Connect with us

ರಾಜಕೀಯ

Home minister-ಅನಾಮಿಕ ತೋರಿಸಿದ 2 ಸ್ಥಳದಲ್ಲಿ ಪತ್ತೆಯಾದ ಕಳೇಬರದ ಆಧಾರದ ಮೇಲೆ ಮುಂದಿನ ತನಿಖೆ; ವಿಧಾನಸಭೆಯಲ್ಲಿ ಗೃಹಸಚಿವರಿಂದ ಸ್ಪಷ್ಟನೆ

Published

on

Ad Widget

Ad Widget

Ad Widget

Ad Widget

ವಿಧಾನಸಭೆಯ ಅಧಿವೇಶನದಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರು ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ, “ಪ್ರಣವ್ ಮೋಹಾಂತಿ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದ್ದು, ತನಿಖೆ ತೀವ್ರವಾಗಿ ಸಾಗಿದೆ. ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಕೆಲವು ಸ್ಥಳಗಳನ್ನು ಅನಾಮಿಕ ವ್ಯಕ್ತಿಯೊಬ್ಬ ಗುರುತಿಸಿದ್ದು, ಆ ಸ್ಥಳಗಳಲ್ಲಿ ಉತ್ಖನನ ನಡೆಸಲಾಗಿದೆ. ಈ ಪೈಕಿ ಎರಡು ಸ್ಥಳಗಳಲ್ಲಿ ಕೆಲವು ಕಳೇಬರದ ಕುರುಹುಗಳು ಪತ್ತೆಯಾಗಿವೆ,” ಎಂದು ತಿಳಿಸಿದರು.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಅನಾಮಿಕ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ಚುರುಕುಗೊಂಡಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನಸಭೆಯ ಅಧಿವೇಶನದಲ್ಲಿ ಈ ಪ್ರಕರಣ ತೀವ್ರ ಗಮನ ಸೆಳೆದಿದ್ದು, ವಿಪಕ್ಷಗಳು ತನಿಖೆಯ ಪ್ರಗತಿಯ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿವೆ. ಈ ಬೆನ್ನಲ್ಲೇ ಗೃಹ ಸಚಿವ ಜಿ. ಪರಮೇಶ್ವರ್ ಅವರು ಸದನದಲ್ಲಿ ಸ್ಪಷ್ಟನೆ ನೀಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಗೃಹ ಸಚಿವ ಜಿ. ಪರಮೇಶ್ವರ್ ಅವರು ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ, “ಪ್ರಣವ್ ಮೋಹಾಂತಿ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದ್ದು, ತನಿಖೆ ತೀವ್ರವಾಗಿ ಸಾಗಿದೆ. ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಕೆಲವು ಸ್ಥಳಗಳನ್ನು ಅನಾಮಿಕ ವ್ಯಕ್ತಿಯೊಬ್ಬ ಗುರುತಿಸಿದ್ದು, ಆ ಸ್ಥಳಗಳಲ್ಲಿ ಉತ್ಖನನ ನಡೆಸಲಾಗಿದೆ. ಈ ಪೈಕಿ ಎರಡು ಸ್ಥಳಗಳಲ್ಲಿ ಕೆಲವು ಕಳೇಬರದ ಕುರುಹುಗಳು ಪತ್ತೆಯಾಗಿವೆ,” ಎಂದು ತಿಳಿಸಿದರು.

Ad Widget

Ad Widget <> Ad Widget

“ಪತ್ತೆಯಾದ ಕಳೇಬರದ ಆಧಾರದ ಮೇಲೆ ಮುಂದಿನ ತನಿಖೆ ನಡೆಯಲಿದೆ. ಈಗಾಗಲೇ ಕಳೇಬರ ಮತ್ತು ಸಂಬಂಧಿತ ವಸ್ತುಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಆದರೆ, ಎಫ್‌ಎಸ್‌ಎಲ್ ವರದಿ ಇನ್ನೂ ಬಂದಿಲ್ಲ,” ಎಂದು ಅವರು ಹೇಳಿದರು.

Ad Widget
Click to comment

Leave a Reply

ರಾಜಕೀಯ

Kumaraswamy-ಹಾಸನ ಡಿಸಿ ವಿರುದ್ಧ ಭ್ರಷ್ಟಾಚಾರ ಆರೋಪ: ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ನೋಟಿಸ್

Published

on

Ad Widget

Ad Widget

Ad Widget

Ad Widget

ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಹಾಸನದಿಂದ ಬೆಂಗಳೂರಿನಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ನೋಟಿಸ್ ನೀಡಲು ಮುಂದಾಗಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಏನಿದು ಪ್ರಕರಣ?
ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ತಮ್ಮ ಆರೋಪಕ್ಕೆ ಪೂರಕವಾಗಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರಿಗೆ ಸಂಬಂಧಿಸಿದ್ದು ಎನ್ನಲಾದ ವಾಟ್ಸಾಪ್ ಚಾಟ್‌ಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದರು.

ಆರೋಪ ನಿರಾಕರಿಸಿದ್ದ ಜಿಲ್ಲಾಧಿಕಾರಿ
ಕುಮಾರಸ್ವಾಮಿ ಅವರ ಆರೋಪವನ್ನು ಜಿಲ್ಲಾಧಿಕಾರಿ ಲತಾ ಕುಮಾರಿ ಸಂಪೂರ್ಣವಾಗಿ ತಳ್ಳಿಹಾಕಿದ್ದರು. ತಮ್ಮ ವಿರುದ್ಧ ಮಾಡಿರುವ ಲಂಚದ ಆರೋಪಗಳು ಸುಳ್ಳು. ವಾಟ್ಸಾಪ್ ಚಾಟ್‌ಗಳನ್ನು ಎಡಿಟ್ ಮಾಡಲಾಗಿದೆ ಎಂದು ತಮ್ಮ ಆಪ್ತ ಸಹಾಯಕರು ತಿಳಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ. ತಾವು ಸೈಬರ್ ಕ್ರೈಂ ವಿಭಾಗಕ್ಕೂ ದೂರು ನೀಡುವುದಾಗಿ ಹೇಳಿದ್ದರು.

Ad Widget

Ad Widget

ಇನ್ನೊಂದೆಡೆ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಶಶಿಕಿರಣ್ ಅವರು ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಹೆಸರು ಮತ್ತು ಫೋನ್ ಸಂಖ್ಯೆಯನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವಾಟ್ಸಾಪ್ ಚಾಟ್‌ಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಆರೋಪಿಸಿದ್ದರು.

ಎಫ್‌ಐಆರ್ ದಾಖಲು, ಕುಮಾರಸ್ವಾಮಿಗೆ ನೋಟಿಸ್
ಶಶಿಕಿರಣ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 335 ಮತ್ತು 336(4) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು.

ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ನಕಲಿ ವಾಟ್ಸಾಪ್ ಚಾಟ್‌ಗಳ ಮೂಲ ಪತ್ತೆಹಚ್ಚಲು ಮುಂದಾಗಿದ್ದಾರೆ. ಈ ಸಂಬಂಧ ಮಾಹಿತಿ ಪಡೆಯುವ ಉದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.

Ad Widget
Continue Reading

ಅಂತರ ರಾಜ್ಯ

Kerala government-ಪೋಷಕರ ಆಸ್ತಿ ಬರೆಸಿಕೊಂಡು ನಿರ್ಲಕ್ಷಿಸಿದರೆ ಮಕ್ಕಳಿಗೆ 3 ವರ್ಷ ಜೈಲು: ಕೇರಳ ಸರ್ಕಾರದ ಮಹತ್ವದ ನಿರ್ಧಾರ..!

Published

on

Ad Widget

Ad Widget

Ad Widget

Ad Widget

ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಕೊಲ್ಲಂ: ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೊಲ್ಲಂ ಜಿಲ್ಲೆಯ ಪಟ್ಟಣಪುರಂನ ಗಾಂಧಿ ಭವನದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ವೃದ್ಧ ಪುರುಷರಿಗಾಗಿ ಅತ್ಯಾಧುನಿಕ ವಸತಿ ಸೌಲಭ್ಯವಾದ ‘ಪಿತೃಮಂದಿರಂ’ ಉದ್ಘಾಟಿಸಿ ಅವರು ಮಾತನಾಡಿದರು.

Ad Widget

Ad Widget <> Ad Widget

ಅಕ್ಟೋಬರ್‌ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿರುವ ಹಿರಿಯ ನಾಗರಿಕರ ಕಾಳಜಿ ಮತ್ತು ರಕ್ಷಣೆಗೆ ಸಂಬಂಧಿಸಿದ ಮಸೂದೆಯ ಪ್ರಮುಖ ಅಂಶಗಳನ್ನು ವಿವರಿಸಿದ ಅವರು, ಪೋಷಕರ ಆಸ್ತಿಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ಬರೆಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ನಿಬಂಧನೆಯನ್ನು ಉದ್ದೇಶಪೂರ್ವಕವಾಗಿಯೇ ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.

ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಂಡ ಮೊದಲ ನಿರ್ಧಾರವೇ ಹಿರಿಯ ನಾಗರಿಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿತ್ತು. ಹಿರಿಯ ನಾಗರಿಕರಿಗೆ ಹಲವು ಹಕ್ಕುಗಳನ್ನು ಒದಗಿಸುವ ವಿಶೇಷ ಕಾನೂನನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.

Ad Widget

Ad Widget

ಈ ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆತ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ. ಪೋಷಕರ ಆಸ್ತಿಯನ್ನು ಪಡೆದುಕೊಂಡು ಅವರನ್ನು ಬೀದಿಗೆ ತಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.

ಮಕ್ಕಳನ್ನು ಬೆಳೆಸಲು ಪೋಷಕರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅಪಾರ ತ್ಯಾಗ ಮಾಡುತ್ತಾರೆ. ಆದರೆ ಮಕ್ಕಳು ದೊಡ್ಡವರಾದ ಬಳಿಕ ಅದೇ ಪೋಷಕರನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಸಂಸ್ಕೃತಿ ಕೇರಳದಲ್ಲಿ ಬೆಳೆಯಬಾರದು ಎಂದು ಅವರು ಹೇಳಿದರು.

ಪೋಷಕರನ್ನು ತಮ್ಮೊಂದಿಗೆ ಇರಿಸಿಕೊಂಡು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಕೇರಳದಲ್ಲಿ ಯಾವೊಬ್ಬ ಹಿರಿಯ ನಾಗರಿಕರೂ ಏಕಾಂಗಿಯಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ದೊಡ್ಡ ಕನಸು ಎಂದು ಮುಖ್ಯಮಂತ್ರಿ ತಿಳಿಸಿದರು.

Ad Widget
Continue Reading

ಅಂತರ ರಾಜ್ಯ

Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ

Published

on

Ad Widget

Ad Widget

Ad Widget

Ad Widget

ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

Ad Widget

Ad Widget alt="Ad Widget"/>

Ad Widget

ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.

Ad Widget

Ad Widget <> Ad Widget

ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!