ಅಪರಾಧ
Forgery-ಪುಡಾದ ಸದಸ್ಯ ಕಾರ್ಯದರ್ಶಿಯ ಸಹಿ ಫೋರ್ಜರಿ ಮಾಡಿ ವಾಣಿಜ್ಯ ನಿವೇಶನಗಳ ವಿನ್ಯಾಸ ನಕ್ಷೆಗೆ ಅನುಮೋದನೆ ಆರೋಪ- ನೆಕ್ಕಿಲಾಡಿ ಗ್ರಾಮ ಸಭೆಯಲ್ಲಿ ಭಾರೀ ಚರ್ಚೆ
ಪುತ್ತೂರು ನಗರ ಯೋಜನಾ ಪ್ರಾಧಿಕಾರದ (PUDA) ಸದಸ್ಯ ಕಾರ್ಯದರ್ಶಿಯ ಸಹಿಯನ್ನೇ ನಕಲು ಮಾಡಿ, ವಾಣಿಜ್ಯ ನಿವೇಶನಗಳ ವಿನ್ಯಾಸ ನಕ್ಷೆಗೆ ಅನುಮೋದನೆ ಪಡೆದುಕೊಂಡಿರುವ ಗಂಭೀರ ಪ್ರಕರಣ 34 ನೆಕ್ಕಿಲಾಡಿ ಗ್ರಾಮ ಸಭೆಯಲ್ಲಿ ಪ್ರತಿಧ್ವನಿಸಿದೆ. ಗ್ರಾಮಸ್ಥರು, ಕೃತ್ಯದ ಹಿಂದಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಸಮಗ್ರ ತನಿಖೆಗೆ ಜಿಲ್ಲಾಧಿಕಾರಿಯನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಕೈಗೊಂಡರು.
ಉಪ್ಪಿನಂಗಡಿ: ಪುತ್ತೂರು ನಗರ ಯೋಜನಾ ಪ್ರಾಧಿಕಾರದ (PUDA) ಸದಸ್ಯ ಕಾರ್ಯದರ್ಶಿಯ ಸಹಿಯನ್ನೇ ನಕಲು ಮಾಡಿ, ವಾಣಿಜ್ಯ ನಿವೇಶನಗಳ ವಿನ್ಯಾಸ ನಕ್ಷೆಗೆ ಅನುಮೋದನೆ ಪಡೆದುಕೊಂಡಿರುವ ಗಂಭೀರ ಪ್ರಕರಣ 34 ನೆಕ್ಕಿಲಾಡಿ ಗ್ರಾಮ ಸಭೆಯಲ್ಲಿ ಪ್ರತಿಧ್ವನಿಸಿದೆ. ಇದು ಗ್ರಾಮದ ಘನತೆಗೆ ತರುವ ಕಳಂಕ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಕೃತ್ಯದ ಹಿಂದಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಸಮಗ್ರ ತನಿಖೆಗೆ ಜಿಲ್ಲಾಧಿಕಾರಿಯನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಕೈಗೊಂಡರು.
ಇಲ್ಲಿನ ಶ್ರೀ ಗುರು ರಾಘವೇಂದ್ರ ಮಠದ ಸಭಾಂಗಣದಲ್ಲಿ ಶುಕ್ರವಾರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತಾ ಆರ್. ರೈ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಸಭೆಯಲ್ಲಿ ಈ ವಿಷಯ ತೀವ್ರ ಚರ್ಚೆಗೆ ಗ್ರಾಸವಾಯಿತು.
ಸಭೆಯ ಆರಂಭದಲ್ಲಿ ವಿಷಯ ಪ್ರಸ್ತಾಪಿಸಿದ ಗ್ರಾಮಸ್ಥೆ ಅನಿ ಮಿನೇಜಸ್, “ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯ ಸಹಿ ಫೋರ್ಜರಿ ಮಾಡಿ ಎರಡು ವಾಣಿಜ್ಯ ನಕ್ಷೆಗಳನ್ನು ಅನುಮೋದಿಸಿಕೊಳ್ಳಲಾಗಿದೆ. ಈ ಅಕ್ರಮ ಬಯಲಿಗೆ ಬಂದ ನಂತರ ಪ್ರಾಧಿಕಾರವು ಆ ನಕ್ಷೆಗಳನ್ನು ರದ್ದುಪಡಿಸಿ, ಪಂಚಾಯಿತಿಗೆ ಪತ್ರ ಬರೆದಿದೆ ಎಂಬ ಮಾಹಿತಿ ಇದೆ. ಇದು ನಿಜವೇ? ಈ ಬಗ್ಗೆ ಗ್ರಾಮಸ್ಥರಿಗೆ ಪಂಚಾಯಿತಿ ಆಡಳಿತ ಸ್ಪಷ್ಟನೆ ನೀಡಬೇಕು” ಎಂದು ಖಡಕ್ಕಾಗಿ ಪ್ರಶ್ನಿಸಿದರು.
ಅವರ ಪ್ರಶ್ನೆಗೆ ಉತ್ತರಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪ್ರವೀಣ್ ಕುಮಾರ್, “ಹೌದು, ಆ ಮಾಹಿತಿ ನಿಜ. 34 ನೆಕ್ಕಿಲಾಡಿ ಗ್ರಾಮದ ಸರ್ವೇ ನಂ. 54/1ರಲ್ಲಿ ಕಲ್ಪನಾ ಎಚ್.ಪಿ. (9.10 ಎಕರೆ) ಮತ್ತು ನಾಗೇಶ್ ಕೆ. (0.06 ಎಕರೆ) ಅವರಿಗೆ ಸೇರಿದ ಜಮೀನುಗಳ ವಾಣಿಜ್ಯ ವಿನ್ಯಾಸ ನಕ್ಷೆಗಳಲ್ಲಿ ಸದಸ್ಯ ಕಾರ್ಯದರ್ಶಿಯ ಸಹಿಯನ್ನು ನಕಲು ಮಾಡಿ, ತಪ್ಪು ಮಾಹಿತಿ ನೀಡಿ ಅನುಮೋದನೆ ಪಡೆದಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ನಕ್ಷೆಗಳನ್ನು ರದ್ದುಗೊಳಿಸಲಾಗಿದ್ದು, ಈ ನಕ್ಷೆಗಳ ಆಧಾರದಲ್ಲಿ ಪಂಚಾಯಿತಿಯಿಂದ ನೀಡಲಾಗಿದ್ದ 9/11 ದಾಖಲೆಯನ್ನು ತಕ್ಷಣ ರದ್ದುಪಡಿಸುವಂತೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರು ಪತ್ರದ ಮೂಲಕ ಸೂಚಿಸಿದ್ದಾರೆ” ಎಂದು ಸಭೆಗೆ ಅಧಿಕೃತ ಮಾಹಿತಿ ನೀಡಿದರು.
ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಗ್ರಾಮಸ್ಥ ಮುಹಮ್ಮದ್ ರಫೀಕ್, “ಪ್ರಾಧಿಕಾರ ಸೂಚನೆ ನೀಡಿ ಎಷ್ಟು ದಿನವಾಯಿತು? 9/11 ರದ್ದುಪಡಿಸಲಾಗಿದೆಯೇ?” ಎಂದು ಪ್ರಶ್ನಿಸಿದರು. ಇದಕ್ಕೆ ಪಿಡಿಒ, “ಈ ಬಗ್ಗೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಿದೆ” ಎಂದರು. ಆಗ ರಫೀಕ್, “ತಕ್ಷಣ ಸಾಮಾನ್ಯ ಸಭೆ ಕರೆದು ರದ್ದುಗೊಳಿಸಿ. ಇಂತಹ ಅಕ್ರಮಗಳಿಗೆ ಅವಕಾಶ ನೀಡಬಾರದು” ಎಂದು ಒತ್ತಾಯಿಸಿದರು.
ಬಳಿಕ ಮತ್ತೆ ಮಾತನಾಡಿದ ಅನಿ ಮಿನೇಜಸ್, “ಇಂತಹ ದೊಡ್ಡ ಮಟ್ಟದ ಫೋರ್ಜರಿ ಹಿಂದೆ ಯಾರಿದ್ದಾರೆ ಎಂಬುದು ಬಯಲಾಗಬೇಕು. ಇದು ಗ್ರಾಮ ಪಂಚಾಯಿತಿಗೆ ಕೆಟ್ಟ ಹೆಸರು ತರುತ್ತದೆ. ಈ ಕೃತ್ಯದಲ್ಲಿ ಯಾರ ಪಾತ್ರವಿದೆ ಎಂಬುದನ್ನು ಪತ್ತೆಹಚ್ಚಲು ಸಮಗ್ರ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗೆ ಪಂಚಾಯಿತಿಯಿಂದ ಅಧಿಕೃತವಾಗಿ ಪತ್ರ ಬರೆಯಬೇಕು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಿ” ಎಂದು ಆಗ್ರಹಿಸಿದರು.
ಗ್ರಾಮಸ್ಥ ರೂಪೇಶ್ ರೈ ಇದಕ್ಕೆ ಧ್ವನಿಗೂಡಿಸಿ, “ಇಂತಹ ಕಳ್ಳರು ಯಾರೆಂಬುದು ಸಮಾಜಕ್ಕೆ ಗೊತ್ತಾಗಲೇಬೇಕು. ಅವರನ್ನು ಕಾನೂನಿನ ವ್ಯಾಪ್ತಿಗೆ ತರಬೇಕು” ಎಂದು ಒತ್ತಾಯಿಸಿದರು.
ಗ್ರಾಮಸ್ಥರ ಒಕ್ಕೊರಲ ಆಗ್ರಹಕ್ಕೆ ಮಣಿದ ಪಂಚಾಯಿತಿ ಆಡಳಿತ, ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಪತ್ರ ಬರೆಯುವ ನಿರ್ಣಯವನ್ನು ಗ್ರಾಮ ಸಭೆಯಲ್ಲಿ ಅಂಗೀಕರಿಸಿತು.
ಅಪರಾಧ
Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Punacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
ಪುಣಚದಲ್ಲಿ ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಪುತ್ತೂರು: ಪುಣಚದಲ್ಲಿ ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ.
ಬೈಕ್ ಸವಾರ ನಿಧಾನವಾಗಿ ರಸ್ತೆ ಏರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಾಯಗೊಂಡಿದ್ದು, ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತದ ದೃಶ್ಯಗಳು ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅದರ ಚಾಲಕನ ಪತ್ತೆಗೆ ಈ ದೃಶ್ಯಗಳು ಸಹಕಾರಿಯಾಗುವ ಸಾಧ್ಯತೆಯಿದೆ.
ಇನ್ನು ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನ ಬಗ್ಗೆ ಸ್ಥಳೀಯವಾಗಿ ವಿವಿಧ ಚರ್ಚೆಗಳು ನಡೆಯುತ್ತಿದ್ದು, ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬ ಬಗ್ಗೆಯೂ ಆರೋಪಗಳು ಕೇಳಿಬಂದಿವೆ. ಆದರೆ ಈ ಆರೋಪಗಳಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.
ಅಪರಾಧ
Punacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
ವಿಟ್ಲ: ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
2024ರ ಡಿಸೆಂಬರ್ 11ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಸಂಜೀವ ನಾಯ್ಕ ತನ್ನ ಪತ್ನಿಗೆ ಹೃದಯಾಘಾತವಾಗಿದೆ ಎಂದು ನೆರೆಮನೆಯವರನ್ನು ನಂಬಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಮಹಿಳೆ ಮೃತಪಟ್ಟಿರುವುದಾಗಿ ಘೋಷಿಸಿದ್ದರು.
ಮೃತದೇಹದ ಮೇಲೆ ಅನುಮಾನಾಸ್ಪದ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ನಿರೀಕ್ಷಕ ಹೆಚ್.ಇ. ನಾಗರಾಜ್ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎನ್ಎಸ್ ಕಲಂ 105 ಭಾಗ-2ರ ಅಡಿಯಲ್ಲಿ ಆರೋಪಿಗೆ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ.
ಅಲ್ಲದೆ, ಬಿಎನ್ಎಸ್ ಕಲಂ 240ರ ಅಡಿಯಲ್ಲಿ ಸಾಕ್ಷ್ಯನಾಶ ಹಾಗೂ ಸುಳ್ಳು ಮಾಹಿತಿ ನೀಡಿದ ಅಪರಾಧಕ್ಕೆ 6 ತಿಂಗಳ ಸಾದಾ ಜೈಲು ಶಿಕ್ಷೆಯನ್ನೂ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ ವಾದ ಮಂಡಿಸಿದ್ದರು.
-
ನಿಧನ ವಾರ್ತೆ7 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಸ್ಥಳೀಯ23 hours agoKadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು
-
ಅಂತರ ರಾಜ್ಯ6 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ6 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಮಂಗಳೂರು23 hours agoPriyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ
-
ಅಪರಾಧ6 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ರಾಜಕೀಯ6 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಅಪರಾಧ4 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು















