Connect with us

ಬೆಂಗಳೂರು

Home Minister-13ನೇ ಪಾಯಿಂಟ್ ನಲ್ಲಿ ಎರಡನೇ ದಿನವೂ ಏನಿಲ್ಲ..! ಧರ್ಮಸ್ಥಳದ ಎಸ್ಐಟಿ ತನಿಖೆ ಸ್ಥಗಿತವಾಗುತ್ತಾ..? ವಿಧಾನಸೌಧದಲ್ಲಿ ಗೃಹ ಸಚಿವರ ಭೇಟಿಯಾದ ಮೊಹಂತಿ

Published

on



Ad Widget

Ad Widget

Ad Widget

Ad Widget

ರಾಜ್ಯದಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಧರ್ಮಸ್ಥಳದಲ್ಲಿ ಅಸ್ಥಿಪಂಜರ ಹುಡುಕಾಟ ಪ್ರಕರಣದ ತನಿಖೆಯ ಪ್ರಗತಿ ಮತ್ತು ಮುಂದಿನ ಹಂತಗಳ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

Ad Widget

Ad Widget

Ad Widget

Ad Widget

ರಾಜ್ಯದಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಧರ್ಮಸ್ಥಳದಲ್ಲಿ ಅಸ್ಥಿಪಂಜರ ಹುಡುಕಾಟ ಪಾಯಿಂಟ್ 13 ರಲ್ಲಿ ಎರಡನೇ ದಿನವೂ ಏನೂ ಪತ್ತೆಯಾಗಿಲ್ಲ. ಪ್ರಕರಣದ ತನಿಖೆಯ ಪ್ರಗತಿ ಮತ್ತು ಮುಂದಿನ ಹಂತಗಳ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ವಿಧಾನಸೌಧದಲ್ಲಿ ನಡೆದ ಈ ಸಭೆಯಲ್ಲಿ ಪರಮೇಶ್ವರ್ ಅವರು ತನಿಖೆಯ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಉತ್ಖನನ ಕಾರ್ಯಾಚರಣೆಯನ್ನು ಮುಂದುವರಿಸಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ಎಸ್‌ಐಟಿ ಮುಖ್ಯಸ್ಥರ ಅಭಿಪ್ರಾಯವನ್ನು ಕೇಳಿದ್ದಾರೆ.

Ad Widget

Ad Widget <> Ad Widget

ಉತ್ಖನನದ ಮುಂದುವರಿಕೆಯ ಕುತೂಹಲ:
ಅನಾಮಿಕ ದೂರುದಾರನ ಹೇಳಿಕೆ ಆಧಾರದ ಮೇಲೆ ಆರಂಭವಾದ ‘ಆಪರೇಷನ್ ಅಸ್ಥಿಪಂಜರ’ದಲ್ಲಿ ಇದುವರೆಗೆ ಸಾಮೂಹಿಕ ಸಮಾಧಿಗಳ ಯಾವುದೇ ಕುರುಹು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಉತ್ಖನನವನ್ನು ಮುಂದುವರಿಸುವುದೇ ಅಥವಾ ನಿಲ್ಲಿಸುವುದೇ ಎಂಬ ಬಗ್ಗೆ ಸಾರ್ವಜನಿಕ ಮತ್ತು ಪೊಲೀಸ್ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಗೃಹ ಸಚಿವರು ಎಸ್‌ಐಟಿಯಿಂದ ತನಿಖೆಯ ಎಲ್ಲಾ ಅಂಶಗಳನ್ನು ಪಡೆದುಕೊಂಡಿದ್ದಾರೆ.



Ad Widget

ಸರ್ಕಾರದ ಮುಂದಿನ ನಡೆ:
ಪರಮೇಶ್ವರ್ ಅವರು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಧರ್ಮಸ್ಥಳದ ಉತ್ಖನನಕ್ಕೆ ಬ್ರೇಕ್ ಬೀಳುತ್ತದೆಯೇ ಅಥವಾ ಮುಂದುವರಿಯುತ್ತದೆಯೇ ಎಂಬುದರ ಬಗ್ಗೆ ಸರ್ಕಾರ ಅಧಿಕೃತ ಸೂಚನೆ ನೀಡುವ ಸಾಧ್ಯತೆಯಿದೆ. ತನಿಖೆಯನ್ನು ಶೀಘ್ರ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಎಸ್‌ಐಟಿಗೆ ಸೂಚನೆ ನೀಡುವ ನಿರೀಕ್ಷೆಯಿದೆ. ಈ ನಿರ್ಧಾರವು ಪ್ರಕರಣದ ಮುಂದಿನ ಹಂತವನ್ನು ನಿರ್ಧರಿಸಲಿದ್ದು, ಸತ್ಯಾನ್ವೇಷಣೆಯ ದಿಕ್ಕನ್ನು ಕಾದು ನೋಡಬೇಕಿದೆ.

Click to comment

Leave a Reply

ಅಪರಾಧ

Raid-ರಾಜ್ಯದ 45 ಐಸ್‌ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!

Published

on



Ad Widget

Ad Widget

Ad Widget

Ad Widget

ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಅ. 9: ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ನಾಲ್ಕು ಘಟಕಗಳಲ್ಲಿ ನಿಯಮ ಉಲ್ಲಂಘನೆ
ಪರಿಶೀಲನೆ ವೇಳೆ ಬೆಂಗಳೂರಿನ ಜಯನಗರ 3ನೇ ಬ್ಲಾಕ್‌ನ ಸಾವರ ಐಸ್‌ಕ್ರೀಂ ಕೆಫೆ, ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯ ಎಂ.ಎನ್. ಎಂಟರ್‌ಪ್ರೈಸಸ್, ಮೈಸೂರಿನ ಜಾನ್ ಕ್ಯಾಂಡಿ ಐಸ್‌ಕ್ರೀಂ ತಯಾರಿಕಾ ಘಟಕ ಹಾಗೂ ರಾಯಚೂರಿನ ಜೆಮಿನಿ ಐಸ್‌ಕ್ರೀಂ ತಯಾರಿಕಾ ಘಟಕಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿದೆ.

Ad Widget

Ad Widget <> Ad Widget

ಈ ಘಟಕಗಳ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಹಾಗೂ ಸಂಬಂಧಿತ ನಿಯಮಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.



Ad Widget

70 ಆಹಾರ ಮಾದರಿಗಳ ಸಂಗ್ರಹ
ವಿಶೇಷ ತಪಾಸಣೆಯ ಸಂದರ್ಭದಲ್ಲಿ ವಿವಿಧ ಘಟಕಗಳಿಂದ ಐಸ್‌ಕ್ರೀಂ, ಹಾಲು, ಹಾಲಿನ ಪುಡಿ, ಫ್ಲೇವರಿಂಗ್ ಪದಾರ್ಥಗಳು, ಸಕ್ಕರೆ, ಆಹಾರ ಸೇರ್ಪಡೆ ಪದಾರ್ಥಗಳು ಸೇರಿದಂತೆ ವಿವಿಧ ಕಚ್ಚಾವಸ್ತುಗಳ ಒಟ್ಟು 70 ಮಾದರಿಗಳನ್ನು ಸಂಗ್ರಹಿಸಲಾಗಿದೆ.

Ad Widget

Ad Widget

ಈ ಮಾದರಿಗಳನ್ನು ಗುಣಮಟ್ಟ ಮತ್ತು ಆಹಾರ ಸುರಕ್ಷತಾ ಮಾನದಂಡಗಳ ಪರಿಶೀಲನೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
ಪರಿಶೀಲನೆಯ ವೇಳೆ ಅವಧಿ ಮೀರಿದ ಐಸ್‌ಕ್ರೀಂ, ಹಾಲು, ಬಿಸ್ಕತ್ ಹಾಗೂ ಕೊಬ್ಬರಿ ಪುಡಿ ಪತ್ತೆಯಾಗಿವೆ. ಅಲ್ಲದೆ, ಕೆಲವು ಆಹಾರ ಉತ್ಪನ್ನಗಳ ಮೇಲೆ ಲೇಬಲಿಂಗ್ ನಿಯಮಗಳನ್ನು ಸರಿಯಾಗಿ ಪಾಲಿಸದಿರುವುದೂ ಅಧಿಕಾರಿಗಳ ಗಮನಕ್ಕೆ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ.

ಆಹಾರ ಪದಾರ್ಥಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಇಂತಹ ತಪಾಸಣೆಗಳನ್ನು ಮುಂದುವರಿಸಲಾಗುವುದು. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Half helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್‌ ಸಂಪೂರ್ಣ ನಿಷೇಧ

Published

on



Ad Widget

Ad Widget

Ad Widget

Ad Widget

ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು. ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳಪೆ ಗುಣಮಟ್ಟದ ಅಥವಾ ಹಾಫ್ ಹೆಲ್ಮೆಟ್‌ಗಳನ್ನು ಬಳಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ತಲೆಪೆಟ್ಟಾಗುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Ad Widget

Ad Widget <> Ad Widget

ಹಾಫ್ ಹೆಲ್ಮೆಟ್‌ಗಳನ್ನು ಬಳಸುವ ಸವಾರರ ವಿರುದ್ಧ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸುವ ಘಟಕಗಳು ಹಾಗೂ ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.



Ad Widget

ಸರ್ಕಾರದ ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಹಾಗೂ ಸಾರಿಗೆ ಅಧಿಕಾರಿಗಳು ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

Ad Widget

Ad Widget

ಸವಾರರು ತಮ್ಮ ಸುರಕ್ಷತೆಯ ದೃಷ್ಟಿಯಿಂದ ಗುಣಮಟ್ಟದ ಹೆಲ್ಮೆಟ್‌ಗಳನ್ನು ಧರಿಸಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರಿಗೆ ಇಲಾಖೆ ಮನವಿ ಮಾಡಿದೆ.

Ad Widget
Continue Reading

ಅಪರಾಧ

FIR-ಮತದಾರರ ಹೆಸರು ಅಳಿಸಲು ಫಾರಂ-7 ಅರ್ಜಿ ದುರ್ಬಳಕೆ; ಬೆಂಗಳೂರಿನಲ್ಲಿ ಐವರ ವಿರುದ್ಧ FIR

Published

on



Ad Widget

Ad Widget

Ad Widget

Ad Widget

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಯನಗರ ಕ್ಷೇತ್ರದ ವಿವಿಧ ಭಾಗಗಳಲ್ಲಿನ 5,698 ಮತದಾರರ ಹೆಸರುಗಳನ್ನು ಅಳಿಸುವಂತೆ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

Ad Widget

Ad Widget <> Ad Widget

ಪ್ರಕರಣದಲ್ಲಿ ಬಿಜೆಪಿ ಸಂಪರ್ಕ ಹೊಂದಿರುವ ಬೂತ್‌ ಮಟ್ಟದ ಏಜೆಂಟ್‌ಗಳಾದ ರಾಮಕೃಷ್ಣ ಹಾಗೂ ಯೋಗೇಶ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಅರ್ಜಿಗಳಲ್ಲಿ ಕೆಲವರ ವೈಯಕ್ತಿಕ ವಿವರಗಳನ್ನು ಅವರ ಅನುಮತಿಯಿಲ್ಲದೆ ಬಳಸಲಾಗಿದೆ ಹಾಗೂ ಕೆಲವು ಅರ್ಜಿಗಳಲ್ಲಿನ ಸಹಿಗಳ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.



Ad Widget

ಫಾರಂ-7 ಅರ್ಜಿಗಳನ್ನು ಯಾರು ಸಲ್ಲಿಸಿದ್ದಾರೆ, ಅರ್ಜಿಗಳಲ್ಲಿನ ಸಹಿಗಳು ನಕಲಿಯಾಗಿವೆಯೇ ಹಾಗೂ ಮತದಾರರ ವೈಯಕ್ತಿಕ ಮಾಹಿತಿಯನ್ನು ದುರ್ಬಳಕೆ ಮಾಡಲಾಗಿದೆಯೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಗಳು ತನಿಖೆಯ ಹಂತದಲ್ಲಿದ್ದು, ಪ್ರಕರಣದ ಸತ್ಯಾಸತ್ಯತೆ ತನಿಖೆಯ ಬಳಿಕ ಸ್ಪಷ್ಟವಾಗಬೇಕಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading