Connect with us

ಬಿಗ್ ನ್ಯೂಸ್

Dharmasthala case-ಧರ್ಮಸ್ಥಳ ಕೇಸ್ – ಇಂದು ಶವ ಶೋಧ ಅಂತ್ಯ ? ಇನ್ನು ಮುಂದೆ ʼ ಷಡ್ಯಂತ್ರದʼ ತನಿಖೆ ?

Published

on



Ad Widget

Ad Widget

Ad Widget

Ad Widget

19 ದಿನಗಳಿಂದ ನಡೆಯುತ್ತಿರುವ ಎಸ್ಐಟಿ ಶೋಧ ಕಾರ್ಯಾಚರಣೆ ಇದೀಗ ನಿರ್ಣಾಯಕ ಘಟ್ಟ ತಲುಪಿದೆ. ಆರಂಭಿಕ ಆರೋಪದ ತೀವ್ರತೆಗೂ, ಈವರೆಗಿನ ತನಿಖೆಯಲ್ಲಿ ಸಿಕ್ಕ ಸಾಕ್ಷ್ಯಾಧಾರಗಳ ಕೊರತೆಗೂ ತಾಳೆಯಾಗುತ್ತಿಲ್ಲವಾದ್ದರಿಂದ ಪ್ರಕರಣವು ನಿಗೂಢತೆಯಿಂದ ಕೂಡಿದೆ. ಶನಿವಾರದ ಅಂತಿಮ ಹಂತದ ಶೋಧ ಮತ್ತು ಸೋಮವಾರ ಸರ್ಕಾರ ನೀಡಲಿರುವ ಉತ್ತರವು ಈ ಗೊಂದಲಗಳಿಗೆ ತೆರೆ ಎಳೆಯುವುದೇ ಎಂಬ ಕುತೂಹಲ ಸಾರ್ವಜನಿಕ ವಲಯದಲ್ಲಿ ಮನೆಮಾಡಿದೆ.

Ad Widget

Ad Widget

Ad Widget

Ad Widget

ಧರ್ಮಸ್ಥಳ: ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಸ್ಫೋಟಕ ಆರೋಪದ ಮೇಲೆ ಕಳೆದ 19 ದಿನಗಳಿಂದ ನಡೆಯುತ್ತಿರುವ ಎಸ್ಐಟಿ ಶೋಧ ಕಾರ್ಯಾಚರಣೆ ಇದೀಗ ನಿರ್ಣಾಯಕ ಘಟ್ಟ ತಲುಪಿದೆ. ಆರಂಭಿಕ ಆರೋಪದ ತೀವ್ರತೆಗೂ, ಈವರೆಗಿನ ತನಿಖೆಯಲ್ಲಿ ಸಿಕ್ಕ ಸಾಕ್ಷ್ಯಾಧಾರಗಳ ಕೊರತೆಗೂ ತಾಳೆಯಾಗುತ್ತಿಲ್ಲವಾದ್ದರಿಂದ ಪ್ರಕರಣವು ನಿಗೂಢತೆಯಿಂದ ಕೂಡಿದೆ. ಶನಿವಾರದ ಅಂತಿಮ ಹಂತದ ಶೋಧ ಮತ್ತು ಸೋಮವಾರ ಸರ್ಕಾರ ನೀಡಲಿರುವ ಉತ್ತರವು ಈ ಗೊಂದಲಗಳಿಗೆ ತೆರೆ ಎಳೆಯುವುದೇ ಎಂಬ ಕುತೂಹಲ ಸಾರ್ವಜನಿಕ ವಲಯದಲ್ಲಿ ಮನೆಮಾಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಸಾಕ್ಷ್ಯಗಳ ಕೊರತೆ, ಅನುಮಾನಗಳ ಸರಮಾಲೆ
ಅನಾಮಿಕ ದೂರುದಾರ ನೀಡಿದ ಸುಳಿವಿನ ಮೇರೆಗೆ ಎಸ್ಐಟಿ ತಂಡವು ಜುಲೈ 28ರಿಂದ ಈವರೆಗೆ ಒಟ್ಟು 17 ಸ್ಥಳಗಳಲ್ಲಿ ಶೋಧ ನಡೆಸಿದೆ. ಆದರೆ, ಕೇವಲ ಎರಡು ಕಡೆಗಳಲ್ಲಿ (ಸ್ಥಳ ಸಂಖ್ಯೆ 6 ಮತ್ತು ಬಂಗ್ಲೆಗುಡ್ಡೆ) ಮಾತ್ರವೇ ಮಾನವ ಕಳೇಬರದ ಅವಶೇಷಗಳು ಪತ್ತೆಯಾಗಿವೆ ಎಂದುಎಸ್‌ ಐಟಿ ಮೂಲಗಳನ್ನು ಉಲ್ಲೇಖಿಸಿ ಮಾದ್ಯಮಗಳು ವರದಿ ಮಾಡಿವೆ. . ಉಳಿದ ಸ್ಥಳಗಳಲ್ಲಿ ಯಾವುದೇ ಕುರುಹು ಲಭ್ಯವಾಗದಿರುವುದು ದೂರುದಾರನ ಆರೋಪದ ಸತ್ಯಾಸತ್ಯತೆಯನ್ನೇ ಪ್ರಶ್ನಿಸುವಂತಾಗಿದೆ. ಇಷ್ಟು ದೊಡ್ಡ ಆರೋಪಕ್ಕೆ ಪೂರಕವಾದ ಸಾಕ್ಷ್ಯಗಳು ಸಿಗದಿರುವುದು ತನಿಖೆಯ ದಿಕ್ಕನ್ನೇ ಬದಲಿಸುವ ಸಾಧ್ಯತೆಯಿದೆ.

Ad Widget

Ad Widget <> Ad Widget

‘ಷಡ್ಯಂತ್ರ’ದ ವಾಸನೆ, ರಾಜಕೀಯ ತಿರುವು
ಈ ಪ್ರಕರಣವು ಕೇವಲ ಅಪರಾಧ ತನಿಖೆಯಾಗಿ ಉಳಿದಿಲ್ಲ. ದೂರುದಾರನು ತನಿಖೆಗೆ ಒದಗಿಸಿದ ತಲೆಬುರುಡೆಗೂ ಅವನಿಗೂ ಸಂಬಂಧವಿಲ್ಲ, ಅದನ್ನು ಬೇರೆಯವರೇ ಪೂರೈಸಿದ್ದಾರೆ ಎಂಬ ವದಂತಿಗಳು ದಟ್ಟವಾಗಿ ಹಬ್ಬಿವೆ. ಈ ಊಹಾಪೋಹಗಳಿಗೆ ಮತ್ತಷ್ಟು ಬಲ ತುಂಬಿರುವುದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ಇದನ್ನೊಂದು ‘ಷಡ್ಯಂತ್ರ’ ಎಂದು ಕರೆದಿರುವುದು. ಸರ್ಕಾರದ ಉನ್ನತ ಮಟ್ಟದಲ್ಲಿಯೇ ಇಂತಹ ಹೇಳಿಕೆ ಬಂದಿರುವುದರಿಂದ, ತನಿಖೆಯು ಕೇವಲ ಶವಗಳ ಶೋಧಕ್ಕೆ ಸೀಮಿತವಾಗದೆ, ದೂರಿನ ಹಿಂದಿನ ಉದ್ದೇಶ ಮತ್ತು ಕಾಣದ ಕೈಗಳ ಪತ್ತೆಯತ್ತ ಸಾಗುವ ಲಕ್ಷಣಗಳು ಗೋಚರಿಸುತ್ತಿವೆ.



Ad Widget

ಗೌಪ್ಯತೆಯಿಂದ ಗೊಂದಲ, ಆಡಳಿತಕ್ಕೆ ಅಡಚಣೆ
ತನಿಖೆಯ ಹಿತದೃಷ್ಟಿಯಿಂದ ಎಸ್ಐಟಿ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಆದರೆ, ಈ ಗೌಪ್ಯತೆಯೇ ಸಮಾಜದಲ್ಲಿ ಅನಗತ್ಯ ಚರ್ಚೆ ಮತ್ತು ಊಹಾಪೋಹಗಳಿಗೆ ಗ್ರಾಸವಾಗಿದೆ. ಆರಂಭದಲ್ಲಿ ಶೋಧ ಸ್ಥಳಕ್ಕೆ ಲಗ್ಗೆ ಇಡುತ್ತಿದ್ದ ಜನರ ಸಂಖ್ಯೆಯೂ ಈಗ ಕಡಿಮೆಯಾಗಿದೆ. ಮತ್ತೊಂದೆಡೆ, ಹೆಚ್ಚಿನ ಅಧಿಕಾರಿಗಳು ಶೋಧ ಕಾರ್ಯದಲ್ಲಿ ನಿರತರಾಗಿರುವುದರಿಂದ ಸಾರ್ವಜನಿಕರ ಕಚೇರಿ ಕೆಲಸಗಳು ವಿಳಂಬವಾಗುತ್ತಿವೆ ಎಂಬ ದೂರುಗಳೂ ಕೇಳಿಬರುತ್ತಿವೆ.

Ad Widget

Ad Widget

ಎಲ್ಲರ ಚಿತ್ತ ಸೋಮವಾರದತ್ತ
ಶನಿವಾರ ನಡೆಯಲಿರುವ ಕಾರ್ಯಾಚರಣೆಯು ಈ ಹಂತದ ಅಂತಿಮ ಶೋಧವಾಗಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಎಲ್ಲರ ಕಣ್ಣು ನೆಟ್ಟಿರುವುದು ಸೋಮವಾರದ ಮೇಲೆ. ಅಂದು ಗೃಹ ಸಚಿವರು ಪ್ರಕರಣದ ಕುರಿತು ಅಧಿಕೃತ ಉತ್ತರ ನೀಡಲಿದ್ದು, ಇದುವರೆಗಿನ ತನಿಖೆಯ ಸಾರಾಂಶ ಮತ್ತು ಸರ್ಕಾರದ ಮುಂದಿನ ನಡೆಯನ್ನು ಸ್ಪಷ್ಟಪಡಿಸುವ ನಿರೀಕ್ಷೆಯಿದೆ.

ಒಟ್ಟಿನಲ್ಲಿ, ಶವಗಳ ಹುಡುಕಾಟದಿಂದ ಆರಂಭವಾದ ಪ್ರಕರಣವು ಇದೀಗ ಆರೋಪದ ಹಿಂದಿನ ಕಾಣದ ಕೈಗಳ ಹುಡುಕಾಟದತ್ತ ಸಾಗುತ್ತಿದ್ದು, ಸರ್ಕಾರದ ಅಧಿಕೃತ ನಿಲುವೇ ಈ ನಿಗೂಢತೆಗೆ ತೆರೆ ಎಳೆಯಬೇಕಿದೆ.

Ad Widget
Click to comment

Leave a Reply

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಅಂತರ ರಾಜ್ಯ

Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ

Published

on



Ad Widget

Ad Widget

Ad Widget

Ad Widget

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.

Ad Widget

Ad Widget <> Ad Widget

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.



Ad Widget

ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.

Ad Widget

Ad Widget

ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.

ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.

ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.

ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading