Connect with us

ಮಂಗಳೂರು

Harinarayana Asranna-ಈ ಅಪಪ್ರಚಾರ ಕೇವಲ ಧರ್ಮಸ್ಥಳಕ್ಕೆ ಮಾತ್ರವಲ್ಲ, ಈ ಹಿಂದೆ ಕಟೀಲು ದೇವಸ್ಥಾನದ ಮೇಲೂ ಇಂತಹ ಅಪಪ್ರಚಾರ ನಡೆದಿತ್ತು – ಆಗ ನಾವು ದಾಖಲೆಗಳನ್ನಿಟ್ಟು ಕಾನೂನು ಹೋರಾಟದ ಮೂಲಕ ಗೆದ್ದೆವು – ಧರ್ಮಜಾಗೃತಿ ಸಭೆಯಲ್ಲಿ ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಹರಿನಾರಾಯಣ ಅಸ್ರಣ್ಣ

Published

on



Ad Widget

Ad Widget

Ad Widget

Ad Widget

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ, ಮಂಗಳೂರಿನ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆಯಿಂದ “ಧರ್ಮ ತೇಜೋ ಬಲಂ ಬಲಂ” ಧರ್ಮಜಾಗೃತಿ ಸಭೆ ನಡೆಯಿತು.

Ad Widget

Ad Widget

Ad Widget

Ad Widget

ಮಂಗಳೂರು, ಆ.22: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ, ಮಂಗಳೂರಿನ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆಯಿಂದ “ಧರ್ಮ ತೇಜೋ ಬಲಂ ಬಲಂ” ಧರ್ಮಜಾಗೃತಿ ಸಭೆ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಈ ಸಂದರ್ಭದಲ್ಲಿ ಮಾತನಾಡಿದ ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಹರಿನಾರಾಯಣ ಅಸ್ರಣ್ಣ, “ಈ ಅಪಪ್ರಚಾರ ಕೇವಲ ಧರ್ಮಸ್ಥಳಕ್ಕೆ ಮಾತ್ರವಲ್ಲ, ಒಟ್ಟಾರೆ ಹಿಂದೂ ದೇವಸ್ಥಾನಗಳ ವಿರುದ್ಧವೇ ಆಗಿದೆ. ಈ ಹಿಂದೆ ಕಟೀಲು ದೇವಸ್ಥಾನದ ಮೇಲೂ ಇಂತಹ ಅಪಪ್ರಚಾರ ನಡೆದಿತ್ತು. ಆಗ ನಾವು ಕಾನೂನು ಹೋರಾಟದ ಮೂಲಕ ಗೆದ್ದೆವು. ಇಂದು ಧರ್ಮಸ್ಥಳದ ಮೇಲೆ ದಾಳಿ ನಡೆಯುತ್ತಿದೆ ನಾಳೆ ಉಡುಪಿ, ಕಟೀಲು ಕ್ಷೇತ್ರಗಳ ಮೇಲೂ ಇದೇ ರೀತಿ ಆಗಬಹುದು. ಎಲ್ಲ ಹಿಂದೂಗಳು ಒಗ್ಗಟ್ಟಾಗಿ ಇದನ್ನು ವಿರೋಧಿಸಬೇಕು,” ಎಂದರು.

Ad Widget

Ad Widget <> Ad Widget

ಅವರು ಮುಂದುವರೆದು, ತುಳುನಾಡಿನ ಸಂಸ್ಕೃತಿಯಲ್ಲಿ ಸಭ್ಯತೆ ಮತ್ತು ಧಾರ್ಮಿಕ ಮೌಲ್ಯಗಳಿಗೆ ಮಹತ್ವವಿದೆ. ಆದರೆ ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಕೇಳಲೂ ಸಾಧ್ಯವಿಲ್ಲ. ಇದು ಕೇವಲ ಧರ್ಮಾಧಿಕಾರಿಗಳಿಗೆ ಮಾಡಿದ ಅವಮಾನವಲ್ಲ, ಇಡೀ ಕ್ಷೇತ್ರಕ್ಕೆ ಆದ ಅಪಮಾನ.



Ad Widget

ಇದೇ ರೀತಿ ಕಟೀಲು ಕ್ಷೇತ್ರದ ಮೇಲೂ ನಡೆದಿತ್ತು. ಆದರೆ ಅದು ಸಿವಿಲ್ ಮ್ಯಾಟರ್ ಆಗಿದ್ದರಿಂದ ಸರಿಯಾದ ದಾಖಲೆ ಕೊಟ್ಟು ಅವರ ಬಾಯಿ ಮುಚ್ಚಿಸಿದೆವು. ಆದರೆ ಇಂದು ಕ್ರಿಮಿನಲ್ ಸೇರಿಸಿ ಅಪಪ್ರಚಾರ ಮಾಡುತ್ತಿದ್ದಾರೆ. ಇಂದು ಧರ್ಮಸ್ಥಳ ನಾಳೆ ಕಟೀಲು ಉಡುಪಿಗೂ ಬರುತ್ತಾರೆ. ದೇವಸ್ಥಾನಗಳನ್ನು ನಾಶಪಡಿಸಬೇಕೆಂಬುವುದು ಅವರ ಗುರಿ ಎಂದರು.

Ad Widget

Ad Widget

ಕಾರ್ಯಕ್ರಮದಲ್ಲಿ ಶಿವ ಪಂಚಾಕ್ಷರಿ ಜಪವನ್ನು ಸಾಮೂಹಿಕವಾಗಿ ಜಪಿಸಲಾಯಿತು ಮತ್ತು ಭಜನೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

Ad Widget
Click to comment

Leave a Reply

ಅಪರಾಧ

Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Published

on



Ad Widget

Ad Widget

Ad Widget

Ad Widget

ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.



Ad Widget

ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Ad Widget

Ad Widget

ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.

ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.

ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Ad Widget
Continue Reading

ಮಂಗಳೂರು

Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್‌: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್‌ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್‌ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಆಗಸ್ಟ್‌ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್‌ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್‌ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

Ad Widget

Ad Widget <> Ad Widget

ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.



Ad Widget

ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.

Ad Widget

Ad Widget

ಹೊಸ ದರ ಹೀಗಿದೆ

ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.

  • ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
  • ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
  • 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
  • ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
  • ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.

ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.

Ad Widget
Continue Reading

ಮಂಗಳೂರು

Chouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್‌ಗೆ ದಾಖಲೆ ತೋರಿಸಿ: ಕಾಂಗ್ರೆಸ್‌ಗೆ ಚೌಟ ಸವಾಲು

Published

on



Ad Widget

Ad Widget

Ad Widget

Ad Widget

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಕುರಿತು ಕಾಂಗ್ರೆಸ್‌ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಆರೋಪಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು, ಅ.6: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಕುರಿತು ಕಾಂಗ್ರೆಸ್‌ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಆರೋಪಿಸಿದ್ದಾರೆ. ಫಾರಂ 7 ಸಲ್ಲಿಸಿದ ಮಾತ್ರಕ್ಕೆ ಮತದಾರರ ಹೆಸರನ್ನು ಅಳಿಸಲು ಸಾಧ್ಯವಿಲ್ಲ. ಅಕ್ರಮವಾಗಿ ಮತಗಳನ್ನು ಡಿಲೀಟ್‌ ಮಾಡಲಾಗಿದೆ ಎಂಬ ಆರೋಪಕ್ಕೆ ಕಾಂಗ್ರೆಸ್‌ ಬಳಿ ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಅಗತ್ಯವಾದ ಪ್ರಕ್ರಿಯೆ. ಇದಕ್ಕೆ ರಾಜಕೀಯ ಪಕ್ಷಗಳ ಬೂತ್‌ ಮಟ್ಟದ ಏಜೆಂಟರು (ಬಿಎಲ್‌ಎ–2) ಸಹಕರಿಸಬೇಕು. ಆದರೆ, ಕಾಂಗ್ರೆಸ್‌ ಈ ಪ್ರಕ್ರಿಯೆಯಲ್ಲಿ ತೊಡಗಿರುವ ಏಜೆಂಟರನ್ನು ಬೆದರಿಸುವ ಹಾಗೂ ಅಧಿಕಾರಿಗಳ ಕಾರ್ಯಕ್ಕೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.

Ad Widget

Ad Widget <> Ad Widget

ಫಾರಂ 7 ಸಲ್ಲಿಸಿದ ತಕ್ಷಣ ಹೆಸರು ಡಿಲೀಟ್‌ ಆಗಲ್ಲ



Ad Widget

ಮತದಾರರು ಸ್ಥಳಾಂತರಗೊಂಡಿರುವುದು, ಮೃತಪಟ್ಟಿರುವುದು ಅಥವಾ ಭಾರತೀಯ ಪ್ರಜೆಯಲ್ಲ ಎಂಬ ಆಕ್ಷೇಪಣೆಗಳಿದ್ದಲ್ಲಿ ಫಾರಂ 7 ಮೂಲಕ ಅರ್ಜಿ ಸಲ್ಲಿಸಬಹುದು. ಆದರೆ, ಅರ್ಜಿ ಸಲ್ಲಿಕೆಯಾದ ಮಾತ್ರಕ್ಕೆ ಮತದಾರರ ಹೆಸರನ್ನು ಏಕಪಕ್ಷೀಯವಾಗಿ ಅಳಿಸಲು ಸಾಧ್ಯವಿಲ್ಲ. ಚುನಾವಣಾಧಿಕಾರಿಗಳು ಆಕ್ಷೇಪಣೆಯನ್ನು ಪರಿಶೀಲಿಸಿ, ಸೂಕ್ತ ದೃಢೀಕರಣದ ಬಳಿಕವೇ ನಿಯಮಾನುಸಾರ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಚೌಟ ವಿವರಿಸಿದರು.

Ad Widget

Ad Widget

ಫಾರಂ 7 ಮೂಲಕ ಅಲ್ಪಸಂಖ್ಯಾತ ಮತದಾರರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಕಾಂಗ್ರೆಸ್‌ ಆರೋಪವನ್ನು ಅವರು ತಳ್ಳಿಹಾಕಿದರು. ಅಕ್ರಮವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂಬುದಕ್ಕೆ ನಿರ್ದಿಷ್ಟ ದಾಖಲೆಗಳಿದ್ದರೆ ಚುನಾವಣಾ ಆಯೋಗದ ಮುಂದೆ ಸಲ್ಲಿಸಲಿ. ಅಂತಹ ಮತದಾರರನ್ನೇ ಕರೆತಂದು ತೋರಿಸಲಿ ಎಂದು ಸವಾಲು ಹಾಕಿದರು.

5.54 ಕೋಟಿ ಮತದಾರರ ಲೆಕ್ಕ ಮುಂದಿಟ್ಟು ಗೊಂದಲ ಎಂದ ಚೌಟ

ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ಮತದಾರರಿದ್ದರೂ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 4.46 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್‌ ಹೇಳುವ ಮೂಲಕ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ಅವರು ಆರೋಪಿಸಿದರು.

ಕರಡು ಮತದಾರರ ಪಟ್ಟಿ ಅಂತಿಮವಲ್ಲ. ಕರಡು ಪಟ್ಟಿ ಪ್ರಕಟವಾದ ಬಳಿಕವೂ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಇಂತಹ ಪ್ರಕ್ರಿಯೆಯ ವಿರುದ್ಧವೇ ಜನರನ್ನು ಎತ್ತಿಕಟ್ಟುವುದು ಸರಿಯಲ್ಲ ಎಂದು ಹೇಳಿದರು.

ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್‌ಗೆ ಆಗ್ರಹ

ಕಾಂಗ್ರೆಸ್‌ಗೆ ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವವಿಲ್ಲ ಎಂದು ಆರೋಪಿಸಿದ ಚೌಟ, ಮುಖ್ಯಮಂತ್ರಿಯೊಬ್ಬರು ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸುವುದು ಸರಿಯೇ ಎಂದು ಪ್ರಶ್ನಿಸಿದರು. ಸಾಂವಿಧಾನಿಕ ಸಂಸ್ಥೆಗಳ ಕಾರ್ಯವಿಧಾನ ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಅರಿವು ಇರಬೇಕು. ಚುನಾವಣಾ ಆಯೋಗದ ಕಾರ್ಯದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು. ಈ ವಿಚಾರದಲ್ಲಿ ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೆ ಸುಮ್ಮನಿರಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾನೂನುಬದ್ಧವಾಗಿ ಪಾಲ್ಗೊಳ್ಳುತ್ತಿದ್ದಾರೆ. ಅವರನ್ನು ಬೆದರಿಸುವ ಅಥವಾ ಒತ್ತಡಕ್ಕೆ ಒಳಪಡಿಸುವ ಪ್ರಯತ್ನಗಳನ್ನು ಸಹಿಸುವುದಿಲ್ಲ ಎಂದು ಚೌಟ ಎಚ್ಚರಿಸಿದರು. ಆಕ್ಷೇಪಣೆಗಳಿಗೆ ಬೆದರಿಕೆ ಮೂಲಕ ಉತ್ತರಿಸುವ ಬದಲು ನಿಗದಿತ ಕಾನೂನು ಪ್ರಕ್ರಿಯೆಯ ಮೂಲಕವೇ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕು ಎಂದರು.

ಮತದಾರರ ಪಟ್ಟಿಯಲ್ಲಿ ಅನರ್ಹರ ಹೆಸರುಗಳು ಉಳಿದರೆ ಅರ್ಹ ಮತದಾರರ ಹಕ್ಕಿಗೆ ಧಕ್ಕೆಯಾಗಬಹುದು. ಹೀಗಾಗಿ ಶುದ್ಧ ಮತದಾರರ ಪಟ್ಟಿ ಪ್ರತಿಯೊಬ್ಬ ಮತದಾರನ ಹಕ್ಕು ಎಂದು ಪ್ರತಿಪಾದಿಸಿದ ಅವರು, ಎಸ್‌ಐಆರ್‌ಗೆ ಕೋಮು ಬಣ್ಣ ನೀಡುವ ಬದಲು ವಾಸ್ತವಾಂಶಗಳ ಆಧಾರದಲ್ಲಿ ಚರ್ಚೆ ನಡೆಯಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪೂಜಾ ಪೈ, ಪೂರ್ಣಿಮಾ, ಸುಜಿತ್‌ ಪ್ರತಾಪ್‌, ರಾಜಗೋಪಾಲ ರೈ, ವಸಂತ ಜೆ. ಪೂಜಾರಿ, ಜೀವನ್‌ ಕುಮಾರ್‌ ತೊಕ್ಕೊಟ್ಟು ಹಾಗೂ ಸಂಜಯ ಪ್ರಭು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading