ಮಂಗಳೂರು
Satish Kumpala-‘ಧರ್ಮಸ್ಥಳ ನಿಂದನೆಗೆ ಸುಮ್ಮನೇಕೆ?’ – ಸರ್ಕಾರದ ತಾರತಮ್ಯ ನೀತಿ ವಿರುದ್ಧ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಗುಡುಗು!; ಪೊಲೀಸರ ನಿಷ್ಕ್ರಿಯತೆಗೆ ತೀವ್ರ ಆಕ್ರೋಶ; ಅನಾಮಿಕನ ಮಂಪರು ಪರೀಕ್ಷೆಗೆ ಆಗ್ರಹ
ಹಿಂದೂಗಳ ಶ್ರದ್ಧಾಕೇಂದ್ರ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯವಸ್ಥಿತವಾಗಿ ಅವಹೇಳನಕಾರಿ ಪೋಸ್ಟ್ಗಳನ್ನು ಹರಿಯಬಿಡುತ್ತಿದ್ದರೂ, ಪೊಲೀಸರು ಮಾತ್ರ ಕಣ್ಣುಮುಚ್ಚಿ ಕುಳಿತಿದ್ದಾರೆ. ಇದೇ ಹಿಂದೂ ಸಮುದಾಯದ ವಿರುದ್ಧವಾದರೆ ಸ್ವಯಂಪ್ರೇರಿತ ಕೇಸು ದಾಖಲಿಸುವ ಇಲಾಖೆ, ಈಗ ಜಾಣ ಕುರುಡು ಪ್ರದರ್ಶಿಸುತ್ತಿರುವುದು ಸರ್ಕಾರದ ತಾರತಮ್ಯ ನೀತಿಗೆ ಹಿಡಿದ ಕೈಗನ್ನಡಿ,” ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು: “ಹಿಂದೂಗಳ ಶ್ರದ್ಧಾಕೇಂದ್ರ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯವಸ್ಥಿತವಾಗಿ ಅವಹೇಳನಕಾರಿ ಪೋಸ್ಟ್ಗಳನ್ನು ಹರಿಯಬಿಡುತ್ತಿದ್ದರೂ, ಪೊಲೀಸರು ಮಾತ್ರ ಕಣ್ಣುಮುಚ್ಚಿ ಕುಳಿತಿದ್ದಾರೆ. ಇದೇ ಹಿಂದೂ ಸಮುದಾಯದ ವಿರುದ್ಧವಾದರೆ ಸ್ವಯಂಪ್ರೇರಿತ ಕೇಸು ದಾಖಲಿಸುವ ಇಲಾಖೆ, ಈಗ ಜಾಣ ಕುರುಡು ಪ್ರದರ್ಶಿಸುತ್ತಿರುವುದು ಸರ್ಕಾರದ ತಾರತಮ್ಯ ನೀತಿಗೆ ಹಿಡಿದ ಕೈಗನ್ನಡಿ,” ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, “ಕೆಲ ತಿಂಗಳ ಹಿಂದೆ ಜಿಲ್ಲೆಯ ಅಹಿತಕರ ಘಟನೆಗಳ ವೇಳೆ ಹಿಂದೂ ಯುವಕರ ಮೇಲೆ ನೂರಾರು ಸ್ವಯಂಪ್ರೇರಿತ ಕೇಸುಗಳನ್ನು ದಾಖಲಿಸಲಾಗಿತ್ತು. ಆದರೆ, ಕೋಟ್ಯಂತರ ಹಿಂದುಗಳ ಭಾವನೆಗಳಿಗೆ ಧಕ್ಕೆ ತರುವಂತಹ ಪೋಸ್ಟ್ಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಮೀನಮೇಷ ಎಣಿಸುತ್ತಿರುವುದೇಕೆ? ಈ ಮೌನಕ್ಕೆ ಸರ್ಕಾರದ ಒತ್ತಡವೇ ಕಾರಣವೇ?” ಎಂದು ನೇರವಾಗಿ ಪ್ರಶ್ನಿಸಿದರು.
ಎಡಪಂಥೀಯರ ಕುತಂತ್ರ, ಎಸ್ಐಟಿ ವರದಿ ಬಹಿರಂಗಪಡಿಸಿ
ಧರ್ಮಸ್ಥಳದ ವಿಚಾರದಲ್ಲಿ ಗೊಂದಲ ಸೃಷ್ಟಿಸಿ, ಎನ್ಐಎ ತನಿಖೆಗೆ ಕಾರಣವಾದ ಅನಾಮಿಕ ವ್ಯಕ್ತಿಯ ಕುರಿತು ಗಂಭೀರ ಅನುಮಾನ ವ್ಯಕ್ತಪಡಿಸಿದ ಕುಂಪಲ, “ಅನಾಥ ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಆ ಅನಾಮಿಕ ಯಾರು? ಆತನ ಹಿನ್ನೆಲೆ ಏನು? ಸತ್ಯ ಹೊರಬರಬೇಕಾದರೆ ತಕ್ಷಣ ಆತನನ್ನು ಬಂಧಿಸಿ ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಈ ಇಡೀ ಷಡ್ಯಂತ್ರದ ಹಿಂದೆ ಎಡಪಂಥೀಯರ ಕುತಂತ್ರ ಅಡಗಿದೆ ಎಂಬ ಬಲವಾದ ಶಂಕೆ ಇದೆ,” ಎಂದು ಆರೋಪಿಸಿದರು.
ಪ್ರಕರಣದ ಕುರಿತು ನಡೆಯುತ್ತಿರುವ ಎಸ್ಐಟಿ ತನಿಖೆಯ ಮಧ್ಯಂತರ ವರದಿಯನ್ನು ತಕ್ಷಣವೇ ಬಹಿರಂಗಪಡಿಸಿ, ಜನರ ಮನಸ್ಸಿನಲ್ಲಿರುವ ಗೊಂದಲವನ್ನು ನಿವಾರಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.
ಬಿ.ಎಲ್. ಸಂತೋಷ್ ವಿರುದ್ಧದ ಪೋಸ್ಟ್ಗೂ ಕ್ರಮ ಕೈಗೊಳ್ಳಿ
ಇದೇ ವೇಳೆ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧವೂ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಅವಹೇಳನಕಾರಿ ಪೋಸ್ಟ್ಗಳನ್ನು ಹಾಕಲಾಗುತ್ತಿದೆ. ಈ ಬಗ್ಗೆಯೂ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸತೀಶ್ ಕುಂಪಲ ಆಗ್ರಹಿಸಿದರು.
“ಹಿಂದೂ ಧಾರ್ಮಿಕ ಕೇಂದ್ರಗಳಾಗಲಿ, ನಮ್ಮ ನಾಯಕರಾಗಲಿ, ಅವರ ಘನತೆಗೆ ಚ್ಯುತಿ ತರುವ ಪ್ರಯತ್ನವನ್ನು ಬಿಜೆಪಿ ಎಂದಿಗೂ ಸಹಿಸುವುದಿಲ್ಲ. ಕೊರಗಜ್ಜನ ಕಟ್ಟೆಗೆ ಅವಮಾನವಾದಾಗಲೂ ನಾವು ಬೀದಿಗಿಳಿದು ಹೋರಾಡಿದ್ದೇವೆ. ಮುಂದೆಯೂ ನ್ಯಾಯಕ್ಕಾಗಿ ನಮ್ಮ ಹೋರಾಟ ನಿಲ್ಲದು,” ಎಂದು ಅವರು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಸಂಜಯ ಪ್ರಭು, ಅರುಣ್ ಶೇಟ್, ಸುಧಾಕರ್ ಅಡ್ಯಾರ್, ಮಹೇಶ್, ವಸಂತ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಮಂಗಳೂರು18 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ23 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಅಂತರ ರಾಜ್ಯ17 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಸಿನೆಮಾ23 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ23 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
-
ಕಾರ್ಯಕ್ರಮಗಳು18 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ12 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಸ್ಥಳೀಯ24 hours agoBail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು















