Connect with us

ಅಪರಾಧ

Bangalore-ಬೆಂಗಳೂರು: ಲೇಡಿಸ್ ಪಿಜಿಯಲ್ಲಿ ಬೆಸ್ಕಾಂನ ಸಹಾಯಕ ಇಂಜಿನಿಯರ್‌ ಗೆ ಲೈಂಗಿಕ ದೌರ್ಜನ್ಯ; ಮೊಬೈಲ್‌ಗಳೊಂದಿಗೆ ಆರೋಪಿ ಪರಾರಿ

Published

on

Ad Widget

Ad Widget

Ad Widget

Ad Widget

ಬೆಂಗಳೂರಿನ ಜುಡಿಷಿಯಲ್ ಲೇಔಟ್‌ನಲ್ಲಿರುವ ಶಿವಾಸ್ ಲೇಡಿಸ್ ಪಿಜಿಯಲ್ಲಿ ದರೋಡೆಕೋರನೊಬ್ಬ ಮಹಿಳಾ ಅಧಿಕಾರಿಯ ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿ, ಲೈಂಗಿಕ ದೌರ್ಜನ್ಯವೆಸಗಿ, ಎರಡು ಮೊಬೈಲ್‌ಗಳನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಆ.11ರಂದು ನಡೆದಿದೆ.

Ad Widget

Ad Widget

Ad Widget

Ad Widget

ಬೆಂಗಳೂರಿನ ಜುಡಿಷಿಯಲ್ ಲೇಔಟ್‌ನಲ್ಲಿರುವ ಶಿವಾಸ್ ಲೇಡಿಸ್ ಪಿಜಿಯಲ್ಲಿ ದರೋಡೆಕೋರನೊಬ್ಬ ಮಹಿಳಾ ಅಧಿಕಾರಿಯ ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿ, ಲೈಂಗಿಕ ದೌರ್ಜನ್ಯವೆಸಗಿ, ಎರಡು ಮೊಬೈಲ್‌ಗಳನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಆ.11ರಂದು ನಡೆದಿದೆ. ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಘಟನೆಯ ವಿವರ:
ಬೆಸ್ಕಾಂನಲ್ಲಿ ಸಹಾಯಕ ಇಂಜಿನಿಯರ್ ಆಗಿರುವ ಮಹಿಳೆಯೊಬ್ಬರು 15 ದಿನಗಳ ಹಿಂದೆ ಜುಡಿಷಿಯಲ್ ಲೇಔಟ್‌ನ ಶಿವಾಸ್ ಲೇಡಿಸ್ ಪಿಜಿಗೆ ಸೇರಿಕೊಂಡಿದ್ದರು. ಆಗಸ್ಟ್ 11ರ ಮಧ್ಯಾಹ್ನ ಕೆಲಸ ಮುಗಿಸಿ, ತಮ್ಮ 3ನೇ ಮಹಡಿಯ ಕೊಠಡಿಗೆ ವಾಪಸ್ ಬಂದಿದ್ದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ, ಚಾಕು ಹಿಡಿದ ಖದೀಮನೊಬ್ಬ ಏಕಾಏಕಿ ಕೊಠಡಿಯ ಬಾಗಿಲನ್ನು ಬಡಿದಿದ್ದಾನೆ. ಪಿಜಿಯ ಸಿಬ್ಬಂದಿಯಿರಬಹುದು ಎಂದು ಭಾವಿಸಿ ಮಹಿಳೆ ಬಾಗಿಲು ತೆರೆದಾಗ, ಆರೋಪಿಯು ಕುತ್ತಿಗೆಗೆ ಚಾಕು ಒತ್ತಿ ಬೆದರಿಸಿದ್ದಾನೆ. ಬಳಿಕ, ಖಾಸಗಿ ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ದೌರ್ಜನ್ಯವೆಸಗಿದ್ದು, ಮೈಮೇಲಿನ ಚಿನ್ನಾಭರಣವನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾನೆ.

ಬಳಿಕ ಕೊಠಡಿಯಲ್ಲಿದ್ದ ಎರಡು ಮೊಬೈಲ್‌ಗಳನ್ನು ಕಸಿದುಕೊಂಡು ಆರೋಪಿ ಪರಾರಿಯಾಗಿದ್ದಾನೆ. ಮಧ್ಯಾಹ್ನವೇ ಲೇಡಿಸ್ ಪಿಜಿಯಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಹುಡುಕಾಟದಲ್ಲಿ ತೊಡಗಿದ್ದಾರೆ.

Click to comment

Leave a Reply

ಅಪರಾಧ

Punacha-ಪುಣಚದಲ್ಲಿ ಬೈಕ್‌ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?

Published

on

Ad Widget

Ad Widget

Ad Widget

Ad Widget

ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಬೈಕ್ ಸವಾರ ನಿಧಾನವಾಗಿ ರಸ್ತೆ ಏರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಾಯಗೊಂಡಿದ್ದು, ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಅಪಘಾತದ ದೃಶ್ಯಗಳು ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅದರ ಚಾಲಕನ ಪತ್ತೆಗೆ ಈ ದೃಶ್ಯಗಳು ಸಹಕಾರಿಯಾಗುವ ಸಾಧ್ಯತೆಯಿದೆ.

ಇನ್ನು ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನ ಬಗ್ಗೆ ಸ್ಥಳೀಯವಾಗಿ ವಿವಿಧ ಚರ್ಚೆಗಳು ನಡೆಯುತ್ತಿದ್ದು, ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬ ಬಗ್ಗೆಯೂ ಆರೋಪಗಳು ಕೇಳಿಬಂದಿವೆ. ಆದರೆ ಈ ಆರೋಪಗಳಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

Ad Widget

Ad Widget

ಅಪಘಾತದ ಕುರಿತು ಸಂಬಂಧಪಟ್ಟ ಪೊಲೀಸ್ ಇಲಾಖೆ ಪರಿಶೀಲನೆ ನಡೆಸಿ, ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಆಧರಿಸಿ ವಾಹನ ಹಾಗೂ ಚಾಲಕನನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಗಾಯಾಳುವಿನ ಆರೋಗ್ಯ ಸ್ಥಿತಿ, ಅಪಘಾತಕ್ಕೆ ನಿಖರ ಕಾರಣ ಹಾಗೂ ಕಾರು ಚಾಲಕನ ಕುರಿತು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

Ad Widget
Continue Reading

ಅಪರಾಧ

Punacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!

Published

on

Ad Widget

Ad Widget

Ad Widget

Ad Widget

ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget

Ad Widget

Ad Widget

ವಿಟ್ಲ: ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget alt="Ad Widget"/>

Ad Widget

2024ರ ಡಿಸೆಂಬರ್ 11ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಸಂಜೀವ ನಾಯ್ಕ ತನ್ನ ಪತ್ನಿಗೆ ಹೃದಯಾಘಾತವಾಗಿದೆ ಎಂದು ನೆರೆಮನೆಯವರನ್ನು ನಂಬಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಮಹಿಳೆ ಮೃತಪಟ್ಟಿರುವುದಾಗಿ ಘೋಷಿಸಿದ್ದರು.

Ad Widget

Ad Widget <> Ad Widget

ಮೃತದೇಹದ ಮೇಲೆ ಅನುಮಾನಾಸ್ಪದ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ನಿರೀಕ್ಷಕ ಹೆಚ್.ಇ. ನಾಗರಾಜ್ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎನ್‌ಎಸ್ ಕಲಂ 105 ಭಾಗ-2ರ ಅಡಿಯಲ್ಲಿ ಆರೋಪಿಗೆ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ.

ಅಲ್ಲದೆ, ಬಿಎನ್‌ಎಸ್ ಕಲಂ 240ರ ಅಡಿಯಲ್ಲಿ ಸಾಕ್ಷ್ಯನಾಶ ಹಾಗೂ ಸುಳ್ಳು ಮಾಹಿತಿ ನೀಡಿದ ಅಪರಾಧಕ್ಕೆ 6 ತಿಂಗಳ ಸಾದಾ ಜೈಲು ಶಿಕ್ಷೆಯನ್ನೂ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ ವಾದ ಮಂಡಿಸಿದ್ದರು.

Ad Widget
Continue Reading

ಸ್ಥಳೀಯ

Kadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು

Published

on

Ad Widget

Ad Widget

Ad Widget

Ad Widget

ಕಡಬ ತಾಲೂಕಿನ ಐತ್ತೂರಿನಲ್ಲಿ ಜಾಗದ ವಿಚಾರವಾಗಿ ಎರಡು ಕಡೆಯವರ ನಡುವೆ ಗಲಾಟೆ ನಡೆದಿದ್ದು, ಹಲ್ಲೆ ಹಾಗೂ ಜೀವಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಎರಡೂ ಕಡೆಯಿಂದ ಕಡಬ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಕಡಬ: ಕಡಬ ತಾಲೂಕಿನ ಐತ್ತೂರಿನಲ್ಲಿ ಜಾಗದ ವಿಚಾರವಾಗಿ ಎರಡು ಕಡೆಯವರ ನಡುವೆ ಗಲಾಟೆ ನಡೆದಿದ್ದು, ಹಲ್ಲೆ ಹಾಗೂ ಜೀವಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಎರಡೂ ಕಡೆಯಿಂದ ಕಡಬ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Ad Widget

Ad Widget alt="Ad Widget"/>

Ad Widget

ಐತ್ತೂರು ನಿವಾಸಿ ನೀಲಮ್ಮ (46) ನೀಡಿದ ದೂರಿನಂತೆ, ಅವರ ಪತಿ ಮೃತಪಟ್ಟಿದ್ದು, ಮಗಳೊಂದಿಗೆ ವಾಸವಾಗಿದ್ದಾರೆ. ನ.25ರಂದು ಮಧ್ಯಾಹ್ನ ಅವರು ಮನೆಯಲ್ಲಿದ್ದ ವೇಳೆ ದಿನಕರ ಯಾನೆ ವಿನೋದ, ಚೈತ್ರಾ ಹಾಗೂ ಇತರ ಆರು ಮಂದಿ ಮನೆಗೆ ಅಕ್ರಮ ಪ್ರವೇಶ ಮಾಡಿ, ಜಾಗದ ವಿಚಾರದಲ್ಲಿ ತಕರಾರು ತೆಗೆದು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ನೀಲಮ್ಮ ಆಸ್ಪತ್ರೆಗೆ ದಾಖಲಾಗಿದ್ದಾರೆ.

Ad Widget

Ad Widget <> Ad Widget

ಈ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 144/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 329(4), 118(1), 352, 351(2) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ಘಟನೆಗೆ ಸಂಬಂಧಿಸಿದಂತೆ ದಿನಕರ (27) ಎಂಬವರು ನೀಡಿದ ದೂರಿನ ಮೇರೆಗೆ ಮತ್ತೊಂದು ಪ್ರಕರಣ ದಾಖಲಾಗಿದೆ. ಐತ್ತೂರು ನಿವಾಸಿ ದಿನಕರ ಅವರು ತಮ್ಮ ತಾಯಿ ಜೀಜಿ ಅವರೊಂದಿಗೆ ವಾಸವಾಗಿದ್ದು, ತಂದೆಯ ಹೆಸರಿನಲ್ಲಿರುವ ಐತ್ತೂರು ಗ್ರಾಮದ ಜಮೀನಿನಿಂದ ನ.25ರಂದು ಬೆಳಗ್ಗೆ ತಾವು ಹಾಗೂ ಪತ್ನಿ ಚೈತ್ರಾ ಸ್ಕೂಟರ್‌ನಲ್ಲಿ ಅಡಿಕೆ ಸಾಗಿಸುತ್ತಿದ್ದ ವೇಳೆ, ಆಸ್ತಿ ವಿಚಾರದ ತಕರಾರಿನ ಹಿನ್ನೆಲೆಯಲ್ಲಿ ನೀಲಮ್ಮ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget

ಈ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 143/2026ರಂತೆ BNS ಕಲಂ 126(2), 118(1), 352 ಹಾಗೂ 351(3) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಎರಡೂ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಕಡಬ ಪೊಲೀಸರು ತನಿಖೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!