ಅಪರಾಧ
Pilikula-ಟೆಂಡರ್ ಸಿಗದ ಕೋಪ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಪ್ರಾಣಿಹತ್ಯೆಗೆ ಸಂಚು? ಉದ್ಯಾನವನದ ವೈದ್ಯಾಧಿಕಾರಿ ದೂರು
ನಗರದ ಹೊರವಲಯದಲ್ಲಿರುವ ಪಿಲಿಕುಳ ಜೈವಿಕ ಉದ್ಯಾನವನದ ವನ್ಯಮೃಗಗಳಿಗೆ ಸರಬರಾಜು ಮಾಡುವ ಮಾಂಸದಲ್ಲಿ ಕೊಳೆತ ಅಥವಾ ವಿಷಪೂರಿತ ಮಾಂಸ ಬೆರೆಸಿ, ಪ್ರಾಣಿಗಳನ್ನು ಕೊಲ್ಲಲು ಹುನ್ನಾರ ನಡೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಉದ್ಯಾನವನದ ವೈದ್ಯಾಧಿಕಾರಿ ಡಾ. ದಿವ್ಯಾಗಣೇಶ್ ಅವರು ಆಗಸ್ಟ್ 8ರಂದು ಪೊಲೀಸರಿಗೆ ದೂರು ನೀಡಿದ್ದು, ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.
ಮಂಗಳೂರು: ನಗರದ ಹೊರವಲಯದಲ್ಲಿರುವ ಪಿಲಿಕುಳ ಜೈವಿಕ ಉದ್ಯಾನವನದ ವನ್ಯಮೃಗಗಳಿಗೆ ಸರಬರಾಜು ಮಾಡುವ ಮಾಂಸದಲ್ಲಿ ಕೊಳೆತ ಅಥವಾ ವಿಷಪೂರಿತ ಮಾಂಸ ಬೆರೆಸಿ, ಪ್ರಾಣಿಗಳನ್ನು ಕೊಲ್ಲಲು ಹುನ್ನಾರ ನಡೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಉದ್ಯಾನವನದ ವೈದ್ಯಾಧಿಕಾರಿ ಡಾ. ದಿವ್ಯಾಗಣೇಶ್ ಅವರು ಆಗಸ್ಟ್ 8ರಂದು ಪೊಲೀಸರಿಗೆ ದೂರು ನೀಡಿದ್ದು, ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.
ಪ್ರಕರಣದ ವಿವರ:
ಹಿಂದಿನ ಮಾಂಸ ಸರಬರಾಜು ಟೆಂಡರ್ ಹೊಂದಿದ್ದ ಖಾದರ್ ಅವರ ಪರವಾಗಿ ಅಬ್ಬಾಸ್ ಮತ್ತು ಹನೀಫ್ ಎಂಬುವವರು ಈ ಹಿಂದೆ ಮಾಂಸ ವಿತರಣೆ ಮಾಡುತ್ತಿದ್ದರು. ಆಗಸ್ಟ್ 2025ರಿಂದ ಹೊಸ ಟೆಂಡರುದಾರರು ಮಾಂಸ ಸರಬರಾಜು ಮಾಡಲು ಆರಂಭಿಸಿದ್ದಾರೆ.
ಆಗಸ್ಟ್ 7ರಂದು, ಆರೋಪಿ ಹನೀಫ್ ಅವರು ಉದ್ಯಾನವನದ ನೌಕರ ಹರೀಶ್ ಅವರಿಗೆ ದೂರವಾಣಿ ಕರೆ ಮಾಡಿ, “ಹೊಸ ಟೆಂಡರುದಾರರು ಪೂರೈಸುವ ಮಾಂಸದೊಂದಿಗೆ ಅನ್ಯ ಮಾಂಸ (ಕೊಳೆತ ಅಥವಾ ವಿಷಕಾರಿ) ಬೆರೆಸಿ, ಪ್ರಾಣಿಗಳು ಅದನ್ನು ತಿರಸ್ಕರಿಸುವಂತೆ ಮಾಡಬೇಕು. ಹೀಗೆ ಮಾಡಿ ಹೊಸಬರ ಟೆಂಡರ್ ರದ್ದುಗೊಳಿಸಿ, ಉದ್ಯಾನವನದ ಪ್ರಾಣಿಗಳನ್ನು ಕೊಲ್ಲುವ ಹುನ್ನಾರ ನಡೆಸಲಾಗಿದೆ,” ಎಂದು ತಿಳಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸಂಚಿನ ಉದ್ದೇಶ:
ಪ್ರಸ್ತುತ ಟೆಂಡರ್ ಪಡೆದಿರುವವರನ್ನು ಅನರ್ಹಗೊಳಿಸುವುದು ಮತ್ತು ಉದ್ಯಾನವನದ ಪ್ರಾಣಿಗಳಿಗೆ ಹಾನಿ ಮಾಡುವ ಮೂಲಕ ವಿಧ್ವಂಸಕ ಕೃತ್ಯ ಎಸಗುವುದು ಈ ಸಂಚಿನ ಪ್ರಮುಖ ಉದ್ದೇಶವಾಗಿದೆ ಎಂದು ವೈದ್ಯಾಧಿಕಾರಿ ಡಾ. ದಿವ್ಯಾಗಣೇಶ್ ಅವರು ತಮ್ಮ ದೂರಿನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ, ಅವರು ತಕ್ಷಣವೇ ಪೊಲೀಸರಿಗೆ ದೂರು ನೀಡಲು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ತನಿಖೆಗೆ ಮನವಿ:
ಉದ್ಯಾನವನದ ನೌಕರ ಹರೀಶ್ ಮತ್ತು ಆರೋಪಿ ಹನೀಫ್ ನಡುವಿನ ಸಂಭಾಷಣೆಯ ಧ್ವನಿಮುದ್ರಿಕೆ ಲಭ್ಯವಿದ್ದು, ಇದನ್ನು ಪೊಲೀಸರಿಗೆ ಸಾಕ್ಷಿಯಾಗಿ ಒದಗಿಸಲಾಗಿದೆ. ಆರೋಪಿಗಳಾದ ಅಬ್ಬಾಸ್ ಮತ್ತು ಹನೀಫ್ ಅವರ ಮೊಬೈಲ್ ಕರೆಗಳ ವಿವರಗಳನ್ನು ಪರಿಶೀಲಿಸಿ, ಈ ಕೃತ್ಯದ ಹಿಂದಿರುವ ಪ್ರಮುಖ ಸೂತ್ರಧಾರರನ್ನು ಪತ್ತೆಹಚ್ಚುವಂತೆ ದೂರಿನಲ್ಲಿ ಕೋರಲಾಗಿದೆ. ಘಟನೆಯು ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದು, ಪೊಲೀಸರ ತನಿಖೆಯ ಬಳಿಕ ಸತ್ಯಾಂಶ ಹೊರಬರಬೇಕಿದೆ.
ಅಂತರ ರಾಜ್ಯ
Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಅಗರ್ತಲಾ: ಬರೋಬ್ಬರಿ 14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಬಾಜು ಎಂದು ಗುರುತಿಸಲಾಗಿರುವ ಆರೋಪಿಯನ್ನು ಗುರುವಾರ ಬಂಧಿಸಿ ಅಗರ್ತಲಾಗೆ ಕರೆತರಲಾಗಿದೆ. ಬಳಿಕ ಪಶ್ಚಿಮ ತ್ರಿಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಏನಿದು 14 ವರ್ಷಗಳ ಹಿಂದಿನ ಪ್ರಕರಣ?
ಅಗರ್ತಲಾದ ಭಾಟಿ ಅಭಯನಗರ ನಿವಾಸಿ ಆಶಿಶ್ ಸೋಮ್ (40) ಎಂಬ ಶಾಲಾ ಶಿಕ್ಷಕರು 2011ರ ಮೇ 28ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಮರದ ವ್ಯಾಪಾರದಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ವ್ಯವಹಾರದ ನಿಮಿತ್ತ ಕಾಂಚನ್ಪುರಕ್ಕೆ ತೆರಳಿದ ಬಳಿಕ ಮನೆಗೆ ವಾಪಸಾಗಿರಲಿಲ್ಲ.
ಶಿಕ್ಷಕರು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರನ್ನು ಅಪಹರಿಸಿರುವುದಾಗಿ ಹೇಳಿಕೊಂಡು ಕುಟುಂಬಸ್ಥರಿಗೆ ದೂರವಾಣಿ ಕರೆಗಳು ಬಂದಿದ್ದವು. ಅಪಹರಣಕಾರರು ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಹಂತಗಳಲ್ಲಿ ಸುಮಾರು ₹25 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕವೂ ಶಿಕ್ಷಕರನ್ನು ಬಿಡುಗಡೆ ಮಾಡಿರಲಿಲ್ಲ. ಹಲವು ವರ್ಷಗಳ ಕಾಲ ಅವರ ಸುಳಿವು ಕೂಡ ಪತ್ತೆಯಾಗಿರಲಿಲ್ಲ.
ಸಮಾಧಿಗಳಲ್ಲಿ ಪತ್ತೆಯಾದ ಅಸ್ಥಿಪಂಜರದಿಂದ ತನಿಖೆಗೆ ವೇಗ
ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ತನಿಖೆಯ ವೇಳೆ ಶಿಕ್ಷಕ ಆಶಿಶ್ ಸೋಮ್ ಅವರ ವ್ಯಾಪಾರ ಪಾಲುದಾರ ಎನ್ನಲಾದ ಹೊಸೈನ್ ಅಹ್ಮದ್ ಕೂಡ ಅಪಹರಣ ಪ್ರಕರಣದ ಶಂಕಿತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಬಂಧಿತ ಬಾಜುವನ್ನು ವಿಚಾರಣೆ ನಡೆಸಲಾಗುತ್ತಿದ್ದು, ಆತ ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.
ಇದೇ ವರ್ಷದ ಸೆಪ್ಟೆಂಬರ್ 16ರಂದು ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಸೋನ್ಸಿಲ್ ಪ್ರದೇಶದ ಸ್ಮಶಾನವೊಂದರ ಮೂರು ಸಮಾಧಿಗಳಿಂದ ಅಪರಿಚಿತ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಈ ಬೆಳವಣಿಗೆ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ.
ಪತ್ತೆಯಾದ ಅಸ್ಥಿಪಂಜರದ ಅವಶೇಷಗಳು ನಾಪತ್ತೆಯಾಗಿರುವ ಆಶಿಶ್ ಸೋಮ್ ಅವರದ್ದೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಅವರ ಕುಟುಂಬ ಸದಸ್ಯರ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಡಿಎನ್ಎ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಅದರ ಬಳಿಕ ಪ್ರಕರಣದ ಹಲವು ನಿಗೂಢ ಸಂಗತಿಗಳು ಬಯಲಾಗುವ ನಿರೀಕ್ಷೆಯಿದೆ.
ಸ್ಥಳೀಯ
Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು
ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.
ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.
ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
-
ದಕ್ಷಿಣ ಕನ್ನಡ23 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಮಂಗಳೂರು23 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















