ನಗರದ ಭಕ್ತರೊಬ್ಬರ ಮನೆಯಲ್ಲಿ ಮಾಧ್ಯಮದೊಂದಿಗೆ […]" /> ನಗರದ ಭಕ್ತರೊಬ್ಬರ ಮನೆಯಲ್ಲಿ ಮಾಧ್ಯಮದೊಂದಿಗೆ […]"> Kodimat Swamiji-ಅಪಪ್ರಚಾರ ಮೊದಲು ಬಂದಿದೆ.. ಮಂಜುನಾಥನೇ ಇದನ್ನೆಲ್ಲ ಮಾಡಿಸ್ತಿರಬೇಕು ಅನ್ನಿಸುತ್ತದೆ : ಧರ್ಮಸ್ಥಳದ ಘಟನೆಯ ಬಗ್ಗೆ ಕೋಡಿಮಠ ಸ್ವಾಮೀಜಿ - Nikhara News | Kannada News Website
Connect with us

ಸ್ಥಳೀಯ

Kodimat Swamiji-ಅಪಪ್ರಚಾರ ಮೊದಲು ಬಂದಿದೆ.. ಮಂಜುನಾಥನೇ ಇದನ್ನೆಲ್ಲ ಮಾಡಿಸ್ತಿರಬೇಕು ಅನ್ನಿಸುತ್ತದೆ : ಧರ್ಮಸ್ಥಳದ ಘಟನೆಯ ಬಗ್ಗೆ ಕೋಡಿಮಠ ಸ್ವಾಮೀಜಿ

Published

on

Ad Widget

Ad Widget

Ad Widget

Ad Widget

ಭಕ್ತರೊಬ್ಬರ ಮನೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ “ಧರ್ಮಸ್ಥಳದ ಘಟನೆಯಲ್ಲಿ ಅಪಪ್ರಚಾರ ಹೆಚ್ಚಾಗಿದೆ. ಸಾಮಾನ್ಯವಾಗಿ ಅಪಪ್ರಚಾರ ಕೊನೆಯಲ್ಲಿ ಬರುತ್ತದೆ, ಆದರೆ ಇಲ್ಲಿ ಅದು ಮೊದಲೇ ಜೋರಾಗಿದೆ. ಕೆಲವರಿಗೆ ಅಪಪ್ರಚಾರವೇ ಆಯುಧವಾಗಿದೆ. ಬಹುಶಃ ಇದನ್ನೆಲ್ಲಾ ಮಂಜುನಾಥನೇ ನಡೆಸುತ್ತಿರಬೇಕು ಎನಿಸುತ್ತದೆ,” ಎಂದರು.

Ad Widget

Ad Widget

Ad Widget

Ad Widget

ಗದಗ: ಧರ್ಮಸ್ಥಳದ ಘಟನೆಯ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಯುತ್ತಿದೆ. ಸತ್ಯ ಬಯಲಿಗೆ ಬರುವವರೆಗೆ ಕಾಯಬೇಕು ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು.

Ad Widget

Ad Widget alt="Ad Widget"/>

Ad Widget

ನಗರದ ಭಕ್ತರೊಬ್ಬರ ಮನೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಾ, “ಈ ಘಟನೆಯಲ್ಲಿ ಅಪಪ್ರಚಾರ ಹೆಚ್ಚಾಗಿದೆ. ಸಾಮಾನ್ಯವಾಗಿ ಅಪಪ್ರಚಾರ ಕೊನೆಯಲ್ಲಿ ಬರುತ್ತದೆ, ಆದರೆ ಇಲ್ಲಿ ಅದು ಮೊದಲೇ ಜೋರಾಗಿದೆ. ಕೆಲವರಿಗೆ ಅಪಪ್ರಚಾರವೇ ಆಯುಧವಾಗಿದೆ. ಬಹುಶಃ ಇದನ್ನೆಲ್ಲಾ ಮಂಜುನಾಥನೇ ನಡೆಸುತ್ತಿರಬೇಕು ಎನಿಸುತ್ತದೆ,” ಎಂದರು.

Ad Widget

Ad Widget <> Ad Widget

“ಸತ್ಯ ತಿಳಿಯುವವರೆಗೆ ಯಾರನ್ನೂ ದೋಷಿಗಳೆಂದು ಭಾವಿಸಬಾರದು. ಬೆಳಕಿರುವ ಜಾಗದಲ್ಲಿ ಕತ್ತಲು ಇರುತ್ತದೆ, ಕತ್ತಲಿರುವ ಜಾಗದಲ್ಲಿ ಬೆಳಕು ಇರುತ್ತದೆ. ಬೆಳಕು ಬಂದಾಗ ಕತ್ತಲು ತೊಲಗುತ್ತದೆ. ಕಾಲಜ್ಞಾನಿಗಳ ಪ್ರಕಾರ, ಒಳ್ಳೆಯ ದೇವಸ್ಥಾನಗಳ ಪೂಜೆಗಳು ಎಂದಿಗೂ ನಿಲ್ಲುವುದಿಲ್ಲ. ನಿಧಿಯಿರುವ ಜಾಗದಲ್ಲಿ ವಿಧಿಯೂ ಇರುತ್ತದೆ. ನಿಧಿಯಿದ್ದರೆ ವಿಧಿ ಕಾರ್ಯನಿರ್ವಹಿಸುತ್ತದೆ, ಇಲ್ಲದಿದ್ದರೆ ವಿಧಿಯೂ ಇರುವುದಿಲ್ಲ. ಸಣ್ಣ ದೇವಾಲಯಗಳಿಗೆ ಯಾರೂ ಹೋಗುವುದಿಲ್ಲ. ಆದರೆ, ನಿಧಿಯಿರುವ ಜಾಗದಲ್ಲಿ ವಿಧಿ ಕಾಡಿದರೂ, ವಿಧಿಯೇ ಗೆಲ್ಲಬೇಕು,” ಎಂದರು.

ರಾಜ್ಯ ರಾಜಕಾರಣದ ಬಗ್ಗೆ ಮಾತನಾಡುತ್ತಾ, “ಶಕ್ತಿಯಿದ್ದರೆ ಗೆಲುವು ಸಾಧ್ಯ, ಇಲ್ಲವಾದರೆ ಹೊಂದಿಕೊಳ್ಳಿ. ಇದನ್ನು ಸ್ಪಷ್ಟವಾಗಿ ಹೇಳುವುದು ಕಷ್ಟ. ಹೇಳಿದರೆ ಊರಿಗೆ ತಲುಪದೇ ಇರಬಹುದು,” ಎಂದು ಶ್ರೀಗಳು ನಗೆಯಿಂದ ಹೇಳಿದರು.

Ad Widget

Ad Widget

“ಇಂದಿನ ರಾಜಕಾರಣ ದ್ವೇಷ, ಅಸೂಯೆ, ಮತ್ತು ಮತ್ಸರದಿಂದ ಕೂಡಿದೆ. ಸತ್ಯವನ್ನು ಸ್ವೀಕರಿಸದೆ, ಅಸತ್ಯವನ್ನೇ ಒಪ್ಪಿಕೊಳ್ಳುತ್ತಾರೆ. ಇದು ಅಪಾಯಕಾರಿ. ಕೇಂದ್ರ ಮತ್ತು ರಾಜ್ಯ ರಾಜಕಾರಣದಲ್ಲಿ ತೊಂದರೆಗಳಿವೆ. ನೀಚನಾದವನು ದೊರೆಯಾದರೆ, ಹೇಡಿಯಾದವನು ಸೈನಿಕನಾದರೆ, ದಡ್ಡನಾದವನು ಗುರುವಾದರೆ ದೇಶಕ್ಕೆ ಒಳಿತಾಗುವುದಿಲ್ಲ. ಹಿಂದೆ ರಾಜ ಮಹಾರಾಜರಿಗೆ ಗುರುಗಳ ಸಾಂಗತ್ಯವಿತ್ತು. ಗುರಿಯಿರುವ ಗುರು ಇದ್ದಾಗ ಆಡಳಿತ ಸರಿಯಾಗಿತ್ತು. ಈಗ ಗುರುವೂ ಇಲ್ಲ, ಗುರಿಯೂ ಇಲ್ಲ. ಇರುವುದನ್ನು ಮಾತನಾಡಲು ಕಷ್ಟವಾಗುತ್ತದೆ,” ಎಂದರು.

ಮಹಾಭಾರತದ ಉದಾಹರಣೆ ನೀಡುತ್ತಾ, “ಅಭಿಮನ್ಯುವಿನ ಬಿಲ್ಲಿನ ದಾರವನ್ನು ಕರ್ಣ ಕತ್ತರಿಸಿದ. ಆಗ ಅವನ ಪತ್ನಿ ರಂಗಪ್ರವೇಶ ಮಾಡಿದಳು. ಮಹಾಭಾರತದಲ್ಲಿ ಕೃಷ್ಣನಿದ್ದು ಭೀಮ ಗೆದ್ದ. ಈಗ ಕೃಷ್ಣ ಇಲ್ಲದೆ ದುರ್ಯೋಧನ ಗೆಲುತ್ತಾನೆ. ಮೂಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಗೆದ್ದರು. ಅಲ್ಲಿ ಕೃಷ್ಣನಿದ್ದು ಭೀಮ ಗೆದ್ದ, ಇಲ್ಲಿ ದುರ್ಯೋಧನನಂತೆ ರಾಜ ಗೆದ್ದ,” ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಉಲ್ಲೇಖಿಸಿದರು.

ಕೆ.ಎನ್. ರಾಜಣ್ಣ ಅವರ ರಾಜೀನಾಮೆ ರಾಜಕೀಯದ ಬಗ್ಗೆ ಮಾತನಾಡುತ್ತಾ, “ಅರಸನ ಅರಮನೆಯನ್ನು ಕಾರ್ಮೋಡ ಕವಿದಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಇದು ನಡೆಯುತ್ತಿದೆ. ಅಲ್ಲಿ ಉಪ ರಾಷ್ಟ್ರಪತಿ ರಾಜೀನಾಮೆ ಕೊಟ್ಟರೆ, ಇಲ್ಲಿ ಒಬ್ಬರು ಕೊಟ್ಟಿದ್ದಾರೆ. ಸಂಕ್ರಾಂತಿಯವರೆಗೆ ಈ ಪರಿಸ್ಥಿತಿ ಇರುತ್ತದೆ. ಯುಗಾದಿ ಭವಿಷ್ಯದಂತೆ, ಮಳೆ, ಬೆಳೆ, ವ್ಯಾಪಾರಗಳ ಬಗ್ಗೆ ಹೇಳಿದ್ದೇವೆ. ಭೂ, ವಾಯು, ಜಲ, ಮತ್ತು ಪ್ರಕೃತಿ ಸುನಾಮಿಗಳು ನಡೆಯುತ್ತವೆ,” ಎಂದರು.

Ad Widget

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಶಿಕ್ಷಣ

RTE-ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ

Published

on

Ad Widget

Ad Widget

Ad Widget

Ad Widget

ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget alt="Ad Widget"/>

Ad Widget

ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್‌ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್‌ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.

ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.

Ad Widget

Ad Widget

ಆದಾಯ ಮಿತಿ ಹೆಚ್ಚಳದಿಂದ ಹೆಚ್ಚಿನ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶ ಸಿಗುವ ನಿರೀಕ್ಷೆಯಿದೆ.

Ad Widget
Continue Reading

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!