ಶಿಕ್ಷಣ
Ambika-ಕೊಡಿಪ್ಪಾಡಿಯ ಗದ್ದೆಯಲ್ಲಿ ಅಂಬಿಕಾ ವಿದ್ಯಾರ್ಥಿಗಳ ಆಟೋಟ ಕಾರ್ಯಕ್ರಮ; ಕೆಸರು ಗದ್ದೆಯಲ್ಲಿನ ಆಟ ಆರೋಗ್ಯಕ್ಕೆ ಪೂರಕ : ಮಾಲತಿ ಡಿ.
ಕಾರ್ಜಾಲು ಕೊಡಿಪ್ಪಾಡಿಯ ಅಜಿತ್ ಕುಮಾರ್ ಜೈನ್ ಅವರ ಗದ್ದೆಯಲ್ಲಿ ಸಂಸ್ಥೆಯ ವತಿಯಿಂದ ಏರ್ಪಡಿಸಲಾದ ಕೆಸರು ಗದ್ದೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಪ್ರಾಚಾರ್ಯೆ ಮಾಲತಿ ಡಿ ಮಾತನಾಡಿದರು.
ಪುತ್ತೂರು : ಕೆಸರು ಗದ್ದೆಯಲ್ಲಿ ಆಡುವುದು ಒಳ್ಳೆಯ ವಿಚಾರ. ಇದರ ಮೂಲಕ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಅಷ್ಟೇ ಅಲ್ಲ ಶೀತ, ನೆಗಡಿ ಇಂತಹ ಸೋಂಕುಗಳು ಯಾವುದೇ ಕಾರಣಕ್ಕೂ ಬಾಧಿಸುವುದಿಲ್ಲ ಎಂದು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಪ್ರಾಚಾರ್ಯೆ ಮಾಲತಿ ಡಿ. ಹೇಳಿದರು.
ಅವರು ಕಾರ್ಜಾಲು ಕೊಡಿಪ್ಪಾಡಿಯ ಅಜಿತ್ ಕುಮಾರ್ ಜೈನ್ ಅವರ ಗದ್ದೆಯಲ್ಲಿ ಸಂಸ್ಥೆಯ ವತಿಯಿಂದ ಏರ್ಪಡಿಸಲಾದ ಕೆಸರು ಗದ್ದೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸೋಮವಾರ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಕೆಸರುಗದ್ದೆಯಲ್ಲಿ ಹಗ್ಗ ಜಗ್ಗಾಟ, ವಾಲಿಬಾಲ್, ಟ್ರೆಷರ್ ಹಂಟ್, ಎರಡು ಕಾಲಿನ ಹಗ್ಗದ ಓಟ, ಮೂರು ಕಾಲಿನ ಹಗ್ಗದ ಓಟ ಹೀಗೆ ವಿವಿಧ ರೀತಿಯ ಆಟಗಳನ್ನು ಹಮ್ಮಿಕೊಳ್ಳಲಾಯಿತು. ಅಜಿತ್ ಕುಮಾರ್ ಜೈನ್, ಶಾಲಾ ಉಪ ಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು.
ಎಂಟನೇ ತರಗತಿಯ ವಿದ್ಯಾರ್ಥಿಗಳಾದ ಸನ್ಮಯ್ ಹಾಗೂ ಶೌರಿ ತುಳು ಪ್ರಾರ್ಥನೆಯನ್ನು ಮಾಡಿದರು. ಕಾರ್ಯಕ್ರಮವನ್ನು ಶಿಕ್ಷಕಿಯರಾದ ಗೌರಿ ಸ್ವಾಗತಿಸಿ, ದೀಪ್ತಿ ವಂದಿಸಿದರು. ವಿದ್ಯಾರ್ಥಿನಿ ವೈಷ್ಣವಿ ಕಾರ್ಯಕ್ರಮವನ್ನು ನಿರ್ವಹಿಸಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ಮಂಗಳೂರು17 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಬಿಗ್ ನ್ಯೂಸ್15 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ15 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಅಪರಾಧ20 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ22 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಮಂಗಳೂರು15 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಬಿಗ್ ನ್ಯೂಸ್22 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ17 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!




















