ರಾಷ್ಟ್ರೀಯ
AirTel | ದೇಶಾದ್ಯಂತ AirTel ಸೇವೆಯಲ್ಲಿ ವ್ಯತ್ಯಯ: ನೆಟ್‌ವರ್ಕ್ ಸಂಪೂರ್ಣ ಸ್ಥಗಿತ – ಪರದಾಡಿದ ಗ್ರಾಹಕರು
ಹೊಸದಿಲ್ಲಿ : ಭಾರತದಲ್ಲಿ ಏರ್‌ಟೆಲ್ (AirTel) ಬಳಕೆದಾರರಿಗೆ ತೊಂದರೆಯಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಏರ್‌ಟೆಲ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿತ್ತು. ಈಗ ಮತ್ತೆ ನೆಟ್‌ವರ್ಕ್ ಸಮಸ್ಯೆ ಕಾಣಿಸಿಕೊಂಡಿದೆ.
ಈ ಬಾರಿ ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಬಳಕೆದಾರರು ತೊಂದರೆ ಅನುಭವಿಸಿದ್ದಾರೆ. ಏರ್‌ಟೆಲ್ ಸಂಸ್ಥೆಯು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ತಾತ್ಕಾಲಿಕ ಸಮಸ್ಯೆಯಿಂದ ಹೀಗಾಗಿದೆ. ಒಂದು ಗಂಟೆಯೊಳಗೆ ಸರಿಪಡಿಸುತ್ತೇವೆ ಎಂದು ತಿಳಿಸಿದೆ.
ಕಡಿಮೆ ಸಮಯದಲ್ಲಿ 6,800ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ಕರೆ ಮಾಡಲು ಮತ್ತು ಮೆಸೇಜ್ ಕಳುಹಿಸಲು ಸಾಧ್ಯವಾಗುತ್ತಿಲ್ಲ ಎಂದು ಬಳಕೆದಾರರು ಹೇಳುತ್ತಿದ್ದಾರೆ.ಏರ್‌ಟೆಲ್ ನೆಟ್‌ವರ್ಕ್ ಡೌನ್ ರಾಜ್ಯದಾದ್ಯಂತ ಅನೇಕ ಜನರಿಗೆ ಏರ್‌ಟೆಲ್ ನೆಟ್‌ವರ್ಕ್ ಸಿಗುತ್ತಿಲ್ಲ.
ಚೆನ್ನೈ, ಹೈದರಾಬಾದ್, ಕೋಲ್ಕತ್ತಾ ಮತ್ತು ಇತರ ಪ್ರಮುಖ ನಗರಗಳಲ್ಲೂ ಸಮಸ್ಯೆ ಇದೆ. ಇದರಿಂದ ಜನರು ಸಾಮಾಜಿಕ ಜಾಲತಾಣಗಳಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಸಂಪರ್ಕವೇ ಇಲ್ಲದಂತಾಗಿದೆ ಎಂದು ಹಲವರು ದೂರಿದ್ದಾರೆ.ಬಳಕೆದಾರರ ದೂರು ಬಳಕೆದಾರರು ಕರೆ ಮಾಡಲು ಮತ್ತು ಸಂದೇಶಗಳನ್ನು ಕಳುಹಿಸಲು ಸಾಧ್ಯವಾಗುತ್ತಿಲ್ಲ.
ಒಬ್ಬ ಬಳಕೆದಾರರು “ಯಾವುದೇ ಕರೆ ಮಾಡಲು ಸಾಧ್ಯವಾಗುತ್ತಿಲ್ಲ ಮತ್ತು ಮೊಬೈಲ್ ಡೇಟಾ ಕೂಡ ಇಲ್ಲ. ನೆಟ್‌ವರ್ಕ್ ಸಿಗುತ್ತಿಲ್ಲ” ಎಂದು ಪೋಸ್ಟ್ ಮಾಡಿದ್ದಾರೆ. ಇನ್ನೊಬ್ಬರು “ನನಗೂ ಬೆಂಗಳೂರಿನಲ್ಲಿ ಇದೇ ಸಮಸ್ಯೆ ಇದೆ. ಕೆಲವೇ ಗಂಟೆಗಳಲ್ಲಿ ಮೀಟಿಂಗ್ ಇದೆ, ಕ್ಯಾಬ್ ಬುಕ್ ಮಾಡಲು ಆಗುತ್ತಿಲ್ಲ” ಎಂದು ಹೇಳಿದ್ದಾರೆ.
ಮತ್ತೊಬ್ಬ ಬಳಕೆದಾರರು, “ಬೆಂಗಳೂರಿನಲ್ಲಿ ಇಂಟರ್ನೆಟ್, ಬ್ರಾಡ್‌ಬ್ಯಾಂಡ್, ಮೊಬೈಲ್ ಎಲ್ಲವೂ ಡೌನ್ ಆಗಿದೆ. ಏರ್‌ಟೆಲ್ ಆ್ಯಪ್ ಅಥವಾ IVRS ಮೂಲಕ ದೂರು ನೀಡಲು ಸಾಧ್ಯವಿಲ್ಲ. ಎಕ್ಸ್‌ನಲ್ಲಿಯೂ ಯಾವುದೇ ಪ್ರತಿಕ್ರಿಯೆ ಇಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕ್ಷಮೆಯಾಚಿಸಿದ ಏರ್‌ಟೆಲ್ಸಮಸ್ಯೆ ಕಾಣಿಸಿಕೊಂಡ ತಕ್ಷಣ ಏರ್‌ಟೆಲ್ ಕೇರ್ಸ್ ಒಂದು ಹೇಳಿಕೆ ನೀಡಿದೆ.
“ತಾತ್ಕಾಲಿಕ ಸಂಪರ್ಕದ ಸಮಸ್ಯೆಯಿಂದ ಹೀಗಾಗಿದೆ. ಒಂದು ಗಂಟೆಯೊಳಗೆ ಸರಿಪಡಿಸುತ್ತೇವೆ. ಆ ನಂತರ ನಿಮ್ಮ ಮೊಬೈಲ್ ಫೋನ್ ಅನ್ನು ರೀಸ್ಟಾರ್ಟ್ ಮಾಡಿ” ಎಂದು ಏರ್‌ಟೆಲ್ ಕೇರ್ಸ್ ತಿಳಿಸಿದೆ. “ನಿಮಗೆ ಆಗುತ್ತಿರುವ ತೊಂದರೆಗೆ ನಾವು ಕ್ಷಮೆಯಾಚಿಸುತ್ತೇವೆ. ತಾತ್ಕಾಲಿಕ ಸಂಪರ್ಕದ ಸಮಸ್ಯೆಯಿಂದ ಹೀಗಾಗಿದೆ. ಒಂದು ಗಂಟೆಯೊಳಗೆ ಸರಿಪಡಿಸುತ್ತೇವೆ ಎಂದು ನಿರೀಕ್ಷಿಸುತ್ತೇವೆ. ಆ ಸಮಯದ ನಂತರ, ದಯವಿಟ್ಟು ನಿಮ್ಮ ಮೊಬೈಲ್ ಫೋನ್ ಅನ್ನು ರೀಸ್ಟಾರ್ಟ್ ಮಾಡಿ” ಎಂದು ಏರ್‌ಟೆಲ್ ಕೇರ್ಸ್ ಸಂದೇಶದಲ್ಲಿ ಹೇಳಿದೆ.
ಈ ಹಿಂದೆ ಆದ ಸಮಸ್ಯೆಯಿಂದ ಏರ್‌ಟೆಲ್ ಸಾಕಷ್ಟು ಟೀಕೆಗಳನ್ನು ಎದುರಿಸಿತ್ತು. ಈಗ ಮತ್ತೆ ಅದೇ ರೀತಿಯ ಸಮಸ್ಯೆ ಕಾಣಿಸಿಕೊಂಡಿರುವುದು ಬಳಕೆದಾರರಿಗೆ ಬೇಸರ ತರಿಸಿದೆ. ಏರ್‌ಟೆಲ್ ತನ್ನ ಸೇವೆಗಳನ್ನು ಸುಧಾರಿಸಬೇಕೆಂದು ಜನರು ಆಗ್ರಹಿಸುತ್ತಿದ್ದಾರೆ. ಪದೇ ಪದೇ ಆಗುತ್ತಿರುವ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಬೇಕೆಂದು ಒತ್ತಾಯಿಸುತ್ತಿದ್ದಾರೆ. ಏರ್‌ಟೆಲ್ ಸಂಸ್ಥೆ ಈ ಬಗ್ಗೆ ಗಮನ ಹರಿಸುತ್ತದೆಯೇ ಎಂದು ಕಾದು ನೋಡಬೇಕಿದೆ.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಷ್ಟ್ರೀಯ
Crude oil-100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ : ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ..!
ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ನ್ಯೂಯಾರ್ಕ್: ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಪ್ರಮುಖ ಮಾನದಂಡವಾಗಿರುವ ಬ್ರೆಂಟ್ ಕ್ರೂಡ್ ಬೆಲೆ ಶೇ.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 100 ಡಾಲರ್ ಮಟ್ಟ ತಲುಪಿದೆ.
ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಜೆಟ್ ಇಂಧನದ ಬೆಲೆಗಳ ಮೇಲೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಪ್ರಯಾಣ ವೆಚ್ಚ ಹೆಚ್ಚುವುದರ ಜೊತೆಗೆ, ತಾಜಾ ಆಹಾರ ಪದಾರ್ಥಗಳು ಸೇರಿದಂತೆ ತ್ವರಿತವಾಗಿ ಸಾಗಿಸಬೇಕಾದ ಸರಕುಗಳ ಬೆಲೆಯೂ ಏರಿಕೆಯಾಗಬಹುದು. ದೂರದ ಪ್ರದೇಶಗಳಿಗೆ ಸಾಗಿಸುವ ಪೀಠೋಪಕರಣ, ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.
ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ!
ಕಚ್ಚಾ ತೈಲದ ಬೆಲೆ 100 ಡಾಲರ್ ದಾಟಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಸುಮಾರು ₹5 ಹಾಗೂ ಡೀಸೆಲ್ ಮಾರಾಟದಲ್ಲಿ ₹23ರಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿಯಾಗಿದೆ.


















