ಕಾರ್ಯಕ್ರಮಗಳು
Abhinava Kesari-ಅಭಿನವ ಕೇಸರಿ ಮಾಡಾವು ವತಿಯಿಂದ ಆ.24 ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಕ್ರೀಡಾಕೂಟಗಳು
ಅಭಿನವ ಕೇಸರಿ ಮಾಡಾವು ಇದರ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಅಂಗವಾಗಿ ವಿವಿಧ ಕ್ರೀಡಾಕೂಟ ಆ.24ರಂದು ಮಾಡಾವು ಕಟ್ಟೆಯ ಅಯ್ಯಪ್ಪ ಭಜನಾ ಮಂದಿರದ ಬಳಿ ನಡೆಯಲಿದೆ. ಬೆಳಿಗ್ಗೆ 8.30ರಿಂದ ಕ್ರೀಡಾಕೂಟ ಆರಂಭವಾಗಲಿದ್ದು, ಬೆಳಿಗ್ಗೆ 9ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.
ಕೆಯ್ಯೂರು: ಅಭಿನವ ಕೇಸರಿ ಮಾಡಾವು ಇದರ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಅಂಗವಾಗಿ ವಿವಿಧ ಕ್ರೀಡಾಕೂಟ ಆ.24ರಂದು ಮಾಡಾವು ಕಟ್ಟೆಯ ಅಯ್ಯಪ್ಪ ಭಜನಾ ಮಂದಿರದ ಬಳಿ ನಡೆಯಲಿದೆ. ಬೆಳಿಗ್ಗೆ 8.30ರಿಂದ ಕ್ರೀಡಾಕೂಟ ಆರಂಭವಾಗಲಿದ್ದು, ಬೆಳಿಗ್ಗೆ 9ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವನ್ನು ಕೆಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಶಶಿಧರ ರಾವ್ ಬೊಳಿಕ್ಕಳ ಅವರ ಅಧ್ಯಕ್ಷತೆಯಲ್ಲಿ ಜ್ಯೋತಿ ಚಿಕಿತ್ಸಾಲಯ ಡಾ. ರಾಮಚಂದ್ರ ಭಟ್ ದೀಪ ಪ್ರಜ್ವಲಿಸಿ ಉದ್ಘಾಟಿಸಲಿದ್ದಾರೆ.
ಅತಿಥಿಗಳಾಗಿ ಅಯ್ಯಪ್ಪ ಭಜನಾ ಮಂದಿರ ಮಾಡಾವು ಅಧ್ಯಕ್ಷ ರವೀಂದ್ರ ರೈ ನೆಲ್ಯಾಜಿ, ಅಯ್ಯಪ್ಪ ಭಕ್ತವೃಂದ ಮಾಡಾವು ಅಧ್ಯಕ್ಷ ಕೃಷ್ಣಮೂರ್ತಿ ಭಟ್, ಜ್ಯೋತಿ ಚಿಕಿತ್ಸಾಲಯ ಮಾಡಾವು ಡಾ. ರಾಮಚಂದ್ರ ಭಟ್, ಕ್ಲಬ್ ಜೋನ್ ಫಿಟ್ನಸ್ ಸೆಂಟರ್ ಮತ್ತು ಮಲ್ಟಿ ಜಿಮ್ ಸವಣೂರು ಮಾಲಕ ಶಶಿಧರನ್ ಕೆ, ನಿವೃತ್ತ ಕಾರ್ಯದರ್ಶಿ ಹಾಲು ಉತ್ಪಾದಕರ ಸಂಘ ಕೆಯ್ಯೂರು ಚಂದ್ರಹಾಸ ರೈ ಬೊಳಿಕಲ ಮಠ, ಪಿಂಚಣಿ ಮತ್ತು ಸಣ್ಣ ಉಳಿತಾಯ ಇಲಾಖೆ ಮಂಗಳೂರು ಸಹಾಯಕ ನಿರ್ದೇಶಕ ಪ್ರಸನ್ನ ಎಂ.ಪಿ, ನ್ಯಾಷನಲ್ ಪ್ರೊಡಕ್ಟ್ ಮೆಂಟ್ ಮ್ಯಾನೇಜರ್ ಬಿಂದು ಮುರಳೀಧರ ಕೆಂಗುಡೇಲು, ಪ್ರಗತಿಪರ ಕೃಷಿಕ ಗೋಪಾಲ್ ದಾಸ್ ಚೆನ್ನಾವರ, ಉಪಸ್ಥಿತರಿರುವರು.
ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೈ ಬೊಳಿಕಲ ಶೇಡಿ ಗೌರವಾಧ್ಯಕ್ಷರು ಅಭಿನವ ಕೇಸರಿ ಮಾಡಾವು, ಭೌದ್ಧಿಕ್ ಕಾರ್ಯಕ್ರಮ ಶರಾವತಿ ರವಿ ನಾರಾಯಣ ಪುತ್ತೂರು ದುರ್ಗಾ ವಾಹಿನಿ ಸಂಯೋಜಕಿ ವಿಶ್ವ ಹಿಂದೂ ಪರಿಷತ್ ಪುತ್ತೂರು ನಗರ ಪ್ರಖಂಡ, ಮುಖ್ಯ ಅತಿಥಿಗಳಾಗಿ ಹಿಂದೂ ಮುಖಂಡ ಪುತ್ತೂರು ಅರುಣ್ ಕುಮಾರ್ ಪುತ್ತಿಲ, ವಿಜಯ ಸಾಮ್ರಾಟ್ ರಿ. ಪುತ್ತೂರು ಸ್ವಾಪಕ ಅಧ್ಯಕ್ಷ ಸಹಜ್ ರೈ ಬಳಜ್ಜ, ಕೆಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶರತ್ ಕುಮಾರ್ ಮಾಡಾವು, ಮಾತೃಶ್ರೀ ಅರ್ಥ್ ಮೂವರ್ಸ್ ಕುಂಬ ಮೋಹನ್ ದಾಸ್ ರೈ ಕುಂಬ್ರ, ಶ್ರೀ ಕ್ಷೇತ್ರ ಕೆಯ್ಯೂರು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ.ಕೆ ಜಯರಾಮ ರೈ, ಉಪಾಧ್ಯಕ್ಷ ದ.ಕ ಜಿಲ್ಲೆ ಬಿಜೆಪಿ ಪ್ರಸನ್ನ ಮಾರ್ತ ಉಪಸ್ಥಿತರಿರುವರು.
ಸನ್ಮಾನ ಕಾರ್ಯಕ್ರಮ
ಚೇತನ್ ಆಚಾರ್ಯ ಪೆರಿಂಜೆ ಆರ್ಟಿಸ್ಟ್, ತೇಜಸ್ ಆಚಾರ್ಯ ಆರ್ಟಿಸ್ಟ್, ಪ್ರಶ್ವಿ ಶೆಟ್ಟಿ ಬಾಲ ಪ್ರತಿಭೆ, ಬಹುಮುಖ ಪ್ರತಿಭೆ ಸೌಜನ್ಯ ಎಂ, ಯಕ್ಷಗಾನ ಕಲಾವಿದ ಧ್ಯಾನ್ ರೈ ಅವರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಅಭಿನವ ಯಕ್ಷಕಲಾ ಕೇಂದ್ರ ಮಾಡಾವು ಇದರ ವಿದ್ಯಾರ್ಥಿಗಳಿಂದ ವಾಸುದೇವ ರೈ ಬೆಳ್ಳಾರೆ ನಿರ್ದೇಶನದಲ್ಲಿ ಅಗಸ್ಟ್ 24 ಸಂಜೆ 7:00 ರಿಂದ 10ರ ತನಕ ‘ಲೀಲಾವಿನೋದಿ’ ಶ್ರೀಕೃಷ್ಣ ಯಕ್ಷಗಾನ ರಂಗ ಪ್ರವೇಶ ಮತ್ತು ಪ್ರದರ್ಶನ ನಡೆಯಲಿದೆ. ಆರು ವರ್ಷದ ಒಳಗಿನ ಮಕ್ಕಳಿಗೆ “ಮುದ್ದುಕೃಷ್ಣ” ವೇಷ ಸ್ಪರ್ಧೆ ನಡೆಯಲಿದೆ.
ಕ್ರೀಡಾಕೂಟ ಪಂದ್ಯಾಟಗಳು ಕೆಯೂರು, ಪಾಲ್ತಾಡಿ, ಕೆದಂಬಾಡಿ, ಕೊಳಿಗೆ, ಮತ್ತು ಅರಿಯಡ್ಕ ಗ್ರಾಮಸ್ತರಿಗೆ ಸೀಮಿತವಾಗಿದ್ದು, ಪುರುಷರ ವಿಭಾಗದಲ್ಲಿ ಮಡಕೆ ಒಡೆಯುವುದು, ಜಾರುಕಾಂಬ ನಡಿಗೆ, ಕಬಡ್ಡಿ ವಾಲಿಬಾಲ್, ಹಗ್ಗಜಗ್ಗಾಟ ಮಹಿಳೆಯರ ವಿಭಾಗದಲ್ಲಿ ಮಡಕೆ ಒಡೆಯುವುದು, ಭಕ್ತಿ ಗೀತೆ, ಹಗ್ಗ ಜಗ್ಗಾಟ, ಜಾರುಕಂಬ ನಡಿಗೆ, ಹಾಗೂ ಮಕ್ಕಳ ವಿಭಾಗದಲ್ಲಿ ಭಕ್ತಿ ಗೀತೆ, ಸಂಗೀತ ಕುರ್ಚಿ, ಚಿತ್ರಕಲೆ ಪೆನ್ಸಿಲ್ ಸ್ಕೆಚ್ ನಡೆಯಲಿದೆ. ಎಲ್ಲರಿಗೂ ಭಾಗವಹಿಸಲು ಅವಕಾಶವಿದೆ ಎಂದು ಅಭಿನವ ಕೇಸರಿ ಮಾಡಾವು ಅಧ್ಯಕ್ಷ ಶಶಿಧರ ಆಚಾರ್ಯ ಮಾಡಾವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಥಳೀಯ
Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.
ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Swachha Bharat Mission-ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿಟ್ಲದಲ್ಲಿ 3 ಟಿಪಿಡಿ ಸಾಮರ್ಥ್ಯದ ಎಂಆರ್‌ಎಫ್ ಘಟಕಕ್ಕೆ ಸಂಸದ ಕ್ಯಾ. ಚೌಟ ಚಾಲನೆ
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.

ಮಂಗಳೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ವಚ್ಛ ಭಾರತ್ ಮಿಷನ್ 2.0 ಹಾಗೂ ಕೇಂದ್ರ ಪುರಸ್ಕೃತ ವಿವಿಧ ಯೋಜನೆಯಡಿ ಸುಮಾರು 60.10 ಲಕ್ಷ ರೂಪಾಯಿಗಳ ಅನುದಾನದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಈ ಘನ ತ್ಯಾಜ್ಯ ಘಟಕದಲ್ಲಿ ಒಣತ್ಯಾಜ್ಯ ಸಂಗ್ರಹಿಸುವುದಕ್ಕೆ 3 ಟಿಪಿಡಿ ಸಾಮರ್ಥ್ಯದ ಮೆಟೀರಿಯಲ್ ರಿಕವರಿ ಫೆಸಿಲಿಟಿ ಘಟಕವನ್ನು ನಿರ್ಮಿಸಲಾಗುತ್ತದೆ. ಆ ಮೂಲಕ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಹಳ ವೈಜ್ಞಾನಿಕವಾದ ಒಣ ಕಸ ಸಂಗ್ರಹ ಹಾಗೂ ವಿಲೇವಾರಿ ವ್ಯವಸ್ಥೆ ಅಳವಡಿಕೆಯಾಗುತ್ತಿದೆ. ಇದು ಗ್ರಾಮೀಣ ಭಾಗದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್ ಮಿಷನ್ ಅನುಷ್ಠಾನ ಪ್ರಕ್ರಿಯೆಗಳಿಗೆ ಮತ್ತಷ್ಟು ಉತ್ತೇಜನ ನೀಡಲಿದೆ.

ವಿಟ್ಲದ ಎಂಆರ್‌ಎಫ್ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು , ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದರಿಂದ ಪರಿಸರ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಅಲ್ಲದೆ, ಒಣ ಕಸವನ್ನು ಈ ರೀತಿಯ ಅತ್ಯಾಧುನಿಕ ವ್ಯವಸ್ಥೆಯಡಿ ಸಂಗ್ರಹಿಸಿ ವಿಲೇವಾರಿ ಮಾಡುವುದರಿಂದ ಸ್ಥಳೀಯವಾಗಿ ಉದ್ಯೋಗಾವಕಾಶವನ್ನು ಒದಗಿಸುವ ಜತೆಗೆ ಆರ್ಥಿಕವಾಗಿ ಸಂಪನ್ಮೂಲ ಕ್ರೋಢೀಕರಣಕ್ಕೂ ಅನುಕೂಲ ಕಲ್ಪಿಸುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ದ ಕನಸು ನನಸಾಗಬೇಕಾದರೆ, ಗ್ರಾಮ ಮತ್ತು ಪಟ್ಟಣ ಮಟ್ಟದಲ್ಲೇ ಆಧುನಿಕ ಮೂಲಸೌಕರ್ಯಗಳು ಬೆಳೆಯಬೇಕು. ಈ ₹60.10 ಲಕ್ಷದ ಯೋಜನೆಯು ನಮ್ಮ ವಿಟ್ಲ ಪಟ್ಟಣ ಪಂಚಾಯತಿಯನ್ನು ಮಾದರಿ ಮತ್ತು ಸ್ವಾವಲಂಬಿ ಪಟ್ಟಣವನ್ನಾಗಿ ಪರಿವರ್ತಿಸಲು ನಾಂದಿ ಹಾಡಲಿದೆ ಎಂದರು. ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ನ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಕಾರ್‍ಯಕ್ರಮದ ಬಳಿಕ ಪ್ರಧಾನಮಂತ್ರಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಪ್ರಯುಕ್ತ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ ಮಹಾಶಕ್ತಿ ಕೇಂದ್ರದ ಬೂತ್ ಸಂಖ್ಯೆ 5ರ ಪಳಿಕೆಯಲ್ಲಿ ಸಂಸದ ಕ್ಯಾ.ಚೌಟ ಅವರು ಕಾರ್ಯಕರ್ಯರೊಂದಿಗೆ ಸಸಿ ನೆಟ್ಟು ನೀರುಣಿಸಿದರು.

ಈ ವೇಳೆ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ, ಬಿಜೆಪಿ ಮುಖಂಡರಾದ ದೇವಪ್ಪ ಪೂಜಾರಿ, ಸಂಜಯ್ ಪ್ರಭು, ಪ್ರಸನ್ನ ದರ್ಬೆ, ನಿತೀಶ್ ಕುಮಾರ್ ಶಾಂತಿವನ, ಹರಿಪ್ರಸಾದ್ ಯಾದವ್, ವಿದ್ಯಾಧರ ಜೈನ್, ಶ್ರೀಕೃಷ್ಣ ವಿಟ್ಲ, ಪ್ರೀತಂ ಪೂಂಜಾ , ಉದಯ ಆಲಂಗಾರ್, ಹರೀಶ್ ಸಿ.ಎಚ್ ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Bantare Serige-2026-ಅ.3ರಂದು ‘ಬಂಟೆರೆ ಸೇರಿಗೆ-2026’: 15 ಸಾಧಕರಿಗೆ ಪ್ರಶಸ್ತಿ; ಬಂಟರ ಸಂಘಕ್ಕೆ 5.50 ಎಕರೆ ಜಾಗದ ಹಕ್ಕುಪತ್ರ ಹಸ್ತಾಂತರ; 3,000 ಮಂದಿಯ ಸಾಮರ್ಥ್ಯದ ಮದುವೆ ಹಾಲ್ ನಿರ್ಮಾಣಕ್ಕೆ ಯೋಜನೆ
ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.

ಪುತ್ತೂರು: ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 9ಕ್ಕೆ ದುಗ್ಗಮ್ಮ ದೇರಣ್ಣ ಶೆಟ್ಟಿ ಸಭಾಭವನದಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಎರಡು ರಥಗಳಲ್ಲಿ ಸಾಧಕರು, ಶಾಸಕ ಅಶೋಕ್ ಕುಮಾರ್ ರೈ ಹಾಗೂ ಅತಿಥಿಗಳನ್ನು ರಾಜರಸ್ತೆ ಮೂಲಕ ಬಂಟರ ಭವನಕ್ಕೆ ಕರೆತರಲಾಗುವುದು. ಅರಿಯಡ್ಕ ಚಿಕ್ಕಪ್ಪ ನ್ಯಾಕ್ ಮಹಾದ್ವಾರ ಉದ್ಘಾಟಿಸಲಿದ್ದು, ದಂಬೆಕ್ಕಾನ ಸದಾಶಿವ ರೈ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಬೆಳಿಗ್ಗೆ 11ಕ್ಕೆ ಶಾಸಕ ಅಶೋಕ್ ಕುಮಾರ್ ರೈ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಜಿತ್ ಕುಮಾರ್ ರೈ ಮಾಲಾಡಿ ಶುಭಾಶಂಸನೆ ಮಾಡಲಿದ್ದು, ಶಶಿಧರ್ ಶೆಟ್ಟಿ ಬರೋಡಾ ಪ್ರಶಸ್ತಿ ಪ್ರದಾನ, ಆರ್.ಕೆ. ಶೆಟ್ಟಿ ಮುಂಬೈ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ಜಗನ್ನಾಥ ರೈ ಬೀಡು ಮುಖ್ಯ ಅತಿಥಿಯಾಗಿರುವರು.
ಪ್ರಶಸ್ತಿ ಪುರಸ್ಕೃತರು: ಸಹಕಾರರತ್ನ *ಸವಣೂರು ಸೀತಾರಾಮ ರೈ, **ಚನಿಲ ತಿಮ್ಮಪ್ಪ ಶೆಟ್ಟಿ, **ಮಿತ್ರಂಪಾಡಿ ಪುರಂದರ ರೈ, **ಡಾ. ಸಂದೀಪ್ ರೈ, ಸಹಕಾರರತ್ನ **ಅಗರಿ ನವೀನ್ ಭಂಡಾರಿ, **ಸುಬೇದಾರ್ ಮೇಜರ್ ರಮೇಶ್ ರೈ ಬೋಳೋಡಿ, **ಚಂದ್ರಹಾಸ್ ರೈ ಬನ್ನೂರು ಬಾಳಿಕೆ, **ಜಯಲಕ್ಷ್ಮಿ ಶೆಟ್ಟಿ, **ಸತೀಶ್ ರೈ ಕುತ್ಯಾಡಿ, **ಪ್ರವೀಣ್ ಭಂಡಾರಿ ಪುರ, **ಡಾ. ಸತ್ಯವತಿ ಆಳ್ವ, **ಸರೋಜ ಉಮೇಶ್ ರೈ ಮನವಳಿಕೆ, ಪಿಯುಸಿ ವಿಭಾಗದ **ಸಸ್ತಿ ಶೆಟ್ಟಿ, *ಸಮೃದ್ಧಿ ಶೆಟ್ಟಿ ಹಾಗೂ ಶರಣ್ಯ ಶೆಟ್ಟಿ ಅವರಿಗೆ ವಿವಿಧ ಕ್ಷೇತ್ರಗಳ ಪ್ರಶಸ್ತಿ ಹಾಗೂ ಪುರಸ್ಕಾರಗಳನ್ನು ಪ್ರದಾನ ಮಾಡಲಾಗುವುದು.
ಅಶೋಕ್ ರೈಗೆ ವಿಶೇಷ ಸನ್ಮಾನ
ಪುತ್ತೂರಿನ ಮರೀಲ್‌ನಲ್ಲಿ ಬಂಟರ ಸಂಘಕ್ಕೆ ಸರ್ಕಾರದಿಂದ 5.50 ಎಕರೆ ಜಾಗ ಮಂಜೂರು ಮಾಡಿಸಲು ಸಹಕರಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಹಕ್ಕುಪತ್ರವನ್ನು ಸಂಘಕ್ಕೆ ಹಸ್ತಾಂತರಿಸಲಿದ್ದು, ಜಾಗಕ್ಕೆ ಸರ್ಕಾರಕ್ಕೆ ಪಾವತಿಸಬೇಕಾದ ಮೊತ್ತವನ್ನು ಶಾಸಕರೇ ಭರಿಸಿದ್ದಾರೆ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ.
ಮಂಜೂರಾದ ಜಾಗದಲ್ಲಿ ಮೊದಲ ಹಂತವಾಗಿ ಅಡ್ಯಾರ್ ಗಾರ್ಡನ್ ಮಾದರಿಯ ಮದುವೆ ಹಾಲ್ ಮತ್ತು ಭೋಜನ ಶಾಲೆ ನಿರ್ಮಿಸಲು ಉದ್ದೇಶಿಸಲಾಗಿದೆ. ಸುಮಾರು 3,000 ಮಂದಿಗೆ ಅವಕಾಶ, ವಿಶಾಲ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು. ಮುಂದಿನ ಹಂತಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.
ಬೆಂಗಳೂರು ಬಂಟರ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ಪುತ್ತೂರು ಮೂಲದ ಸೌಮ್ಯ ಪ್ರಿಯ ಹೆಗ್ಡೆ ಅರಿಯಡ್ಕ ಹಾಗೂ ಉಮೇಶ್ ಪೂಂಜ ದೇರ್ಲ ಅವರನ್ನು ಸನ್ಮಾನಿಸಲಾಗುವುದು. ಪ್ರಧಾನ ಕಾರ್ಯದರ್ಶಿ ಅಮರನಾಥ ಶೆಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಮಾಂಸಾಹಾರಿ ಭೋಜನದ ವ್ಯವಸ್ಥೆ ಇದೆ.
ಸುದ್ದಿಗೋಷ್ಠಿಯಲ್ಲಿ ದಂಬೆಕ್ಕಾನ ಸದಾಶಿವ ರೈ, ಸಾಜ ರಾಧಾಕೃಷ್ಣ ಆಳ್ವ, ನಿತ್ಯಾನಂದ ಶೆಟ್ಟಿ ಮನವಳಿಕೆ, ಸಂತೋಷ್ ಕುಮಾರ್ ಶೆಟ್ಟಿ ಸಾಜ ಹಾಗೂ ಭಾಗ್ಗೇಶ್ ರೈ ಉಪಸ್ಥಿತರಿದ್ದರು.
-
ಬಿಗ್ ನ್ಯೂಸ್19 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಪುತ್ತೂರು15 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಮಂಗಳೂರು18 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
Uncategorized24 hours agoಅ.6: ಮಂಗಳೂರಿನ ಪುರಭವನದಲ್ಲಿ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ
-
ಅಂತರ ರಾಜ್ಯ22 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್17 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ರಾಜ್ಯ21 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
-
ಶಿಕ್ಷಣ18 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ


















