ಬಿಗ್ ನ್ಯೂಸ್
Lawyer K.N. Jagadeesh-ಜಾತಿ ನಿಂದನೆ ಆರೋಪ; ವಕೀಲ ಕೆ.ಎನ್. ಜಗದೀಶ್ ಬಂಧನ
ಬೆಂಗಳೂರಿನ ಕೊಡಿಗೇಹಳ್ಳಿ ಠಾಣೆಯ ಪೊಲೀಸರು ಶುಕ್ರವಾರ ರಾತ್ರಿ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಮತ್ತು ಹಿಂದೂ-ಮುಸ್ಲಿಂ ಸಮುದಾಯಗಳ ನಡುವೆ ದ್ವೇಷ ಮೂಡಿಸುವಂತೆ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಕೆಂಚನಹಳ್ಳಿ ಮಂಜುನಾಥ್ ದೂರಿನಲ್ಲಿ ಆರೋಪಿಸಿದ್ದರು.

ಈ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 196(1) ಮತ್ತು 299ರಡಿ ಪ್ರಕರಣ ದಾಖಲಿಸಲಾಗಿದೆ.
ದೂರಿನಲ್ಲಿ ಮಂಜುನಾಥ್, “ಜಗದೀಶ್ ಅವರು ಜಾತಿಗಳ ನಡುವೆ ವೈಷಮ್ಯ ಮತ್ತು ದ್ವೇಷವನ್ನು ಉಂಟುಮಾಡುವ ರೀತಿಯಲ್ಲಿ ಮಾತನಾಡಿದ್ದಾರೆ. ಅವರ ಹೇಳಿಕೆಗಳು ಸಮಾಜದ ಶಾಂತಿಗೆ ಭಂಗ ತರುವಂತಿದ್ದವು. ಆದ್ದರಿಂದ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿದ್ದರು.
ಪೊಲೀಸರು ಗುರುವಾರ ಜಗದೀಶ್ ಅವರ ಮನೆಗೆ ತೆರಳಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಪ್ರಯತ್ನಿಸಿದ್ದರು. ಆದರೆ, ಜಗದೀಶ್ ಬಾಗಿಲು ತೆರೆಯದ ಕಾರಣ, ನೋಟಿಸ್ ಅನ್ನು ಮನೆಯ ಗೋಡೆಗೆ ಅಂಟಿಸಲಾಗಿತ್ತು. ಶುಕ್ರವಾರ ಸಂಜೆ ಜಗದೀಶ್ ಅವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಬಿಗ್ ನ್ಯೂಸ್
Golithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಪುತ್ತೂರು, ಅ.11: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ಕಾಂಚನ ಕ್ರಾಸ್ ಸಮೀಪದ ತೋಡಿನ ನೀರಿನಲ್ಲಿ ಸಣ್ಣಪುಟ್ಟ ಮೀನುಗಳು ಏಕಾಏಕಿ ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಡಿನಲ್ಲಿ ಸಾಕಷ್ಟು ದೂರದವರೆಗೆ ಮೀನುಗಳು ಸತ್ತಿರುವುದು ಸ್ಥಳೀಯರು ಚಿತ್ರೀಕರಿಸಿದ ವಿಡಿಯೋದಲ್ಲಿ ಕಾಣಿಸಿಕೊಂಡಿದೆ.
ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಮೀನುಗಳ ಸಾವಿಗೆ ಯಾರಾದರೂ ರಾಸಾಯನಿಕ ಬಳಕೆ ಮಾಡಿರುವುದು ಕಾರಣವೇ ಅಥವಾ ನೀರಿನಲ್ಲಿ ವಿಷಕಾರಿ ಅಂಶ ಬೆರೆತಿರುವುದರಿಂದ ಈ ಘಟನೆ ಸಂಭವಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ನೀರಿನ ಮಾದರಿಯನ್ನು ಪರೀಕ್ಷಿಸುವ ಮೂಲಕ ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಮಂಗಳೂರು
ABVP protest-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ
ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾಲೇಜು ಆಡಳಿತ ಮಂಡಳಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.
ಕಾಲೇಜಿನ ಪ್ರಾಂಶುಪಾಲರು ಪ್ರತಿಭಟನಾಕಾರರಿಗೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿನಿಯರನ್ನು ತಳ್ಳಿದ ಆರೋಪ: ಆಕ್ರೋಶ
ಪ್ರತಿಭಟನೆ ಆರಂಭವಾದ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಪೊಲೀಸರ ಕೊರತೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿನಿಯರನ್ನು ತಳ್ಳಿದ್ದಾರೆ ಹಾಗೂ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೈ ಮುಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪೊಲೀಸರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದರು. ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸಿದ ಕಾಲೇಜಿನ ಕ್ರಮ ಹಾಗೂ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ವರ್ತನೆ ಎರಡೂ ವಿಚಾರಗಳು ಸ್ಥಳದಲ್ಲಿ ಉದ್ವಿಗ್ನತೆಗೆ ಕಾರಣವಾದವು.
ಭಾರತ್ ಮಾತಾ ಕೀ ಜೈ ಎಂದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ – ಖಂಡನೆ
ದಸರಾ ಹಬ್ಬದ ರಜೆಯ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿರುವುದು ಮತ್ತು ಅದರ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಇಲಾಖೆ ನಡೆಸಿರುವ ಬಲಪ್ರಯೋಗ ಹಾಗೂ ದೌರ್ಜನ್ಯವು ಅತ್ಯಂತ ಖಂಡನೀಯ. ಶಾಂತಿಯುತ ಪ್ರತಿಭಟನೆ ಮತ್ತು ಕಾನೂನುಬದ್ಧ ಹೋರಾಟ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಹಕ್ಕು.
ವಿದ್ಯಾರ್ಥಿಗಳ ಮೇಲೆ ಕೈ ಮಾಡಲು ಮತ್ತು ದೌರ್ಜನ್ಯ ಎಸಗಲು ಯಾರು ಆದೇಶ ನೀಡಿದರು ಎಂಬ ಪ್ರಶ್ನೆಗೆ ಸಂಬಂಧಪಟ್ಟ ಪೊಲೀಸ್ ಹಾಗೂ ಆಡಳಿತ ಯಂತ್ರದಿಂದ ಸ್ಪಷ್ಟನೆ ದೊರೆಯಬೇಕಿದೆ.
ಹಬ್ಬದ ವಾತಾವರಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಿದ್ದ ಆಡಳಿತ ಮಂಡಳಿ ಮತ್ತು ಪರಿಸ್ಥಿತಿಯನ್ನು ಸಂಯಮದಿಂದ ನಿರ್ವಹಿಸಬೇಕಿದ್ದ ಪೊಲೀಸ್ ಇಲಾಖೆ ಎರಡೂ ಕಡೆಯಿಂದ ಈ ರೀತಿಯ ಘಟನೆ ನಡೆದಿರುವುದು ದುರದೃಷ್ಟಕರ.
ತಕ್ಷಣವೇ ಜನಪ್ರತಿನಿಧಿಗಳು ಮತ್ತು ಉನ್ನತ ಅಧಿಕಾರಿಗಳು ಈ ವಿಚಾರದಲ್ಲಿ ಗಮನಹರಿಸಿ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ನ್ಯಾಯ ಒದಗಿಸಬೇಕು ಹಾಗೂ ವಿದ್ಯಾರ್ಥಿಗಳ ಹೋರಾಟಕ್ಕೆ ಸೂಕ್ತ ಸ್ಪಂದನೆ ಸಿಗಬೇಕು.
ಮಂಗಳೂರು
Mangalore-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ
ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾಲೇಜು ಆಡಳಿತ ಮಂಡಳಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.
ಕಾಲೇಜಿನ ಪ್ರಾಂಶುಪಾಲರು ಪ್ರತಿಭಟನಾಕಾರರಿಗೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿನಿಯರನ್ನು ತಳ್ಳಿದ ಆರೋಪ: ಆಕ್ರೋಶ
ಪ್ರತಿಭಟನೆ ಆರಂಭವಾದ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಪೊಲೀಸರ ಕೊರತೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿನಿಯರನ್ನು ತಳ್ಳಿದ್ದಾರೆ ಹಾಗೂ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೈ ಮುಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
-
ಅಂತರ ರಾಜ್ಯ23 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
ಮಂಗಳೂರು17 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಬಿಗ್ ನ್ಯೂಸ್18 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
ಸುಳ್ಯ20 hours agoSullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
-
ಬಿಗ್ ನ್ಯೂಸ್23 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
-
ಅಪರಾಧ20 hours agoUdupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
-
ಅಂತರ ರಾಜ್ಯ20 hours agoElon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್
-
ಸ್ಥಳೀಯ23 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ