Connect with us

ಶಿಕ್ಷಣ

Ambika-ಪಠ್ಯವಷ್ಟೇ ಅಲ್ಲ, ಇಲ್ಲಿದೆ ಜೀವನಪಾಠ – ಸ್ವಾವಲಂಬಿ ಬದುಕಿಗೆ ತಳಹದಿಯಾದ ಶಿಕ್ಷಣ ಸಂಸ್ಥೆ ಪುತ್ತೂರಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ಲೈಫ್ ಸ್ಕಿಲ್ ತರಬೇತಿ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆ ಪಠ್ಯದೊಂದಿಗೆ ವಿನೂತನ ಯೋಜನೆಯನ್ನು ಹಮ್ಮಿಕೊಂಡಿದೆ. ಈ ಯೋಜನೆಯನ್ವಯ ಮಕ್ಕಳು ಯಾರನ್ನೂ ಆಶ್ರಯಿಸದೆ ತಮ್ಮ ದಿನನಿತ್ಯದ ಬದುಕನ್ನು ಸಾಗಿಸಲು ಅಗತ್ಯವಿರುವ ಕಲೆಗಳನ್ನು ಕರಗತ ಮಾಡಿಸಲಾಗುತ್ತದೆ.

Ad Widget

Ad Widget

Ad Widget

Ad Widget

ಪುತ್ತೂರು: ಶಿಕ್ಷಣ ಸಂಸ್ಥೆಗಳಲ್ಲಿ ಪಾಠ ಪ್ರವಚನಗಳು ನಡೆಯುವುದು ಸರ್ವೇಸಾಮಾನ್ಯ. ಆದರೆ ಪಠ್ಯಶಿಕ್ಷಣದ ಜತೆಜತೆಗೆ ಜೀವನಪಾಠವನ್ನು ತಿಳಿದುಕೊಳ್ಳದಿದ್ದರೆ ಬದುಕು ಸಾಗಿಸುವುದು ಕಷ್ಟ. ಹಾಗಾಗಿ ಮಕ್ಕಳಿಗಿಂದು ಜೀವನಕಲೆಯನ್ನು ಕಲಿಸಿಕೊಡುವ ಅವಶ್ಯಕತೆ ಇದೆಯೆಂದು ಗುರುತಿಸಿರುವ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆ ಪಠ್ಯದೊಂದಿಗೆ ವಿನೂತನ ಯೋಜನೆಯನ್ನು ಹಮ್ಮಿಕೊಂಡಿದೆ.

Ad Widget

Ad Widget alt="Ad Widget"/>

Ad Widget

ಈ ಯೋಜನೆಯನ್ವಯ ಮಕ್ಕಳು ಯಾರನ್ನೂ ಆಶ್ರಯಿಸದೆ ತಮ್ಮ ದಿನನಿತ್ಯದ ಬದುಕನ್ನು ಸಾಗಿಸಲು ಅಗತ್ಯವಿರುವ ಕಲೆಗಳನ್ನು ಕರಗತ ಮಾಡಿಸಲಾಗುತ್ತದೆ. ಒಂದನೆಯ ಇಯತ್ತೆಯಿಂದಲೇ ಇಂತಹ ತರಬೇತಿ ತರಗತಿಗಳು ಆರಂಭಗೊಂಡು ವಿದ್ಯಾರ್ಥಿಯೊಬ್ಬ ಹತ್ತನೆಯ ತರಗತಿಗೆ ತಲಪುವ ವೇಳೆಗೆ ಸ್ವಂತ ಉದ್ಯಮ ನಡೆಸುವವರೆಗಿನ ಜ್ಞಾನವನ್ನೂ ಈ ಲೈಫ್ ಸ್ಕಿಲ್ ತರಗತಿಗಳಲ್ಲಿ ಒದಗಿಸಿಕೊಡಲಾಗುತ್ತದೆ.

Ad Widget

Ad Widget <> Ad Widget

ಸಣ್ಣ ಸಣ್ಣ ತರಗತಿಗಳಲ್ಲಿ ಮಕ್ಕಳಿಗೆ ಕೈ ಕಾಲು ತೊಳೆಯುವುದು, ಹಲ್ಲುಜ್ಜುವುದು, ಬೀಗ ಹಾಕುವುದು ಹಾಗೂ ತೆಗೆಯುವುದು, ನೀರಿನ ಬಾಟಲ್‌ಗೆ ನೀರು ತುಂಬುವುದು, ಕಸ ಗುಡಿಸುವುದು, ಹೊದ್ದು ಮಲಗಿ ಎದ್ದ ನಂತರ ಹೊದಿಕೆಯನ್ನು ಮಡಚಿಡುವ ವಿಧಾನ, ಮನೆಗೆ ಬಂದವರನ್ನು ಸ್ವಾಗತಿಸುವ ಕ್ರಮ, ದೀಪದ ಬತ್ತಿ ತಯಾರಿ, ಗಾಯಕ್ಕೆ ತಕ್ಷಣದ ಮದ್ದು ಹಾಗೂ ಬ್ಯಾಂಡೇಜ್, ಸಂವಹನ ಕಲೆ, ಹಣ ಎಣಿಸುವ ರೀತಿಯೇ ಮೊದಲಾದ ಸಂಗತಿಗಳನ್ನು ತಿಳಿಸಿಕೊಡಲಾಗುತ್ತದೆ.

ಮಕ್ಕಳು ದೊಡ್ಡ ತರಗತಿಗಳಿಗೆ ಅಡಿಯಿಡುತ್ತಿದ್ದಂತೆ ಬಟ್ಟೆಗೆ ಇಸ್ತಿç ಹಾಕುವುದು, ಹರಿದ ಬಟ್ಟೆಯನ್ನು ಹೊಲಿಯುವುದು, ಜಡೆ ಹೆಣೆಯುವುದು, ತೋರಣ ಕಟ್ಟುವುದು, ತೆಂಗಿನಕಾಯಿ ಸುಲಿಯುವುದು, ವಾಹನದ ಚಕ್ರದಿಂದ ಗಾಳಿ ಹೊರಹೋಗಿದ್ದರೆ ಅದಕ್ಕೆ ಪಂಕ್ಷರ್ ಹಾಕುವುದು; ಗಾಲಿಯನ್ನೇ ಬದಲಾಯಿಸುವುದು, ಬ್ಯಾಂಕ್ ವ್ಯವಹಾರ, ಹಾರೆ – ಪಿಕ್ಕಾಸುಗಳಲ್ಲಿ ಕಾರ್ಯನಿರ್ವಹಣೆಯೇ ಮೊದಲಾದ ಹತ್ತು ಹಲವು ಜೀವನಾವಶ್ಯಕ ವಿಚಾರಗಳನ್ನು ಕಲಿಸಿಕೊಡಲಾಗುತ್ತದೆ. ಜತೆಗೆ ಕಾನೂನು ಜ್ಞಾನ ಹಾಗೂ ನ್ಯಾಯಾಲಯ ಭೇಟಿ, ಪೋಲೀಸ್ ಸ್ಟೇಷನ್ ಭೇಟಿ, ಕೈಗಾರಿಕಾ ಭೇಟಿಯನ್ನೂ ಆಯೋಜಿಸಿ ಅಲ್ಲಿನ ಕಾರ್ಯವಿಧಾನಗಳನ್ನು ತಿಳಿಸಿಕೊಡಲಾಗುತ್ತದೆ.

Ad Widget

Ad Widget

ಮಕ್ಕಳು ಪರಾವಲಂಬಿಯಾಗದೆ ತಮ್ಮ ಕೆಲಸಗಳನ್ನು ತಾವೇ ಮಾಡುವಂತಾಗಬೇಕು. ಸಣ್ಣ ತರಗತಿಯಿಂದಲೇ ಒಂದೊಂದನ್ನೇ ಕಲಿಸುತ್ತಾ ಬರುತ್ತೇವೆ. ಪ್ರತಿ ತರಗತಿಗೆ ಲೈಫ್ ಸ್ಕಿಲ್ ತರಬೇತಿಗೆಂದೇ ವಾರಕ್ಕೆ ಎರಡು ಅವಧಿಯನ್ನು ನಿಗದಿಪಡಿಸಿದ್ದೇವೆ. ಕೆಲವೊಂದು ಸಂದರ್ಭದಲ್ಲಿ ಅರ್ಧ ದಿನದಷ್ಟು ಹೊತ್ತನ್ನು ಇದಕ್ಕಾಗಿ ಮೀಸಲಿಡುತ್ತೇವೆ. ಹೆತ್ತವರಿಂದ ಹಾಗೂ ಮಕ್ಕಳಿಂದ ಸಾಕಷ್ಟು ಮೆಚ್ಚುಗೆ ಬರುತ್ತಿದೆ ಎನ್ನುವುದು ಸಂಸ್ಥೆಯ ಪ್ರಾಚಾರ್ಯೆ ಮಾಲತಿ ಡಿ. ಅವರ ಮಾತು.

ಹೀಗೆ ಜೀವನ ಕಲೆಗಳ ಬಗೆಗೆ ಮಕ್ಕಳಿಗೆ ಕಲಿಸಿಕೊಡುವ ಪುತ್ತೂರಿನ ಮೊದಲ ಶಿಕ್ಷಣ ಸಂಸ್ಥೆ ಎಂಬ ಹೆಗ್ಗಳಿಕೆಗೆ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಪಾತ್ರವಾಗಿದೆ. ಇಲ್ಲಿ ಕಲಿಸುವ ಈ ಜೀವನಪಾಠಗಳಿಂದಾಗಿ ಹೆತ್ತವರಿಗೆ ತಮ್ಮ ಮಕ್ಕಳ ನಿರ್ವಹಣೆ ಸುಲಭವಾಗತೊಡಗಿದೆ. ಹಾಗಾಗಿ ಗುಣಮಟ್ಟದ ಶಿಕ್ಷಣದೊಂದಿಗೆ ಇಲ್ಲಿ ಇಂತಹ ಜೀವನಾವಶ್ಯಕ ಪಾಠ ದೊರಕುತ್ತದೆ ಎಂಬುದು ಅನೇಕ ಹೆತ್ತವರಿಗೆ ಮತ್ತಧಿಕ ಖುಷಿಕೊಡುತ್ತಿದೆ. ತಮ್ಮ ಮಕ್ಕಳನ್ನು ಅಂಬಿಕಾಕ್ಕೆ ದಾಖಲಾತಿ ಮಾಡಿಸುವಲ್ಲಿ ಈ ಲೈಫ್ ಸ್ಕಿಲ್ ತರಬೇತಿಯೂ ಮತ್ತೊಂದು ಕಾರಣವಾಗಿ ಕಾಣಿಸುತ್ತಿದೆ. ಒಮ್ಮೆ ಅಂಬಿಕಾ ವಿದ್ಯಾಲಯಕ್ಕೆ ಸೇರಿಸಿಬಿಟ್ಟರೆ ನಂತರ ಶಿಕ್ಷಣ ಹಾಗೂ ಮಕ್ಕಳ ನಿರ್ವಹಣೆ ಎರಡರ ಬಗೆಗೂ ಆತಂಕವಿಲ್ಲ ಎಂಬ ಭಾವನೆ ಹೆತ್ತವರಲ್ಲಿ ಮೂಡತೊಡಗಿದೆ.

ನಿಗದಿತ ಪಾಠಗಳ ಮಧ್ಯೆ ಇಂತಹ ಪ್ರಾಯೋಗಿಕ ತರಬೇತಿಗಳೂ ದೊರಕಿದಾಗ ಮಕ್ಕಳಿಗೆ ಒಂದು ರೀತಿಯ ಹೊಸ ಹುಮ್ಮಸ್ಸು ಹಾಗೂ ಆಸಕ್ತಿ ಮೂಡುವುದಲ್ಲದೆ ಬದುಕಿಗೆ ಅವಶ್ಯವಾದ ಮೂಲಭೂತ ಜ್ಞಾನವೂ ಬೆಳೆಯುತ್ತದೆ. ಶಾಲೆಯಲ್ಲಿ ಕಲಿಸಿಕೊಟ್ಟದ್ದು ಮನೆಯಲ್ಲಿ ಪ್ರಾಯೋಗಿಕವಾಗಿ ಜಾರಿಯಾಗುತ್ತಿದೆ. ಅಂಬಿಕಾ ವಿದ್ಯಾಲಯ ಊಹೆಗೂ ಮೀರಿ ಮಕ್ಕಳ ಬೆಳವಣಿಗೆಗೆ ಶ್ರಮಿಸುತ್ತಿದೆ. ಈ ಸಂಸ್ಥೆಗೆ ನನ್ನ ಮಗನನ್ನು ಸೇರಿಸಿದ್ದಕ್ಕೆ ನನಗೆ ಹೆಮ್ಮೆ ಇದೆ ಎನ್ನುತ್ತಾರೆ ಹೆತ್ತವರಾದ ಸಂಧ್ಯಾ ಎಂ. ಅಡಿಕೆಹಿತ್ಲು.
ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆ ಲೈಫ್ ಸ್ಕಿಲ್ ತರಬೇತಿಗಾಗಿಯೇ ಒಬ್ಬರು ಶಿಕ್ಷಕರನ್ನು ನೇಮಿಸಿದೆ. ಅವರು ವರ್ಷ ಪೂರ್ತಿ ವಿದ್ಯಾರ್ಥಿಗಳಿಗೆ ಇಂತಹ ಕಲೆಗಳನ್ನು ಕಲಿಸಿಕೊಡುತ್ತಿರುತ್ತಾರೆ. ಅವರಿಗೆ ಸಾಧ್ಯವಿಲ್ಲದ ಕೆಲವು ಕಲೆಗಳನ್ನು ಆಯಾ ಕ್ಷೇತ್ರದ ತಜ್ಞರನ್ನು ಕರೆಸಿ ಮಕ್ಕಳಿಗೆ ತರಬೇತಿಕೊಡುವ ಕಾರ್ಯವೂ ಇಲ್ಲಿ ನಡೆಯುತ್ತದೆ.

ಅಂಬಿಕಾದಿAದ ಹೊರಬರುವ ಮಕ್ಕಳು ಹೆಚ್ಚು ಆತ್ಮಿವಿಶ್ವಾಸದಿಂದ ಜೀವನ ಸಾಗಿಸುವಂತಾಗಬೇಕು. ನಾಳಿನ ಸಮಾಜಕ್ಕೆ ಉತ್ಕೃಷ್ಟ ವ್ಯಕ್ತಿತ್ವಗಳನ್ನು ಸಮರ್ಪಿಸಬೇಕೆಂಬ ಮನೋಭಾವದಿಂದ, ಪಠ್ಯಕ್ರಮದಲ್ಲಿ ಹೇಳಿರದಿದ್ದರೂ ಹಲವು ಉಪಯುಕ್ತ ಸಂಗತಿಗಳನ್ನು ನಮ್ಮ ಸಂಸ್ಥೆಯಲ್ಲಿ ಜಾರಿಗೊಳಿಸಿದ್ದೇವೆ. ಈ ಲೈಫ್ ಸ್ಕಿಲ್ ತರಬೇತಿ ಮಕ್ಕಳ ಮೇಲೆ ಸಕಾರಾತ್ಮಕವಾಗಿ ಪರಿಣಾಮವಾಗುತ್ತಿರುವುದನ್ನು ಕಾಣುವಾಗ ನಮ್ಮ ಪ್ರಯತ್ನ ಸಾರ್ಥಕ ಎನಿಸುತ್ತಿದೆ.

  • ಸುಬ್ರಮಣ್ಯ ನಟ್ಟೋಜ, ಅಧ್ಯಕ್ಷರು, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಪುತ್ತೂರು
Ad Widget
Click to comment

Leave a Reply

ಶಿಕ್ಷಣ

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

Published

on

Ad Widget

Ad Widget

Ad Widget

Ad Widget

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ಶಿಕ್ಷಣ

Ambika-ಅಂಬಿಕಾ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ

Published

on

Ad Widget

Ad Widget

Ad Widget

Ad Widget

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Ad Widget

Ad Widget <> Ad Widget

ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.

Ad Widget

Ad Widget

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.

ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!