Connect with us

ಅಂತರ ರಾಜ್ಯ

Bomb-ಬಾಲ್ಯದ ಪ್ರೇಯಸಿಗೆ ಬೇರೆ ಮದುವೆ – ಪ್ರೇಯಸಿಯ ಪತಿಗೆ ಬಾಂಬ್ ಇಟ್ಟು ಮ್ಯೂಸಿಕ್ ಸಿಸ್ಟಮ್ ಕಳುಹಿಸಿದ ಪಾಗಲ್‌ ಪ್ರೇಮಿ

Published

on

Ad Widget

Ad Widget

Ad Widget

Ad Widget

ಪ್ರೀತಿಸಿದ ಹುಡುಗಿ ಬೇರೊಬ್ಬನ ಕೈ ಹಿಡಿದಳೆಂಬ ಒಂದೇ ಕಾರಣಕ್ಕೆ, ಆಕೆಯ ಪತಿಯನ್ನೇ ಮುಗಿಸಲು ಮ್ಯೂಸಿಕ್ ಸಿಸ್ಟಮ್‌ನಲ್ಲಿ ಬಾಂಬ್ ಇಟ್ಟು ‘ಮದುವೆ ಉಡುಗೊರೆ’ ಕಳುಹಿಸಿದ ಪ್ರೇಮಿಯೊಬ್ಬನ ಕ್ರೌರ್ಯ ಛತ್ತೀಸ್‌ಗಢದಲ್ಲಿ ಬೆಳಕಿಗೆ ಬಂದಿದೆ.

Ad Widget

Ad Widget

Ad Widget

Ad Widget

ರಾಯ್ಪುರ: ತಾನು ಬಾಲ್ಯದಿಂದಲೂ ಪ್ರೀತಿಸಿದ ಹುಡುಗಿ ಬೇರೊಬ್ಬನ ಕೈ ಹಿಡಿದಳೆಂಬ ಒಂದೇ ಕಾರಣಕ್ಕೆ, ಆಕೆಯ ಪತಿಯನ್ನೇ ಮುಗಿಸಲು ಮ್ಯೂಸಿಕ್ ಸಿಸ್ಟಮ್‌ನಲ್ಲಿ ಬಾಂಬ್ ಇಟ್ಟು ‘ಮದುವೆ ಉಡುಗೊರೆ’ ಕಳುಹಿಸಿದ ಪ್ರೇಮಿಯೊಬ್ಬನ ಕ್ರೌರ್ಯ ಛತ್ತೀಸ್‌ಗಢದಲ್ಲಿ ಬೆಳಕಿಗೆ ಬಂದಿದೆ. ಪ್ರೇಯಸಿಯ ಪತಿಯ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿಹೋಗಿದ್ದು, ಪೊಲೀಸರ ಚಾಣಾಕ್ಷ ತನಿಖೆಯಿಂದ ಆರೋಪಿ ಈಗ ಕಂಬಿ ಹಿಂದೆ ಸೇರಿದ್ದಾನೆ.

Ad Widget

Ad Widget alt="Ad Widget"/>

Ad Widget

ಏನಿದು ಸೇಡಿನ ಕಥೆ?
ಛತ್ತೀಸ್‌ಗಢದ 20 ವರ್ಷದ ವಿನಯ್ ವರ್ಮಾ, ತನ್ನ ಶಾಲಾ ದಿನಗಳಿಂದಲೂ ಸಹಪಾಠಿಯಾಗಿದ್ದ ಮುಸ್ಲಿಂ ಯುವತಿಯನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ. ಅವಳನ್ನೇ ಮದುವೆಯಾಗಬೇಕೆಂದು ಕನಸು ಕಂಡಿದ್ದ. ಆದರೆ, ಆ ಯುವತಿ ಆತನ ಪ್ರೀತಿಯನ್ನು ನಿರಾಕರಿಸಿದ್ದಳು. ಇದರಿಂದ ತೀವ್ರ ಹತಾಶೆಗೊಂಡ ವಿನಯ್, ಪ್ರೀತಿಯ ಬದಲಾಗಿ ದ್ವೇಷವನ್ನು ಮೈಗೂಡಿಸಿಕೊಂಡ. ಈತನ ವರ್ತನೆಯಿಂದ ಆತಂಕಗೊಂಡಿದ್ದ ಯುವತಿ, ಆತನಿಂದ ಅಂತರ ಕಾಯ್ದುಕೊಂಡಿದ್ದಳು.

Ad Widget

Ad Widget <> Ad Widget

ಕೆಲ ತಿಂಗಳ ಹಿಂದೆ ಆ ಯುವತಿಗೆ ಅಫ್ಸರ್ ಖಾನ್ ಎಂಬುವವರೊಂದಿಗೆ ವಿವಾಹವಾಯಿತು. ಖೈರಾಗಢ್ ಜಿಲ್ಲೆಯ ಮಾನ್ಪುರ್ ಗ್ರಾಮದಲ್ಲಿ ಎಲೆಕ್ಟ್ರಾನಿಕ್ಸ್ ಅಂಗಡಿ ಇಟ್ಟುಕೊಂಡಿದ್ದ ಅಫ್ಸರ್ ಖಾನ್, ತನ್ನ ಪತ್ನಿಯೊಂದಿಗೆ ಹೊಸ ಜೀವನ ಆರಂಭಿಸಿದ್ದರು. ಆದರೆ, ಇತ್ತ ವಿನಯ್ ಸೇಡಿನ ಜ್ವಾಲೆಯಲ್ಲಿ ಬೆಂದು, ಖಾನ್‌ನನ್ನು ಮುಗಿಸಲು ಭೀಕರ ಸಂಚು ರೂಪಿಸಿದ್ದ.

ಗಿಫ್ಟ್ ಬಾಕ್ಸ್‌ನಲ್ಲಿತ್ತು ಮೃತ್ಯು!
ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಅಫ್ಸರ್ ಖಾನ್ ತನ್ನ ಅಂಗಡಿಗೆ ರಜೆ ನೀಡಿದ್ದ. ಅದೇ ದಿನ, ಆತನ ಅಂಗಡಿಯ ವಿಳಾಸಕ್ಕೆ ಅನಾಮಧೇಯ ಪಾರ್ಸೆಲ್ ಒಂದು ಬಂದಿತ್ತು. ಅದನ್ನು ಪಕ್ಕದ ಅಂಗಡಿಯವರು ಪಡೆದುಕೊಂಡಿದ್ದರು. ಮರುದಿನ ಅಂಗಡಿ ತೆರೆದ ಖಾನ್‌ಗೆ ಪಕ್ಕದ ಮನೆಯವರು ಪಾರ್ಸೆಲ್ ಹಸ್ತಾಂತರಿಸಿದರು.

Ad Widget

Ad Widget

ಕುತೂಹಲದಿಂದ ಗಿಫ್ಟ್ ಪ್ಯಾಕ್ ತೆರೆದಾಗ, ಒಳಗೆ ಹೊಚ್ಚಹೊಸ ಮ್ಯೂಸಿಕ್ ಸಿಸ್ಟಮ್ ಇತ್ತು. ಆದರೆ, ಬಾಕ್ಸ್‌ನ ಮೇಲೆ ಕಳುಹಿಸಿದವರ ಹೆಸರಿರಲಿಲ್ಲ ಮತ್ತು ಅದು ಅಸಹಜವಾಗಿ ಭಾರವಾಗಿತ್ತು. ಖಾನ್‌ನ ಮನಸ್ಸಿನಲ್ಲಿ ಅನುಮಾನದ ಹುಳ ಹೊಕ್ಕಿತು. “ಯಾವುದೇ ಕಾರಣವಿಲ್ಲದೆ, ಕಳುಹಿಸಿದವರ ಹೆಸರಿಲ್ಲದೆ ಇಷ್ಟು ದುಬಾರಿ ಉಡುಗೊರೆ ಯಾರು ಕಳುಹಿಸಿದ್ದಾರೆ?” ಎಂಬ ಪ್ರಶ್ನೆ ಆತನನ್ನು ಕಾಡಿತು.

ಸಮಯಪ್ರಜ್ಞೆಯಿಂದ ತಪ್ಪಿದ ದುರಂತ
ತಕ್ಷಣ ಎಚ್ಚೆತ್ತ ಖಾನ್, ಮ್ಯೂಸಿಕ್ ಸಿಸ್ಟಮ್‌ ಅನ್ನು ಆನ್ ಮಾಡುವ ದುಸ್ಸಾಹಸಕ್ಕೆ ಕೈ ಹಾಕದೆ ನೇರವಾಗಿ ಪೊಲೀಸರಿಗೆ ಮಾಹಿತಿ ನೀಡಿದ. ಸ್ಥಳಕ್ಕಾಗಮಿಸಿದ ಪೊಲೀಸರು, ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಿ ಪರಿಶೀಲನೆ ನಡೆಸಿದಾಗ ಬೆಚ್ಚಿಬಿದ್ದಿದ್ದಾರೆ. ಮ್ಯೂಸಿಕ್ ಸಿಸ್ಟಮ್‌ನ ಒಳಗೆ ಎರಡು ಪ್ರಬಲ ಸ್ಫೋಟಕಗಳನ್ನು ಅಳವಡಿಸಲಾಗಿತ್ತು. ಸ್ವಿಚ್ ಆನ್ ಮಾಡಿದ ತಕ್ಷಣವೇ ಸ್ಫೋಟಗೊಂಡು, ಕೊಠಡಿಯಲ್ಲಿದ್ದವರನ್ನು ಸಾಯಿಸುವಷ್ಟು ಶಕ್ತಿಶಾಲಿಯಾಗಿತ್ತು ಆ ಬಾಂಬ್!

ಪತ್ನಿಯೇ ನೀಡಿದಳು ಖತರ್ನಾಕ್ ಪ್ರೇಮಿಯ ಸುಳಿವು!
ತನಿಖೆ ಆರಂಭಿಸಿದ ಪೊಲೀಸರಿಗೆ ಯಾರು ಶತ್ರುಗಳಿರಬಹುದು ಎಂದು ಖಾನ್‌ನನ್ನು ಪ್ರಶ್ನಿಸಿದರು. ಆಗ ಆತನ ಪತ್ನಿ, ತನ್ನನ್ನು ಪ್ರೀತಿಸುತ್ತಿದ್ದ ವಿನಯ್ ವರ್ಮಾನ ಮೇಲೆ ಅನುಮಾನ ವ್ಯಕ್ತಪಡಿಸಿದಳು. ಆತನ ದ್ವೇಷದ ಬಗ್ಗೆ ವಿವರಿಸಿದಳು. ಇದೇ ಸುಳಿವನ್ನು ಹಿಡಿದು ತನಿಖೆ ಮುಂದುವರಿಸಿದ ಪೊಲೀಸರ ತಂಡ, ವಿನಯ್ ವರ್ಮಾನನ್ನು ಪತ್ತೆಹಚ್ಚಿ ಬಂಧಿಸಿತು.

ವಿಚಾರಣೆ ವೇಳೆ ವಿನಯ್ ತನ್ನೆಲ್ಲಾ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. “ತಾನು ಪ್ರೀತಿಸಿದವಳು ಇನ್ನೊಬ್ಬರ ಪಾಲಾದದ್ದು ಸಹಿಸಲಾಗಲಿಲ್ಲ. ಅದಕ್ಕೇ ಅವಳ ಗಂಡನನ್ನು ಕೊಂದು ಸೇಡು ತೀರಿಸಿಕೊಳ್ಳಲು ಈ ಯೋಜನೆ ರೂಪಿಸಿದ್ದೆ” ಎಂದು ಬಾಯ್ಬಿಟ್ಟಿದ್ದಾನೆ. ಆತನ ಮಾಹಿತಿ ಮೇರೆಗೆ ಸ್ಫೋಟಕ ಪೂರೈಸಿದವರನ್ನೂ ಪೊಲೀಸರು ಬಂಧಿಸಿದ್ದು, ಪ್ರಕರಣದ ಆಳವಾದ ತನಿಖೆ ನಡೆಸುತ್ತಿದ್ದಾರೆ.

ಒಂದು ಪ್ರೇಮ ವೈಫಲ್ಯವು ಎಂತಹ ಘೋರ ಅಪರಾಧಕ್ಕೆ ಪ್ರೇರೇಪಿಸಬಹುದು ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಅದೃಷ್ಟವಶಾತ್, ಅಫ್ಸರ್ ಖಾನ್‌ನ ಸಮಯಪ್ರಜ್ಞೆ ಆತನ ಪ್ರಾಣವನ್ನು ಉಳಿಸಿದೆ.

Ad Widget
Click to comment

Leave a Reply

ಅಂತರ ರಾಜ್ಯ

Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ

Published

on

Ad Widget

Ad Widget

Ad Widget

Ad Widget

ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

Ad Widget

Ad Widget alt="Ad Widget"/>

Ad Widget

ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.

Ad Widget

Ad Widget <> Ad Widget

ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.

Ad Widget
Continue Reading

ಅಂತರ ರಾಜ್ಯ

Sreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು

Published

on

Ad Widget

Ad Widget

Ad Widget

Ad Widget

ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.

Ad Widget

Ad Widget

Ad Widget

Ad Widget

ತ್ರಿಶೂರ್: ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.

Ad Widget

Ad Widget alt="Ad Widget"/>

Ad Widget

2022ರಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್‌ನ ಫಾಸ್ಟ್‌ಟ್ರ್ಯಾಕ್ ವಿಶೇಷ ನ್ಯಾಯಾಲಯ-11ರ ನ್ಯಾಯಾಧೀಶೆ ರಮ್ಯಾ ಮೆನನ್ ಅವರು, ಪೋಕ್ಸೋ ಕಾಯ್ದೆಯ ಸೆಕ್ಷನ್ 12 ಹಾಗೂ ಭಾರತೀಯ ದಂಡ ಸಂಹಿತೆ (IPC) 1860ರ ಸೆಕ್ಷನ್ 509ರ ಅಡಿಯಲ್ಲಿ ಶ್ರೀಜಿತ್ ರವಿ ಅವರನ್ನು ದೋಷಿ ಎಂದು ಘೋಷಿಸಿದ್ದಾರೆ.

Ad Widget

Ad Widget <> Ad Widget

2022ರ ಜುಲೈ 4ರಂದು ಇಬ್ಬರು ಅಪ್ರಾಪ್ತ ಬಾಲಕಿಯರು ಶಾಲೆಯಿಂದ ತ್ರಿಶೂರ್‌ನ ಅರನಟ್ಟುಕರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ಗೆ ಮರಳುತ್ತಿದ್ದ ವೇಳೆ ಘಟನೆ ನಡೆದಿತ್ತು. ಪ್ರಾಸಿಕ್ಯೂಷನ್ ಪ್ರಕಾರ, ಶ್ರೀಜಿತ್ ರವಿ ಕಾರಿನಲ್ಲಿ ಬಾಲಕಿಯರನ್ನು ಹಿಂಬಾಲಿಸಿ, ಅಪಾರ್ಟ್‌ಮೆಂಟ್‌ನ ಕಾರು ನಿಲುಗಡೆ ಪ್ರದೇಶದಲ್ಲಿ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದರು.

ವಿಚಾರಣೆ ವೇಳೆ ಬಾಲಕಿಯರು ನ್ಯಾಯಾಲಯದಲ್ಲಿ ಶ್ರೀಜಿತ್ ರವಿಯನ್ನು ಗುರುತಿಸಿದ್ದರು. ಆದರೆ, ಚಲನಚಿತ್ರ ನಟನಾಗಿದ್ದರೂ ಬಾಲಕಿಯರು ಆತನ ಹೆಸರನ್ನು ಗುರುತಿಸಲು ವಿಫಲರಾಗಿದ್ದಾರೆ ಎಂಬ ಅಂಶವನ್ನು ಮುಂದಿಟ್ಟುಕೊಂಡು ನಟನ ಪರ ವಕೀಲರು ಗುರುತಿಸುವಿಕೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದರು.

Ad Widget

Ad Widget

ಈ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ, ಬಾಲಕಿಯರು ಆರೋಪಿಯನ್ನು ಗುರುತಿಸಿದ್ದು, ಅವರ ದೈಹಿಕ ಚಹರೆಯ ಬಗ್ಗೆಯೂ ಸ್ಪಷ್ಟವಾಗಿ ವಿವರಿಸಿದ್ದಾರೆ ಎಂದು ತಿಳಿಸಿದೆ.

ಪೊಲೀಸ್ ತನಿಖೆಯಲ್ಲಿನ ಕೆಲವು ಲೋಪಗಳ ಬಗ್ಗೆಯೂ ನ್ಯಾಯಾಲಯ ಗಮನ ಸೆಳೆದಿದೆ. ವಿಶೇಷವಾಗಿ, ಘಟನೆ ನಡೆದ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸದಿರುವುದನ್ನು ಉಲ್ಲೇಖಿಸಿದೆ. ಆದರೆ, ತನಿಖೆಯಲ್ಲಿನ ಇಂತಹ ಲೋಪಗಳು ಬಾಲಕಿಯರು ನೀಡಿದ ಸಾಕ್ಷ್ಯಗಳ ವಿಶ್ವಾಸಾರ್ಹತೆಯನ್ನು ಕುಗ್ಗಿಸುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Ad Widget
Continue Reading

ಅಂತರ ರಾಜ್ಯ

Trisha-ವಿಜಯ್ ಸಿಎಂ ಬೆನ್ನಲ್ಲೇ ತ್ರಿಷಾ ರಾಜಕೀಯ ಎಂಟ್ರಿಗೆ ಸಿದ್ಧತೆ? ‘ಜಯಲಲಿತಾ ಉತ್ತರಾಧಿಕಾರಿ’ ಎಂದ ಅಭಿಮಾನಿಗಳು..!

Published

on

Ad Widget

Ad Widget

Ad Widget

Ad Widget

ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತ್ರಿಷಾ ಅವರ ರಾಜಕೀಯ ಪ್ರವೇಶದ ಬಗ್ಗೆಯೂ ಅಭಿಮಾನಿಗಳ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.

Ad Widget

Ad Widget

Ad Widget

Ad Widget

ಚೆನ್ನೈ: ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತ್ರಿಷಾ ಅವರ ರಾಜಕೀಯ ಪ್ರವೇಶದ ಬಗ್ಗೆಯೂ ಅಭಿಮಾನಿಗಳ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.

Ad Widget

Ad Widget alt="Ad Widget"/>

Ad Widget

ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ, ಅವರ ಆಪ್ತ ಸ್ನೇಹಿತೆ ಎಂದೇ ಗುರುತಿಸಿಕೊಂಡಿರುವ ತ್ರಿಷಾ ಕೂಡ ರಾಜಕೀಯಕ್ಕೆ ಬರಲಿದ್ದಾರೆ ಎಂಬ ಚರ್ಚೆಗಳು ಜೋರಾಗಿವೆ. ಈ ನಿರೀಕ್ಷೆಯೊಂದಿಗೆ ಅಭಿಮಾನಿಗಳ ಗುಂಪೊಂದು ‘ಇಳಯ ಪುರಟ್ಟಿ ತಲೈವಿ ತ್ರಿಷಾ’ ಹೆಸರಿನಲ್ಲಿ ಹೊಸ ವೇದಿಕೆಯನ್ನು ಆರಂಭಿಸಿದೆ.

Ad Widget

Ad Widget <> Ad Widget

ಸಾರ್ವಜನಿಕ ಹಿತಾಸಕ್ತಿ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ತ್ರಿಷಾ ಅವರನ್ನು ರಾಜಕೀಯ ಕ್ಷೇತ್ರಕ್ಕೆ ಕರೆತರುವ ಪ್ರಯತ್ನ ನಡೆಸುವುದಾಗಿ ಸಂಘಟನೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿ ವಿಜಯ್ ಅವರೊಂದಿಗೆ ತ್ರಿಷಾ ಕೂಡ ರಾಜಕೀಯ ಪಯಣ ಆರಂಭಿಸಿದರೆ ತಮಿಳುನಾಡಿನ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂಬ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ.

ಜಯಲಲಿತಾ ಹಾದಿಯಲ್ಲಿ ತ್ರಿಷಾ?
ಅಭಿಮಾನಿಗಳು ತ್ರಿಷಾ ಅವರಿಗೆ ‘ಇಳಯ ಪುರಟ್ಟಿ ತಲೈವಿ’ (ಯುವ ಕ್ರಾಂತಿಕಾರಿ ನಾಯಕಿ) ಎಂಬ ಬಿರುದನ್ನೂ ನೀಡಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ನಾಯಕಿ ದಿವಂಗತ ಜೆ. ಜಯಲಲಿತಾ ಅವರನ್ನು ‘ಪುರಟ್ಟಿ ತಲೈವಿ’ (ಕ್ರಾಂತಿಕಾರಿ ನಾಯಕಿ) ಎಂದು ಕರೆಯಲಾಗುತ್ತಿತ್ತು. ಇದೇ ಹಿನ್ನೆಲೆಯಲ್ಲಿ ತ್ರಿಷಾ ಅವರಿಗೂ ಅಂತಹದ್ದೇ ಬಿರುದು ನೀಡಿ, ಜಯಲಲಿತಾ ಅವರ ಉತ್ತರಾಧಿಕಾರಿ ಎಂಬಂತೆ ಬಿಂಬಿಸಲಾಗುತ್ತಿದೆ.

Ad Widget

Ad Widget

ಜಯಲಲಿತಾ ಅವರ ವ್ಯಕ್ತಿತ್ವ ಮತ್ತು ಆಡಳಿತ ಶೈಲಿಯನ್ನು ಮೆಚ್ಚಿಕೊಂಡಿರುವ ಅಭಿಮಾನಿಗಳು, ತಮಿಳುನಾಡಿಗೆ ಅವರಂತಹ ನಾಯಕಿಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಪ್ರತಿಯೊಂದು ಬೆಳವಣಿಗೆಯ ಬಗ್ಗೆಯೂ ಜಯಲಲಿತಾ ಮಾಹಿತಿ ಹೊಂದಿದ್ದರು. ಸರಕಾರಿ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ನಿರಂತರ ನಿಗಾ ಇರಿಸುತ್ತಿದ್ದರು ಎಂದು ಸಂಘಟನೆಯ ಪ್ರಕಟಣೆಯಲ್ಲಿ ಹೇಳಲಾಗಿದೆ.

ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದ ಜಯಲಲಿತಾ ಅವರ ಆಡಳಿತ ಶೈಲಿಯನ್ನು ಉಲ್ಲೇಖಿಸಿರುವ ಅಭಿಮಾನಿಗಳು, ತ್ರಿಷಾ ಅವರಲ್ಲೂ ಅಂತಹ ನಾಯಕತ್ವದ ಗುಣಗಳಿವೆ ಎಂದು ಪ್ರತಿಪಾದಿಸಿದ್ದಾರೆ.

ವಿಜಯ್-ತ್ರಿಷಾ ಜೋಡಿಯಿಂದ ಹೊಸ ರಾಜಕೀಯ ಅಧ್ಯಾಯ?
ವಿಜಯ್ ನೇತೃತ್ವದ ಟಿವಿಕೆ ಸರಕಾರದ ಕಾರ್ಯವೈಖರಿಯನ್ನು ಶ್ಲಾಘಿಸಿರುವ ಅಭಿಮಾನಿಗಳು, ತ್ರಿಷಾ ಕೂಡ ರಾಜಕೀಯ ಪ್ರವೇಶಿಸಿದರೆ ಜಯಲಲಿತಾ ಅವರ ಆಡಳಿತವನ್ನು ಹೋಲುವ ಉತ್ತಮ ಆಡಳಿತವನ್ನು ತಮಿಳುನಾಡಿನಲ್ಲಿ ಕಾಣಬಹುದು ಎಂಬ ಆಶಯ ವ್ಯಕ್ತಪಡಿಸಿದ್ದಾರೆ.

ತ್ರಿಷಾ ಅವರ ವ್ಯಕ್ತಿತ್ವ ಜಯಲಲಿತಾ ಅವರನ್ನು ಹೋಲುತ್ತದೆ. ವಿವಿಧ ಸಂದರ್ಭಗಳಲ್ಲಿ ಅವರ ಗುಣಗಳನ್ನು ಗಮನಿಸಿದ್ದೇವೆ. ಅವರ ಆಪ್ತರಿಗೂ ಈ ವಿಚಾರ ತಿಳಿದಿದೆ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ.

ಈ ಅಭಿಯಾನದ ಮೊದಲ ಹೆಜ್ಜೆಯಾಗಿ ‘ಇಳಯ ಪುರಟ್ಟಿ ತಲೈವಿ ತ್ರಿಷಾ ಪೇರವೈ’ ಎಂಬ ಸಂಘಟನೆಯನ್ನು ಆರಂಭಿಸಲಾಗಿದೆ. ಈ ವೇದಿಕೆಯ ಮೂಲಕ ಸಾರ್ವಜನಿಕ ಹಿತಾಸಕ್ತಿ ಮತ್ತು ಸಮಾಜಮುಖಿ ಚಟುವಟಿಕೆಗಳನ್ನು ನಡೆಸಿ, ಆ ಮೂಲಕ ತ್ರಿಷಾ ಅವರ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧಪಡಿಸುವುದು ಅಭಿಮಾನಿಗಳ ಉದ್ದೇಶವಾಗಿದೆ.

ಆದರೆ, ತ್ರಿಷಾ ಅವರು ರಾಜಕೀಯ ಪ್ರವೇಶಿಸುವ ಕುರಿತು ಈವರೆಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಹೀಗಾಗಿ ಸದ್ಯಕ್ಕೆ ಇದು ಅಭಿಮಾನಿಗಳ ಮಟ್ಟದಲ್ಲಿ ನಡೆಯುತ್ತಿರುವ ಅಭಿಯಾನ ಮತ್ತು ನಿರೀಕ್ಷೆಯಷ್ಟೇ ಆಗಿದೆ.

ಈ ಹಿಂದೆ ಟಿವಿ ಸಂದರ್ಶನವೊಂದರಲ್ಲಿ ತಮಾಷೆಯಾಗಿ ಮುಂದೆ ತಾನು ತಮಿಳುನಾಡಿನ ಮುಖ್ಯಮಂತ್ರಿಯಾಗುವುದಾಗಿ ತ್ರಿಷಾ ಹೇಳಿದ್ದ ವಿಡಿಯೊ ಕೂಡ ವಿಜಯ್ ಮುಖ್ಯಮಂತ್ರಿಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿತ್ತು.

ಗಮನಾರ್ಹವೆಂದರೆ, ಜಯಲಲಿತಾ ಕೂಡ ಆರಂಭದಲ್ಲಿ ನಟಿಯಾಗಿಯೇ ಜನಪ್ರಿಯತೆ ಗಳಿಸಿದ್ದರು. ಬಳಿಕ 1982ರಲ್ಲಿ ಎಂ.ಜಿ. ರಾಮಚಂದ್ರನ್ ಅವರ ಎಐಎಡಿಎಂಕೆ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶಿಸಿ, 1991ರಲ್ಲಿ ಮೊದಲ ಬಾರಿಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ತ್ರಿಷಾ ಅವರ ರಾಜಕೀಯ ಪ್ರವೇಶದ ಕುರಿತು ಅಭಿಮಾನಿಗಳಲ್ಲಿ ಮೂಡಿರುವ ಕುತೂಹಲ ತಮಿಳುನಾಡಿನ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!