ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಹ್ಯಾಕಥಾನ್ ಕಾರ್ಯಕ್ರಮ
ಸಂತ ಫಿಲೋಮಿನಾ ಕಾಲೇಜಿನ ಗಣಕವಿಜ್ಞಾನ ವಿಭಾಗ, ಸ್ನಾತಕೋತ್ತರ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗ ಹಾಗೂ ಇನ್ಟಿಟ್ಯೂಶನ್ಸ್ ಇನೊವೇಶನ್‌ಕೌನ್ಸಿಲ್(ಐಐಸಿ) ಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಇನೊವೇಶನ್ ಸೆಂಟರ್‌ನಲ್ಲಿ ಕಂಪ್ಯೂಟರ್ ಅಪ್ಲಿಕೇಶನ್ ಹಾಗೂ ಕಂಪ್ಯೂಟರ್ ಸಯನ್ಸ್‌ನ ವಿದ್ಯಾರ್ಥಿಗಳಿಗಾಗಿ 8 ಗಂಟೆಗಳ ಹ್ಯಾಕಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ಗಣಕವಿಜ್ಞಾನ ವಿಭಾಗ, ಸ್ನಾತಕೋತ್ತರ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗ ಹಾಗೂ ಇನ್ಟಿಟ್ಯೂಶನ್ಸ್ ಇನೊವೇಶನ್‌ಕೌನ್ಸಿಲ್(ಐಐಸಿ) ಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಇನೊವೇಶನ್ ಸೆಂಟರ್‌ನಲ್ಲಿ ಕಂಪ್ಯೂಟರ್ ಅಪ್ಲಿಕೇಶನ್ ಹಾಗೂ ಕಂಪ್ಯೂಟರ್ ಸಯನ್ಸ್‌ನ ವಿದ್ಯಾರ್ಥಿಗಳಿಗಾಗಿ 8 ಗಂಟೆಗಳ ಹ್ಯಾಕಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಹ್ಯಾಕಥಾನ್‌ನ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೇರೊರವರು ವಹಿಸಿದ್ದರು. ದೀಪ ಬೆಳಗಿಸಿ ಉದ್ಘಾಟನೆಗೈದು ಮಾತನಾಡಿದ ಅವರು “ ಸೃಜನಶೀಲತೆ ಎಂದರೆ ಹೊಸ ವಿಷಯಗಳನ್ನು ಕಲ್ಪಿಸಿಕೊಂಡು ಅವುಗಳನ್ನು ಕಾರ್ಯರೂಪಕ್ಕೆ ತರಲು ಮುತುವರ್ಜಿವಹಿಸುವುದು. ನಮ್ಮ ವಿದ್ಯಾರ್ಥಿಗಳು ಈ ರೀತಿಯ ಸೃಜನಶೀಲತೆಯನ್ನು ಅಭಿವೃದ್ಧಿಪಡಿಸಿಕೊಳ್ಳುವ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು ಸಂತಸದ ವಿಚಾರ. ತಂತ್ರಜ್ಞಾನವು ಜೀವನದ ಅವಿಭಾಜ್ಯ ಅಂಗವಾಗಿರುವ ಈ ಕಾಲಘಟ್ಟದಲ್ಲಿ ಅದರ ಸಮರ್ಪಕ ಬಳಕೆಯಿಂದಾಗಿ ನೀವುಗಳು ರೂಪಿಸಿದ ಒಂದೊಂದು ಕಲ್ಪನೆಯೂ ಮುಂದೆ ಸಮಾಜದಲ್ಲಿ ಧನಾತ್ಮಕ ಬದಲಾವಣೆಯನ್ನು ತರುವಲ್ಲಿ ಸಹಕಾರಿಯಾಗುವುದು.

ನೀವು ಮಾಡುವ ಪ್ರತಿಯೊಂದು ಸಣ್ಣ ಪ್ರಯತ್ನವು ಸಮಾಜದ ಮೇಲೆ ದೊಡ್ಡ ಪರಿಣಾಮ ಬೀರಬಹುದು. ಗ್ಯಾಜೆಟ್ ಹಾಗೂ ತಂತ್ರಜ್ಞಾನವನ್ನು ಬಳಸಿ ಸಮಾಜದಲ್ಲಿ ಗೊಂದಲಗಳನ್ನು ಸೃಷ್ಠಿಸದೆ ಅವುಗಳನ್ನು ರಚನಾತ್ಮಕ ಕಾರ್ಯಗಳಿಗೆ ಜವಾಬ್ದಾರಿಯುತವಾಗಿ ಬಳಸಿರಿ“ ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿ ಸಂಘಟಕರನ್ನು ಅಭಿನಂದಿಸಿದರು.
ಎಂಸಿಎ ವಿದ್ಯಾರ್ಥಿನಿ ನಿರ್ಮಿತಾ ಮತ್ತು ಬಳಗ ಪ್ರಾರ್ಥಿಸಿದರು. ಕಾಲೇಜಿನ ಗಣಕವಿಜ್ಞಾನ ವಿಭಾಗದ ಡೀನ್ ಹಾಗೂ ಮುಖ್ಯಸ್ಥರಾದ ಡಾ. ವಿನಯಚಂದ್ರ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎಂಸಿಎ ವಿದ್ಯಾರ್ಥಿನಿ ನಿರೀಕ್ಷಾ ವಂದಿಸಿ ಅಪೂರ್ವ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಇನೊವೇಶನ್ ಸೆಂಟರ್‌ನ ಡಿಸ್ಟ್ರಿಕ್ಟ್ ಇನ್ನೊವೇಟಿವ್ ಅಸೋಸಿಯೇಟ್ ಅಭಿಷೇಕ್ ಸುವರ್ಣ ಹಾಗೂ ಐಐಸಿ ಘಟಕದ ಸಂಯೋಜಕಿ ಡಾ. ಗೀತಾ ಪೂರ್ಣಿಮಾ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತಲಾ ಮೂವರು ವಿದ್ಯಾರ್ಥಿಗಳಿದ್ದ 23 ತಂಡಗಳು ಭಾಗವಹಿಸಿದ್ದವು. ಶಿಕ್ಷಣ, ಆರೋಗ್ಯ ಹಾಗೂ ಸುಸ್ಥಿರ ಪರಿಸರ ಎಂಬ ಮೂರು ವಿಭಾಗಗಳಿದ್ದು ವಿದ್ಯಾರ್ಥಿಗಳಿಗೆ ತಮಗಿಷ್ಟವಾದ ವಿಷಯಗಳ ಮೇಲೆ ಕ್ರಿಯಾತ್ಮಕ, ಸೃಜನಶೀಲ ಹಾಗೂ ಕಾರ್ಯಗತಗೊಳಿಸಬಹುದಾದ ಸಮಸ್ಯೆಗೆ ಪರಿಹಾರ ಸೂಚಿಸಲು ಅವಕಾಶವಿತ್ತು. ಬೆಳಗ್ಗೆ 8 ಗಂಟೆಗೆ ಪ್ರಾರಂಭವಾದ ಕಾರ್ಯಕ್ರಮವು ಸಾಯಂಕಾಲ 5:30 ಸಂಪನ್ನಗೊಂಡಿತು.

ಕಂಪ್ಯೂಟ್ ಸಯನ್ಸ್ ವಿಭಾಗದ ಉಪನ್ಯಾಸಕರಾದ ವಾರಿಜಾ ಎಂ, ಅಕ್ಷತಾ ಬಿ, ಸುರಕ್ಷಾ ಎಸ್, ಚೈತ್ರ ಎನ್ ಪಿ, ನೀಲಮ್ ಕುಟ್ಟಪ್ಪ, ಕೀರ್ತನಾ ಪಿ, ಶ್ರದ್ಧಾ ಎ ಎಸ್, ಜಯಶ್ರೀ ಹೆಚ್, ರಶ್ಮಿ ವಿ, ಫಾತಿಮತ್ ಸಾನಿದ, ಸಮೀದ, ಶ್ರುತಿ ರೈ ಹಾಗೂ ಶೋಧನ್ ಪಿ ಜಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಪ್ರಥಮ ಎಂಸಿಎ ವಿದ್ಯಾರ್ಥಿನಿಯರಾದ ಚೈತನ್ಯ, ಚೈತನ್ಯ ಕೆ, ಹರಿಣಾಕ್ಷಿ, ಪೂಜಾ, ಶಿಲ್ಪ, ಹಾಗೂ ಶ್ರೇಯಾ ಕಾರ್ಯಕ್ರಮವನ್ನು ಸುಗಮವಾಗಿ ನಿರ್ವಹಿಸುವಲ್ಲಿ ಸಹಕಾರ ನೀಡಿದರು. ಕಾರ್ಯಕ್ರಮದುದ್ದಕ್ಕೂ ವಿದ್ಯಾರ್ಥಿಗಳು ಬದ್ಧತೆ, ಶಿಸ್ತು, ಸೃಜನಶೀಲತೆ ಹಾಗೂ ಅಸಾಮಾನ್ಯ ತಂಡ ಸ್ಪೂರ್ತಿಯನ್ನು ಪ್ರದರ್ಶಿಸಿದರು. ಒಟ್ಟಿನಲ್ಲಿ ಕಾರ್ಯಕ್ರಮವು ಭಾಗವಹಿಸಿದ ಪ್ರತಿಯೋರ್ವನಲ್ಲೂ ಸ್ಪೂರ್ತಿದಾಯಕ ಹಾಗೂ ಅವಿಸ್ಮರಣೀಯ ಭಾವನೆಗಳನ್ನುಂಟುಮಾಡುವಲ್ಲಿ ಯಶಸ್ವಿಯಾಯಿತು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ಮಂಗಳೂರು10 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ13 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ15 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್15 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಬಿಗ್ ನ್ಯೂಸ್7 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು8 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ10 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಅಪರಾಧ15 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು


















