ಬಿಗ್ ನ್ಯೂಸ್
Shiradi Ghat | ಶಿರಾಡಿ ಘಾಟ್ ಪ್ರದೇಶದಲ್ಲಿ ಭಾರಿ ಮಳೆ : ಕಾರಿನ ಮೇಲೆ ಮರ ಕುಸಿತ – ರೈಲ್ವೆ ಮಾರ್ಗದಲ್ಲಿ 15 ಕಡೆ ಗುಡ್ಡ ಕುಸಿತ
ಸಕಲೇಶಪುರ : ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಘಾಟ್ ಭಾಗದಲ್ಲಿ ಧಾರಾಕಾರ ಮಳೆಯ ಹಿನ್ನಲೆ ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟಿಯ (Shiradi Ghat) ಮಾರನಹಳ್ಳಿ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ
ಘಟನೆ ನಡೆದ ತಕ್ಷಣವೇ ಪೊಲೀಸರು ಅವರನ್ನು ರಕ್ಷಿಸಿ, ಬದಲಿ ವಾಹನದಲ್ಲಿ ಸುರಕ್ಷಿತವಾಗಿ ಕಳುಹಿಸಿದ್ದಾರೆ.
ಮರ ರಸ್ತೆಗೆ ಅಡ್ಡಲಾಗಿ ಬಿದ್ದಿರುವುದರಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ. ಮಳೆಯ ನಡುವೆಯೇ ರಕ್ಷಣಾ ಸಿಬ್ಬಂದಿ ಮರ ತೆರವುಗೊಳಿಸುವ ಕಾರ್ಯ ನಡೆಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿಘಾಟ್ ಮಾರ್ಗದಲ್ಲಿ ಭಾರೀ ಮಳೆಯಿಂದಾಗಿ ಆ.16ರ ರಾತ್ರಿ ಭೂಕುಸಿತ ಉಂಟಾಗಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಮಾರನಹಳ್ಳಿ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ವಾಹನಗಳನ್ನು ನಿಲ್ಲಿಸಿದ್ದು, ಬದಲಿ ಮಾರ್ಗ ಬಳಸುವಂತೆ ಚಾಲಕರಿಗೆ ಸೂಚನೆ ನೀಡಿದ್ದಾರೆ. ಇದರಿಂದಾಗಿ ಸಾವಿರಾರು ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಶಿರಾಡಿಘಾಟ್ ರಸ್ತೆಯ ಹಲವು ಕಡೆ ಭೂಕುಸಿತ ಉಂಟಾಗಿದ್ದು, ಮರ-ಗಿಡಗಳ ಸಮೇತ ಮಣ್ಣು ರಸ್ತೆಗೆ ಜಾರಿ ಬಿದ್ದಿದೆ. ಇದರಿಂದ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ವಾರಾಂತ್ಯ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ಹೆಚ್ಚಿರುವುದರಿಂದ ಶಿರಾಡಿಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಸದ್ಯ ನೂರಾರು ವಾಹನಗಳು ರಸ್ತೆ ಮಧ್ಯೆ ನಿಂತಿರುವುದರಿಂದ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಟ್ರಾಫಿಕ್ ಜಾಮ್ ತೆರವುಗೊಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಸಕಲೇಶಪುರದ ಎಡಕುಮೇರಿ ಬಳಿ ಭಾರೀ ಮಳೆಯಿಂದ ರೈಲ್ವೇ ಹಳಿ ಮೇಲೆ ಮಣ್ಣು ಹಾಗೂ ಗಿಡಗಳು ಕುಸಿದ ಪರಿಣಾಮ, ಬೆಂಗಳೂರು-ಮಂಗಳೂರು ರೈಲ್ವೇ ಮಾರ್ಗದಲ್ಲಿ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿತು.
ಮಂಗಳೂರು-ಬೆಂಗಳೂರು ರೈಲ್ವೆ ಮಾರ್ಗದ ಏಳು ಕಿಲೋಮೀಟರ್ ವ್ಯಾಪ್ತಿಯಲ್ಲಿ 15 ಕಡೆಗಳಲ್ಲಿ ಭೂಕುಸಿತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಘಟನೆ ಹಿನ್ನೆಲೆ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಎಲ್ಲಾ ಪ್ರಯಾಣಿಕ ಹಾಗೂ ಸರಕು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಸ್ಥಳಕ್ಕೆ ರೈಲ್ವೇ ಇಲಾಖೆಯ ಸಿಬ್ಬಂದಿ ದೌಡಾಯಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಕಾರ್ಯಾರಂಭ ಮಾಡಿದ್ದಾರೆ.
ಸದ್ಯಕ್ಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಣ್ಣು ಕುಸಿತ ತೆರವುಗೊಳಿಸಿದ್ದು, ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಬಿಗ್ ನ್ಯೂಸ್
Green card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್‌ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ.
ವಾಷಿಂಗ್ಟನ್: ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್‌ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ. ಈ ಕ್ರಮವು ಸಂಬಂಧಿತ ಕಂಪನಿಗಳ ಮೂಲಕ ಉದ್ಯೋಗ ಆಧಾರಿತ ಗ್ರೀನ್ ಕಾರ್ಡ್ ಪಡೆಯಲು ಕಾಯುತ್ತಿರುವ ವಿದೇಶಿ ಉದ್ಯೋಗಿಗಳ ಮೇಲೆ ಪರಿಣಾಮ ಬೀರಬಹುದಾಗಿದೆ.
ಅಮೆರಿಕದ ಕಾರ್ಮಿಕ ಸಚಿವ ಕೀತ್ ಸೋಂಡರ್ಲಿಂಗ್ ಹಾಗೂ ಉಪಾಧ್ಯಕ್ಷ ಜೆ.ಡಿ. ವಾನ್ಸ್ ಈ ಕುರಿತು ಘೋಷಣೆ ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಗ್ನಿಜೆಂಟ್, ಇನ್ಫೋಸಿಸ್, ಟಾಟಾ, ವಿಪ್ರೋ, ಎಚ್‌ಸಿಎಲ್, ಕ್ಯಾಪ್‌ಜೆಮಿನಿ, ಮೈಕ್ರೋಸಾಫ್ಟ್ ಮತ್ತು ಅಡೋಬ್ ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ.
ಈ ಕಂಪನಿಗಳಿಗೆ ಸಂಬಂಧಿಸಿದ ಹೊಸ ಅರ್ಜಿಗಳು ಹಾಗೂ ಬಾಕಿ ಉಳಿದಿರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಅಥವಾ ಪ್ರಕ್ರಿಯೆಗೊಳಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.
ಸೋಂಡರ್ಲಿಂಗ್ ಅವರ ಹೇಳಿಕೆಯ ಪ್ರಕಾರ, 2009ರಿಂದ ಈ ಕಂಪನಿಗಳು ಸುಮಾರು 30 ಲಕ್ಷ ವಿದೇಶಿ ಉದ್ಯೋಗಿಗಳಿಗಾಗಿ ಮನವಿ ಸಲ್ಲಿಸಿವೆ. ಈ ಪೈಕಿ 2.3 ಲಕ್ಷಕ್ಕೂ ಹೆಚ್ಚು ಎಚ್-1ಬಿ ವೀಸಾ ಅನುಮೋದನೆಗಳು ಹಾಗೂ ಒಂದು ಲಕ್ಷಕ್ಕೂ ಹೆಚ್ಚು ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳನ್ನು ಪಡೆದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಸಿನೆಮಾ
Nana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.
ಪಣಜಿ: ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.
ಡೋನಾ ಪೌಲಾದ ಓಷನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಿಂದ ಬಾಂಬೋಲಿಮ್‌ನ ಮಣಿಪಾಲ್ ಆಸ್ಪತ್ರೆಗೆ ಕರೆತರುವಷ್ಟರಲ್ಲಿ 75 ವರ್ಷದ ನಾನಾ ಪಾಟೇಕರ್ ಮೃತಪಟ್ಟಿದ್ದರು ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.
ತನಿಖೆಯ ಭಾಗವಾಗಿ ನಟನ ನಿವಾಸಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಗೋವಾ ಮೆಡಿಕಲ್ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆಯನ್ನೂ ನಡೆಸಲಾಗಿದ್ದು, ಸಾವಿಗೆ ಕಾರಣವಾದ ಸಂದರ್ಭಗಳ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಕುಟುಂಬಸ್ಥರು ಹಾಗೂ ಸಂಬಂಧಿಕರ ಹೇಳಿಕೆಗಳನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆಯೂ ನಡೆದಿದೆ.
ನಾನಾ ಪಾಟೇಕರ್ ಅವರ ಸಾವಿಗೆ ಹೃದಯಾಘಾತ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆದರೆ, ಸಾವಿನ ನಿಖರ ಕಾರಣ ಮತ್ತು ಸಂದರ್ಭಗಳ ಕುರಿತು ತನಿಖೆ ಮುಂದುವರಿದಿದೆ. ಅಸಹಜ ಸಾವು ಪ್ರಕರಣ ದಾಖಲಿಸಿರುವುದು ಮಾತ್ರವೇ ಸಾವಿನಲ್ಲಿ ಅಪರಾಧ ಅಥವಾ ಸಂಶಯಾಸ್ಪದ ಕೃತ್ಯ ನಡೆದಿದೆ ಎಂಬುದನ್ನು ಸೂಚಿಸುವುದಿಲ್ಲ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.
ಸ್ಥಳೀಯ
Beltangadi-ಬೆಳ್ತಂಗಡಿ: ಆನೆಗಳ ಸಂಚಾರ ಹೆಚ್ಚಳ ಹಿನ್ನೆಲೆ; ದಿಡುಪೆ ಫಾಲ್ಸ್ ವೀಕ್ಷಣೆಗೆ ನಿರ್ಬಂಧ
ಮಲವಂತಿಗೆ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ದಿಡುಪೆ ಫಾಲ್ಸ್ ಸುತ್ತಮುತ್ತ ಆನೆಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ.
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ದಿಡುಪೆ ಫಾಲ್ಸ್ ಸುತ್ತಮುತ್ತ ಆನೆಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ.
ಈ ನಿರ್ಬಂಧ ನಾಳೆಯಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶ ಹೊರಬೀಳುವವರೆಗೆ ಪ್ರವಾಸಿಗರಿಗೆ ದಿಡುಪೆ ಫಾಲ್ಸ್ ವೀಕ್ಷಣೆಗೆ ಅವಕಾಶ ಇರುವುದಿಲ್ಲ ಎಂದು ವನ್ಯಜೀವಿ ವಲಯದ ಅರಣ್ಯಾಧಿಕಾರಿ ಶರ್ಮಿಷ್ಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆನೆಗಳ ಸಂಚಾರ ಹೆಚ್ಚಾಗಿರುವುದರಿಂದ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ.
-
ಬಿಗ್ ನ್ಯೂಸ್24 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್23 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ23 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ22 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ22 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಪರಾಧ4 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಸ್ಥಳೀಯ5 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಮಂಗಳೂರು21 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















