ಬಪ್ಪಳಿಗೆ ನಿವಾಸಿ ಕೃಷ್ಣ ರಾವ್ ಎಂಬಾತನಿಂದ ವಂಚನೆಗೊಳಗಾದ ಸಂತ್ರಸ್ತೆ, ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದು, ಇದರ ಬೆನ್ನಲೇ […]" /> ಬಪ್ಪಳಿಗೆ ನಿವಾಸಿ ಕೃಷ್ಣ ರಾವ್ ಎಂಬಾತನಿಂದ ವಂಚನೆಗೊಳಗಾದ ಸಂತ್ರಸ್ತೆ, ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದು, ಇದರ ಬೆನ್ನಲೇ […]"> Puttur-ಮದುವೆ ವಂಚನೆ ಪ್ರಕರಣ: ಸಂತ್ರಸ್ತೆಯ ಜೀವಭಯದ ಮನವಿಗೆ ಕ್ಷಿಪ್ರ ಸ್ಪಂದನೆ; ನಿತ್ಯ ಪೊಲೀಸ್ ಭೇಟಿ! - Nikhara News | Kannada News Website
Connect with us

ಬಿಗ್ ನ್ಯೂಸ್

Puttur-ಮದುವೆ ವಂಚನೆ ಪ್ರಕರಣ: ಸಂತ್ರಸ್ತೆಯ ಜೀವಭಯದ ಮನವಿಗೆ ಕ್ಷಿಪ್ರ ಸ್ಪಂದನೆ; ನಿತ್ಯ ಪೊಲೀಸ್ ಭೇಟಿ!

Published

on

Ad Widget

Ad Widget

Ad Widget

Ad Widget

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆಯೊಬ್ಬರು, ತಮಗೆ ಮತ್ತು ತಮ್ಮ ಮಗುವಿಗೆ ಜೀವಬೆದರಿಕೆ ಇದೆ ಎಂದು ರಕ್ಷಣೆ ಕೋರಿ ಸಲ್ಲಿಸಿದ್ದ ಮನವಿಗೆ ಪೊಲೀಸ್ ಇಲಾಖೆ ತಕ್ಷಣವೇ ಸ್ಪಂದಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆಯೊಬ್ಬರು, ತಮಗೆ ಮತ್ತು ತಮ್ಮ ಮಗುವಿಗೆ ಜೀವಬೆದರಿಕೆ ಇದೆ ಎಂದು ರಕ್ಷಣೆ ಕೋರಿ ಸಲ್ಲಿಸಿದ್ದ ಮನವಿಗೆ ಪೊಲೀಸ್ ಇಲಾಖೆ ತಕ್ಷಣವೇ ಸ್ಪಂದಿಸಿದೆ.

Ad Widget

Ad Widget alt="Ad Widget"/>

Ad Widget

ಬಪ್ಪಳಿಗೆ ನಿವಾಸಿ ಕೃಷ್ಣ ರಾವ್ ಎಂಬಾತನಿಂದ ವಂಚನೆಗೊಳಗಾದ ಸಂತ್ರಸ್ತೆ, ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದು, ಇದರ ಬೆನ್ನಲೇ ಮನೆಯ ಸುತ್ತ ಅಪರಿಚಿತ ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿದ್ದು, ರಾತ್ರಿ ವೇಳೆ ಇವರ ಚಲನವಲನ ಹೆಚ್ಚಾಗಿದೆ. ಇದು ತೀವ್ರ ಭಯವನ್ನುಂಟು ಮಾಡಿದೆ ಎಂದು ಐಜಿಪಿಗೆ ಆಕೆ ದೂರು ನೀಡಿದ್ದರು.

Ad Widget

Ad Widget <> Ad Widget

ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರ ನೇರ ಸೂಚನೆಯ ಮೇರೆಗೆ ಪುತ್ತೂರು ನಗರ ಠಾಣೆಯ ಪೊಲೀಸರು ಪ್ರತಿದಿನ ಮನೆಗೆ ಭೇಟಿ ನೀಡಿ, ಸಂತ್ರಸ್ತೆ ಮತ್ತು ಅವರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಧೈರ್ಯ ತುಂಬುವ ಹಾಗೂ ಭದ್ರತಾ ಮಾಹಿತಿ ಸಂಗ್ರಹಿಸುವ ಕಾರ್ಯ ನಡೆಸುತ್ತಿದ್ದಾರೆ. ಇದಲ್ಲದೇ ಸಂತ್ರಸ್ತೆಯ ಮನೆಗೆ ಹೈ-ರೆಸೊಲ್ಯೂಶನ್ ಸಿಸಿ ಕ್ಯಾಮರಾ ಕೂಡ ಅಳವಡಿಸಲಾಗಿದೆ.

ಐಜಿಪಿಗೆ ಕೊಟ್ಟ ಮನವಿಯಲ್ಲಿ ಏನಿತ್ತು
ವಿಶ್ವಕರ್ಮ ಸಮಾಜದ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ಹಾಗೂ ತಮ್ಮ ಪೋಷಕರ ಸಮ್ಮುಖದಲ್ಲಿ ಸಂತ್ರಸ್ತೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಮನವಿ ಸಲ್ಲಿಸಿದ್ದು “ನನ್ನ ಮಗುವಿನಿಂದ ಮಾತ್ರ ನನಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗಲು ಸಾಧ್ಯ. ಆದರೆ, ಇದೀಗ ನನ್ನ ಮಗುವಿನ ಜೀವಕ್ಕೇ ಅಪಾಯವಿದೆ ಎನ್ನುವ ಭೀತಿ ಕಾಡುತ್ತಿದೆ. ದಯವಿಟ್ಟು ನನಗೂ, ನನ್ನ ಮಗುವಿಗೂ ರಕ್ಷಣೆ ನೀಡಿ” ಎಂದು ಕಣ್ಣೀರಿನೊಂದಿಗೆ ಕೋರಿದ್ದರು.

Click to comment

Leave a Reply

ಬಿಗ್ ನ್ಯೂಸ್

Rakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ

Published

on

Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ, ಇದೀಗ ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ, ಇದೀಗ ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ರಾಕೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ನವೆಂಬರ್ 20ರಂದು ಬೆಂಗಳೂರಿನ 66ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿತ್ತು. ಇದರಿಂದ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

Ad Widget

Ad Widget <> Ad Widget

ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ವಿರುದ್ಧ ದಾಖಲಾಗಿರುವುದು ಜಾಮೀನು ಪಡೆಯಬಹುದಾದ ಅಪರಾಧಗಳಾಗಿವೆ. ಒಂದು ವೇಳೆ ಬಂಧನಕ್ಕೊಳಗಾದರೂ ವಿಚಾರಣಾ ನ್ಯಾಯಾಲಯದಲ್ಲಿಯೇ ಜಾಮೀನು ಪಡೆಯಲು ಅವಕಾಶವಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಊರ್ಜಿತವಲ್ಲ ಎಂದು ಅಭಿಪ್ರಾಯಪಟ್ಟಿತು.

ಇದಕ್ಕೂ ಮುನ್ನ ರಾಕೇಶ್ ಶೆಟ್ಟಿ ಪರ ವಕೀಲರು ವಾದ ಮಂಡಿಸಿ, ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾದ ಅಪರಾಧಗಳ ಆರೋಪ ಹೊರಿಸಲಾಗಿದೆ. ಆದ್ದರಿಂದ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ನ್ಯಾಯಪೀಠವನ್ನು ಕೋರಿದ್ದರು.

Ad Widget

Ad Widget

ಆದರೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್, ಪ್ರಕರಣದಲ್ಲಿ ಜಾಮೀನು ಪಡೆಯಬಹುದಾದ ಅಪರಾಧಗಳು ದಾಖಲಾಗಿರುವುದರಿಂದ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವುದು ಕಾನೂನುಬದ್ಧವಾಗಿ ಊರ್ಜಿತವಲ್ಲ ಎಂದು ವಾದಿಸಿದರು.

ನ್ಯಾಯಪೀಠದ ಅಭಿಪ್ರಾಯದ ಬೆನ್ನಲ್ಲೇ ರಾಕೇಶ್ ಶೆಟ್ಟಿ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆದುಕೊಂಡರು.

Ad Widget
Continue Reading

ಬಿಗ್ ನ್ಯೂಸ್

Bantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ನ.23: ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

Ad Widget

Ad Widget alt="Ad Widget"/>

Ad Widget

ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ. ಇವರು ಬಿ.ಸಿ.ರೋಡಿನ ಬ್ಯಾಂಕ್‌ವೊಂದರಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು.

Ad Widget

Ad Widget <> Ad Widget

ನವೆಂಬರ್ 20ರಂದು ಕವಿತಾ ಅವರು ನಾಪತ್ತೆಯಾಗಿದ್ದು, ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಗದರಿಸಿದ್ದರಿಂದ ಅಜ್ಜಿಯ ಮನೆಗೆ ಹೋಗುವುದಾಗಿ ತೆರಳಿದ್ದ ಕವಿತಾ ಬಳಿಕ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಯುವತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಸ್ಥಳೀಯ

Bank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್‌ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!

Published

on

Ad Widget

Ad Widget

Ad Widget

Ad Widget

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬರುತ್ತಿರುವ ಬೆನ್ನಲ್ಲೇ ಚಿನ್ನದ ಆಭರಣಗಳನ್ನು ಅಡವಿಟ್ಟು ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕ್‌ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಹೊಸ ಸಂಕಷ್ಟ ತಂದೊಡ್ಡಿವೆ. ಚಿನ್ನದ ಬೆಲೆ ಕುಸಿತದಿಂದ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತದಲ್ಲಿ ವ್ಯತ್ಯಾಸ ಉಂಟಾಗಿರುವ ಹಿನ್ನೆಲೆಯಲ್ಲಿ, ಹೆಚ್ಚುವರಿ ಹಣ ಪಾವತಿಸುವಂತೆ ಬ್ಯಾಂಕ್‌ಗಳು ಸಾಲಗಾರರಿಗೆ ಸೂಚನೆ ನೀಡುತ್ತಿವೆ. ನಿಗದಿತ ಅವಧಿಯಲ್ಲಿ ಹಣ ಪಾವತಿಸದಿದ್ದರೆ ಆರ್‌ಬಿಐ ನಿಯಮಗಳ ಪ್ರಕಾರ ಅಡವಿಟ್ಟ ಚಿನ್ನವನ್ನು ಹರಾಜು ಹಾಕಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡುತ್ತಿವೆ.

Ad Widget

Ad Widget

Ad Widget

Ad Widget

ಯಾದಗಿರಿ: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬರುತ್ತಿರುವ ಬೆನ್ನಲ್ಲೇ ಚಿನ್ನದ ಆಭರಣಗಳನ್ನು ಅಡವಿಟ್ಟು ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕ್‌ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಹೊಸ ಸಂಕಷ್ಟ ತಂದೊಡ್ಡಿವೆ. ಚಿನ್ನದ ಬೆಲೆ ಕುಸಿತದಿಂದ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತದಲ್ಲಿ ವ್ಯತ್ಯಾಸ ಉಂಟಾಗಿರುವ ಹಿನ್ನೆಲೆಯಲ್ಲಿ, ಹೆಚ್ಚುವರಿ ಹಣ ಪಾವತಿಸುವಂತೆ ಬ್ಯಾಂಕ್‌ಗಳು ಸಾಲಗಾರರಿಗೆ ಸೂಚನೆ ನೀಡುತ್ತಿವೆ. ನಿಗದಿತ ಅವಧಿಯಲ್ಲಿ ಹಣ ಪಾವತಿಸದಿದ್ದರೆ ಆರ್‌ಬಿಐ ನಿಯಮಗಳ ಪ್ರಕಾರ ಅಡವಿಟ್ಟ ಚಿನ್ನವನ್ನು ಹರಾಜು ಹಾಕಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡುತ್ತಿವೆ.

Ad Widget

Ad Widget alt="Ad Widget"/>

Ad Widget

ಕಳೆದ ಆರೇಳು ತಿಂಗಳ ಹಿಂದೆ 10 ಗ್ರಾಂ ಚಿನ್ನದ ಬೆಲೆ ₹1.75 ಲಕ್ಷದಿಂದ ₹1.85 ಲಕ್ಷದವರೆಗೆ ತಲುಪಿದ್ದ ಸಂದರ್ಭದಲ್ಲಿ ಅನೇಕರು ತಮ್ಮ ಚಿನ್ನಾಭರಣಗಳನ್ನು ಅಡವಿಟ್ಟು ಹೆಚ್ಚಿನ ಮೊತ್ತದ ಸಾಲ ಪಡೆದಿದ್ದರು. ಇದೀಗ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಅಂತಹ ಗ್ರಾಹಕರನ್ನು ಬ್ಯಾಂಕ್‌ಗಳು ಸಂಪರ್ಕಿಸಿ, ಸಾಲದ ಖಾತೆಯನ್ನು ಸರಿಪಡಿಸಿಕೊಳ್ಳಲು ಹೆಚ್ಚುವರಿ ಹಣ ಪಾವತಿಸುವಂತೆ ಸೂಚಿಸುತ್ತಿವೆ.

Ad Widget

Ad Widget <> Ad Widget

ಕಳೆದ ಮೂರು ತಿಂಗಳ ಅವಧಿಯಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು ₹30,000 ಇಳಿಕೆಯಾಗಿರುವುದು ಬ್ಯಾಂಕ್‌ಗಳ ಆತಂಕಕ್ಕೆ ಪ್ರಮುಖ ಕಾರಣವಾಗಿದೆ. ಚಿನ್ನದ ಮೌಲ್ಯ ಕುಸಿದಂತೆ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತವಾದ ಲೋನ್ ಟು ವ್ಯಾಲ್ಯೂ (LTV) ನಿಗದಿತ ಮಿತಿಯನ್ನು ಮೀರಿರುವ ಸಾಧ್ಯತೆಯಿದೆ. ಹೀಗಾಗಿ ವಿಶೇಷವಾಗಿ ಖಾಸಗಿ ಬ್ಯಾಂಕ್‌ಗಳು ಗ್ರಾಹಕರಿಗೆ ಹೆಚ್ಚುವರಿ ಮಾರ್ಜಿನ್ ಹಣ ಪಾವತಿಸುವಂತೆ ಅಥವಾ ಹೆಚ್ಚುವರಿ ಚಿನ್ನವನ್ನು ಅಡವಿಡುವಂತೆ ಸೂಚಿಸುತ್ತಿವೆ.

ಚಿನ್ನದ ಮೌಲ್ಯ ಕುಸಿತ; ಸಾಲಗಾರರಿಗೆ ಹೆಚ್ಚುವರಿ ಹೊರೆ

Ad Widget

Ad Widget

ಉದಾಹರಣೆಗೆ, ಚಿನ್ನದ ಬೆಲೆ 10 ಗ್ರಾಂಗೆ ₹1.85 ಲಕ್ಷ ಇದ್ದಾಗ ₹5 ಲಕ್ಷ ಮೌಲ್ಯದ ಚಿನ್ನಾಭರಣ ಅಡವಿಟ್ಟು ₹3.75 ಲಕ್ಷದಿಂದ ₹4 ಲಕ್ಷದವರೆಗೆ ಸಾಲ ಪಡೆದಿದ್ದರೆ, ಇದೀಗ ಚಿನ್ನದ ಬೆಲೆ ಕುಸಿದಿರುವುದರಿಂದ ಅಡವಿಟ್ಟ ಆಭರಣಗಳ ಮೌಲ್ಯವೂ ಕಡಿಮೆಯಾಗಿರುತ್ತದೆ. ಇದರಿಂದ ಸಾಲದ ಮೊತ್ತಕ್ಕೆ ಹೋಲಿಸಿದರೆ ಚಿನ್ನದ ಮೌಲ್ಯ ಕಡಿಮೆಯಾಗುವ ಪರಿಸ್ಥಿತಿ ಎದುರಾಗಬಹುದು.

ಇನ್ನೂ ಮುಂದಿನ ತಿಂಗಳುಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂಬ ಆತಂಕವೂ ಸಾಲಗಾರರ ಚಿಂತೆಯನ್ನು ಹೆಚ್ಚಿಸಿದೆ. ಹೀಗಾಗಿ ಬ್ಯಾಂಕ್‌ಗಳು ಗ್ರಾಹಕರಿಗೆ ತಕ್ಷಣ ಅಗತ್ಯ ಮಾರ್ಜಿನ್ ಮೊತ್ತವನ್ನು ಪಾವತಿಸಿ ಸಾಲದ ಖಾತೆಯನ್ನು ಕ್ರಮಬದ್ಧಗೊಳಿಸುವಂತೆ ಸೂಚಿಸುತ್ತಿವೆ.

ಹಣ ಪಾವತಿಸದಿದ್ದರೆ ಒಡವೆ ಹರಾಜು?

ಈ ಕುರಿತು ಮಾತನಾಡಿರುವ ಖಾಸಗಿ ಬ್ಯಾಂಕ್‌ನ ಪ್ರಮುಖರೊಬ್ಬರು, ಚಿನ್ನದ ಬೆಲೆ ಕುಸಿತದಿಂದ ಬ್ಯಾಂಕ್‌ಗಳಿಗೆ ನಷ್ಟವಾಗಬಾರದು ಎಂಬ ಉದ್ದೇಶದಿಂದ ಗೋಲ್ಡ್ ಲೋನ್ ಪಡೆದ ಗ್ರಾಹಕರಿಗೆ ಸೂಚನೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸಾಲದ ಖಾತೆಯನ್ನು ಸರಿಪಡಿಸಿಕೊಳ್ಳಲು ಹೆಚ್ಚುವರಿ ಮಾರ್ಜಿನ್ ಹಣ ಪಾವತಿಸುವಂತೆ ಗ್ರಾಹಕರಿಗೆ ತಿಳಿಸಲಾಗುತ್ತಿದೆ. ಗ್ರಾಹಕರು ನಿಗದಿತ ಸಮಯದಲ್ಲಿ ಸ್ಪಂದಿಸದಿದ್ದರೆ ಬ್ಯಾಂಕ್‌ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಅಡವಿಟ್ಟ ಚಿನ್ನವನ್ನು ಹರಾಜು ಹಾಕುವ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ಚಿನ್ನದ ಬೆಲೆ ಇಳಿಕೆ ಬಗ್ಗೆ ಮೋದಿ ಹೇಳಿಕೆ
ಇತ್ತೀಚೆಗೆ ಚಿನ್ನದ ಬೆಲೆ ಇಳಿಕೆಯ ಕುರಿತು ಪ್ರತಿಕ್ರಿಯಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಚಿನ್ನ ಖರೀದಿಸದಂತೆ ತಾವು ನೀಡಿದ್ದ ಸಲಹೆಯಿಂದ ಜನರ ಹಣ ಉಳಿತಾಯವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಚೇಂಬರ್ ಆಫ್ ಟ್ರೇಡ್ ಆ್ಯಂಡ್ ಇಂಡಸ್ಟ್ರಿ ಕೂಡ ಪ್ರಧಾನಿಯವರ ಸಲಹೆಯಿಂದ ಲಕ್ಷಾಂತರ ರೂಪಾಯಿ ನಷ್ಟ ತಪ್ಪಿದೆ ಎಂದು ಪತ್ರ ಬರೆದು ಅಭಿನಂದಿಸಿತ್ತು.

ನ.23ರ ಸೋಮವಾರ ಯಾದಗಿರಿಯಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹1.31 ಲಕ್ಷ ಇತ್ತು ಎಂದು ವರದಿಯಾಗಿದೆ.

ಒಟ್ಟಿನಲ್ಲಿ, ಚಿನ್ನದ ಬೆಲೆ ಏರಿಕೆಯ ಸಂದರ್ಭದಲ್ಲಿ ಹೆಚ್ಚಿನ ಸಾಲ ಪಡೆದಿದ್ದ ಗ್ರಾಹಕರು ಇದೀಗ ಬೆಲೆ ಇಳಿಕೆಯ ಪರಿಣಾಮವಾಗಿ ಹೆಚ್ಚುವರಿ ಹಣ ಹೊಂದಿಸಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಬ್ಯಾಂಕ್‌ಗಳ ಸೂಚನೆ ಪಾಲಿಸದಿದ್ದರೆ ತಮ್ಮ ಅಮೂಲ್ಯ ಆಭರಣಗಳನ್ನೇ ಕಳೆದುಕೊಳ್ಳುವ ಆತಂಕವೂ ಎದುರಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!