ರಾಜಕೀಯ
CM Siddaramaiah-ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ : ಸಿಎಂ ಸಿದ್ದರಾಮಯ್ಯ ಘೋಷಣೆ
ಮೈಕ್ರೋ ಫೈನಾನ್ಸ್ ಕಂಪನಿಗಳ ಸಾಲದ ಒತ್ತಡದಿಂದ ಆತ್ಮಹತ್ಯೆಗೆ ಒಳಗಾದವರ ಕುಟುಂಬಗಳಿಗೆ ಸರ್ಕಾರ ಇನ್ನು ಮುಂದೆ ₹25 ಲಕ್ಷ ಪರಿಹಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಬೆಂಗಳೂರು, ಆ.21: ಮೈಕ್ರೋ ಫೈನಾನ್ಸ್ ಕಂಪನಿಗಳ ಸಾಲದ ಒತ್ತಡದಿಂದ ಆತ್ಮಹತ್ಯೆಗೆ ಒಳಗಾದವರ ಕುಟುಂಬಗಳಿಗೆ ಸರ್ಕಾರ ಇನ್ನು ಮುಂದೆ ₹25 ಲಕ್ಷ ಪರಿಹಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಗುರುವಾರ ಪ್ರಶೋತ್ತರ ಸಮಯದಲ್ಲಿ ಸದನದಲ್ಲಿ ಸಿ.ಎನ್. ಮಂಜೇಗೌಡರ ಪ್ರಶ್ನೆಗೆ ಉತ್ತರಿಸಿದ ಅವರು, ಈವರೆಗೆ ಈ ರೀತಿಯ ಪರಿಹಾರ ಯೋಜನೆ ಜಾರಿಯಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ, ಸದಸ್ಯರ ಸಲಹೆಯ ಮೇರೆಗೆ ಇದೀಗ ರೈತರಿಗೆ ಸಾಲ ತೀರಿಸದೆ ಆತ್ಮಹತ್ಯೆಯಾದರೆ ನೀಡುವಂತೆ, ಮೈಕ್ರೋ ಫೈನಾನ್ಸ್ ಸಾಲದ ಕಾರಣದಿಂದ ಆತ್ಮಹತ್ಯೆಯಾದ ಕುಟುಂಬಗಳಿಗೂ ₹25 ಲಕ್ಷ ನೀಡಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿ ಮತ್ತು ಹಣಕಾಸು ಇಲಾಖೆಯ ಆಯುಕ್ತರೊಂದಿಗೆ ಚರ್ಚೆ ನಡೆಸಲಾಗಿದೆ ಎಂದರು.
ಮಂಜೇಗೌಡ ಅವರು, ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಗೆ ಕಾಯ್ದೆ ಜಾರಿಯಾಗಿದ್ದರೂ ಪರಿಣಾಮವಾಗದೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದು ಕಾಯ್ದೆಯ ಉದ್ದೇಶ ವಿಫಲವಾಗುತ್ತಿದೆ ಎಂದು ಆರೋಪಿಸಿ, ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಕೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, 2025ರ ಫೆಬ್ರವರಿಯಲ್ಲಿ ‘ಕರ್ನಾಟಕ ಕಿರು ಸಾಲ ಮತ್ತು ಸಣ್ಣ (ಬಲವಂತ ಕ್ರಮಗಳ ಪ್ರತಿಬಂಧ) ಕಾಯ್ದೆ-2025’ ಜಾರಿಗೆ ತರಲಾಗಿದೆ ಎಂದು ತಿಳಿಸಿದರು. ಕಾಯ್ದೆ ಮೊದಲು ಜಾರಿಯಾಗುವ ಮುನ್ನ ಜನವರಿಯಲ್ಲಿ 21 ಪ್ರಕರಣ ಮತ್ತು 4 ಆತ್ಮಹತ್ಯೆಗಳು ದಾಖಲಾಗಿದ್ದವು. ಆದರೆ, ಫೆಬ್ರವರಿಯಲ್ಲಿ 44 ಪ್ರಕರಣ ಮತ್ತು 10 ಆತ್ಮಹತ್ಯೆ, ಮಾರ್ಚ್‌ನಲ್ಲಿ 22 ಪ್ರಕರಣ ಮತ್ತು 2 ಆತ್ಮಹತ್ಯೆ, ಏಪ್ರಿಲ್‌ನಲ್ಲಿ 10 ಪ್ರಕರಣ, ಜೂನ್‌ನಲ್ಲಿ 1 ಪ್ರಕರಣ ಮತ್ತು 1 ಆತ್ಮಹತ್ಯೆ, ಜುಲೈಯಲ್ಲಿ 5 ಪ್ರಕರಣ ಮತ್ತು 1 ಆತ್ಮಹತ್ಯೆ ದಾಖಲಾಗಿದ್ದು, ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ವಿವರಿಸಿದರು.
ಅವರು, ಕಾಯ್ದೆ ಅನುಷ್ಠಾನದಲ್ಲಿ ಚಿಕ್ಕಪುಟ್ಟ ತೊಡಕುಗಳಿರಬಹುದು ಎಂದರೂ, ಇದು ಸಂಪೂರ್ಣ ವಿಫಲವಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಸಾಲಗಾರರ ಮೇಲೆ ಕಿರುಕುಳ ತಡೆಗೆ ಪೊಲೀಸ್ ಬೀಟ್ ವ್ಯಾಪ್ತಿಯಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ನಿಗಾ ಇಡಲಾಗಿದೆ. ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ, ಸಂಸ್ಥೆಗಳ ಮುಖ್ಯಸ್ಥರಿಗೆ ಕಿರುಕುಳ ತಡೆಯುವಂತೆ ಸೂಚನೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ರಾಜಕೀಯ
BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.
ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.
ಮಂಗಳೂರು
Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ
ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.
“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:
ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.
ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.
ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರಮತ್ತು ಪ್ರವಾಸೋದ್ಯಮ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್‌ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.
-
ಅಪರಾಧ18 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ18 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಚಿನ್ನ-ಬೆಳ್ಳಿ ದರ23 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಬಿಗ್ ನ್ಯೂಸ್17 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸಿನೆಮಾ23 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಸ್ಥಳೀಯ24 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ24 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಅಪರಾಧ24 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ















