ಶಿಕ್ಷಣ
Dr. B.N. Vijayendra Acharya-ವಿವೇಕಾನಂದ ಕಾಲೇಜಿನಲ್ಲಿ ಪ್ರವಚನ ಮಾಲಿಕೆ ಉದ್ಘಾಟನೆ; ಯುವ ಸಮಾಜ ಧರ್ಮವನ್ನು ಸಂರಕ್ಷಿಸಬೇಕು — ಡಾ. ಬೆ.ನಾ ವಿಜಯೀಂದ್ರ ಆಚಾರ್ಯ
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿ ಸಂಸ್ಕೃತ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ಸಂಸ್ಕೃತ ಸಂಘ, ವಿವೇಕಾನಂದ ಸಂಶೋಧನಾ ಕೇಂದ್ರ, ಸೌರಭ ಪ್ರಸಾರಾಂಗ ಹಾಗೂ ಐಕ್ಯೂಎಸಿಯ ಸಹಯೋಗದಲ್ಲಿ ನಡೆದ ‘ಭಾರತಿಯ ಜೀವನ ದರ್ಶನ’ ಪ್ರವಚನ ಮಾಲಿಕೆಯನ್ನು ಉದ್ಘಾಟಿಸಿ ಮೈಸೂರು ಅಂಭ್ರಣೀ ಗುರುಕುಲದ ನಿರ್ದೇಶಕ ಡಾ. ಬೆ.ನಾ ವಿಜಯೀಂದ್ರ ಆಚಾರ್ಯ ಮಾತನಾಡಿದರು.
ಪುತ್ತೂರು:” ನಮ್ಮಲ್ಲಿರುವ ಭಾವನೆಗಳನ್ನು ಜಾಗೃತವಾಗಿಡಲು ಆಧ್ಯಾತ್ಮಿಕ ಜ್ಞಾನ ಸಹಕಾರಿ. ಕಣ್ಣು, ಕಿವಿ ಮುಂತಾದ ಪಂಚೇಂದ್ರಿಯಗಳಿಗೆ ಅದರದ್ದೇ ಆದ ಮಹತ್ವ ಇದೆ. ಅದರ ಸಮರ್ಥ ಬಳಕೆಯಿಂದ ನಾವು ಪ್ರತಿ ವಿಚಾರಗಳ ಬಗ್ಗೆ ವಿಮರ್ಶೆ ಮಾಡಿ ಮುಂದುವರಿಯಬೇಕು. ಮಾನವರ ಬದುಕು ತಿಳಿಯುವುದಕ್ಕಾಗಿ ಇದೆ ” ಎಂದು ಮೈಸೂರು ಅಂಭ್ರಣೀ ಗುರುಕುಲದ ನಿರ್ದೇಶಕ ಡಾ. ಬೆ.ನಾ ವಿಜಯೀಂದ್ರ ಆಚಾರ್ಯ ನುಡಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿ ಸಂಸ್ಕೃತ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ಸಂಸ್ಕೃತ ಸಂಘ, ವಿವೇಕಾನಂದ ಸಂಶೋಧನಾ ಕೇಂದ್ರ, ಸೌರಭ ಪ್ರಸಾರಾಂಗ ಹಾಗೂ ಐಕ್ಯೂಎಸಿಯ ಸಹಯೋಗದಲ್ಲಿ ನಡೆದ ‘ಭಾರತಿಯ ಜೀವನ ದರ್ಶನ’ ಪ್ರವಚನ ಮಾಲಿಕೆಯನ್ನು ಉದ್ಘಾಟಿಸಿ ಮಾತನಾಡಿದರು.
” ಭಾರತದಲ್ಲಿ ಜನ್ಮ ಪಡೆದಾಗ ಸ್ವರ್ಗ ಪ್ರಾಪ್ತಿಯ ಫಲ ಎಂಬುದು ನಂಬಿಕೆ. ಸಂಕಷ್ಟದ ಸಂದರ್ಭ ಅದನ್ನು ಪರಿಹರಿಸಿ ಮೇಲೇಳುವ ದೇಶ ಇದು. ಹೀಗಿರುವ ದೇಶದಲ್ಲಿ ಯುವ ಸಮಾಜ ಧರ್ಮ ಸಂರಕ್ಷಣೆಯ ಕಾರ್ಯದಲ್ಲಿ ತೊಡಗಬೇಕು ” ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ಮಾತುಗಳನ್ನಾಡಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ” ತರಗತಿಯಲ್ಲಿ ಪಡೆದುಕೊಂಡ ಜ್ಞಾನವೂ ಅತೀ ಮುಖ್ಯವಾಗಿರುತ್ತದೆ. ಇದರ ಜೊತೆಗೆ ಹಿರಿಯರು ಹೇಳಿದ ಮಾತುಗಳನ್ನು ಬದುಕಿನಲ್ಲಿ ಅಗತ್ಯವಾಗಿ ಅಳವಡಿಸಿಕೊಳ್ಳಬೇಕು ” ಎಂದರು.
ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ.ಎನ್ ಶುಭಹಾರೈಸಿದರು. ಈ ಸಂದರ್ಭದಲ್ಲಿ ಡಾ. ಬೆ.ನಾ ವಿಜಯೀಂದ್ರ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ಸಂಸ್ಕೃತ ಸಂಘದ ಲಾಂಛನವನ್ನು ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯೆ ಶುಭಾ ಅಡಿಗ, ಪ್ರಾಂಶುಪಾಲ ಡಾ. ಶ್ರೀಧರ ನಾಯಕ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಶ್ರೀಶ ಕುಮಾರ ಯಂ.ಕೆ ಸ್ವಾಗತಿಸಿ ಸಂಸ್ಕೃತ ಸಂಘದ ಅಧ್ಯಕ್ಷೆ ಪ್ರಣತಿ.ಕೆ ವಂದಿಸಿದರು. ಸಂಸ್ಕೃತ ಸಂಘದ ಜೊತೆ ಕಾರ್ಯದರ್ಶಿ ಅನರ್ಘ್ಯಾ.ಜಿ ನಿರೂಪಿಸಿದರು.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ಶಿಕ್ಷಣ
Vivekanand-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ
ಭಾರತವು ವಿಶ್ವದಲ್ಲಿಯೇ ಐಇಇಇ ಯ ಅತ್ಯಂತ ವೇಗವಾಗಿ ಬೆಳೆಯುವ ವಿಭಾಗವಾಗಿದ್ದು, ವೃತ್ತಿಪರ ಸಂಪರ್ಕ ಜಾಲವನ್ನು ವಿಸ್ತರಿಸಿಕೊಳ್ಳುವ ದೃಷ್ಟಿಯಿಂದ ಒಂದಲ್ಲ ಒಂದು ರೀತಿಯಲ್ಲಿ ಇದರ ಭಾಗವಾಗುವುದು ಮಹತ್ವದ ವಿಚಾರ ಎಂದು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನ ಸೆಂಟರ್ ಆಫ್ ನ್ಯಾನೋ ಸೈನ್ಸಸ್ ಎಂಡ್ ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಡಾ. ನವಕಾಂತ ಭಟ್ ಹೇಳಿದರು.

ಪುತ್ತೂರು: ಭಾರತವು ವಿಶ್ವದಲ್ಲಿಯೇ ಐಇಇಇ ಯ ಅತ್ಯಂತ ವೇಗವಾಗಿ ಬೆಳೆಯುವ ವಿಭಾಗವಾಗಿದ್ದು, ವೃತ್ತಿಪರ ಸಂಪರ್ಕ ಜಾಲವನ್ನು ವಿಸ್ತರಿಸಿಕೊಳ್ಳುವ ದೃಷ್ಟಿಯಿಂದ ಒಂದಲ್ಲ ಒಂದು ರೀತಿಯಲ್ಲಿ ಇದರ ಭಾಗವಾಗುವುದು ಮಹತ್ವದ ವಿಚಾರ ಎಂದು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನ ಸೆಂಟರ್ ಆಫ್ ನ್ಯಾನೋ ಸೈನ್ಸಸ್ ಎಂಡ್ ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಡಾ. ನವಕಾಂತ ಭಟ್ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಐಇಇಇ ಬೆಂಗಳೂರು ವಿಭಾಗ ಮತ್ತು ಐಇಇಇ ಮಂಗಳೂರು ಉಪವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಡಿಸ್ಟ್ರಿಬ್ಯೂಟೆಡ್ ಕಂಪ್ಯೂಟಿಂಗ್, ವಿಎಲ್‌ಎಸ್‌ಐ, ಇಲೆಕ್ಟ್ರಿಕಲ್ ಸರ್ಕ್ಯೂಟ್ಸ್ ಮತ್ತು ರೊಬೋಟಿಕ್ಸ್ ವಿಷಯಗಳನ್ನೊಳಗೊಂಡ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನ ಡಿಸ್ಕವರ್ 2026ಕ್ಕೆ ಚಾಲನೆ ನೀಡಿ ಮಾತಾಡಿದರು. ಇದು ಭವಿಷ್ಯದ ತಂತ್ರಜ್ಞಾನ ನಿರೂಪಣೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಲಿದ್ದು, ತಂತ್ರಜ್ಞರು ಇದರ ಭಾಗವಾಗುವುದರಿಂದ ವಿಶ್ವದಾದ್ಯಂತ ಇರುವ ತಂತ್ರಜ್ಞಾನ ಕ್ಷೇತ್ರದ ಪರಿಣತರೊಂದಿಗೆ ಸಂಪರ್ಕ ಬೆಳೆಸಲು, ಅಗತ್ಯವಾದ ತಾಂತ್ರಿಕ ಮಾಹಿತಿಯನ್ನು ಪಡೆಯಲು, ತಮ್ಮ ವೃತ್ತಿ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಗೌರವ ಅತಿಥಿಗಳಾಗಿದ್ದ ಟಿಸಿಎಸ್ ಸಂಸ್ಥೆಯ ಹಿರಿಯ ವಿಜ್ಞಾನಿ ಹಾಗೂ ಐಇಇಇ ಬೆಂಗಳೂರು ವಿಭಾಗದ ಮುಖ್ಯಸ್ಥ ಡಾ. ಪ್ರಶಾಂತ್ ಮಿಶ್ರ ಮಾತನಾಡಿ ತಾಂತ್ರಿಕ ಸಮುದಾಯಗಳ ನಿರ್ಮಾಣ, ಸಮ್ಮೇಳನಗಳು ಮತ್ತು ಮಾನದಂಡಗಳಿಂದ ಐಇಇಇ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ ಎಂದರು. ಇದರ ಬೆಂಗಳೂರು ವಿಭಾಗಕ್ಕೆ 50 ವರ್ಷಗಳ ಸಂಭ್ರಮ ಮತ್ತು ಮಂಗಳೂರು ಉಪವಿಭಾಗಕ್ಕೆ 10ರ ಸಡಗರ ಹಾಗಾಗಿ ಈ ಸಮ್ಮೇಳನವು ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ ಎಂದರು. ೫೦ ವರ್ಷಗಳ ಸಂಭ್ರಮದಲ್ಲಿ ಮಿಶನ್-31 ಎನ್ನುವ ಯೋಜನೆಯನ್ನು ರೂಪಿಸಲಾಗಿದ್ದು ಕರ್ನಾಟಕದ ಎಲ್ಲಾ 31 ಜಿಲ್ಲೆಗಳನ್ನು ಐಇಇಇ ಯ ಭಾಗವಾಗಿಸುವುದು ಇದರ ಉದ್ದೇಶ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮಾತನಾಡಿ ಇದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪಯಣದಲ್ಲಿ ಮಹತ್ವದ ಕ್ಷಣವಾಗಿದೆ. ನಾವೀನ್ಯತೆಗಳು ಹೊಸ ದಾರಿಗಳನ್ನು ಕಂಡುಕೊಳ್ಳುವ ಪರಿಕಲ್ಪನೆ ಇಲ್ಲಿ ಮೂರ್ತರೂಪ ಪಡೆಯುತ್ತಿದೆ ಎಂದರು. ತರಗತಿಯ ಆಚೆಗೂ ಕನಸುಗಳನ್ನು ವಿಸ್ತರಿಸಿ, ಪರಿಧಿಯನ್ನು ದಾಟಿ ಹೊಸತನವನ್ನು ಕಂಡುಕೊಳ್ಳಿ ಮತ್ತು ಸಾಮಾಜಿಕ ಪರಿವರ್ತನೆಯನ್ನು ತರುವ ರೀತಿಯಲ್ಲಿ ಸಮಸ್ಯೆಗಳಿಗೆ ಪರಿಹಾರವನ್ನು ರೂಪಿಸಿ ಯಶಸ್ಸನ್ನು ಸಾಧಿಸಿ ಎಂದರು.

ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಭೆ, ಕಾರ್ಯಕ್ರಮ ಸಂಯೋಜಕಿಯರಾದ ಡಾ.ಜೀವಿತಾ.ಬಿ.ಕೆ., ಡಾ.ರಜನಿ ರೈ.ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮ್ಮೇಳನದಲ್ಲಿ ಮಂಡಿಸುವ ಪ್ರಬಂಧಗಳ ಸಾರಾಂಶದ ಪುಸ್ತಕವನ್ನು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು.
ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ರವೀಂದ್ರ.ಪಿ, ಸಮಿತಿಯ ಸದಸ್ಯರು, ತೀರ್ಪುಗಾರರು, ಪ್ರತಿನಿಧಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಸ್ವಾಗತಿಸಿದರು. ಐಇಇಇ ಮಂಗಳೂರು ಉಪವಿಭಾಗದ ಮುಖ್ಯಸ್ಥ ಡಾ.ವೇಣುಗೋಪಾಲ್.ಪಿ.ಎಸ್ ಪ್ರಸ್ತಾವನೆಗೈದರು. ಎಐಎಂಎಲ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ.ಹರ್ಷಿತಾ.ಕೆ ಅತಿಥಿಗಳನ್ನು ಪರಿಚಯಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ. ಸ್ವಪ್ನಲಕ್ಷ್ಮಿ ಕೆ ವಂದಿಸಿದರು. ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ.ನೀಮಾ.ಎಚ್ ಕಾರ್ಯಕ್ರಮ ನಿರ್ವಹಿಸಿದರು.
-
ಅಂತರ ರಾಜ್ಯ24 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಸ್ಥಳೀಯ6 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಅಂತರ ರಾಜ್ಯ23 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಪರಾಧ6 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಬಿಗ್ ನ್ಯೂಸ್6 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಸಿನೆಮಾ5 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಮಂಗಳೂರು22 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
-
ಅಪರಾಧ4 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!


















