲಿ ಹಿಂದೂಗಳು ಸದರ ಆಗಿದ್ದಾರೆ. ಕರ್ನಾಟಕದಲ್ಲಂತೂ ಸಾಬರ ಸರ್ಕಾರವಾಗಿದೆ ಎಂದು ಆರೋಪಿಸಿದ ಅವರು, ಧರ್ಮಸ್ಥಳದಲ್ಲಿ ಎಸ್‌ಡಿಪಿಐನವರಿಗೆ ಏನು ಕೆಲಸ? ಅವರು ದೇಶ ದ್ರೋಹಿಗಳು. ಅವರ್ಯಾಕೆ ಪ್ರತಿಭಟನೆ ಮಾಡುತ್ತಾರೆ, ಅಲ್ಲಿ ಏನೂ ಸಿಕ್ಕಿಲ್ಲ. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಅಪಮಾನ ಮಾಡಬೇಕು.



Ad Widget

ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮಾಡಿದರು. ಶನಿ ಸಿಂಗನಾಪುರದಲ್ಲಿ ಮಾಡಿದರು. ಇವತ್ತು ಧರ್ಮಸ್ಥಳ, ನಾಳೆ ವೀರಭದ್ರೇಶ್ವರ, ವೆಂಕಟೇಶ್ವರನದು ಮುಗಿದಿದೆ. ಈಗ ಅಲ್ಲಿಯೂ ಹುಂಡಿಯೊಳಗೆ ಏನೋ ಹಾಕಿದ್ದಾರೆ ಎಂಬ ಸುದ್ದಿ ಬಂದಿದೆ ಎಂದರು.

Click to comment

Leave a Reply

ಅಪರಾಧ

Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ

Published

on



Ad Widget

Ad Widget

Ad Widget

Ad Widget

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್‌ ಅಧಿಕಾರಿ ಸಂದೀಪ್‌ ರಾವ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್‌ ಗೋಯಲ್‌ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.

Ad Widget

Ad Widget <> Ad Widget

ಬಳಿಕ ಮತ್ತೊಂದು ಮೊಬೈಲ್‌ ಸಂಖ್ಯೆಯಿಂದ ವಾಟ್ಸ್‌ಆ್ಯಪ್‌ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್‌ ಪವಾರ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್‌ ಸೀಕ್ರೆಸಿ ಆ್ಯಕ್ಟ್‌’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.



Ad Widget

ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್‌ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್‌ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.

Ad Widget

Ad Widget

ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್‌ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್‌ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್‌ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.

ಸೈಬರ್‌ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್‌ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.

Ad Widget
Continue Reading

ಬಿಗ್ ನ್ಯೂಸ್

Reservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ವರ್ಗವಾರು ಮೀಸಲಾತಿ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಟಿಕೆಟ್‌ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ವರ್ಗವಾರು ಮೀಸಲಾತಿ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಟಿಕೆಟ್‌ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಜಿಲ್ಲೆಯ ವಿವಿಧ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ), ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದಡಿ ಮೀಸಲಿಡಲಾಗಿದೆ.

Ad Widget

Ad Widget <> Ad Widget

ತಾಲೂಕು ಪಂಚಾಯಿತಿ:
ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಪಂಚಾಯಿತಿಗಳಲ್ಲಿ ಒಟ್ಟು 126 ಸ್ಥಾನಗಳಿದ್ದು, 65 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಜಾತಿಗೆ 13 ಸ್ಥಾನಗಳಿದ್ದು, ಈ ಪೈಕಿ 9 ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಪಂಗಡಕ್ಕೆ 10 ಸ್ಥಾನಗಳಿದ್ದು, 9 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.



Ad Widget

ಹಿಂದುಳಿದ ವರ್ಗ ‘ಎ’ಗೆ 29 ಸ್ಥಾನಗಳು ಮೀಸಲಾಗಿದ್ದು, 16 ಸ್ಥಾನಗಳು ಮಹಿಳೆಯರಿಗೆ ಮೀಸಲು. ಹಿಂದುಳಿದ ವರ್ಗ ‘ಬಿ’ಗೆ 7 ಸ್ಥಾನಗಳಿದ್ದು, 4 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಸಾಮಾನ್ಯ ವರ್ಗದ 67 ಸ್ಥಾನಗಳ ಪೈಕಿ 27 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.

Ad Widget

Ad Widget

ತಾಲೂಕುವಾರು ಗಮನಿಸಿದರೆ ಮೂಲ್ಕಿಯಲ್ಲಿ 7, ಮೂಡುಬಿದಿರೆಯಲ್ಲಿ 9, ಸುಳ್ಯದಲ್ಲಿ 11, ಉಳ್ಳಾಲದಲ್ಲಿ 12, ಪುತ್ತೂರಿನಲ್ಲಿ 12, ಮಂಗಳೂರಿನಲ್ಲಿ 14, ಬೆಳ್ತಂಗಡಿಯಲ್ಲಿ 14, ಕಡಬದಲ್ಲಿ 22 ಹಾಗೂ ಬಂಟ್ವಾಳದಲ್ಲಿ 25 ತಾಲೂಕು ಪಂಚಾಯಿತಿ ಕ್ಷೇತ್ರಗಳಿವೆ. ಬಂಟ್ವಾಳದಲ್ಲಿ ಅತಿ ಹೆಚ್ಚು 25 ಹಾಗೂ ಮೂಲ್ಕಿಯಲ್ಲಿ ಅತಿ ಕಡಿಮೆ 7 ಕ್ಷೇತ್ರಗಳಿವೆ.

ಜಿಲ್ಲಾ ಪಂಚಾಯಿತಿ:
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯಲ್ಲಿ ಒಟ್ಟು 35 ಸ್ಥಾನಗಳಿದ್ದು, 18 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಜಾತಿಗೆ 3 ಸ್ಥಾನಗಳಿದ್ದು, 2 ಮಹಿಳೆಯರಿಗೆ ಮೀಸಲು. ಪರಿಶಿಷ್ಟ ಪಂಗಡಕ್ಕೆ 2 ಸ್ಥಾನಗಳಿದ್ದು, 1 ಸ್ಥಾನ ಮಹಿಳೆಯರಿಗೆ ಮೀಸಲಾಗಿದೆ.

ಹಿಂದುಳಿದ ವರ್ಗ ‘ಎ’ಗೆ 10 ಸ್ಥಾನಗಳಿದ್ದು, 5 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಹಿಂದುಳಿದ ವರ್ಗ ‘ಬಿ’ಗೆ 2 ಸ್ಥಾನಗಳಿದ್ದು, 1 ಸ್ಥಾನ ಮಹಿಳೆಯರಿಗೆ ಮೀಸಲು. ಸಾಮಾನ್ಯ ವರ್ಗದ 18 ಸ್ಥಾನಗಳ ಪೈಕಿ 9 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.

ಮೀಸಲಾತಿ ವಿವರ ಪ್ರಕಟಗೊಂಡಿರುವ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳಲ್ಲಿ ಟಿಕೆಟ್‌ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ. ಯಾವ ಕ್ಷೇತ್ರದಲ್ಲಿ ಯಾವ ವರ್ಗಕ್ಕೆ ಮೀಸಲಾತಿ ದೊರೆತಿದೆ ಎಂಬುದನ್ನು ಆಧರಿಸಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ನಿರೀಕ್ಷೆಯಿದೆ.

Ad Widget
Continue Reading

ಬಿಗ್ ನ್ಯೂಸ್

SDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್‌ಡಿಪಿಐ ಅಸಮಾಧಾನ

Published

on



Ad Widget

Ad Widget

Ad Widget

Ad Widget

ಮಕ್ಕಳ ಆಟೋಟ ಹಾಗೂ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಬೇಕಿದ್ದ ಪರ್ಲಡ್ಕದ ಡಾ. ಶಿವರಾಮ ಕಾರಂತರ ಬಾಲವನ ನಿರ್ವಹಣೆಯ ಕೊರತೆಯಿಂದ ಹದಗೆಟ್ಟಿದೆ ಎಂದು ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಆರೋಪಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮಕ್ಕಳ ಆಟೋಟ ಹಾಗೂ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಬೇಕಿದ್ದ ಪರ್ಲಡ್ಕದ ಡಾ. ಶಿವರಾಮ ಕಾರಂತರ ಬಾಲವನ ನಿರ್ವಹಣೆಯ ಕೊರತೆಯಿಂದ ಹದಗೆಟ್ಟಿದೆ ಎಂದು ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಆರೋಪಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಾಲವನದ ಹಲವು ಆಟೋಟದ ಉಪಕರಣಗಳು ದುರಸ್ತಿಗೊಳಗಾಗದೆ ಬಳಕೆಗೆ ಅಯೋಗ್ಯವಾಗಿವೆ. ಆವರಣದ ನಿರ್ವಹಣೆಯೂ ಸಮರ್ಪಕವಾಗಿಲ್ಲ. ಹಲವು ವರ್ಷಗಳಿಂದ ಇದೇ ಸ್ಥಿತಿ ಮುಂದುವರಿದಿದ್ದರೂ, ಬಾಲವನದ ಅಭಿವೃದ್ಧಿಗೆ ಸಂಬಂಧಪಟ್ಟವರು ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಸಮಿತಿ ದೂರಿದೆ.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯ ತಂಡವು ಬಾಲವನಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿತು. ಬಾಲವನದ ದುರಸ್ತಿ ಮತ್ತು ಅಭಿವೃದ್ಧಿಗೆ ಜನಪ್ರತಿನಿಧಿಗಳು ಈ ಹಿಂದೆ ಹಲವು ಬಾರಿ ಭರವಸೆ ನೀಡಿದ್ದರೂ, ನಿರೀಕ್ಷಿತ ಮಟ್ಟದ ಕಾಮಗಾರಿಗಳು ನಡೆದಿಲ್ಲ ಎಂದು ಸಮಿತಿ ತಿಳಿಸಿದೆ.



Ad Widget

ಬಾಲವನವು ಪುತ್ತೂರಿನ ಪ್ರಮುಖ ಪ್ರವಾಸಿ ತಾಣವಾಗಿದ್ದು, ಮಕ್ಕಳಿಗೆ ಮನರಂಜನೆ ಹಾಗೂ ಪ್ರಕೃತಿಯ ನಡುವೆ ಸಮಯ ಕಳೆಯಲು ಅನುಕೂಲವಾಗುವ ಸ್ಥಳವಾಗಿದೆ. ಹೀಗಾಗಿ, ಹದಗೆಟ್ಟಿರುವ ಆಟೋಟದ ಉಪಕರಣಗಳನ್ನು ತಕ್ಷಣ ದುರಸ್ತಿಗೊಳಿಸಿ, ಬಾಲವನದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಆಗ್ರಹಿಸಿದೆ.

Ad Widget

Ad Widget

ಡಾ. ಶಿವರಾಮ ಕಾರಂತರ ನಿವಾಸ ಹಾಗೂ ಬಾಲವನದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಅದರ ಸಂರಕ್ಷಣೆ ಹಾಗೂ ನಿರ್ವಹಣೆಗೆ ಆದ್ಯತೆ ನೀಡಬೇಕು ಎಂದು ಸಮಿತಿ ಒತ್ತಾಯಿಸಿದೆ.

ನಿಯೋಗದಲ್ಲಿ ನಗರ ಸಮಿತಿ ಉಪಾಧ್ಯಕ್ಷ ಶಮೀರ್ ನಾಜೂಕ್, ಕಾರ್ಯದರ್ಶಿ ಇಫಾಝ್ ಬನ್ನೂರು, ಜೊತೆ ಕಾರ್ಯದರ್ಶಿ ಹರ್ಷದ್ ಹುಸೇನ್, ಸಮಿತಿ ಸದಸ್ಯ ಅಶ್ರಫ್ ಪರ್ಲಡ್ಕ, ಗೋಳಿಕಟ್ಟೆ ಬ್ರಾಂಚ್ ಅಧ್ಯಕ್ಷ ಇಶಾನ್, ಆರೀಫ್ ಮತ್ತಿತ್ತರರು ಇದ್ದರು

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading