ಮೈಸೂರು
Dharmasthala-ಹಣದ ಆಮಿಷಕ್ಕಾಗಿ ಧರ್ಮಸ್ಥಳದ ಅಪಪ್ರಚಾರ; ಸಾಕ್ಷಿ ದೂರುದಾರನ ಮೊದಲ ಪತ್ನಿ ಆರೋಪ
ಧರ್ಮಸ್ಥಳ ಪ್ರಕರಣದ ಸಾಕ್ಷಿ ದೂರುದಾರನ ಮೊದಲ ಪತ್ನಿ ಎಂದು ಗುರುತಿಸಿಕೊಂಡಿರುವ ಮಹಿಳೆ, ತನ್ನ ಮಾಜಿ ಗಂಡನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ನಾಗಮಂಗಲ (ಮಂಡ್ಯ ಜಿಲ್ಲೆ), ಆ.22: ಧರ್ಮಸ್ಥಳ ಪ್ರಕರಣದ ಸಾಕ್ಷಿ ದೂರುದಾರನ ಮೊದಲ ಪತ್ನಿ ಎಂದು ಗುರುತಿಸಿಕೊಂಡಿರುವ ಮಹಿಳೆ, ತನ್ನ ಮಾಜಿ ಗಂಡನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಗುರುವಾರ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಆತ ಒಳ್ಳೆಯವನಲ್ಲ, ನನ್ನ ಮತ್ತು ಮಕ್ಕಳ ಮೇಲೆ ಹಿಂಸೆ ಮಾಡುತ್ತಿದ್ದ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಸತ್ಯವಲ್ಲ. ಇದು ಬಹುಶಃ ಹಣದ ಆಮಿಷಕ್ಕಾಗಿಯೇ ಆಗಿರಬಹುದು” ಎಂದು ದೂರಿದ್ದಾರೆ.
ಅವರು ಮಾತಾಡಿ, “1999ರಲ್ಲಿ ಆತನೊಂದಿಗೆ ಮದುವೆಯಾಗಿದ್ದೆ. ಏಳು ವರ್ಷ ಜೊತೆಯಾಗಿ ಬದುಕಿದೆವು. ಆತ ನನಗೆ ದೈಹಿಕ ಹಿಂಸೆ ನೀಡುತ್ತಿದ್ದ. ನಮಗೆ ಒಬ್ಬ ಮಗ ಮತ್ತು ಒಬ್ಬ ಮಗಳಿದ್ದಾರೆ. ಧರ್ಮಸ್ಥಳದಲ್ಲಿ ಆತ ಕಸ ಗುಡಿಸುತ್ತಿದ್ದ, ಶೌಚಾಲಯ ತೊಳೆಯುತ್ತಿದ್ದ” ಎಂದು ತಿಳಿಸಿದರು.
“ವಿವಾಹ ವಿಚ್ಛೇದನದ ಸಮಯದಲ್ಲಿ ಜೀವನಾಂಶ ತಪ್ಪಿಸಿಕೊಳ್ಳಲು ಆತ ನ್ಯಾಯಾಲಯಕ್ಕೆ ಉದ್ಯೋಗವಿಲ್ಲ ಎಂದು ಸುಳ್ಳು ಹೇಳಿದ. ಇದರಿಂದ ನನಗೆ ನ್ಯಾಯ ಸಿಗದಂತೆ ಮೋಸ ಮಾಡಿದ. ನನ್ನ ಮಕ್ಕಳನ್ನು ತಾಯಿ ಸಾಕಿದ್ದಾರೆ” ಎಂದು ಆರೋಪಿಸಿದರು.
ಮೈಸೂರು
H. Vishwanath-ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ಸಂಚಲನ: ಎಚ್. ವಿಶ್ವನಾಥ್
ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಮೈಸೂರು: ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈಗಾಗಲೇ ಜನರು ರಾಜಕೀಯದ ಬಗ್ಗೆ ಸಾಕಷ್ಟು ಅಸಹ್ಯಪಟ್ಟುಕೊಂಡಿದ್ದಾರೆ. ನನ್ನ ಪುಸ್ತಕ ಬಿಡುಗಡೆಯಾದರೆ ರಾಜಕೀಯದ ಬಗ್ಗೆ ಜನರಲ್ಲಿ ಮತ್ತಷ್ಟು ಅಸಹ್ಯ ಮೂಡುವ ಸಾಧ್ಯತೆಯಿದೆ” ಎಂದು ಹೇಳಿದರು.
ಯತೀಂದ್ರ ಇತಿಹಾಸ ತಿಳಿದು ಮಾತನಾಡಲಿ
ರಾಜವಂಶಸ್ಥರ ಕುರಿತು ಸಚಿವ ಡಾ. ಯತೀಂದ್ರ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ವಿಶ್ವನಾಥ್, “ಅನುಭವ ಇಲ್ಲದವರಿಗೆ ಜವಾಬ್ದಾರಿ ನೀಡಿದರೆ ಏನಾಗುತ್ತದೆ ಎಂಬುದಕ್ಕೆ ರಾಜವಂಶಸ್ಥರ ಕುರಿತು ಯತೀಂದ್ರ ಮಾತನಾಡಿರುವ ಹಗುರವಾದ ಹೇಳಿಕೆಯೇ ಸಾಕ್ಷಿ. ಸಿದ್ದರಾಮಯ್ಯ ಮತ್ತು ಅವರ ಪುತ್ರ ಮೈಸೂರು ರಾಜಮನೆತನದ ಇತಿಹಾಸ ಹಾಗೂ ಹಿನ್ನೆಲೆಯನ್ನು ತಿಳಿದುಕೊಳ್ಳಬೇಕು” ಎಂದು ಹೇಳಿದರು.
“ಚಾಮುಂಡೇಶ್ವರಿ ಉಪಚುನಾವಣೆಯ ಪ್ರಚಾರಕ್ಕೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಆಗಮಿಸದೇ ಇದ್ದಿದ್ದರೆ ಸಿದ್ದರಾಮಯ್ಯ ಗೆಲುವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ಅವರು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ” ಎಂದು ಎಚ್. ವಿಶ್ವನಾಥ್ ಟೀಕಿಸಿದರು.
ಮೈಸೂರು
Siddaramaiah–Vijayendra-ಸ್ಟಿಂಗ್ ಮತ್ತು ಪರಿಷತ್ ಫಲಿತಾಂಶ ನಡುವೆಯೇ ಒಂದೇ ವೇದಿಕೆಯಲ್ಲಿ ಸಿದ್ದರಾಮಯ್ಯ–ವಿಜಯೇಂದ್ರ; ಗಮನ ಸೆಳೆದ ಗೌರವ ವಿನಿಮಯ
ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
ಮೈಸೂರು, ಅ.28: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
ಮೈಸೂರಿನ ಕೆ.ಆರ್. ನಗರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ವಿಜಯೇಂದ್ರ ಅಕ್ಕಪಕ್ಕದಲ್ಲಿ ಕುಳಿತುಕೊಂಡಿದ್ದರು. ಈ ವೇಳೆ ವಿಜಯೇಂದ್ರ ಅವರು ಸಿದ್ದರಾಮಯ್ಯ ಅವರಿಗೆ ಎರಡೂ ಕೈಗಳನ್ನು ಜೋಡಿಸಿ ನಮಸ್ಕರಿಸಿದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ವಿಜಯೇಂದ್ರ ಅವರ ಬೆನ್ನು ತಟ್ಟಿದರು.
ರಾಜಕೀಯವಾಗಿ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿರುವ ಸಂದರ್ಭದಲ್ಲಿ ಇಬ್ಬರು ನಾಯಕರು ವೇದಿಕೆಯಲ್ಲಿ ಪರಸ್ಪರ ಗೌರವ ವಿನಿಮಯ ಮಾಡಿಕೊಂಡ ದೃಶ್ಯ ಗಮನ ಸೆಳೆಯಿತು.
ಮೈಸೂರು
Mysuru-ಮೈಸೂರು ದಸರಾ ವಿವಾದ: ಪ್ರಮೋದಾದೇವಿ ಒಡೆಯರ್ಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು
ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೈಸೂರು: ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
‘ಅರಮನೆ ಮಂಡಳಿ ಸರಕಾರದ್ದು, ಅರಮನೆ ಜಾಗವೂ ಸರಕಾರದ್ದು. ಅವರಿಗೆ ಉಳಿದುಕೊಳ್ಳಲು ಒಂದಿಷ್ಟು ಜಾಗ ಕೊಟ್ಟಿದ್ದೇವೆ ಅಷ್ಟೆ’ ಎಂದು ಸಚಿವರು ಹೇಳಿದ್ದು, ಈ ಹೇಳಿಕೆ ರಾಜಮನೆತನ ಮತ್ತು ಸರಕಾರದ ನಡುವಿನ ಚರ್ಚೆಗೆ ಹೊಸ ತಿರುವು ನೀಡಿದೆ.
ರವಿವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದ ಪ್ರಮೋದಾದೇವಿ ಒಡೆಯರ್, ದಸರಾ ಸಂದರ್ಭದಲ್ಲಿ ರಾಜಮನೆತನ ಮತ್ತು ಅಧಿಕಾರಿಗಳ ನಡುವೆ ಸಮನ್ವಯದ ಕೊರತೆಯಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಅವರು ಪ್ರಸ್ತಾಪಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಸರಕಾರ ಸಿದ್ಧವಿದೆ. ಆದರೆ, ಅವರು ಹೇಳಿರುವ ಎಲ್ಲ ವಿಚಾರಗಳನ್ನೂ ಒಪ್ಪಲು ಸಾಧ್ಯವಿಲ್ಲ ಎಂದರು.
‘ಸರಕಾರದ ದಸರಾಕ್ಕೂ ಇತಿಹಾಸವಿದೆ’
‘ಅವರು ಹೇಳಿದಂತೆ ಏಳು ದಿನ ದಸರಾ ಆಚರಿಸಲು ಸಾಧ್ಯವಿಲ್ಲ. ಸರಕಾರದ ದಸರಾ ಅಲ್ಲ ಎಂಬ ಪದ ಬಳಕೆಯೂ ಸರಿಯಲ್ಲ. ಸರಕಾರದ ದಸರಾಕ್ಕೂ ಇತಿಹಾಸವಿದೆ. ಅದನ್ನು ದಸರಾ ಅಲ್ಲ ಎಂದು ಹೇಳುವುದನ್ನು ನಾವು ಒಪ್ಪುವುದಿಲ್ಲ’ ಎಂದು ಸಚಿವರು ಸ್ಪಷ್ಟಪಡಿಸಿದರು.
ಅಂಬಾರಿಯನ್ನು ಸರಕಾರ ಉಚಿತವಾಗಿ ಪಡೆಯುತ್ತಿಲ್ಲ. ಅದಕ್ಕೂ ಸರಕಾರ ಹಣ ಪಾವತಿಸುತ್ತದೆ ಎಂದು ತಿಳಿಸಿದ ಅವರು, ಪ್ರಮೋದಾದೇವಿ ಒಡೆಯರ್ ಅವರಿಗೆ ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ಸರಕಾರದ ಗಮನಕ್ಕೆ ತರಬಹುದಿತ್ತು ಎಂದರು.
‘ನಾವು ನಿರಂತರವಾಗಿ ಅವರ ಸಂಪರ್ಕದಲ್ಲಿದ್ದೆವು. ಆದರೆ, ನಮ್ಮ ಗಮನಕ್ಕೆ ಯಾವುದೇ ವಿಚಾರವನ್ನು ತಂದಿರಲಿಲ್ಲ. ಸರಕಾರಕ್ಕೆ ಪತ್ರ ಬರೆಯದೆ ಏಕಾಏಕಿ ಮಾಧ್ಯಮಗಳಿಗೆ ಪತ್ರ ಬರೆದರೆ ಹೇಗೆ?’ ಎಂದು ಪ್ರಶ್ನಿಸಿದರು.
ಅಗತ್ಯವಿದ್ದರೆ ಸರಕಾರದ ವತಿಯಿಂದ ಪ್ರತಿನಿಧಿಗಳನ್ನು ರಾಜಮನೆತನದವರ ಬಳಿಗೆ ಕಳುಹಿಸಲಾಗುವುದು. ಮುಖ್ಯಮಂತ್ರಿ ಅವರು ಈ ಕುರಿತು ಕ್ರಮ ಕೈಗೊಳ್ಳಲಿದ್ದಾರೆ. ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಸರಕಾರ ಸಿದ್ಧವಿದೆ ಎಂದು ತಿಳಿಸಿದರು.
ಅಂಬಾರಿ ಆನೆ ಆಯ್ಕೆಯಲ್ಲಿ ಗೊಂದಲ
ಅಂಬಾರಿ ಹೊರುವ ಆನೆಯ ಆಯ್ಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಯಾವ ಆನೆಯನ್ನು ಆಯ್ಕೆ ಮಾಡಲಾಗಿದೆ ಎಂಬುದನ್ನು ರಾಜಮನೆತನಕ್ಕೆ ತಿಳಿಸುವ ಕಾನೂನುಬದ್ಧ ಅಗತ್ಯವಿಲ್ಲ ಎಂದು ಹೇಳಿದರು.
ಆರಂಭದಲ್ಲಿ ಮಹೇಂದ್ರ, ಬಳಿಕ ಧನಂಜಯ ಹಾಗೂ ನಂತರ ಪ್ರಶಾಂತ್ ಆನೆಯ ಹೆಸರುಗಳು ಚರ್ಚೆಗೆ ಬಂದಿದ್ದವು. ಈ ವಿಚಾರದಲ್ಲಿ ಗೊಂದಲ ಉಂಟಾಗಿದ್ದರಿಂದ ಅಂಬಾರಿ ಆನೆಯ ಆಯ್ಕೆ ವಿಳಂಬವಾಯಿತು ಎಂದು ಅವರು ವಿವರಿಸಿದರು.
ಜೆಟ್ಟಿ ಕಾಳಗ ರದ್ದತಿ ವಿಚಾರ ಪರಿಶೀಲನೆ
ದಸರಾ ಸಂದರ್ಭದಲ್ಲಿ ಜೆಟ್ಟಿ ಕಾಳಗ ರದ್ದಾದ ವಿಚಾರವಾಗಿ ಪ್ರಮೋದಾದೇವಿ ಒಡೆಯರ್ ಅವರು ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳಿಗೂ, ಪೊಲೀಸರು ನೀಡಿರುವ ಮಾಹಿತಿಗೂ ವ್ಯತ್ಯಾಸವಿದೆ ಎಂದು ಸಚಿವರು ಹೇಳಿದರು.
ಜೆಟ್ಟಿಗಳು ತಡವಾಗಿ ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆ ತೊಂದರೆಯಾಯಿತು; ಪೊಲೀಸರಿಂದ ಯಾವುದೇ ಸಮಸ್ಯೆಯಾಗಿಲ್ಲ ಎಂಬುದು ಪೊಲೀಸರ ಹೇಳಿಕೆಯಾಗಿದೆ. ಈ ಕುರಿತು ಸರಕಾರ ಪರಿಶೀಲನೆ ನಡೆಸುತ್ತಿದ್ದು, ಎಲ್ಲಿ ತಪ್ಪಾಗಿದೆ ಎಂಬುದನ್ನು ಗಮನಿಸಲಾಗುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
-
ಮಂಗಳೂರು24 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ23 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ದಕ್ಷಿಣ ಕನ್ನಡ18 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಶಿಕ್ಷಣ23 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
ಮಂಗಳೂರು19 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















