Connect with us

ಅಪರಾಧ

Bantwal-ಬಂಟ್ವಾಳ : ಲಂಚ ಸ್ವೀಕರಿಸುತ್ತಿದ್ದ ಉಪತಹಶೀಲ್ದಾರ್ ಸಹಿತ ಮೂವರು ಪೊಲೀಸ್‌ ವಶ

Published

on

Ad Widget

Ad Widget

Ad Widget

Ad Widget

ಪೌತಿ ಖಾತೆಯನ್ನು ಮಾಡಿಕೊಡಲು ₹20,000 ಲಂಚಕ್ಕೆ ಬೇಡಿಕೆ ಇಟ್ಟು, ಮಧ್ಯವರ್ತಿಯ ಮೂಲಕ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಬಂಟ್ವಾಳ ತಾಲೂಕು ಕಚೇರಿಯ ಉಪ ತಹಶೀಲ್ದಾರ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget

Ad Widget

Ad Widget

ಬಂಟ್ವಾಳ, ಆ.13: ಪೌತಿ ಖಾತೆಯನ್ನು ಮಾಡಿಕೊಡಲು ₹20,000 ಲಂಚಕ್ಕೆ ಬೇಡಿಕೆ ಇಟ್ಟು, ಮಧ್ಯವರ್ತಿಯ ಮೂಲಕ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಬಂಟ್ವಾಳ ತಾಲೂಕು ಕಚೇರಿಯ ಉಪ ತಹಶೀಲ್ದಾರ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಬಂಧಿತರನ್ನು ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಪ್ರಥಮ ದರ್ಜೆ ಸಹಾಯಕ ಸಂತೋಷ್, ಮತ್ತು ವಾಮದಪದವಿನ ಮಧ್ಯವರ್ತಿ ಗಣೇಶ್ ಎಂದು ಗುರುತಿಸಲಾಗಿದೆ.

Ad Widget

Ad Widget alt="Ad Widget"/>

Ad Widget

ಸಜೀಪಮುನ್ನೂರಿನ ಪುಷ್ಪರಾಜ್ ಅವರ ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಬಿ.ಸಿ. ರೋಡಿನ ದೇವಸ್ಥಾನವೊಂದರ ಬಳಿ ಮಧ್ಯವರ್ತಿಯ ಮೂಲಕ ಹಣದ ವ್ಯವಹಾರ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರಕರಣವನ್ನು ಬೇಧಿಸಿದ್ದಾರೆ.

Ad Widget

Ad Widget <> Ad Widget

ದೂರುದಾರರು 2021ರಲ್ಲಿ ತಮ್ಮ ತಾಯಿಯ ಪೌತಿ ಖಾತೆಗಾಗಿ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ವಾದ-ಪ್ರತಿವಾದ ನಡೆದ ಬಳಿಕ, ಜಿಲ್ಲಾಧಿಕಾರಿಯವರ ನ್ಯಾಯಾಲಯವು ಜಮೀನು ಮಂಜೂರಾತಿ ಆದೇಶ ನೀಡಿತ್ತು. ಈ ಆದೇಶದಂತೆ, ಸಜೀಪಮುನ್ನೂರು ಗ್ರಾಮದ ಸರ್ವೆ ಸಂಖ್ಯೆ 102/1ರಲ್ಲಿ ಪೌತಿ ಖಾತೆ ಮಾಡಲು ಸಹಾಯಕ ಆಯುಕ್ತರ ನ್ಯಾಯಾಲಯವು ಬಂಟ್ವಾಳ ತಹಶೀಲ್ದಾರರಿಗೆ ಸೂಚನೆ ನೀಡಿತ್ತು. ಆದರೆ, ಏಪ್ರಿಲ್ 2025ರಿಂದ ಈ ಫೈಲ್ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಬಾಕಿಯಿಟ್ಟು, ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ದೂರುದಾರರು ಈ ವಿಷಯವನ್ನು ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್ ಮತ್ತು ಕೇಸ್ ವರ್ಕರ್ ಸಂತೋಷ್ ಅವರ ಬಳಿ ವಿಚಾರಿಸಿದಾಗ, ಪೌತಿ ಖಾತೆಯ ಕೆಲಸಕ್ಕಾಗಿ ಸಂತೋಷ್ ₹1,500 ಮತ್ತು ರಾಜೇಶ್ ನಾಯ್ಕ್ ₹20,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಸಾಕ್ಷಿಗಳೊಂದಿಗೆ ದೂರುದಾರರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು, ಇದರ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದೆ.

Ad Widget

Ad Widget

ಆಗಸ್ಟ್ 13, 2025ರಂದು, ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಮಧ್ಯವರ್ತಿ ಗಣೇಶ್ ಮೂಲಕ ₹20,000 ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ರಾಜೇಶ್ ನಾಯ್ಕ್, ಸಂತೋಷ್, ಮತ್ತು ಗಣೇಶ್ ಅವರನ್ನು ವಶಕ್ಕೆ ಪಡೆದು, ತನಿಖೆಯನ್ನು ಮುಂದುವರೆಸಲಾಗಿದೆ. ಮುಂದಿನ ಹಂತದಲ್ಲಿ ಬಂಟ್ವಾಳ ತಹಶೀಲ್ದಾರರ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುವುದು.

ಈ ಕಾರ್ಯಾಚರಣೆಯನ್ನು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ (ಪ್ರಭಾರ) ಕುಮಾರಚಂದ್ರ ಅವರ ಮಾರ್ಗದರ್ಶನದಲ್ಲಿ, ಡಾ. ಗಾನ್ ಪಿ. ಕುಮಾರ್ (ಪೊಲೀಸ್ ಉಪಾಧೀಕ್ಷಕ), ಸುರೇಶ್ ಕುಮಾರ್ ಪಿ. (ಪೊಲೀಸ್ ಉಪಾಧೀಕ್ಷಕ), ಭಾರತಿ ಜಿ. (ಪೊಲೀಸ್ ನಿರೀಕ್ಷಕ), ಮತ್ತು ಚಂದ್ರಶೇಖರ್ ಕೆ.ಎನ್. (ಪೊಲೀಸ್ ನಿರೀಕ್ಷಕ) ಅವರ ನೇತೃತ್ವದಲ್ಲಿ ಮಂಗಳೂರು ಲೋಕಾಯುಕ್ತ ಸಿಬ್ಬಂದಿ ಯಶಸ್ವಿಯಾಗಿ ನಡೆಸಿದ್ದಾರೆ.

Ad Widget
Click to comment

Leave a Reply

ಸ್ಥಳೀಯ

Kadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು

Published

on

Ad Widget

Ad Widget

Ad Widget

Ad Widget

ಕಡಬ ತಾಲೂಕಿನ ಐತ್ತೂರಿನಲ್ಲಿ ಜಾಗದ ವಿಚಾರವಾಗಿ ಎರಡು ಕಡೆಯವರ ನಡುವೆ ಗಲಾಟೆ ನಡೆದಿದ್ದು, ಹಲ್ಲೆ ಹಾಗೂ ಜೀವಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಎರಡೂ ಕಡೆಯಿಂದ ಕಡಬ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಕಡಬ: ಕಡಬ ತಾಲೂಕಿನ ಐತ್ತೂರಿನಲ್ಲಿ ಜಾಗದ ವಿಚಾರವಾಗಿ ಎರಡು ಕಡೆಯವರ ನಡುವೆ ಗಲಾಟೆ ನಡೆದಿದ್ದು, ಹಲ್ಲೆ ಹಾಗೂ ಜೀವಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಎರಡೂ ಕಡೆಯಿಂದ ಕಡಬ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Ad Widget

Ad Widget alt="Ad Widget"/>

Ad Widget

ಐತ್ತೂರು ನಿವಾಸಿ ನೀಲಮ್ಮ (46) ನೀಡಿದ ದೂರಿನಂತೆ, ಅವರ ಪತಿ ಮೃತಪಟ್ಟಿದ್ದು, ಮಗಳೊಂದಿಗೆ ವಾಸವಾಗಿದ್ದಾರೆ. ನ.25ರಂದು ಮಧ್ಯಾಹ್ನ ಅವರು ಮನೆಯಲ್ಲಿದ್ದ ವೇಳೆ ದಿನಕರ ಯಾನೆ ವಿನೋದ, ಚೈತ್ರಾ ಹಾಗೂ ಇತರ ಆರು ಮಂದಿ ಮನೆಗೆ ಅಕ್ರಮ ಪ್ರವೇಶ ಮಾಡಿ, ಜಾಗದ ವಿಚಾರದಲ್ಲಿ ತಕರಾರು ತೆಗೆದು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ನೀಲಮ್ಮ ಆಸ್ಪತ್ರೆಗೆ ದಾಖಲಾಗಿದ್ದಾರೆ.

Ad Widget

Ad Widget <> Ad Widget

ಈ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 144/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 329(4), 118(1), 352, 351(2) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ಘಟನೆಗೆ ಸಂಬಂಧಿಸಿದಂತೆ ದಿನಕರ (27) ಎಂಬವರು ನೀಡಿದ ದೂರಿನ ಮೇರೆಗೆ ಮತ್ತೊಂದು ಪ್ರಕರಣ ದಾಖಲಾಗಿದೆ. ಐತ್ತೂರು ನಿವಾಸಿ ದಿನಕರ ಅವರು ತಮ್ಮ ತಾಯಿ ಜೀಜಿ ಅವರೊಂದಿಗೆ ವಾಸವಾಗಿದ್ದು, ತಂದೆಯ ಹೆಸರಿನಲ್ಲಿರುವ ಐತ್ತೂರು ಗ್ರಾಮದ ಜಮೀನಿನಿಂದ ನ.25ರಂದು ಬೆಳಗ್ಗೆ ತಾವು ಹಾಗೂ ಪತ್ನಿ ಚೈತ್ರಾ ಸ್ಕೂಟರ್‌ನಲ್ಲಿ ಅಡಿಕೆ ಸಾಗಿಸುತ್ತಿದ್ದ ವೇಳೆ, ಆಸ್ತಿ ವಿಚಾರದ ತಕರಾರಿನ ಹಿನ್ನೆಲೆಯಲ್ಲಿ ನೀಲಮ್ಮ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget

ಈ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 143/2026ರಂತೆ BNS ಕಲಂ 126(2), 118(1), 352 ಹಾಗೂ 351(3) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಎರಡೂ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಕಡಬ ಪೊಲೀಸರು ತನಿಖೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

Ad Widget
Continue Reading

ಅಪರಾಧ

Gym protein powder-ಸ್ಟೆರಾಯ್ಡ್, ಹಾನಿಕಾರಕ ರಾಸಾಯನಿಕ ಬೆರೆಸಿರುವ ಶಂಕೆ; ಜಿಮ್ ಪ್ರೊಟೀನ್ ಪೌಡರ್ ಗುಣಮಟ್ಟ ಪರೀಕ್ಷೆಗೆ ಸರ್ಕಾರ ಸಿದ್ಧತೆ

Published

on

Ad Widget

Ad Widget

Ad Widget

Ad Widget

ಜಿಮ್‌ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು, ನ.25: ಜಿಮ್‌ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಕುರಿತು ಮಾತನಾಡಿದ ಅವರು, ಜಿಮ್‌ಗೆ ಹೋಗುವವರು ಸೇವಿಸುವ ಪ್ರೊಟೀನ್ ಉತ್ಪನ್ನಗಳ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಲಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಲವು ಪ್ರೊಟೀನ್ ಉತ್ಪನ್ನಗಳು ಗುಣಮಟ್ಟದಿಂದ ಕೂಡಿದ್ದರೆ, ಇನ್ನು ಕೆಲವು ಉತ್ಪನ್ನಗಳು ಎಲ್ಲಿಂದ ಪೂರೈಕೆಯಾಗುತ್ತವೆ ಎಂಬುದೇ ಸ್ಪಷ್ಟವಾಗಿಲ್ಲ. ಹೀಗಾಗಿ ರಾಜ್ಯಾದ್ಯಂತ ಮಾರಾಟವಾಗುತ್ತಿರುವ ಪ್ರೊಟೀನ್ ಪೌಡರ್ ಮತ್ತು ಸಪ್ಲಿಮೆಂಟ್‌ಗಳನ್ನು ಪರೀಕ್ಷಿಸಲು ನಿರ್ಧರಿಸಲಾಗಿದೆ. ಮೆಡಿಕಲ್ ಸ್ಟೋರ್‌ಗಳು, ಜಿಮ್ ಕೇಂದ್ರಗಳು ಸೇರಿದಂತೆ ವಿವಿಧೆಡೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

Ad Widget

Ad Widget <> Ad Widget

ಯಾಕೆ ಈ ಪರೀಕ್ಷೆ?
ಮಾರುಕಟ್ಟೆಯಲ್ಲಿ ಅನಧಿಕೃತವಾಗಿ ಮಾರಾಟವಾಗುವ ಕೆಲವು ಪ್ರೊಟೀನ್ ಪೌಡರ್‌ಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪ್ರೊಟೀನ್ ಅಂಶವಿರುವುದು ಹಾಗೂ ಅವುಗಳಿಗೆ ಸ್ಟೆರಾಯ್ಡ್‌ಗಳು ಮತ್ತು ಹಾನಿಕಾರಕ ರಾಸಾಯನಿಕಗಳನ್ನು ಬೆರೆಸುವ ಸಾಧ್ಯತೆಗಳ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಈ ಹಿಂದೆಯೇ ಕಳವಳ ವ್ಯಕ್ತಪಡಿಸಿತ್ತು.

ಅಲ್ಲದೆ, ಅಗತ್ಯ ಪರವಾನಗಿ ಇಲ್ಲದೆ ಜಿಮ್‌ಗಳಲ್ಲಿ ನೇರವಾಗಿ ಸಪ್ಲಿಮೆಂಟ್‌ಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವಾಗಿದೆ. ಹಲವು ಪ್ರೊಟೀನ್ ಸಪ್ಲಿಮೆಂಟ್‌ಗಳ ಪ್ಯಾಕೆಟ್‌ಗಳ ಮೇಲೆ ನಮೂದಿಸಿರುವ ಪ್ರೊಟೀನ್ ಪ್ರಮಾಣಕ್ಕೂ, ಉತ್ಪನ್ನದಲ್ಲಿರುವ ನೈಜ ಪ್ರಮಾಣಕ್ಕೂ ವ್ಯತ್ಯಾಸವಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಉತ್ಪನ್ನಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಪರಿಶೀಲಿಸಲು ಸರ್ಕಾರ ಮುಂದಾಗಿದೆ.

Continue Reading

ಅಪರಾಧ

Mangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್‌ಐ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget alt="Ad Widget"/>

Ad Widget

ಬಂಧಿತ ಇಬ್ಬರು ಸಿಬ್ಬಂದಿಯಲ್ಲಿ ಒಬ್ಬರು ಮಂಗಳೂರು ಮೂಲದವರಾಗಿದ್ದು, ಮತ್ತೊಬ್ಬರು ಕಾಸರಗೋಡು ಮೂಲದವರು ಎಂದು ತಿಳಿದುಬಂದಿದೆ. ದುಬೈ ಹಾಗೂ ಕೇರಳ ಮೂಲದ ಚಿನ್ನ ಕಳ್ಳಸಾಗಣೆ ಜಾಲದೊಂದಿಗೆ ಸಂಪರ್ಕ ಹೊಂದಿ ಅಕ್ರಮ ಚಿನ್ನ ಸಾಗಾಟಕ್ಕೆ ನೆರವಾಗುತ್ತಿದ್ದ ಆರೋಪ ಇವರ ಮೇಲಿದೆ.

Ad Widget

Ad Widget <> Ad Widget

ವ್ಯವಸ್ಥಿತವಾಗಿ ನಡೆಯುತ್ತಿದ್ದ ಕಳ್ಳಸಾಗಣೆ
ದುಬೈ ಸೇರಿದಂತೆ ವಿದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರು, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಲ್ಲಿ ಚಿನ್ನವನ್ನು ಅಡಗಿಸಿಟ್ಟು ತೆರಳುತ್ತಿದ್ದರು ಎನ್ನಲಾಗಿದೆ. ಬಳಿಕ ಈ ಮಾಹಿತಿಯನ್ನು ಜಾಲದ ಸಂಪರ್ಕದಲ್ಲಿದ್ದ ವಿಮಾನ ನಿಲ್ದಾಣದ ಸಿಬ್ಬಂದಿಗೆ ತಲುಪಿಸಲಾಗುತ್ತಿತ್ತು. ವಿಮಾನಗಳ ನಿರ್ವಹಣಾ ಕಾರ್ಯ ಮುಗಿದ ಬಳಿಕ ಸಿಬ್ಬಂದಿ ಶೌಚಾಲಯಕ್ಕೆ ತೆರಳಿ, ಅಲ್ಲಿ ಅಡಗಿಸಿಟ್ಟ ಚಿನ್ನವನ್ನು ಹೊರತೆಗೆದು ತಮ್ಮ ಸಂಪರ್ಕದಲ್ಲಿದ್ದ ಕಳ್ಳಸಾಗಣೆದಾರರಿಗೆ ಹಸ್ತಾಂತರಿಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಖಚಿತ ಮಾಹಿತಿಯ ಮೇರೆಗೆ ಡಿಆರ್‌ಐ ಅಧಿಕಾರಿಗಳು ಆರೋಪಿಗಳ ಮೇಲೆ ನಿಗಾ ಇರಿಸಿದ್ದರು. ಅದರಂತೆ ನ. 23ರಂದು ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಿಂದ ಚಿನ್ನದ ಪೇಸ್ಟ್ ರೂಪದ ಎರಡು ಪ್ಯಾಕ್‌ಗಳನ್ನು ಹೊರತೆಗೆಯುತ್ತಿದ್ದ ಮಂಗಳೂರು ಮೂಲದ ಸಿಬ್ಬಂದಿಯನ್ನು ಅಧಿಕಾರಿಗಳು ಹಿಡಿದಿದ್ದಾರೆ.

Ad Widget

Ad Widget

ಈ ಚಿನ್ನವನ್ನು ಆತ ಕಾಸರಗೋಡು ಮೂಲದ ಮತ್ತೊಬ್ಬ ಸಿಬ್ಬಂದಿಗೆ ಹಸ್ತಾಂತರಿಸಬೇಕಿತ್ತು. ಬಳಿಕ ಆ ಸಿಬ್ಬಂದಿ ವಿಮಾನ ನಿಲ್ದಾಣದಿಂದ ಸುಮಾರು ಎರಡು ಕಿ.ಮೀ. ದೂರದಲ್ಲಿರುವ ಸ್ಥಳಕ್ಕೆ ಚಿನ್ನವನ್ನು ಕೊಂಡೊಯ್ದು ಜಾಲದ ಮೂರನೇ ವ್ಯಕ್ತಿಗೆ ತಲುಪಿಸಲು ಯೋಜಿಸಿದ್ದ ಎನ್ನಲಾಗಿದೆ. ಅಧಿಕಾರಿಗಳು ತ್ವರಿತ ಕಾರ್ಯಾಚರಣೆ ನಡೆಸಿ ಉಳಿದ ಇಬ್ಬರನ್ನೂ ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ, 73 ಲಕ್ಷ ರೂ. ನಗದು, ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಡಿ. 7ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

ಇದಕ್ಕೂ ಮೊದಲು 1.77 ಕೋಟಿ ರೂ. ಮೌಲ್ಯದ ಚಿನ್ನ ವಶ
ಇದಕ್ಕೂ ಮುನ್ನ ನ. 14ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಕಾಸರಗೋಡು ಮೂಲದ ಇಬ್ಬರು ಪ್ರಯಾಣಿಕರು ದೇಹದೊಳಗೆ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದ ವೇಳೆ ಡಿಆರ್‌ಐ ಅಧಿಕಾರಿಗಳ ವಶಕ್ಕೆ ಸಿಕ್ಕಿದ್ದರು. ಅವರಿಂದ ಸುಮಾರು 1.77 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆಯ ಹಿತದೃಷ್ಟಿಯಿಂದ ಬಂಧಿತ ಆರೋಪಿಗಳ ಹೆಸರುಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!