Connect with us

ಸ್ಥಳೀಯ

Kadaba-ಕಡಬ ಪಟ್ಟಣ ಪಂಚಾಯತ್ : SDPI ಸ್ಪರ್ಧೆ ನಡುವೆ ಜಯಭೇರಿ ಭಾರಿಸಿದ ‘ಕೈ’ ಪಡೆ – ಅಭ್ಯರ್ಥಿಗಳು ಪಡೆದ ಮತಗಳ ವಿವರ ಇಲ್ಲಿದೆ – ಒಂದು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ‘0’ ಓಟ್..! ಪಕ್ಷೇತರರಿಗೆ 139..!

Published

on

Ad Widget

Ad Widget

Ad Widget

Ad Widget

ಕಡಬ ಪಟ್ಟಣ ಪಂಚಾಯತ್‌ನ 13 ವಾರ್ಡಗಳಿಗೆ ಆ.17ರಂದು ಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಕಾಂಗ್ರೆಸ್‌ 8 ಸ್ಥಾನದಲ್ಲಿ ವಿಜಯಶಾಲಿಯಾಗಿದ್ದು, ಅಧಿಕಾರದ ಗದ್ದುಗೆಗೆ ಏರಳಿದೆ. ತೀವ್ರ ಪೈಪೋಟಿ ನೀಡಿರುವ ಬಿಜೆಪಿ 5 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ.

Ad Widget

Ad Widget

Ad Widget

Ad Widget

ಕಡಬ: ಕಡಬ ಪಟ್ಟಣ ಪಂಚಾಯತ್‌ನ 13 ವಾರ್ಡಗಳಿಗೆ ಆ.17ರಂದು ಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಜಿದ್ದಾ ಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್‌ 8 ಸ್ಥಾನದಲ್ಲಿ ವಿಜಯಶಾಲಿಯಾಗಿದ್ದು, ಅಧಿಕಾರದ ಗದ್ದುಗೆಗೆ ಏರಳಿದೆ. ತೀವ್ರ ಪೈಪೋಟಿ ನೀಡಿರುವ ಬಿಜೆಪಿ 5 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ.

Ad Widget

Ad Widget alt="Ad Widget"/>

Ad Widget

ಅಭ್ಯರ್ಥಿಗಳು ಪಡೆದ ಮತಗಳ ವಿವರ
ವಾರ್ಡ್ 1-ಕಳಾರ: ಹಿಂದುಳಿದ ವರ್ಗ ಎ’ ಮಹಿಳೆಗೆ ಮೀಸಲಾದ ಕಳಾರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ತಮನ್ನಾ ಜಬೀನ್ 201 ಮತ ಪಡೆದು ವಿಜಯಿಯಾಗಿದ್ದಾರೆ, ಬಿಜೆಪಿಯಿಂದ ಪ್ರೇಮಾ 0, ಎಸ್‌ಡಿಪಿಐನಿಂದ ಸಮೀರಾ ಹಾರಿಸ್ 74, ಪಕ್ಷೇತರರಾಗಿ ಜೈನಾಬಿ. 139 ಮತಗಳನ್ನು ಪಡೆದಿದ್ದಾರೆ.

Ad Widget

Ad Widget <> Ad Widget

ವಾರ್ಡ್ 2-ಕೋಡಿಬೈಲು: ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾದ ಕೋಡಿಬೈಲು ಕ್ಷೇತ್ರದಲ್ಲಿ ಜಿಪಿಯಿಂದ ಕುಸುಮ ಅಂಗಡಿಮನೆ 187 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ. ಕಾಂಗ್ರೆಸ್‌ನಿಂದ ಮೋಹಿನಿ 177 ಮತ ಪಡೆದಿದ್ದಾರೆ-4 ನೋಟಾ ಮತಗಳು ಬಿದ್ದಿವೆ.

ವಾರ್ಡ್ 3-ಪನ್ಯ: ಸಾಮಾನ್ಯ ಅಭ್ಯರ್ಥಿಗೆ ಮೀಸಲಾದ ಪನ್ನ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಹಮ್ಮದ್ ಪೈಝಲ್ 320 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ, ಬಿಜೆಪಿಯಿಂದ ಆದಂ ಕುಂಡೋಳಿ 75, ಎಸ್‌ಡಿಪಿಐನಿಂದ ಹಾರಿಸ್ ಕಳಾರ 6, ಮುಸ್ಲಿಂ ಲೀಗ್‌ನಿಂದ ಕೆ. ಅಬ್ದುಲ್ ರಝಾಕ್ 2 ಮತಗಳನ್ನು ಪಡೆದಿದ್ದಾರೆ.

Ad Widget

Ad Widget

ವಾರ್ಡ್ 4-ಬೆದ್ರಾಜಿ: ಸಾಮಾನ್ಯ ಮೀಸಲು ಬೆದ್ರಾಜೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸೈಮನ್ ಸಿ.ಜೆ 232 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ, ಬಿಜೆಪಿಯಿಂದ ಅಶೋಕ್ ಕುಮಾರ್ ಪಿ. 168 ಮತಗಳನ್ನು ಪಡೆದಿದ್ದಾರೆ.

ವಾರ್ಡ್ 5-ಮಾಲೇಶ್ವರ: ಹಿಂದುಳಿದ ವರ್ಗಎ’ಗೆ ಮೀಸಲಾದ ಮಾಲೇಶ್ವರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಹನೀಫ್‌ ಕೆ.ಎಂ. 297 ಮತ ಪಡೆದು ವಿಜಯಿಯಾಗಿದ್ದಾರೆ. ಬಿಜೆಪಿಯಿಂದ ಪ್ರಕಾಶ್ ಎನ್.ಕೆ.213 ಮತ ಪಡೆದಿದ್ದಾರೆ.

ವಾರ್ಡ್ 6-ಕಡಬ: ಸಾಮಾನ್ಯ ಮಹಿಳೆಗೆ ಮೀಸಲಾದ ಕಡಬ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ನೀಲಾವತಿ ಶಿವರಾಮ್ 314 ಮತ ಪಡೆದು ವಿಜಯಿಯಾಗಿದ್ದಾರೆ, ಬಿಜೆಪಿಯಿಂದ ಪ್ರೇಮಾ 176 ಮತ, ಪಕ್ಷೇತರರಾಗಿ ಆಲೀಸ್ ಚಾಕೊ 16, ಎಸ್‌ಡಿಪಿಐನಿಂದ ಸ್ಮಾಲಿಯತ್ ಜಸೀರಾ 78 ಮತ ಪಡೆದಿದ್ದಾರೆ.

ವಾರ್ಡ್ 7-ಪಣೆಮಜಲು: ಹಿಂದುಳಿದ ವರ್ಗ ಬಿ’ಗೆ ಮೀಸಲಾದ ಪಣೆಮಜಲು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ರೋಹಿತ್ ಗೌಡ 333 ಮತ ಪಡೆದು ವಿಜಯಿಯಾಗಿದ್ದಾರೆ, ಬಿಜೆಪಿಯಿಂದ ಗಣೇಶ್ ಗೌಡ 248 ಮತ ಪಡೆದಿದ್ದಾರೆ.

ವಾರ್ಡ್ 8-ಪಿಜಕ್ಕಳ: ಸಾಮಾನ್ಯ ಮೀಸಲು ಪಿಜಕ್ಕಳ ಕ್ಷೇತ್ರದಲ್ಲಿ ಬಿಜೆಪಿಯಿಂದ ದಯಾನಂದ ಗೌಡ ಪಿ. 386 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ. ಕಾಂಗ್ರೆಸ್‌ನಿಂದ ಅಶ್ರಫ್ ಶೇಡಿಗುಂಡಿ 184 ಮತಗಳನ್ನು ಪಡೆದಿದ್ದಾರೆ.

ವಾರ್ಡ್ 9-ಮೂರಾಜೆ: ಹಿಂದುಳಿದ ವರ್ಗಎ’ಗೆ ಮೀಸಲಾದ ಮೂರಾಜೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕೃಷ್ಣಪ್ಪ ಪೂಜಾರಿ 263 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ. ಬಿಜೆಪಿಯಿಂದ ಕುಂಞಣ್ಣ ಕುದ್ರಡ್ಕ 235 ಮತ, 5 ನೋಟಾ ಮತಗಳು ಬಿದ್ದಿವೆ.

ವಾರ್ಡ್ 10-ದೊಡ್ಡಕೊಪ್ಪ: ಸಾಮಾನ್ಯ ಮಹಿಳೆಗೆ ಮಿಸಲಾದ ದೊಡ್ಡಕೊಪ್ಪ ಕ್ಷೇತ್ರದಲ್ಲಿ ಬಿಜೆಪಿಯಿಂದ ಗುಣವತಿ ರಘುರಾಮ 393 ಮತ ಪಡೆದು ವಿಜಯಿಯಾಗಿದ್ದಾರೆ, ಕಾಂಗ್ರೆಸ್‌ನಿಂದ ತುಳಸಿ ಅವರಿಗೆ 258 ಮತ ಹಾಗೂ 9ನೋಟಾ ಮತ ಬಿದ್ದಿದೆ.

ವಾರ್ಡ್ 11-ಕೋಡಿಂಬಾಳ: ಸಾಮಾನ್ಯ ಮಹಿಳೆಗೆ ಮೀಸಲಾದ ಕೋಡಿಂಬಾಳ ಕ್ಷೇತ್ರದಲ್ಲಿ ಬಿಜೆಪಿಯಿಂದ ಅಕ್ಷತಾ ಬಾಲಕೃಷ್ಣ ಗೌಡ265 ಮತ ಪಡೆದು ವಿಜಯಿಯಾಗಿದ್ದಾರೆ. ಕಾಂಗ್ರೆಸ್‌ನಿಂದ ಜ್ಯೋತಿ ಡಿ.ಕೋಲೆ 255 ಮತ ಪಡೆದಿದ್ದಾರೆ

ವಾರ್ಡ್ 12-ಮಜ್ಜಾರು: ಪರಿಶಿಷ್ಟ ಜಾತಿ ಅಭ್ಯರ್ಥಿಗೆ ಮೀಸಲಾದ ಮಜ್ಞಾರು ಕ್ಷೇತ್ರದಲ್ಲಿ ಬಿಜೆಪಿಯಿಂದ ಮೋಹನ 306 ಮತ ಪಡೆದು ವಿಜಯಿಯಾಗಿದ್ದಾರೆ, ಕಾಂಗ್ರೆಸ್‌ನಿಂದ ಉಮೇಶ್ ಮಡ್ಯಡ್ಕ ಸ್ಪರ್ಧಿಸಿ 238 ಮತ ಪಡೆದಿದ್ದಾರೆ. 2 ನೋಟಾ ಮತಗಳು ಬಿದ್ದಿವೆ.

ವಾರ್ಡ್ 13-ಪುಳಿಕುಕ್ಕು: ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಪುಳಿಕುಕ್ಕು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕೃಷ್ಣ ನಾಯ್ಕ 315 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ, ಬಿಜೆಪಿಯಿಂದ ಸದಾನಂದ ನಾಯ್ಕ ಅವರು ಸ್ಪರ್ಧಿಸಿ, 264 ಮತ ಪಡೆದಿದ್ದಾರೆ.

Ad Widget
Click to comment

Leave a Reply

ಶಿಕ್ಷಣ

Narendra-ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಇಚ್ಚಿಕ ಜೈನ್ ಇವರು ಕರಾಟೆ ಸ್ಪರ್ಧೆಯಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI)ಗೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.

Ad Widget

Ad Widget <> Ad Widget

ಇವರು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಸಂಸ್ಥೆಯ ತರಬೇತುದಾರರಾದ ಶಿವಪ್ರಸಾದ್ ಡಿ. ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ರಕ್ಷಕ-ಶಿಕ್ಷಕ ಸಂಘ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಯ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.

Continue Reading

ಶಿಕ್ಷಣ

Vivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ

Published

on

Ad Widget

Ad Widget

Ad Widget

Ad Widget

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.

Ad Widget

Ad Widget

Ad Widget

Ad Widget

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.

Ad Widget

Ad Widget alt="Ad Widget"/>

Ad Widget

ಪೌಢ ಶಾಲಾ ವಿಭಾಗದಲ್ಲಿ ಚಿಂತನ. ಎಂ (ದಿ.ಸೀತಾರಾಮ ಮೇಲ್ಪಾಡಿ ಹಾಗೂ ಸರೋಜ ಮೇಲ್ಪಾಡಿಯವರ ಪುತ್ರಿ)ಚಿತ್ರಕಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ರಾಜ್ಯಮಟ್ಟದ ಸ್ಪರ್ಧೆಗಳು ಮುಂಬರುವ ಜನವರಿ ತಿಂಗಳಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.

Ad Widget
Continue Reading

ಶಿಕ್ಷಣ

Narendra-ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ-ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1 ಆದ ರಾಮಕೃಷ್ಣ ಪಡುಮಲೆ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಕ್ರೀಡೆಯು ಜೀವನದ ಒಂದು ಭಾಗವಾಗಿದ್ದು,ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಶಿಸ್ತು, ಆತ್ಮವಿಶ್ವಾಸ ಮತ್ತು ಸಾಮಾಜಿಕ ಕೌಶಲ್ಯಗಳನ್ನು ಬೆಳೆಸುತ್ತದೆ.ನಾಯಕತ್ವ, ತಾಳ್ಮೆ, ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದ ಮೌಲ್ಯಗಳನ್ನು ಕಲಿಸುತ್ತದೆ.ಮನಸ್ಸಿನ ಸ್ಥಿತಿಯನ್ನು ಸುಧಾರಿಸುತ್ತದೆ.ಸೋಲು ಮತ್ತು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತದೆ.ತಂಡದ ಕೆಲಸ, ಒಗ್ಗಟ್ಟು ಮತ್ತು ಪರಸ್ಪರ ಸಹಕಾರವನ್ನು ಹೆಚ್ಚಿಸುತ್ತದೆ.ಯಶಸ್ಸಿನ ಶಿಖರವನ್ನು ಸಾಧಿಸಲು ವರ್ಷಗಳ ಕಠಿಣ ತರಬೇತಿಯನ್ನು ನಿಗದಿಪಡಿಸುತ್ತದೆ ಎಂಬುದನ್ನು ಗುರುತಿಸುತ್ತದೆ ಎಂದು ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1ಆದ ರಾಮಕೃಷ್ಣ ಪಡುಮಲೆ ಇವರು ಹೇಳಿದರು.

Ad Widget

Ad Widget alt="Ad Widget"/>

Ad Widget

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

Ad Widget

Ad Widget <> Ad Widget

ಕ್ರೀಡಾಕೂಟದಲ್ಲಿ ಧ್ವಜಾರೋಹಣ ಮತ್ತು ಗೌರವ ವಂದನೆಯನ್ನು ಸ್ವೀಕರಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಶುಭಾ ಅಡಿಗ ಇವರು ಮಾತನಾಡುತ್ತಾ“ಇಂದಿನ ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಅವರು ಛಲಬಿಡದೆ ಸಾಧನೆ ಮಾಡಿ ಜೀವನವನ್ನು ರೂಪಿಸಿಕೊಳ್ಳುತ್ತಾರೆ.ಇಂತಹ ದೃಢ ಮನಸ್ಸಿನ ನಾಗರಿಕರೇ ಸ್ವಸ್ಥ ಸಮಾಜದ ರೂವಾರಿಗಳು.ಅದಕ್ಕಾಗಿ ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿರಬೇಕು. “ಎಂದು ಹೇಳಿದರು.
ಕರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಸತ್ಯನಾರಾಯಣ ಬಿ. ಇವರು ಮಾತನಾಡುತ್ತಾ“ಕ್ರೀಡೆ ಸಹಶಿಕ್ಷಣದ ಒಂದು ಭಾಗ.ಮನಸ್ಸಿನ ಸಮತೋಲಿತ ಬೆಳವಣಿಗೆಗೆ ಮುಖ್ಯಕಾರಣ ಕ್ರೀಡೆ.ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವಿನ ಅರ್ಥವನ್ನು ತಿಳಿದುಕೊಳ್ಳಬೇಕು.ಈ ಮೂಲಕ ಜಿವನದಲ್ಲಿ ಸಮಚಿತ್ತವನ್ನು ಸಾಧಿಸಿಕೊಳ್ಳಬಹುದು.ಉತ್ತಮ ಕ್ರೀಡಾಪಟು ಉತ್ತಮ ವಿದ್ಯಾರ್ಥಿಯಾಗುತ್ತಾನೆ.ಉತ್ತಮ ವಿದ್ಯಾರ್ಥಿಉತ್ತಮ ನಾಗರಿಕನಾಗುತ್ತಾನೆ.ನಮ್ಮ ಹಾದಿಯ ಪ್ರಗತಿಯನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ಯಶಸ್ವಿ ಜೀವನವನ್ನುರೂಪಿಸಲು ಕ್ರೀಡೆಯು ಸಹಾಯಮಾಡುತ್ತದೆ.” ಎಂದು ಹೇಳಿದರು.

ವಿದ್ಯಾರ್ಥಿಗಳ ವಿವಿಧ ತಂಡಗಳ ಶಿಸ್ತುಬದ್ಧ ಪಥಸಂಚಲನ ನಡೆಯಿತು.ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು.

Ad Widget

Ad Widget

ಜಿಲ್ಲಾ ,ರಾಜ್ಯ ಮತ್ತು ರಾಷ್ಟçಮಟ್ಟದ ವಿವಿಧಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನುತರುವುದರ ಮೂಲಕ ಕರ‍್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ವಿದ್ಯಾರ್ಥಿಗಳ ಆಕರ್ಷಕ ಬ್ಯಾಂಡ್ ಸೆಟ್ ಪಥಸಂಚಲನ ಕರ‍್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ,ಮಾತನಾಡುತ್ತಾ“ಕ್ರೀಡೆಯು, ಆತ್ಮವಿಶ್ವಾಸ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿ.ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯ ಮೂಲವಾಗಿದೆ.ವ್ಯಾಯಾಮದ ಅತ್ಯುತ್ತಮ ಸಾಧನವೆಂದು ಪರಿಗಣಿಸಲಾಗಿದೆ.ಹಾಗಾಗಿ ಈ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಸದೃಢ ಪ್ರಜೆಗಳಾಗಿ ಮುನ್ನಡೆಯಿರಿ ”ಎಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಅರುಣ್ ಬಿ.ಕೆ. ಇವರು ಉಪಸ್ಥಿತರಿದ್ದರು.

ಈ ಕ್ರೀಡಾಕೂಟದಲ್ಲಿ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ್, ನಮಿತಾ, ಮತ್ತು ಕಾಲೇಜಿನ ಕ್ರೀಡಾ ತರಬೇತುದಾರರಾದ ಮನೋಹರ್ ಎನ್. ರವರು ಸಹಕರಿಸಿದರು.

ಕಾರ್ಯಕ್ರಮದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಲೋಚನಾ ವಂದಿಸಿದರು. ಉಪನ್ಯಾಸಕರಾದ ಮಮತಾ ಮತ್ತು ಅಪೂರ್ವ ಕಾರ‍್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!