ಬಿಗ್ ನ್ಯೂಸ್
P.G. Jagannivasa Rao-BIG Breaking:ಶಾರದಾ ಭಜನಾ ಮಂದಿರದ ಅಧ್ಯಕ್ಷತೆಯಿಂದ ಪಿ.ಜಿ. ಜಗನ್ನಿವಾಸ ರಾವ್ ಕಿತ್ತೆಸೆಯಬೇಕು – ತಪ್ಪಿದಲ್ಲಿ ಅಲ್ಲಿನ ನವರಾತ್ರಿ ಉತ್ಸವವನ್ನು ಸಮಾಜ ಬಹಿಷ್ಕರಿಸಲಿದೆ : ವಿಶ್ವಕರ್ಮ ಯುವ ಮಿಲನ್ | ಯಾವುದೇ ಧಾರ್ಮಿಕ ಕ್ಷೇತ್ರಗಳಿಗೆ ಆಹ್ವಾನಿಸುವುದಕ್ಕೂ ವಿರೋಧ
ಶಾರದಾ ಭಜನಾ ಮಂದಿರದ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ಅವರ ಪುತ್ರನಿಂದ ವಿಶ್ವಕರ್ಮ ಸಮಾಜದ ಯುವತಿಯೊಬ್ಬಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿರುವ ವಿಶ್ವಕರ್ಮ ಯುವ ಮಿಲನ್, ಅಧ್ಯಕ್ಷರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಬೇಕು ಮತ್ತು ಅವರ ನೇತೃತ್ವದಲ್ಲಿ ನಡೆಯುವ ನವರಾತ್ರಿ ಉತ್ಸವವನ್ನು ಸಮಾಜ ಸಂಪೂರ್ಣವಾಗಿ ಬಹಿಷ್ಕರಿಸಲಿದೆ ಎಂದು ಎಚ್ಚರಿಕೆ ನೀಡಿದೆ.
ಪುತ್ತೂರು: ಶಾರದಾ ಭಜನಾ ಮಂದಿರದ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ಅವರ ಪುತ್ರನಿಂದ ವಿಶ್ವಕರ್ಮ ಸಮಾಜದ ಯುವತಿಯೊಬ್ಬಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿರುವ ವಿಶ್ವಕರ್ಮ ಯುವ ಮಿಲನ್, ಅಧ್ಯಕ್ಷರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಬೇಕು ಮತ್ತು ಅವರ ನೇತೃತ್ವದಲ್ಲಿ ನಡೆಯುವ ನವರಾತ್ರಿ ಉತ್ಸವವನ್ನು ಸಮಾಜ ಸಂಪೂರ್ಣವಾಗಿ ಬಹಿಷ್ಕರಿಸಲಿದೆ ಎಂದು ಎಚ್ಚರಿಕೆ ನೀಡಿದೆ.
ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಕರ್ಮ ಯುವ ಮಿಲನ್ ಪದಾಧಿಕಾರಿಗಳು, “ಮಾತೃ ಸ್ವರೂಪಿಣಿ ಶಾರದಾ ಮಾತೆಯನ್ನು ಪೂಜಿಸುವ ಈ ಪವಿತ್ರ ಕ್ಷೇತ್ರದಲ್ಲಿ ಹಿಂದೆ ಕಳಂಕರಹಿತ ಗಣ್ಯರು ಆಡಳಿತ ನಡೆಸುತ್ತಿದ್ದರು. ಆದರೆ, ಪ್ರಸ್ತುತ ಅಧ್ಯಕ್ಷರಾದ ಪಿ.ಜಿ. ಜಗನ್ನಿವಾಸ ರಾವ್ ಅವರ ಮಗ ಪಿ.ಜಿ. ಕೃಷ್ಣ ಜೆ. ರಾವ್ ನಮ್ಮ ಸಮಾಜದ ಮುಗ್ಧ ಹೆಣ್ಣುಮಗಳಿಗೆ ಅನ್ಯಾಯ ಎಸಗಿದ್ದಾರೆ. ಈ ಬಗ್ಗೆ ನ್ಯಾಯ ಒದಗಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಜಗನ್ನಿವಾಸ ರಾವ್ ಮತ್ತು ಅವರ ಕುಟುಂಬ ಸ್ಪಂದಿಸಿಲ್ಲ. ಇದು ನಮ್ಮ ಸಮಾಜಕ್ಕೆ ಮಾಡಿದ ಅವಮಾನ,” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ನಮ್ಮ ಹಿರಿಯರಾದ ಅಮೈ ಮಂಜುನಾಥ ಆಚಾರ್ಯ, ಮಹಾಲಿಂಗ ಆಚಾರ್ಯ, ಗೋಪಾಲ ಆಚಾರ್ಯ, ಕೃಷ್ಣಪ್ಪ ಆಚಾರ್ಯ ಅವರು ಈ ಮಂದಿರದ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಸ್ತುತ ನಮ್ಮವರೇ ಆದ ಯಶವಂತ ಆಚಾರ್ಯ ಉಪಾಧ್ಯಕ್ಷರಾಗಿದ್ದಾರೆ. ಮಂದಿರದ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ನಮ್ಮ ಸಮುದಾಯ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡುತ್ತಾ ಬಂದಿದೆ. ಹೀಗಿದ್ದರೂ ನಮ್ಮ ಸಮುದಾಯದ ಯುವತಿಗೆ ಅನ್ಯಾಯವಾದಾಗ ಆಡಳಿತ ಮಂಡಳಿಯ ಅಧ್ಯಕ್ಷರೇ ನಿರ್ಲಕ್ಷ್ಯ ತೋರುತ್ತಿರುವುದು ಖಂಡನೀಯ,” ಎಂದರು.
“ಆದ್ದರಿಂದ, ಆರೋಪಿ ಕೃಷ್ಣ ಜೆ. ರಾವ್ ಅವರ ತಂದೆಯಾದ ಪಿ.ಜಿ. ಜಗನ್ನಿವಾಸ ರಾವ್ ಅವರನ್ನು ಅಧ್ಯಕ್ಷ ಸ್ಥಾನದಿಂದ ತಕ್ಷಣ ವಜಾಗೊಳಿಸಬೇಕು. ಸಂತ್ರಸ್ತ ಯುವತಿಗೆ ನ್ಯಾಯ ಸಿಗುವವರೆಗೂ ಅವರ ನೇತೃತ್ವದಲ್ಲಿ ನಡೆಯುವ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಮ್ಮ ಸಮಾಜ ಭಾಗವಹಿಸುವುದಿಲ್ಲ. ಅವರನ್ನು ಯಾವುದೇ ಧಾರ್ಮಿಕ ಕ್ಷೇತ್ರಗಳಿಗೆ ಆಹ್ವಾನಿಸುವುದನ್ನೂ ನಾವು ವಿರೋಧಿಸುತ್ತೇವೆ,” ಎಂದು ಮಾಧ್ಯಮಗಳ ಮೂಲಕ ಆಡಳಿತ ಮಂಡಳಿಗೆ ಮನವಿ ಮಾಡಿದರು.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
ಬಿಗ್ ನ್ಯೂಸ್
ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ
ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.
ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.
ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.
-
ಮಂಗಳೂರು15 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized12 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ20 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಮಂಗಳೂರು22 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಸ್ಥಳೀಯ20 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಅಂತರ ರಾಜ್ಯ14 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ16 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್15 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ


















