ಕಾರ್ಯಕ್ರಮಗಳು
Kodimbadi-ಕೋಡಿಂಬಾಡಿ: ಶ್ರೀ ಕೃಷ್ಣ ಜನ್ಮಾಷ್ಟಮಿ; ಆ.17ರಂದು 26 ನೇ ವರ್ಷದ ಮೊಸರು ಕುಡಿಕೆ
ಯುವಶಕ್ತಿ ಗೆಳೆಯರ ಬಳಗ(ರಿ.) ವಿನಾಯಕ ನಗರ-ಕೋಡಿಂಬಾಡಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ 26 ನೇ ವರ್ಷದ ಮೊಸರು ಕುಡಿಕೆ ಉತ್ಸವವು ಆ.17, ಆದಿತ್ಯವಾರದಂದು ಕೋಡಿಂಬಾಡಿಯ ಚತುರ್ಥಿ ರಂಗಮಂದಿರ ದಲ್ಲಿ ಜರುಗಲಿದೆ.
ಕೋಡಿಂಬಾಡಿ: ಯುವಶಕ್ತಿ ಗೆಳೆಯರ ಬಳಗ(ರಿ.) ವಿನಾಯಕ ನಗರ-ಕೋಡಿಂಬಾಡಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ 26 ನೇ ವರ್ಷದ ಮೊಸರು ಕುಡಿಕೆ ಉತ್ಸವವು ಆ.17, ಆದಿತ್ಯವಾರದಂದು ಕೋಡಿಂಬಾಡಿಯ ಚತುರ್ಥಿ ರಂಗಮಂದಿರ ದಲ್ಲಿ ಜರುಗಲಿದೆ.
ಉದ್ಘಾಟನಾ ಸಮಾರಂಭವು ಯವಶಕ್ತಿ ಗೆಳೆಯರ ಬಳಗದ ಗೌರವಾಧ್ಯಕ್ಷರಾದ ರಮೇಶ್ ನಾಯಕ್ ನಿಡ್ಯ ಇವರ ಅಧ್ಯಕ್ಷತೆಯಲ್ಲಿ ಆ.17 ರ ಬೆಳಿಗ್ಗೆ 9:30 ಕ್ಕೆ ಜರುಗಲಿದೆ.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕೋಡಿಂಬಾಡಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಕೋಡಿಂಬಾಡಿ ಶಾಲೆಯ ಮುಖ್ಯ ಗುರುಗಳಾದ ಬಾಲಕೃಷ್ಣ ಎನ್,ಕೋಡಿಂಬಾಡಿ ಶಾಲೆಯ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶೇಖರ ಪೂಜಾರಿ ಜೇಡರಪಾಲು-ನಿಡ್ಯ ಮತ್ತು ಶ್ರೀ ಸುಬ್ರಹ್ಮಣ್ಯ ಸಹಕಾರ ಸಂಘ(ನಿ.) ಮಂಗಳೂರು ಇದರ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ ಸಾಯಿ ಪ್ರಸಾದ್ ಶರ್ಮಾ ಮಠದಬೆಟ್ಟು ಭಾಗವಹಿಸಲಿದ್ದಾರೆ.
ಬೆಳಿಗ್ಗೆ 10:30 ರಿಂದ 6 ವರ್ಷದಿಂದ ಕೆಳಗಿನ ಮಕ್ಕಳಿಗೆ ಮುದ್ದು ಕೃಷ್ಣ ಸ್ಪರ್ಧೆ ,ಹಾಗೂ ವಿವಿಧ ವಯೋಮಾನದ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ.
ಸಂಜೆ ಗಂಟೆ 5:00 ಕ್ಕೆ ಕೋಡಿಂಬಾಡಿ ಹಾಲು ಉದ್ಫಾದಕರ ಸಹಕಾರ ಸಂಘದ ಅಧ್ಯಕ್ಷರಾದ ಜಗನ್ನಾಥ ಶೆಟ್ಟಿ ನಡುಮನೆ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರಿನ ಮಾನ್ಯ ಶಾಸಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ,ಕೋಡಿಂಬಾಡಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಅಶೋಕ ಪೂಜಾರಿ ಕಾಂತಳಿಕೆ,ಪುತ್ತೂರು ಕೆಮ್ಮಾಯಿಯ ವಿಘ್ನೇಶ್ ಮಡ್ಡ್ & ಸಿಮೆಂಟ್ ಪ್ರೋಡಕ್ಟ್ಸ್ ನ ಮಾಲೀಕರಾದ ಚಿದಾನಂದ ರೈ ,ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ನಿರಂಜನ್ ರೈ ಮಠಂತಬೆಟ್ಟು,ಮತ್ತು ಕೋಡಿಂಬಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಶಾಧಿಕಾರಿಗಳಾದ ಭರತ್ ಗೌಡ ನಿಡ್ಯ ಇವರುಗಳು ಭಾಗವಹಿಸಲಿದ್ಧಾರೆ.
ಈ ಎಲ್ಲಾ ಕಾರ್ಯಕ್ರಮದಲ್ಲಿ ಸಾರ್ವಜನಿಕರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭಕ್ಕೆ ಮೆರುಗು ನೀಡಬೇಕಾಗಿ ಸಂಘದ ಅಧ್ಯಕ್ಷರಾದ ದಯಾನಂದ ಪೂಜಾರಿ, ಕಾರ್ಯದರ್ಶಿ ಪಲ್ಲತ್ತಾರು, ದೀಕ್ಷಿತ್ ಎಂ.ಎಲ್, ಕ್ರೀಡಾ ಕಾರ್ಯದರ್ಶಿ ಸುರೇಶ್ ಶೆಟ್ಟಿ ಬರೆಮೇಲು ಮತ್ತು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.
ಸ್ಥಳೀಯ
Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.
ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Swachha Bharat Mission-ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿಟ್ಲದಲ್ಲಿ 3 ಟಿಪಿಡಿ ಸಾಮರ್ಥ್ಯದ ಎಂಆರ್‌ಎಫ್ ಘಟಕಕ್ಕೆ ಸಂಸದ ಕ್ಯಾ. ಚೌಟ ಚಾಲನೆ
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.

ಮಂಗಳೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ವಚ್ಛ ಭಾರತ್ ಮಿಷನ್ 2.0 ಹಾಗೂ ಕೇಂದ್ರ ಪುರಸ್ಕೃತ ವಿವಿಧ ಯೋಜನೆಯಡಿ ಸುಮಾರು 60.10 ಲಕ್ಷ ರೂಪಾಯಿಗಳ ಅನುದಾನದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಈ ಘನ ತ್ಯಾಜ್ಯ ಘಟಕದಲ್ಲಿ ಒಣತ್ಯಾಜ್ಯ ಸಂಗ್ರಹಿಸುವುದಕ್ಕೆ 3 ಟಿಪಿಡಿ ಸಾಮರ್ಥ್ಯದ ಮೆಟೀರಿಯಲ್ ರಿಕವರಿ ಫೆಸಿಲಿಟಿ ಘಟಕವನ್ನು ನಿರ್ಮಿಸಲಾಗುತ್ತದೆ. ಆ ಮೂಲಕ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಹಳ ವೈಜ್ಞಾನಿಕವಾದ ಒಣ ಕಸ ಸಂಗ್ರಹ ಹಾಗೂ ವಿಲೇವಾರಿ ವ್ಯವಸ್ಥೆ ಅಳವಡಿಕೆಯಾಗುತ್ತಿದೆ. ಇದು ಗ್ರಾಮೀಣ ಭಾಗದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್ ಮಿಷನ್ ಅನುಷ್ಠಾನ ಪ್ರಕ್ರಿಯೆಗಳಿಗೆ ಮತ್ತಷ್ಟು ಉತ್ತೇಜನ ನೀಡಲಿದೆ.

ವಿಟ್ಲದ ಎಂಆರ್‌ಎಫ್ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು , ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದರಿಂದ ಪರಿಸರ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಅಲ್ಲದೆ, ಒಣ ಕಸವನ್ನು ಈ ರೀತಿಯ ಅತ್ಯಾಧುನಿಕ ವ್ಯವಸ್ಥೆಯಡಿ ಸಂಗ್ರಹಿಸಿ ವಿಲೇವಾರಿ ಮಾಡುವುದರಿಂದ ಸ್ಥಳೀಯವಾಗಿ ಉದ್ಯೋಗಾವಕಾಶವನ್ನು ಒದಗಿಸುವ ಜತೆಗೆ ಆರ್ಥಿಕವಾಗಿ ಸಂಪನ್ಮೂಲ ಕ್ರೋಢೀಕರಣಕ್ಕೂ ಅನುಕೂಲ ಕಲ್ಪಿಸುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ದ ಕನಸು ನನಸಾಗಬೇಕಾದರೆ, ಗ್ರಾಮ ಮತ್ತು ಪಟ್ಟಣ ಮಟ್ಟದಲ್ಲೇ ಆಧುನಿಕ ಮೂಲಸೌಕರ್ಯಗಳು ಬೆಳೆಯಬೇಕು. ಈ ₹60.10 ಲಕ್ಷದ ಯೋಜನೆಯು ನಮ್ಮ ವಿಟ್ಲ ಪಟ್ಟಣ ಪಂಚಾಯತಿಯನ್ನು ಮಾದರಿ ಮತ್ತು ಸ್ವಾವಲಂಬಿ ಪಟ್ಟಣವನ್ನಾಗಿ ಪರಿವರ್ತಿಸಲು ನಾಂದಿ ಹಾಡಲಿದೆ ಎಂದರು. ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ನ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಕಾರ್‍ಯಕ್ರಮದ ಬಳಿಕ ಪ್ರಧಾನಮಂತ್ರಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಪ್ರಯುಕ್ತ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ ಮಹಾಶಕ್ತಿ ಕೇಂದ್ರದ ಬೂತ್ ಸಂಖ್ಯೆ 5ರ ಪಳಿಕೆಯಲ್ಲಿ ಸಂಸದ ಕ್ಯಾ.ಚೌಟ ಅವರು ಕಾರ್ಯಕರ್ಯರೊಂದಿಗೆ ಸಸಿ ನೆಟ್ಟು ನೀರುಣಿಸಿದರು.

ಈ ವೇಳೆ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ, ಬಿಜೆಪಿ ಮುಖಂಡರಾದ ದೇವಪ್ಪ ಪೂಜಾರಿ, ಸಂಜಯ್ ಪ್ರಭು, ಪ್ರಸನ್ನ ದರ್ಬೆ, ನಿತೀಶ್ ಕುಮಾರ್ ಶಾಂತಿವನ, ಹರಿಪ್ರಸಾದ್ ಯಾದವ್, ವಿದ್ಯಾಧರ ಜೈನ್, ಶ್ರೀಕೃಷ್ಣ ವಿಟ್ಲ, ಪ್ರೀತಂ ಪೂಂಜಾ , ಉದಯ ಆಲಂಗಾರ್, ಹರೀಶ್ ಸಿ.ಎಚ್ ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Bantare Serige-2026-ಅ.3ರಂದು ‘ಬಂಟೆರೆ ಸೇರಿಗೆ-2026’: 15 ಸಾಧಕರಿಗೆ ಪ್ರಶಸ್ತಿ; ಬಂಟರ ಸಂಘಕ್ಕೆ 5.50 ಎಕರೆ ಜಾಗದ ಹಕ್ಕುಪತ್ರ ಹಸ್ತಾಂತರ; 3,000 ಮಂದಿಯ ಸಾಮರ್ಥ್ಯದ ಮದುವೆ ಹಾಲ್ ನಿರ್ಮಾಣಕ್ಕೆ ಯೋಜನೆ
ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.

ಪುತ್ತೂರು: ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 9ಕ್ಕೆ ದುಗ್ಗಮ್ಮ ದೇರಣ್ಣ ಶೆಟ್ಟಿ ಸಭಾಭವನದಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಎರಡು ರಥಗಳಲ್ಲಿ ಸಾಧಕರು, ಶಾಸಕ ಅಶೋಕ್ ಕುಮಾರ್ ರೈ ಹಾಗೂ ಅತಿಥಿಗಳನ್ನು ರಾಜರಸ್ತೆ ಮೂಲಕ ಬಂಟರ ಭವನಕ್ಕೆ ಕರೆತರಲಾಗುವುದು. ಅರಿಯಡ್ಕ ಚಿಕ್ಕಪ್ಪ ನ್ಯಾಕ್ ಮಹಾದ್ವಾರ ಉದ್ಘಾಟಿಸಲಿದ್ದು, ದಂಬೆಕ್ಕಾನ ಸದಾಶಿವ ರೈ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಬೆಳಿಗ್ಗೆ 11ಕ್ಕೆ ಶಾಸಕ ಅಶೋಕ್ ಕುಮಾರ್ ರೈ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಜಿತ್ ಕುಮಾರ್ ರೈ ಮಾಲಾಡಿ ಶುಭಾಶಂಸನೆ ಮಾಡಲಿದ್ದು, ಶಶಿಧರ್ ಶೆಟ್ಟಿ ಬರೋಡಾ ಪ್ರಶಸ್ತಿ ಪ್ರದಾನ, ಆರ್.ಕೆ. ಶೆಟ್ಟಿ ಮುಂಬೈ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ಜಗನ್ನಾಥ ರೈ ಬೀಡು ಮುಖ್ಯ ಅತಿಥಿಯಾಗಿರುವರು.
ಪ್ರಶಸ್ತಿ ಪುರಸ್ಕೃತರು: ಸಹಕಾರರತ್ನ *ಸವಣೂರು ಸೀತಾರಾಮ ರೈ, **ಚನಿಲ ತಿಮ್ಮಪ್ಪ ಶೆಟ್ಟಿ, **ಮಿತ್ರಂಪಾಡಿ ಪುರಂದರ ರೈ, **ಡಾ. ಸಂದೀಪ್ ರೈ, ಸಹಕಾರರತ್ನ **ಅಗರಿ ನವೀನ್ ಭಂಡಾರಿ, **ಸುಬೇದಾರ್ ಮೇಜರ್ ರಮೇಶ್ ರೈ ಬೋಳೋಡಿ, **ಚಂದ್ರಹಾಸ್ ರೈ ಬನ್ನೂರು ಬಾಳಿಕೆ, **ಜಯಲಕ್ಷ್ಮಿ ಶೆಟ್ಟಿ, **ಸತೀಶ್ ರೈ ಕುತ್ಯಾಡಿ, **ಪ್ರವೀಣ್ ಭಂಡಾರಿ ಪುರ, **ಡಾ. ಸತ್ಯವತಿ ಆಳ್ವ, **ಸರೋಜ ಉಮೇಶ್ ರೈ ಮನವಳಿಕೆ, ಪಿಯುಸಿ ವಿಭಾಗದ **ಸಸ್ತಿ ಶೆಟ್ಟಿ, *ಸಮೃದ್ಧಿ ಶೆಟ್ಟಿ ಹಾಗೂ ಶರಣ್ಯ ಶೆಟ್ಟಿ ಅವರಿಗೆ ವಿವಿಧ ಕ್ಷೇತ್ರಗಳ ಪ್ರಶಸ್ತಿ ಹಾಗೂ ಪುರಸ್ಕಾರಗಳನ್ನು ಪ್ರದಾನ ಮಾಡಲಾಗುವುದು.
ಅಶೋಕ್ ರೈಗೆ ವಿಶೇಷ ಸನ್ಮಾನ
ಪುತ್ತೂರಿನ ಮರೀಲ್‌ನಲ್ಲಿ ಬಂಟರ ಸಂಘಕ್ಕೆ ಸರ್ಕಾರದಿಂದ 5.50 ಎಕರೆ ಜಾಗ ಮಂಜೂರು ಮಾಡಿಸಲು ಸಹಕರಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಹಕ್ಕುಪತ್ರವನ್ನು ಸಂಘಕ್ಕೆ ಹಸ್ತಾಂತರಿಸಲಿದ್ದು, ಜಾಗಕ್ಕೆ ಸರ್ಕಾರಕ್ಕೆ ಪಾವತಿಸಬೇಕಾದ ಮೊತ್ತವನ್ನು ಶಾಸಕರೇ ಭರಿಸಿದ್ದಾರೆ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ.
ಮಂಜೂರಾದ ಜಾಗದಲ್ಲಿ ಮೊದಲ ಹಂತವಾಗಿ ಅಡ್ಯಾರ್ ಗಾರ್ಡನ್ ಮಾದರಿಯ ಮದುವೆ ಹಾಲ್ ಮತ್ತು ಭೋಜನ ಶಾಲೆ ನಿರ್ಮಿಸಲು ಉದ್ದೇಶಿಸಲಾಗಿದೆ. ಸುಮಾರು 3,000 ಮಂದಿಗೆ ಅವಕಾಶ, ವಿಶಾಲ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು. ಮುಂದಿನ ಹಂತಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.
ಬೆಂಗಳೂರು ಬಂಟರ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ಪುತ್ತೂರು ಮೂಲದ ಸೌಮ್ಯ ಪ್ರಿಯ ಹೆಗ್ಡೆ ಅರಿಯಡ್ಕ ಹಾಗೂ ಉಮೇಶ್ ಪೂಂಜ ದೇರ್ಲ ಅವರನ್ನು ಸನ್ಮಾನಿಸಲಾಗುವುದು. ಪ್ರಧಾನ ಕಾರ್ಯದರ್ಶಿ ಅಮರನಾಥ ಶೆಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಮಾಂಸಾಹಾರಿ ಭೋಜನದ ವ್ಯವಸ್ಥೆ ಇದೆ.
ಸುದ್ದಿಗೋಷ್ಠಿಯಲ್ಲಿ ದಂಬೆಕ್ಕಾನ ಸದಾಶಿವ ರೈ, ಸಾಜ ರಾಧಾಕೃಷ್ಣ ಆಳ್ವ, ನಿತ್ಯಾನಂದ ಶೆಟ್ಟಿ ಮನವಳಿಕೆ, ಸಂತೋಷ್ ಕುಮಾರ್ ಶೆಟ್ಟಿ ಸಾಜ ಹಾಗೂ ಭಾಗ್ಗೇಶ್ ರೈ ಉಪಸ್ಥಿತರಿದ್ದರು.
-
Uncategorized7 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized6 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ
-
ದಕ್ಷಿಣ ಕನ್ನಡ38 minutes ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು


















