ಸ್ಥಳೀಯ
Vinay Kumar Sorake-ತಿಮರೋಡಿ ಹಿಂದೆ ಯಾರಿದ್ದಾರೆ..? ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕಾಂಗ್ರೆಸ್ ಮುಖಂಡ ವಿನಯ ಕುಮಾರ್ ಸೊರಕೆ ಗಂಭೀರ ಆರೋಪ
ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಅವರು ‘ಧರ್ಮಸ್ಥಳದ ವಿರುದ್ಧ ಧ್ವನಿ ಎತ್ತಿರುವ ಮಹೇಶ ಶೆಟ್ಟಿ ತಿಮರೋಡಿ ಯಾವ ಮೂಲದವರು? ತಿಮರೋಡಿಗೆ ಪ್ರಚೋದನೆ ಕೊಡುತ್ತಿರುವವರು ಯಾರು? ಧರ್ಮಸ್ಥಳ ಪ್ರಕರಣದಲ್ಲಿ ಒಂದು ಕಡೆ ಚಿವುಟುವುದು, ಇನ್ನೊಂದು ಕಡೆ ತೂಗುವ ಕೆಲಸವನ್ನು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
ವಿಜಯಪುರ: ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಅವರು ‘ಧರ್ಮಸ್ಥಳದ ವಿರುದ್ಧ ಧ್ವನಿ ಎತ್ತಿರುವ ಮಹೇಶ ಶೆಟ್ಟಿ ತಿಮರೋಡಿ ಯಾವ ಮೂಲದವರು? ತಿಮರೋಡಿಗೆ ಪ್ರಚೋದನೆ ಕೊಡುತ್ತಿರುವವರು ಯಾರು? ಧರ್ಮಸ್ಥಳ ಪ್ರಕರಣದಲ್ಲಿ ಒಂದು ಕಡೆ ಚಿವುಟುವುದು, ಇನ್ನೊಂದು ಕಡೆ ತೂಗುವ ಕೆಲಸವನ್ನು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
‘ಕರಾವಳಿಯಲ್ಲಿ ಯಾವುದೇ ಧಾರ್ಮಿಕ ಉದ್ರೇಕಕಾರಿ ಕಾರ್ಯಕ್ರಮಗಳು ನಡೆದರೂ ಅದರ ಹಿಂದೆ ಸಂಘ ಪರಿವಾರದ ಕಲ್ಲಡ್ಕ ಪ್ರಭಾಕರ ಭಟ್ ಇರುತ್ತಾರೆ. ಆದರೆ, ಬಿಜೆಪಿ ಶಾಸಕರು ಮೊನ್ನೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಬಂದಾಗ ಕಲ್ಲಡ್ಕ ಪ್ರಭಾಕರ ಭಟ್ರು ಏಕೆ ಇರಲಿಲ್ಲ’ ಎಂದು ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.
‘ಧರ್ಮಸ್ಥಳ ವಿಷಯದಲ್ಲಿ ಕಾಂಗ್ರೆಸ್, ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿಯವರ ಯಾವುದೇ ಹಿತಾಸಕ್ತಿ ಇಲ್ಲ. ಕೋರ್ಟ್ ಆದೇಶದ ಮೇರೆಗೆ ಎಸ್‌ಐಟಿ ರಚನೆಯಾಗಿ, ತನಿಖೆಯಾಗುತ್ತಿದೆ. ವೀರೇಂದ್ರ ಹೆಗ್ಗಡೆ ಅವರೂ ಎಸ್‌ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ. ಶೀಘ್ರ ವಾಸ್ತವಾಂಶ ಹೊರಬರಲಿದೆ’ ಎಂದು ಹೇಳಿದರು.
ಯತ್ನಾಳ ಇನ್ನೊಬ್ಬ ಮುತಾಲಿಕ್:
‘ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಾಡಿನ ಸೌಹಾರ್ದ ಕೆಡಿಸುವ, ಕೋಮು ಪ್ರಚೋದನೆ ಮಾಡುವ ವಿಷಯದಲ್ಲಿ ಇನ್ನೊಬ್ಬ ಮುತಾಲಿಕ್ ಆಗಲು ಹೊರಟಿದ್ದಾರೆ. ಅವರ ಯಾವುದೇ ಪ್ರಯೋಗಗಳು ರಾಜ್ಯದಲ್ಲಿ ಯಶಸ್ವಿಯಾಗುವುದಿಲ್ಲ’ ಎಂದರು.
ಶಿಕ್ಷಣ
Puttur-ವಿದ್ಯಾರ್ಥಿಗಳ ಜೊತೆ ಶಾಸಕ ಅಶೋಕ್ ರೈ ಸಂವಾದ; ಬೇಡಿಕೆ-ಸಮಸ್ಯೆಗಳ ಬಗ್ಗೆ ಚರ್ಚೆ- ನಿಮ್ಮ ಭವಿಷ್ಯಕ್ಕೆ ಭದ್ರಬುನಾದಿ ಕಟ್ಟಿಕೊಳ್ಳಿ: ವಿದ್ಯಾರ್ಥಿಗಳಿಗೆ ಶಾಸಕ ಅಶೋಕ್ ರೈ
ಪುತ್ತೂರು ಎಪಿಎಂಸಿ ಸಭಾಂಗಣದಲ್ಲಿ ಸೆ.3 ರಂದು ಪುತ್ತೂರಿನ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರ ಜೊತೆ ಶಾಸಕರು ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದರು. ಶಾಸಕರು ವಿದ್ಯಾರ್ಥಿಗಳ ಜೊತೆ ಸುಮಾರು 2 ಗಂಟೆಗಳ ಕಾಲ ವಿವಿಧ ವಿಚಾರಗಳಿಗೆ ಸಂಬಧಿಸಿ ಸಂವಾದ, ಚರ್ಚೆ ನಡೆಸಿದರು.

ಪುತ್ತೂರು: ನಿಮ್ಮ ಭವಿಷ್ಯ ನಿಮ್ಮ ಕೈಯ್ಯಲ್ಲಿದೆ, ನೀವು ಶಿಕ್ಷಣ ಪಡೆದು ನಾಳೆಯ ಬದುಕಿಗೆ ಸುಂದರ ಹೆಜ್ಜೆ ಇಡುವ ಸಮಯ, ನೀವು ಏನಾಂಗಬೇಕೆಂದು ಬಯಸಿದ್ದೀರೋ ಅದನ್ನು ಸಾಧಿಸಿ ಸಫಲರಾಗುವ ಛಲ ನಿಮ್ಮಲ್ಲಿರಬೇಕು. ಶಿಕ್ಷಣವಂತರಾಗಿ ಸಾಧನೆ ಮಾಡುವ ಮೂಲಕ ಕಲಿತ ಸಂಸ್ಥೆಗೆ, ಊರಿಗೆ, ದೇಶಕ್ಕೆ ಕೀರ್ತಿ ತರುವ ಕೆಲಸವನ್ನು ಪ್ರತೀಯೊಬ್ಬರೂ ಮಾಡಬೇಕು, ನಿಮ್ಮ ಶಿಕ್ಷಣಕ್ಕೆ ಏನು ನೆರವು ಬೇಕೋ ಅದನ್ನು ನಾನು ಮಾಡುವೆ ಎಂದು ಶಾಸಕ ಅಶೋಕ್ ರೈ ಅವರು ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ.
ಪುತ್ತೂರು ಎಪಿಎಂಸಿ ಸಭಾಂಗಣದಲ್ಲಿ ಸೆ.3 ರಂದು ಪುತ್ತೂರಿನ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರ ಜೊತೆ ಶಾಸಕರು ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದರು. ಶಾಸಕರು ವಿದ್ಯಾರ್ಥಿಗಳ ಜೊತೆ ಸುಮಾರು 2 ಗಂಟೆಗಳ ಕಾಲ ವಿವಿಧ ವಿಚಾರಗಳಿಗೆ ಸಂಬಧಿಸಿ ಸಂವಾದ, ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಶಾಸಕರು ವಿದ್ಯಾರ್ಥಿ ಜೀವನ ಎಂಬುದು ನಮ್ಮ ಭವಿಷ್ಯವನ್ನು ನಿರ್ಧಾರ ಮಾಡುತ್ತದೆ. ನೀವು ಮುಂದೆ ಏನು ಆಗಬೇಕೆಂದು ಬಯಸಿದ್ದೀರೋ ಅದನ್ನು ಈಡೇರಿಸುವ ಸಮಯ ವಿದ್ಯಾರ್ಥಿ ಜೀವನ. ಎಲ್ಲಿ, ಏನೆಲ್ಲಾ ಕಲಿಯಲು ಅವಕಾಶವಿದೆಯೋ ಅದೆಲ್ಲವನ್ನೂ ಕಲಿತು ಜ್ಞಾನವನ್ನು ವೃದ್ದಿಸಿಕೊಳ್ಳಬೇಕು. ಕಲಿತ ವಿದ್ಯೆ ಎಂದೂ ವ್ಯರ್ಥವಾಗುವುದೇ ಇಲ್ಲ. ಕಲಿಕೆಯ ಜೊತೆ ಇತರೆ ಶೈಕ್ಷಣಿಕ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವು ಮ್ತತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಮೂಲಕ ಜೀವನಕ್ಕೆ ಮುನ್ನುಡಿ ಬರೆಯವ ಛಲ ಎಲ್ಲರಲ್ಲೂ ಇರಬೇಕು ಎಂದು ಹೇಳಿದರು.
ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣಕ್ಕೆ ಒತ್ತು ಕೊಡಿ
ವಿದ್ಯಾರ್ಥಿಗಳನ್ನು ರಾಜಕೀಯ ಶಕ್ತಿಗಳು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುವ ಇಂದಿನ ಕಾಲಘಟ್ಟದಲ್ಲಿ ನೀವು ಅತ್ಯಂತ ಎಚ್ಚರದಿಂದ ಇರಬೇಕು. ವಿದ್ಯಾರ್ಥಿಗಳು ವಿದ್ಯಾರ್ಥಿಗಳಾಗಿಯೇ ಇರಬೇಕು ವಿನಾ ನಿಮ್ಮ ಕಲಿಕೆಯ ಕಾಲದಲ್ಲಿ ರಾಜಕೀಯದವರ ಬಲಿಪಶುಗಳಾಗಬೇಡಿ. ನಿಮ್ಮ ತಂದೆ ತಾಯಿ ಕಷ್ಟದಿಂದ ಯಾವುದೋ ಉದ್ದೇಶ ಇಟ್ಟುಕೊಂಡು ನಿಮಗೆ ಶಿಕ್ಷಣ ನೀಡುತ್ತಿರಬಹುದು ಅವರ ನಿರೀಕ್ಷೆಯನ್ನು ಎಂದೂ ಮಣ್ಣು ಪಾಲುಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಶಾಸಕರು ಸಲಹೆ ನೀಡಿದರು.
ಎಲ್ಲದರಲ್ಲೂ ನಾವೇ ಫಸ್ಟ್ ಆದರೆ ಸರಕಾರಿ ಕೆಲಸದಲ್ಲಿ ಲಾಸ್ಟ್
ಪ್ರತೀ ಬಾರಿ ಶೈಕ್ಷಣಿಕ ವರ್ಷದ ಪಲಿತಾಂಶ ಬಂದಾಗ ದ ಕ ಮತ್ತು ಉಡುಪಿ ಜಿಲ್ಲೆಯವರೇ ಪ್ರಥಮ ಸ್ಥಾನದಲ್ಲಿರುತ್ತಾರೆ, ರ‍್ಯಾಂಕ್ ಹೊಡೆಯುವುದರಲ್ಲೂ ನಾವೇ ಪ್ರಥಮದಲ್ಲಿರುತ್ತೇವೆ ಆದರೆ ಸರಕಾರಿ ಕೆಲಸ ಪಡೆಯುವುದರಲ್ಲಿ ನಾವು ಕೊನೇಯ ಸ್ಥಾನದಲ್ಲಿರುತ್ತೇವೆ. ನಾವು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸದೇ ಇರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಪ್ರತೀಯೊಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ಭಾಗವಹಿಸಬೇಕು. ಸೋಲುತ್ತದೋ, ಗೆಲ್ಲುತ್ತದೋ ಎಂಬುದರ ಬಗ್ಗೆ ನೀವು ಚಿಂತೆ ಮಾಡಬೇಡಿ. ಸೋಲೇ ಜೀವನದ ಗೆಲುವಿನ ಹಾದಿ ಎಂಬುದನ್ನೂ ಯಾರೂ ಮರೆಯಬಾರದು ಎಂದು ಶಾಸಕರು ಹೇಳಿದರು.
ಸಮಸ್ಯೆಗಳನ್ನು ಶಾಸಕರ ಮುಂದಿಟ್ಟ ವಿದ್ಯಾರ್ಥಿಗಳು
ಬೊಳುವಾರಿನಲ್ಲಿರುವ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಕೆಲವೊಂದು ಸಮಸ್ಯೆಗಳನ್ನು, ಬೇಡಿಕೆಗಳನ್ನು ಈ ಸಂದರ್ಭದಲ್ಲಿ ಶಾಸಕರ ಮುಂದಿಟ್ಟರು. ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾಗಿರುವ ಕಾರಣ ಕಾಲೇಜಿನ ಆವರಣದಲ್ಲೇ ಕ್ಯಾಂಟೀನ್ ವ್ಯವಸ್ಥೆ ಮಾಡಬೇಕು ಮತ್ತು ಈ ಕ್ಯಾಂಟೀನ್‌ನಲ್ಲಿ ಕೈಗೆಟಕುವ ಧರದಲ್ಲಿ ವಿದ್ಯಾರ್ಥಿಗಳಿಗೆ ಉಪಹಾರ, ಊಟದ ವ್ಯವಸ್ಥೆಯನ್ನು ಮಾಡಬೇಕು. ನಾವು ವಿದ್ಯಾರ್ಥಿನಿಯರಾದ ಕಾರಣ ನಮಗೆ ಹೊರಗೆ ಹೋಗಿ ಹೊಟೇಲ್‌ಗಳಲ್ಲಿ ಊಟ ಮಾಡುವುದು ಅಷ್ಟು ಸರಿಯಾಗುವುದಿಲ್ಲ ಈ ಕಾರಣಕ್ಕೆ ಕ್ಯಾಂಟೀನ್ ವ್ಯವಸ್ಥೆ ಮಾಡಿ ಎಂದು ಬೇಡಿಕೆ ಇಟ್ಟಾಗ ಶಾಸಕರು ಅದಕ್ಕೆ ಒಪ್ಪಿಗೆ ಸೂಚಿಸಿದರು. ಕಾಲೇಜಿನ ಕಂಪ್ಯೂಟರ್ ಸಂಖ್ಯೆ ಕೇವಲ ನಾಲ್ಕು ಇದೆ ಅದನ್ನು ಹತ್ತಕ್ಕೆ ಏರಿಸಿ ಎಂದು ವಿದ್ಯಾರ್ಥಿಗಳ ಮನವಿಗೆ ಶಾಸಕರು ಸ್ಪಂದಿಸಿದರು. ಕಾಲೇಜಿಗೆ ಬರಲು ಸಿಟಿ ಬಸ್ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದು ಅದಕ್ಕೂ ಶಾಸಕರು ಸ್ಪಂದನೆ ನೀಡಿದರು.
ಉಳಿದಂತೆ ವಿವಿಧ ಗ್ರಾಮಾಂತರ ಭಾಗದಿಂದ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಇದ್ದು ಅದನ್ನು ಶಾಸಕರ ಗಮನಕ್ಕೆ ತಂದರು. ಈಗ ಇರುವ ರೂಟ್‌ಗಳಲ್ಲಿ ಬಸ್‌ನ ಕೊರತೆ ಅಥವಾ ಸಮಯ ವೆತ್ಯಾಸ ಮಾಡಬೇಕಿದ್ದರೆ ಅದನ್ನು ಮಾಡಬಹುದು ಎಂದು ಶಾಸಕರು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ತಿಳಿಸಿದರು.
ನಮಗೆ ವಾಸ ಮಾಡಲು ಮನೆಯಿಲ್ಲ, ನಮಗೆ ಮನೆ ಕಟ್ಟಲು ನಿವೇಶನ ಕೊಡಿ, ನಮ್ಮ ಮನೆ ಕಾಮಗಾರಿ ಆರ್ಧದಲ್ಲಿದೆ, ನಮ್ಮ ಮನೆಯ ಅಕ್ರಮ ಸಕ್ರಮ ಮಾಡಿಕೊಡಿ, ನಮ್ಮ ರಸ್ತೆಗೆ ಕಾಂಕ್ರೀಟ್ ಮಾಡಿ, ನಮಗೆ ಸ್ಪರ್ಧಾತ್ಮ ಪರೀಕ್ಷೆ ಬರೆಯುವಲ್ಲಿ ನಿಮ್ಮ ಸಹಕಾರ ಬೇಕು ಮುಂತಾದ ಕೆಲವೊಂದು ಬೇಡಿಕೆಗಳನ್ನು ವಿದ್ಯಾರ್ಥಿಗಳು ಶಾಸಕರ ಮುಂದಿಟ್ಟರು.
ವಿದ್ಯಾರ್ಥಿಗಳ ಬೇಡಿಕೆಗಳನ್ನು ಸ್ಥಳದಲ್ಲೇ ಮಂಜೂರು ಮಾಡಿದ ಶಾಸಕರು ರಸ್ತೆ ನಿಮಾಣಕ್ಕೆ ಒಟ್ಟು ೫೦ ಲಕ್ಷದ ಅನುದಾನ ಮಂಜೂರು ಮಾಡಿದರು. ಅಕ್ರಮ ಸಕ್ರಮ ಅರ್ಜಿಯ ಮಾಹಿತಿ ನೀಡುವಂತೆಯೂ ಸೂಚನೆಯನ್ನು ನೀಡಿದರು. ಮನೆ ಇಲ್ಲದವರಿಗೆ ನಿವೇಶನ ಕೊಟ್ಟೇ ಕೊಡ್ತೇನೆ ಮನೆ ಕಟ್ಟಲು ಎರಡು ಲಕ್ಷ ರೂ ಕೊಡಿಸುವುದಾಗಿಯೂ ಶಾಸಕರು ವಿದ್ಯಾರ್ಥಿಗಳಲ್ಲಿ ತಿಳಿಸಿದರು.
ಶಾಸಕರ ಸಂವಾದ ಕಾರ್ಯಕ್ರಮ ಒಳ್ಳೆಯ ಕಾರ್ಯಕ್ರಮವಾಗಿದೆ, ನಮ್ಮ ಸಮಸ್ಯೆಗಳನ್ನು ಅವರ ಬಳಿ ಹೇಳಿಕೊಂಡೆವು. ಸಂವಾದದಲ್ಲಿ ಉತ್ತಮ ಮಾಹಿತಿಯೂ ದೊರೆತಿದೆ, ಶಾಸಕರ ಮಾತುಗಳು ನಮಗೆ ಭರವಸೆಗಳನ್ನು ಮೂಡಿಸಿದೆ. ಇಂಥಹ ಕಾರ್ಯಕ್ರಮಗಳು ಇನ್ನೂ ನಡೆಯಬೇಕು. ಅವರಾಗಿಯೇ ನಮ್ಮನ್ನು ಕರೆದು ಈ ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದಾರೆ.
ಗೌತಮಿ , ವಿದ್ಯಾರ್ಥಿನಿ
ಶಾಸಕರು ನಮ್ಮೊಂದಿಗೆ ಚೆನ್ನಾಗಿ ಮಾತನಾಡಿದ್ರು, ಸಮಸ್ಯೆಗಳನ್ನು ಹೇಳಿದ್ದೇವೆ ಅವರು ಆಲಿಸಿದ್ದಾರೆ, ಸಮಸ್ಯೆಗೆ ಪರಿಹಾರ ಕೊಟ್ಟಿದ್ದಾರೆ. ಶಾಸಕರಲ್ಲಿ ಮುಕ್ತವಾಗಿ ಮಾತನಾಡಲು ಅವಕಾಶ ಸಿಕ್ಕಿದೆ. ಶಾಸಕರಿಗೆ ದನ್ಯವಾದಗಳು
ಅಂಕಿತಾ, ವಿದ್ಯಾರ್ಥಿ
ಬೇರೆ ಯಾರೂ ಈ ರೀತಿಯ ಕಾರ್ಯಕ್ರಮ ಮಾಡುವುದಿಲ್ಲ. ನಮಗೆ ಉತ್ತಮ ಮಾರ್ಗದರ್ಶನ ತರಗತಿ ಜೊತೆಗೆ ನಾವು ಜೀವನದಲ್ಲಿ ಮುಂದೆ ಏನು ಮಾಡಬೇಕು, ಹೇಗೆ ವ್ಯಾಸಂಗ ಮಾಡಬೇಕು ಎಂಬುದನ್ನು ಚೆನ್ನಾಗಿ ಮನಮುಟ್ಟುವಂತೆ ನಮಗೆ ವಿವರಿಸಿದ್ದಾರೆ. ಇಂಥಹ ಕಾರ್ಯಕ್ರಮ ಮುಂಧೆಯೂ ನಡೆಯಬೇಕು. ವಿದ್ಯಾರ್ಥಿಗಳ ಸಮಸ್ಯೆ, ಬೇಡಿಕೆಗಳನ್ನು ಆಲಿಸಿದ ಶಾಸಕರಿಗೆ ಅಭಿನಂದನೆಗಳು.
ಅಸ್ಮಾವಿದ್ಯಾರ್ಥಿನಿ
ಶಾಸಕರು ತಮ್ಮ ಮೌಲ್ಯಯುತ ಸಮಯವನ್ನು ವಿದ್ಯಾರ್ಥಿಗಳಿಗಾಗಿ ಮೀಸಲಿಟ್ಟಿದ್ದಾರೆ.ನಮ್ಮ ಕಷ್ಟಗಳನ್ನು ಆಲಿಸಿ ಅದಕ್ಕೆ ಪರಿಹಾರ ಒದಗಿಸಿದ್ದಾರೆ.
ಶಿವಾನಿ ವಿದ್ಯಾರ್ಥಿ
ನನ್ನ ವಿಧಾನ ಸಭಾ ಕ್ಷೇತ್ರದ ಕಾಲೇಜು ವಿದ್ಯಾರ್ಥಿಗಳ ಜೊತೆ ಒಂದು ದಿನ ಬೆರೆತು ಅವರ ಬೇಡಿಕೆ, ಸಮಸ್ಯೆಗಳನ್ನು ಆಲಿಸುವ ಒಂದು ಹೊಸ ಪ್ರಯೋಗವನ್ನು ಆರಂಭಿಸಿದ್ದೇನೆ. ಎಲ್ಲಾ ಕಾಲೇಜು ವಿದ್ಯಾರ್ಥಿಗಳ ಜೊತೆ ಈ ಸಂವಾದ ನಡೆಯಲಿದೆ. ಪ್ರಾರಂಭದಲ್ಲಿ ಪುತ್ತೂರಿನ ಪ್ರಥಮ ದರ್ಜೆ ಸರಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿಗಳನ್ನು ಬೇಟಿಯಾಗಿದ್ದೇನೆ. ಅವರ ಜೊತೆ ಮುಕ್ತವಾಗಿ ಮಾತನಾಡಿದ್ದೇನೆ. ಸಂಪನ್ಮೂಲ ವ್ಯಕ್ತಿಗಳಿಂದ ಅವರಿಗೆ ತರಬೇತಿಯನ್ನು ನೀಡಿದ್ದೇನೆ. ಯುವ ವಿದ್ಯಾರ್ಥಿ ಸಮೂಹದ ಶಿಕ್ಷಣ ಅಥವಾ ಕಲಿಕೆಗೆ ಯಾವುದೇ ತೊಂದರೆಗಳಿದ್ದಲ್ಲಿ ಅದನ್ನು ಪರಿಹರಿಸಿ ಮತ್ತು ಅವರ ಸಮಸ್ಯೆಗಳನ್ನು ಆಲಿಸುವ ಉದ್ದೇಶ ಇದರ ಹಿಂದಿದೆ. ಬಹುತೇಕ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಹಿತ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದೇವೆ
ಅಶೋಕ್ ರೈ, ಶಾಸಕರು, ಪುತ್ತೂರು
ಭರ್ಜರಿ ಊಟೋಪಚಾರ
ಮಧ್ಯಾಹ್ನಕ್ಕೆ ಬಿರಯಾನಿ, ತರಕಾರಿ ಉಪಹಾರ, ಐಸ್‌ಕ್ರೀಂ ನೀಡಲಾಯಿತು. ಭಾಗವಹಿಸಿದ ಪ್ರತೀಯೊಬ್ಬ ವಿದ್ಯಾರ್ಥಿಗೂ ಶಾಸಕರು ಉಡುಗೋರೆ ನೀಡಿ ಗೌರವಿಸಿದರು.
ವಿದ್ಯಾರ್ಥಿಗಳ ಜೊತೆ ಊಟ
ಕಾರ್ಯಕ್ರಮದ ಕೊನೇಯಲ್ಲಿ ವಿದ್ಯಾರ್ಥಿಗಳ ಜೊತೆ ಶಾಸಕರು ಊಟವನ್ನು ಮಾಡಿದರು. ತಾನು ಮನೆಯಿಂದ ತಂದಿದ್ದ ಮೀನ್ fryಯನ್ನು ವಿದ್ಯಾರ್ಥಿಗಳಿಗೆ ಹಂಚಿದರು. ಶಾಸಕರ ಪತ್ನಿ ಸುಮಾ ಅಶೋಕ್ ರೈ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಹುರಿದುಂಬಿಸಿದರು. ರೈ ಚಾರಿಟೇಬಲ್ ಟ್ರಸ್ಟ್ ಕಾಯಾಧ್ಯಕ್ಷ ಸುದೇಶ್ ಶೆಟ್ಟಿ ಉಪಸ್ಥಿತರಿದ್ದರು. ನಿವೃತ್ತ ಅಧ್ಯಾಪಕ ಸತೀಶ್ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.
ವಾಹನದ ವ್ಯವಸ್ಥೆ
ಎಪಿಎಂಸಿ ಸಭಾಂಗಣಕ್ಕೆ ಬರಲು ಕಾಲೇಜಿನಿಂದ ಮಿನಿ ಬಸ್ ವ್ಯವಸ್ಥೆ ಮಾಡಲಾಗಿತ್ತು. ನಿಗಧಿತ ಸಮಯಕ್ಕೆ ವಿದ್ಯಾರ್ಥಿಗಳನ್ನು ಬೀಲ್ಕೊಡಲಾಯಿತು.
ರಾಜಕೀಯ
Puttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.
ಪುತ್ತೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.
ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋರ್ಚಾ ಮುಖಂಡರು, ಪುತ್ತೂರಿನ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವು ಯೋಜನೆಗಳಿಗೆ ಅನುದಾನ ನೀಡಲಾಗಿದೆ ಎಂದು ಹೇಳಿದರು.
2020ರಲ್ಲಿ ಅಂದಿನ ಶಾಸಕ ಸಂಜೀವ ಮಟಂದೂರು ಅವರ ಅವಧಿಯಲ್ಲಿ ವಾಜಪೇಯಿ ಅವರ ಅಲ್ಪಸಂಖ್ಯಾತರ ಅಭಿವೃದ್ಧಿಯ ಕನಸಿನ ಭಾಗವಾಗಿ ಸುಮಾರು ₹2.50 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ನಿರ್ಮಾಣವಾಗಿದೆ. ಇದರ ಬಳಿಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸುವ ಉದ್ದೇಶದಿಂದ ದರ್ಬೆ ಸಿಟಿ ಗುಡ್ಡೆಯಲ್ಲಿ ಸುಮಾರು ₹1.40 ಕೋಟಿ ವೆಚ್ಚದಲ್ಲಿ 4,000 ಚದರ ಅಡಿ ವಿಸ್ತೀರ್ಣದ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರ ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದರು.
ಕಟ್ಟಡ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿದ್ದ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಉದ್ಘಾಟನೆ ಸಾಧ್ಯವಾಗಿರಲಿಲ್ಲ. ಬಳಿಕವೂ ಕಟ್ಟಡವನ್ನು ಉದ್ಘಾಟಿಸಿ ಬಳಕೆಗೆ ನೀಡಲಾಗದೆ ಕಳೆದ ನಾಲ್ಕು ವರ್ಷಗಳಿಂದ ಪಾಳು ಬಿದ್ದಿದೆ ಎಂದು ಮೋರ್ಚಾ ಮುಖಂಡರು ಆರೋಪಿಸಿದರು.
ಬೇರೆ ಉದ್ದೇಶಕ್ಕೆ ಬಳಸಬೇಡಿ
ಪ್ರಸ್ತುತ ಶಾಸಕರು ಈ ಕಟ್ಟಡವನ್ನು ಬೇರೆ ಕಾರ್ಯಕ್ಕೆ ಬಳಸಲು ಮುಂದಾಗಿರುವುದು ಸರಿಯಲ್ಲ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.
ಅಲ್ಪಸಂಖ್ಯಾತ ಸಮುದಾಯಕ್ಕೆ ಅಗತ್ಯವಿರುವ ಸೇವೆಗಳನ್ನು ಒದಗಿಸುವ ಕೇಂದ್ರವಾಗಿಯೇ ಕಟ್ಟಡವನ್ನು ಬಳಕೆ ಮಾಡಬೇಕು. ಪುತ್ತೂರಿನಲ್ಲಿ ಅಲ್ಪಸಂಖ್ಯಾತರಿಗಾಗಿ ಬಾಲಕರ ಹಾಗೂ ಬಾಲಕಿಯರ ಪ್ರತ್ಯೇಕ ಹಾಸ್ಟೆಲ್‌ಗಳು ಮತ್ತು ಸಮುದಾಯ ಭವನ ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಸಿಟಿ ಗುಡ್ಡೆ ಪ್ರದೇಶದಲ್ಲಿ ಈಗಾಗಲೇ ವಾಣಿಜ್ಯ ತೆರಿಗೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಇಲಾಖೆಗಳ ಕಚೇರಿಗಳಿವೆ. ಪುತ್ತೂರು ನಗರದ ಎರಡನೇ ಪ್ರಮುಖ ಪ್ರದೇಶವಾಗಿ ದರ್ಬೆ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಸೇವಾ ಕೇಂದ್ರವೂ ತನ್ನ ಉದ್ದೇಶಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಕಾಂಗ್ರೆಸ್ ವಿರುದ್ಧ ಆರೋಪ
ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರದ ಯೋಜನೆಗಳು ಹಾಗೂ ಮೂಲಸೌಕರ್ಯ ಕಲ್ಪಿಸುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆರೋಪಿಸಿದರು.
ಅಲ್ಪಸಂಖ್ಯಾತರ ಬೆಂಬಲವನ್ನು ಪಡೆದಿರುವ ಹಾಲಿ ಶಾಸಕರು ತಮ್ಮ ಅವಧಿಯಲ್ಲಿ ಸಮುದಾಯಕ್ಕೆ ನೀಡಿರುವ ಕೊಡುಗೆ ಏನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಪ್ರಶ್ನಿಸಿದರು.
ಬಿಜೆಪಿ ಸರ್ಕಾರ ನಿರ್ಮಿಸಿರುವ ಸೇವಾ ಕೇಂದ್ರವನ್ನು ವಿರೋಧಿಸುವ ಬದಲು ಅದನ್ನು ಉದ್ಘಾಟಿಸಿ ಅಲ್ಪಸಂಖ್ಯಾತ ಸಮುದಾಯದ ಬಹುಉಪಯೋಗಕ್ಕೆ ಬಳಸಲು ಸಹಕರಿಸಬೇಕು ಎಂದು ಅವರು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಟಿ.ಎ. ಶನವಾಜ್, ಪ್ರಧಾನ ಕಾರ್ಯದರ್ಶಿ ಫೆಡ್ರಿಕ್ ಪೌಲ್, ಉಪಾಧ್ಯಕ್ಷ ಅಜ್ಗರ್ ಮುಡಿಪು, ಜಿಲ್ಲಾ ಉಪಾಧ್ಯಕ್ಷ ಮೊಹಮ್ಮದ್ ರಫೀಕ್ ದರ್ಬೆ, ಹಿರೆಬಂಡಾಡಿ ಪಂಚಾಯತ್ ಮಾಜಿ ಅಧ್ಯಕ್ಷ ಸೌಕತ್ ಅಲಿ, ರಾಜೇಶ ಬನ್ನೂರು ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Master Anand-ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಮಾಸ್ಟರ್ ಆನಂದ್
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರ ಕರ್ಮಭೂಮಿಯಾದ ಪುತ್ತೂರಿನ ಬಾಲವನದಲ್ಲಿ ಪ್ರದಾನ ಮಾಡಲಾಗುವ ಪ್ರತಿಷ್ಠಿತ ‘ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ-2026’ಕ್ಕೆ ಪುತ್ತೂರಿನ ಶ್ರೇಷ್ಠ ಸಿವಿಲ್ ಇಂಜಿನಿಯರಿಂಗ್ ಸಾಧಕ ಹಾಗೂ ‘ಮಾಸ್ಟರ್ ಪ್ಲಾನರಿ’ ಸಂಸ್ಥೆಯ ಮುಖ್ಯಸ್ಥ ಎಸ್.ಕೆ. ಆನಂದ್ ಆಯ್ಕೆಯಾಗಿದ್ದಾರೆ.
ಪುತ್ತೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರ ಕರ್ಮಭೂಮಿಯಾದ ಪುತ್ತೂರಿನ ಬಾಲವನದಲ್ಲಿ ಪ್ರದಾನ ಮಾಡಲಾಗುವ ಪ್ರತಿಷ್ಠಿತ ‘ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ-2026’ಕ್ಕೆ ಪುತ್ತೂರಿನ ಶ್ರೇಷ್ಠ ಸಿವಿಲ್ ಇಂಜಿನಿಯರಿಂಗ್ ಸಾಧಕ ಹಾಗೂ ‘ಮಾಸ್ಟರ್ ಪ್ಲಾನರಿ’ ಸಂಸ್ಥೆಯ ಮುಖ್ಯಸ್ಥ ಎಸ್.ಕೆ. ಆನಂದ್ ಆಯ್ಕೆಯಾಗಿದ್ದಾರೆ.
ವೈಜ್ಞಾನಿಕ ಮನೋಭಾವ, ಪರಿಸರ ಕಾಳಜಿ ಹಾಗೂ ಸುಸ್ಥಿರ ಜೀವನಶೈಲಿಯನ್ನು ತಮ್ಮ ವೃತ್ತಿ ಬದುಕಿನಲ್ಲಿ ಅಳವಡಿಸಿಕೊಂಡಿರುವ ಎಸ್.ಕೆ. ಆನಂದ್ ಅವರು, ಸಿಮೆಂಟ್ ಪ್ರೀಕಾಸ್ಟ್ ತಂತ್ರಜ್ಞಾನದ ಮೂಲಕ ಮರಕ್ಕೆ ಪರ್ಯಾಯವಾದ ‘ಕಾಂಕೂಡ್’ (Concood™) ಎಂಬ ಉತ್ಪನ್ನವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಆವಿಷ್ಕಾರದ ಮೂಲಕ ಕಳೆದ ಹಲವು ದಶಕಗಳಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಮರಮುಟ್ಟುಗಳ ಬಳಕೆಯನ್ನು ತಪ್ಪಿಸಿ, ಲಕ್ಷಾಂತರ ಮರಗಳನ್ನು ಕೊಡಲಿಗೆ ಬಲಿಯಾಗದಂತೆ ಸಂರಕ್ಷಿಸಿದ ಸಾಧನೆ ಅವರದ್ದಾಗಿದೆ.
1951ರಲ್ಲಿ ಪುತ್ತೂರಿನಲ್ಲಿ ಜನಿಸಿದ ಎಸ್.ಕೆ. ಆನಂದ್ ಅವರು ದಿವಂಗತ ಎಸ್.ಕೆ. ಈಶ್ವರ ಭಟ್ ಹಾಗೂ ಶಾರದಾ ಭಟ್ ದಂಪತಿಯ ಪುತ್ರ. ಮಂಗಳೂರಿನ ಕೆ.ಆರ್.ಇ.ಸಿ. (ಪ್ರಸ್ತುತ NITK, ಸುರತ್ಕಲ್)ಯಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಹಾಗೂ ಎಂ.ಟೆಕ್ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಡೆದ ಅವರು, 1975ರಲ್ಲಿ ತಂದೆಯವರು ಸ್ಥಾಪಿಸಿದ್ದ ‘ಮಾಸ್ಟರ್ ಪ್ಲಾನರಿ’ ಸಂಸ್ಥೆಯ ಜವಾಬ್ದಾರಿ ವಹಿಸಿಕೊಂಡರು. ಉನ್ನತ ಅವಕಾಶಗಳಿದ್ದರೂ ದೊಡ್ಡ ನಗರಗಳತ್ತ ತೆರಳದೆ ಪುತ್ತೂರಿನಲ್ಲೇ ನೆಲೆಸಿ, ಸುಸ್ಥಿರ ನಿರ್ಮಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.
‘ಕಾಂಕೂಡ್’ ಮೂಲಕ ಮರಕ್ಕೆ ಪರ್ಯಾಯ
ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮನೆ, ಕಚೇರಿ, ಶಾಲಾ-ಕಾಲೇಜುಗಳ ನಿರ್ಮಾಣಕ್ಕೆ ದಾರಂದ, ಕಿಟಕಿ, ಮೇಲ್ಛಾವಣಿಯ ತೊಲೆ, ಬೆಂಚ್-ಡೆಸ್ಕ್ ಸೇರಿದಂತೆ ವಿವಿಧ ಕಾರ್ಯಗಳಿಗೆ ಅಪಾರ ಪ್ರಮಾಣದ ಮರಮುಟ್ಟುಗಳನ್ನು ಬಳಸಲಾಗುತ್ತಿತ್ತು. ಈ ಸಮಸ್ಯೆಗೆ ಪರಿಸರಸ್ನೇಹಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಆನಂದ್ ಅವರು ಸಿಮೆಂಟ್ ಪ್ರೀಕಾಸ್ಟ್ ತಂತ್ರಜ್ಞಾನದ ಕುರಿತು ಸುದೀರ್ಘ ಸಂಶೋಧನೆ ನಡೆಸಿ, ಮರದ ಬಲಕ್ಕೆ ಪರ್ಯಾಯವಾಗಬಲ್ಲ ಕಾಂಕ್ರೀಟ್ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿದರು.
‘ಕಾಂಕೂಡ್’ ಹೆಸರಿನ ಈ ಉತ್ಪನ್ನಗಳಿಗೆ 2007ರಲ್ಲಿ ಭಾರತ ಸರ್ಕಾರದಿಂದ ಅಧಿಕೃತ ಟ್ರೇಡ್‌ಮಾರ್ಕ್ ನೋಂದಣಿಯೂ ದೊರೆತಿದೆ. ಇಂದು ವಿವಿಧ ಅಗತ್ಯಗಳಿಗೆ ಬಳಸಬಹುದಾದ 250ಕ್ಕೂ ಅಧಿಕ ಕಾಂಕ್ರೀಟ್ ಪರಿಕರಗಳು ‘ಮಾಸ್ಟರ್ ಪ್ಲಾನರಿ’ಯಲ್ಲಿ ಲಭ್ಯವಿವೆ.
36.5 ಲಕ್ಷಕ್ಕೂ ಅಧಿಕ ಮರಗಳ ಸಂರಕ್ಷಣೆ
‘ಮಾಸ್ಟರ್ ಪ್ಲಾನರಿ’ ಸಂಸ್ಥೆಯಲ್ಲಿ ಪ್ರತಿದಿನ ಸರಾಸರಿ 200 CFTಗೂ ಅಧಿಕ ಕಾಂಕ್ರೀಟ್ ಪರಿಕರಗಳನ್ನು ಉತ್ಪಾದಿಸಲಾಗುತ್ತಿದ್ದು, ಈ ಪರಿಕರಗಳ ಬಳಕೆಯಿಂದ ಪ್ರತಿದಿನ ಸರಾಸರಿ 20 ಬೃಹತ್ ಮರಗಳು ಕಡಿಯುವುದನ್ನು ತಪ್ಪಿಸಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.
ಕಳೆದ 50 ವರ್ಷಗಳ ಈ ಸೇವೆಯ ಲೆಕ್ಕಾಚಾರದಂತೆ, ಇದುವರೆಗೆ ಸುಮಾರು 36.5 ಲಕ್ಷಕ್ಕೂ ಅಧಿಕ ಬೃಹತ್ ಮರಗಳು ಕೊಡಲಿಗೆ ಬಲಿಯಾಗುವುದನ್ನು ತಪ್ಪಿಸಿ ಸಂರಕ್ಷಿಸಲಾಗಿದೆ. ಶಾಲಾ-ಕಾಲೇಜುಗಳು, ಸರ್ಕಾರಿ ಸಂಸ್ಥೆಗಳು ಸೇರಿದಂತೆ ಹಲವು ಕಡೆಗಳಲ್ಲಿ ಮರದ ಪರ್ಯಾಯವಾಗಿ ‘ಕಾಂಕೂಡ್’ ಉತ್ಪನ್ನಗಳನ್ನು ಬಳಸಲಾಗುತ್ತಿದೆ.
ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಅವರು ದೇಶಾದ್ಯಂತ ನಿರ್ಮಿಸಿರುವ 30ಕ್ಕೂ ಅಧಿಕ ತೂಗು ಸೇತುವೆಗಳಲ್ಲೂ ಮರದ ಹಲಗೆಗಳ ಬದಲಿಗೆ ‘ಕಾಂಕೂಡ್’ ಪರಿಕರಗಳನ್ನು ಬಳಸಲಾಗಿದೆ. ಬೆಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ಅರಣ್ಯ ಇಲಾಖೆ ಸೇರಿದಂತೆ ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶಗಳಲ್ಲೂ ಈ ತಂತ್ರಜ್ಞಾನ ಬಳಕೆಯಾಗಿದೆ.
50 ಎಕರೆಗೂ ಅಧಿಕ ಹಸಿರು ಕಾಡು
ಮರಗಳ ಸಂರಕ್ಷಣೆಯ ಜತೆಗೆ ವೈಯಕ್ತಿಕವಾಗಿಯೂ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಿರುವ ಎಸ್.ಕೆ. ಆನಂದ್ ಅವರು ಸೊರಕೆ ಹಾಗೂ ಕುಡಿಪಾಡಿಯಲ್ಲಿ ‘ಕುಡಿಕಾಡು’ ಹೆಸರಿನಲ್ಲಿ 50 ಎಕರೆಗೂ ಅಧಿಕ ಪ್ರದೇಶದಲ್ಲಿ ಸಾವಿರಾರು ಗಿಡ-ಮರಗಳನ್ನು ಬೆಳೆಸಿ ಹಸಿರು ಕಾಡು ನಿರ್ಮಿಸಿದ್ದಾರೆ.
‘ಮಾಸ್ಟರ್ ಪ್ಲಾನರಿ’ ಸಂಸ್ಥೆಯಡಿ 9 ಕೇಂದ್ರಗಳಲ್ಲಿ 24 ಸಂಸ್ಥೆಗಳ ಮೂಲಕ 800ಕ್ಕೂ ಅಧಿಕ ಮಂದಿಗೆ ನೇರ ಉದ್ಯೋಗ ಕಲ್ಪಿಸಲಾಗಿದೆ. ಇವರಲ್ಲಿ 200ಕ್ಕೂ ಅಧಿಕ ಮಹಿಳೆಯರು ಹಾಗೂ 20ಕ್ಕೂ ಅಧಿಕ ಭಿನ್ನಸಾಮರ್ಥ್ಯ ಹೊಂದಿರುವವರು ಸೇರಿದ್ದಾರೆ. ಪರೋಕ್ಷವಾಗಿ 3,000ಕ್ಕೂ ಅಧಿಕ ಉದ್ಯೋಗ ಸೃಷ್ಟಿಯಾಗಿರುವುದಾಗಿ ತಿಳಿಸಲಾಗಿದೆ.
ಸಂಸ್ಥೆಯ ಸಿಬ್ಬಂದಿಯ ಮಕ್ಕಳ ಆರೈಕೆ ಹಾಗೂ ಶಿಕ್ಷಣಕ್ಕಾಗಿ ಆವರಣದಲ್ಲೇ ಅಂಗನವಾಡಿ ಮಾದರಿಯ ಪ್ಲೇ ಸ್ಕೂಲ್ ಆರಂಭಿಸಿರುವುದು ಅವರ ಸಾಮಾಜಿಕ ಕಾಳಜಿಗೆ ಮತ್ತೊಂದು ಉದಾಹರಣೆಯಾಗಿದೆ.
ಚಾಮರಾಜನಗರ ಹಾಗೂ ನಾಗರಹೊಳೆ ಭಾಗದ ಅರಣ್ಯವಾಸಿ ಗಿರಿಜನರಿಗೆ 8,000ಕ್ಕೂ ಅಧಿಕ ಮನೆಗಳನ್ನು ನಿರ್ಮಿಸಿಕೊಟ್ಟಿರುವ ಅವರು, ಸುಳ್ಯದಲ್ಲಿ ಕಳೆದ 20 ವರ್ಷಗಳಿಂದ ‘ಸ್ನೇಹ ಶಿಕ್ಷಣ ಸಂಸ್ಥೆ’ ಮೂಲಕ ಗ್ರಾಮೀಣ ಮಕ್ಕಳಿಗೆ ಕನ್ನಡ ಮಾಧ್ಯಮ ಶಿಕ್ಷಣ ನೀಡುತ್ತಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲೂ ಆಸಕ್ತಿ ಹೊಂದಿರುವ ಆನಂದ್ ಅವರು ‘ಭಾವಲೋಕ’ ಎಂಬ ಕವನ ಸಂಕಲನ ಸೇರಿದಂತೆ ಹಲವು ಭಾವಗೀತೆಗಳನ್ನು ರಚಿಸಿ ಪ್ರಕಟಿಸಿದ್ದಾರೆ.
ಎಸ್.ಕೆ. ಆನಂದ್ ಹಾಗೂ ರೇಖಾ ಆನಂದ್ ದಂಪತಿಯ ನಾಲ್ವರು ಮಕ್ಕಳಾದ ಅಕ್ಷಯ್, ಅರ್ಜುನ್, ಆಕಾಶ್ ಹಾಗೂ ಆರತಿ ಅವರು ಸಿವಿಲ್ ಇಂಜಿನಿಯರಿಂಗ್ ಪದವೀಧರರಾಗಿದ್ದು, ಕುಟುಂಬದ ಸುಸ್ಥಿರ ಹಾಗೂ ಪರಿಸರಸ್ನೇಹಿ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಹಲವು ಪ್ರಶಸ್ತಿಗಳ ಗರಿ
ಪರಿಸರ ಸೇವೆಗಾಗಿ 2003ರಲ್ಲಿ ‘ಪರಿಸರಪ್ರೇಮಿ’ ಪ್ರಶಸ್ತಿ, 2008ರಲ್ಲಿ ICI ವತಿಯಿಂದ ‘ಕರ್ನಾಟಕದ ಅತ್ಯುತ್ತಮ ಕಾಂಕ್ರೀಟ್ ಇಂಜಿನಿಯರ್’ ಪ್ರಶಸ್ತಿ ಸೇರಿದಂತೆ ರಾಷ್ಟ್ರೀಯ ಜೆಸಿಐ ‘TOBIP’ ಹಾಗೂ ACCE-UltraTech ಪ್ರಶಸ್ತಿಗಳು ಎಸ್.ಕೆ. ಆನಂದ್ ಅವರಿಗೆ ಸಂದಿವೆ.
ಬಾಲವನ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ, ಉಪವಿಭಾಗಾಧಿಕಾರಿ ಹಾಗೂ ಬಾಲವನ ಪ್ರಶಸ್ತಿ ಸಮಿತಿ ಕಾರ್ಯದರ್ಶಿ ಸ್ಟೆಲ್ಲಾ ವರ್ಗೀಸ್, ತಾಲೂಕು ಕಸಾಪ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಹಿರಿಯ ಸಾಹಿತಿಗಳಾದ ವಿ.ಬಿ. ಆರ್ತಿಕಜೆ ಹಾಗೂ ರೆ. ವಿಜಯ್ ಹಾರ್ವಿನ್ ಅವರನ್ನು ಒಳಗೊಂಡ ಆಯ್ಕೆ ಸಮಿತಿ ಎಸ್.ಕೆ. ಆನಂದ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಅಕ್ಟೋಬರ್ 10, 2026ರಂದು ಪುತ್ತೂರಿನ ಐತಿಹಾಸಿಕ ಬಾಲವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ‘ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ-2026’ ಪ್ರದಾನ ಮಾಡಿ ಎಸ್.ಕೆ. ಆನಂದ್ ಅವರನ್ನು ಗೌರವಿಸಲಾಗುವುದು.
-
Uncategorized18 hours ago
ಚಿನ್ನಾಭರಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ
-
ದಕ್ಷಿಣ ಕನ್ನಡ20 hours ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು
-
ಬಿಗ್ ನ್ಯೂಸ್6 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ7 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ5 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ6 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ6 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ನಿಧನ ವಾರ್ತೆ4 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು


















