ಬಿಗ್ ನ್ಯೂಸ್
Puttur-ಪುತ್ತೂರು: 6ನೇ ವರುಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಪೆನ್ಸೀ ಇಂಟಿರಿಯರ್ಸ್
ರಾಜ್ಯಾದ್ಯಂತ ನೂರಾರು ಮನೆ, ಸಂಘ ಸಂಸ್ಥೆಗಳ ಇಂಟೀರಿಯರ್ಸ್ ಮಾಡಿ, ಜನಮೆಚ್ಚುಗೆ ಗಳಿಸಿ, ಗ್ರಾಹಕರ ಪ್ರೋತ್ಸಾಹದಿಂದ ಮುನ್ನಡೆಯುತ್ತಿರುವ ಪುತ್ತೂರಿನ ಸಂಪ್ಯ ಪೊಲೀಸ್ ಸ್ಟೇಷನ್ ಬಳಿ ಇರುವ ಪೆನ್ಸೀ ಇಂಟಿರಿಯರ್ಸ್ 6ನೇ ವರುಷದ ಹುಟ್ಟುಹಬ್ಬ ಆಚರಿಸುತ್ತಿದ್ದು, ಕಳೆದ ಕೆಲವು ವರುಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಾ ಬಂದಿದೆ.
ಪುತ್ತೂರು: ರಾಜ್ಯಾದ್ಯಂತ ನೂರಾರು ಮನೆ, ಸಂಘ ಸಂಸ್ಥೆಗಳ ಇಂಟೀರಿಯರ್ಸ್ ಮಾಡಿ, ಜನಮೆಚ್ಚುಗೆ ಗಳಿಸಿ, ಗ್ರಾಹಕರ ಪ್ರೋತ್ಸಾಹದಿಂದ ಮುನ್ನಡೆಯುತ್ತಿರುವ ಪುತ್ತೂರಿನ ಸಂಪ್ಯ ಪೊಲೀಸ್ ಸ್ಟೇಷನ್ ಬಳಿ ಇರುವ ಪೆನ್ಸೀ ಇಂಟಿರಿಯರ್ಸ್ 6ನೇ ವರುಷದ ಹುಟ್ಟುಹಬ್ಬ ಆಚರಿಸುತ್ತಿದ್ದು, ಕಳೆದ ಕೆಲವು ವರುಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಾ ಬಂದಿದೆ.
ಪೆನ್ಸೀ ಇಂಟಿರಿಯರ್ಸ್ನ ಸೌಲಭ್ಯಗಳು:
- * ಮಾಡ್ಯುಲರ್ ಕಿಚನ್
- * ವಾರ್ಡ್ ರೋಬ್
- * ಟಿವಿ ಯುನಿಟ್
- * ಫಾಲ್ಸ್ ಸೀಲಿಂಗ್
- * ವಾಲ್ಪೇಪರ್
- * ಉತ್ಕೃಷ್ಟ ಗುಣಮಟ್ಟ ಅತ್ಯುತ್ತಮ ಬಾಳಿಕೆ
- * 3ಡಿ, 2ಡಿ ವಿನ್ಯಾಸಗಳು ಲಭ್ಯ
- ಗ್ರಾಹಕರು ಯಾವುದೇ ತರಹದ ಇಂಟೀರಿಯರ್ಸ್ ಅಗತ್ಯತೆಗಳಿಗಾಗಿ ಪೆನ್ಸೀ ಇಂಟೀರಿಯರ್ಸ್ ನ್ನು ಸಂಪರ್ಕಿಸುವಂತೆ ಮಾಲಕರಾದ ಸತೀಶ್ ರೈ ನೀರ್ಪಾಡಿ ತಿಳಿಸಿದ್ದಾರೆ.
ಅಂತರ ರಾಜ್ಯ
L.K. Advani-ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು
ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಹೊಸದಿಲ್ಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ದಿಲ್ಲಿಯ ಜಸೋಲಾ ವಿಹಾರ್ನಲ್ಲಿರುವ ಆಸ್ಪತ್ರೆಗೆ ಅಡ್ವಾಣಿ ಅವರನ್ನು ಸಂಜೆ ಸುಮಾರು 7.30ರ ವೇಳೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿಯ ಕುರಿತು ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಎಲ್.ಕೆ. ಅಡ್ವಾಣಿ ಅವರು 2002ರಿಂದ 2004ರವರೆಗೆ ದೇಶದ ಉಪ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಬಿಜೆಪಿಯನ್ನು ರಾಷ್ಟ್ರಮಟ್ಟದಲ್ಲಿ ಪ್ರಮುಖ ರಾಜಕೀಯ ಶಕ್ತಿಯಾಗಿ ಬೆಳೆಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು.
ಮಂಗಳೂರು
MRPL explosion-Big Breaking: MRPL ಸ್ಫೋಟ : ತೀವ್ರ ಗಾಯಗೊಂಡಿದ್ದ ರಾಜೇಶ್ ನಿಧನ : ಮನೀಶ್ ಕರ್ಕಡ ಕುಟುಂಬಕ್ಕೆ ನೀಡಿದ ಪರಿಹಾರದಷ್ಟೇ ನೀಡುವಂತೆ ಒತ್ತಾಯ
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ರಾಜೇಶ್ ಡಿಸಿಲ್ವ ಅವರು ಸುರತ್ಕಲ್ ಇಡ್ಯಾ ಗ್ರಾಮದ ಕಾನ ನಿವಾಸಿಯಾಗಿದ್ದು, ಬ್ಯಾಪಿಸ್ಟ್ ಡಿಸಿಲ್ವ ಎಂಬುವವರ ಐವರು ಮಕ್ಕಳ ಪೈಕಿ ಒಬ್ಬರಾಗಿದ್ದಾರೆ. ಇವರು ಹಲವು ವರ್ಷಗಳಿಂದ ಎಂಆರ್ಪಿಎಲ್ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದರು. ಅ ಅವಿವಾಹಿತರಾಗಿದ್ದರು ಎಂದು ತಿಳಿದುಬಂದಿದೆ. ಎಂಆರ್ಪಿಎಲ್ನ ಫೇಸ್-3ರ ಸಿಎಚ್ಟಿಯು (Coker Hydro Treating Unit) ಪ್ಲಾಂಟ್ನಲ್ಲಿ ಕಳೆದ ಸೆಪ್ಟೆಂಬರ್ 30ರಂದು ಭಾರೀ ಸ್ಫೋಟ ಸಂಭವಿಸಿತ್ತು. ಅಂದು ಸಂಭವಿಸಿದ ದುರಂತದಲ್ಲಿ ಹಳೆಯಂಗಡಿ ನಿವಾಸಿ ಮನೀಶ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದರು.
ಅದೇ ಘಟನೆಯಲ್ಲಿ ತೀವ್ರ ಸುಟ್ಟಗಾಯಗಳಿಗೆ ಒಳಗಾಗಿದ್ದ ರಾಜೇಶ್ ಡಿಸಿಲ್ವ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಐಸಿಯು (ICU) ಘಟಕದಲ್ಲಿ ತೀವ್ರ ನಿಗಾದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಕಳೆದ ಕೆಲವು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮೃತರ ದೇಹವನ್ನು ಇಂದು ಸಂಜೆಯ ವೇಳೆ ನಗರದ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ (Post-mortem) ನಡೆಸಲಾಗುವುದು. ಬಳಿಕ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸ್ಥಳೀಯ
Kumara Parvata-ಅ.18ರಿಂದ ಕುಮಾರ ಪರ್ವತ ಚಾರಣಕ್ಕೆ ಅನುಮತಿ
ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ.
ಸುಬ್ರಹ್ಮಣ್ಯ: ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ.
ಚಾರಣಕ್ಕೆ ಆಗಮಿಸುವವರು ನಿಗದಿಪಡಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಚಾರಣದ ವೇಳೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಕಡ್ಡಾಯವಾಗಿದೆ.
ಚಾರಣಿಗರು ನಿಗದಿತ ಸಮಯಕ್ಕೆ ಹಾಜರಾಗಬೇಕು. ಅಲ್ಲದೆ, ಕರ್ತವ್ಯದಲ್ಲಿರುವ ಸಿಬ್ಬಂದಿಯೊಂದಿಗೆ ಸಹಕರಿಸುವಂತೆ ಸೂಚಿಸಲಾಗಿದೆ. ಪ್ರಕೃತಿಯ ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ಚಾರಣದ ಸಂದರ್ಭದಲ್ಲಿ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಲಾಗಿದೆ.
ಇನ್ನೊಂದೆಡೆ, ಕುಕ್ಕೆ ಸುಬ್ರಹ್ಮಣ್ಯ ಮಾರ್ಗದ ಮೂಲಕ ಕುಮಾರ ಪರ್ವತ ಚಾರಣ ಆರಂಭಿಸಲು ಈವರೆಗೆ ದಿನಾಂಕ ನಿಗದಿಯಾಗಿಲ್ಲ.




















