ಬಿಗ್ ನ್ಯೂಸ್
Usha Medicals-28 ವರ್ಷಗಳಿಂದ ಪುತ್ತೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಉಷಾ ಮೆಡಿಕಲ್ಸ್ ನ 4ನೇ ಶಾಖೆ ಬೊಳುವಾರಿನಲ್ಲಿ ಶುಭಾರಂಭ; ಪುತ್ತೂರಿನ ನಂ.1 ಮೆಡಿಕಲ್ ಸಂಸ್ಥೆ ಉಷಾ ಮೆಡಿಕಲ್ ಇನ್ನಷ್ಟು ಶಾಖೆಗಳನ್ನು ಪ್ರಾರಂಭಿಸಲಿ – ಶುಭಹಾರೈಸಿದ ಮುಖ್ಯ ಅತಿಥಿಗಳು
ಕಳೆದ 28 ವರ್ಷಗಳಿಂದ ಪುತ್ತೂರಿನಲ್ಲಿ ಔಷಧಿ ಮಾರಾಟ ಸೇವೆಯಲ್ಲಿ ತೊಡಗಿರುವ ದರ್ಬೆ ಶ್ರೀರಾಮ ಸೌಧದಲ್ಲಿ ಮುಖ್ಯ ಶಾಖೆ ಹೊಂದಿರುವ ಉಷಾ ಮೆಡಿಕಲ್ಸ್‌ನ ನಾಲ್ಕನೇ ಶಾಖೆ ನಗರದ ಬೊಳುವಾರಿನ ಪ್ರಗತಿ ಆಸ್ಪತ್ರೆ ಮುಂಭಾಗದಲ್ಲಿರುವ ಹಿರಣ್ಯ ಕಾಂಪ್ಲೆಕ್ಸ್‌ನಲ್ಲಿ ಆ.25 ರಂದು ಶುಭಾರಂಭಗೊಂಡಿತು.
ಪುತ್ತೂರು: ಕಳೆದ 28 ವರ್ಷಗಳಿಂದ ಪುತ್ತೂರಿನಲ್ಲಿ ಔಷಧಿ ಮಾರಾಟ ಸೇವೆಯಲ್ಲಿ ತೊಡಗಿರುವ ದರ್ಬೆ ಶ್ರೀರಾಮ ಸೌಧದಲ್ಲಿ ಮುಖ್ಯ ಶಾಖೆ ಹೊಂದಿರುವ ಉಷಾ ಮೆಡಿಕಲ್ಸ್‌ನ ನಾಲ್ಕನೇ ಶಾಖೆ ನಗರದ ಬೊಳುವಾರಿನ ಪ್ರಗತಿ ಆಸ್ಪತ್ರೆ ಮುಂಭಾಗದಲ್ಲಿರುವ ಹಿರಣ್ಯ ಕಾಂಪ್ಲೆಕ್ಸ್‌ನಲ್ಲಿ ಆ.25 ರಂದು ಶುಭಾರಂಭಗೊಂಡಿತು.
ಮೆಡಿಕಲ್ ಉದ್ಘಾಟಿಸಿ ಮಾತನಾಡಿದ ಪ್ರಗತಿ ಹಾಸ್ಪಿಟಲ್‌ನ ಹೃದ್ರೋಗ ತಜ್ಞ ಡಾ.ಶ್ರೀಪತಿ ರಾವ್, 28 ವರ್ಷಗಳ ಮೆಡಿಕಲ್ ವ್ಯವಹಾರ ಉತ್ತುಂಗಕ್ಕೇರುತ್ತಿದ್ದು, ಇದಕ್ಕೆ ಮಾಲಕ ಗಣೇಶ್ ಭಟ್ ಅವರ ಪರಿಶ್ರಮವೇ ಕಾರಣ. ಇವರ ಉತ್ಸಾಹ, ಸಾಮಾಜಿಕ ಕಳಕಳಿಗೆ ಅಭಿನಂದನೆಗಳು. ಇದರಲ್ಲಿ ಕೇವಲ ಔಷಧಿಗಳು ಮಾತ್ರವಲ್ಲದೆ, ವೀಲ್ ಚೇರ್, ವಾಕಿಂಗ್ ಸ್ಟಿಕ್ ನಂತಹ ಇನ್ನಿತರ ಪರಿಕರಣಗಳು ಲಭ್ಯವಾಗುತ್ತದೆ. ಉಷಾ ಮೆಡಿಕಲ್ಸ್‌ನ ಶಾಖೆಗಳು ಇನ್ನೂ ಹೆಚ್ಚಾಗಲಿ ಎಂದರು.
ಕ್ಲಿನಿಕಲ್ ಮೆಡಿಕಲ್ ಕಲಿಸುವ ಶಿಕ್ಷಕರು ಕಡಿಮೆಯಾಗಿದ್ದಾರೆ. ಹೀಗಾಗಿ ಈ ಶಿಕ್ಷಣದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ ಕ್ಲಿನಿಕಲ್ ಮೆಡಿಸಿನ್ ಉಳಿಸುವ ಕಾರ್ಯ ನಡೆಯಬೇಕಿದೆ ಎಂದರು.
ದೀಪ ಪ್ರಜ್ವಲಿಸಿ ಮಾತನಾಡಿದ ಬ್ರಹ್ಮಶ್ರೀ ನಾಗೇಶ್ ತಂತ್ರಿ ಕೆಮ್ಮಿಂಜೆ, ಉಷಾ ಮೆಡಿಕಲ್ಸ್ ಪ್ರಾರಂಭವಾಗಿ 28 ವರ್ಷಗಳಾಗಿದ್ದು, ಇದರ ನಾಲ್ಕನೇ ಶಾಖೆಯೂ ಉದ್ಘಾಟನೆಗೊಂಡಿದೆ. ಇದರ ಮಾಲಕರ ಸೇವಾ ದಕ್ಷತೆ, ನಗುಮೊಗದ ಸೇವೆಯೇ ಈ ಬೆಳವಣಿಗೆಗೆ ಕಾರಣ ಎಂದು ಹೇಳಿ ಶುಭಹಾರೈಸಿದರು.
ಮುಖ್ಯ ಅತಿಥಿ ಮಹಾವೀರ ಆಸ್ಪತ್ರೆಯ ವೈದ್ಯಕೀಯ ತಜ್ಞ ಡಾ.ಸುರೇಶ್ ಕೆ. ಪುತ್ತೂರಾಯ ಮಾತನಾಡಿ, ಉಷಾ ಮೆಡಿಕಲ್ಸ್ ಪುತ್ತೂರಿನ ನಂ.1 ಮೆಡಿಕಲ್ ಆಗಿದ್ದು, ಇಲ್ಲಿ ಎಲ್ಲಾ ರೀತಿಯ ಔಷಧಿಗಳು ಲಭ್ಯವಿದೆ. ಈ ನಾಲ್ಕನೇ ಮಳಿಗೆಯೂ ಉತ್ತಮ ಸೇವೆಯನ್ನು ನೀಡುವಂತಾಗಲಿ ಎಂದು ಶುಭಹಾರೈಸಿದರು.
ಮಾಯಿದೆ ದೇವುಸ್ ಚರ್ಚ್ ಧರ್ಮುಗುರು ವಂ. ರೆ. ಫಾದರ್ ಲಾರೆನ್ಸ್ ಮಸ್ಕರೇನ್ಹಸ್ ಮಾತನಾಡಿ, ಯಾವುದೇ ಕಾರ್ಯವನ್ನು ತ್ಯಾಗ, ಶ್ರಮದಿಂದ ಮಾಡಿದರೆ ಯಶಸ್ಸು ಸಾಧ್ಯ ಎಂದರು. ನಮ್ಮ ಜೀವನದಲ್ಲಿ ಸಂತೋಷ ಬೇಕೆನ್ನುವರು ಅನೇಕರಿದ್ದಾರೆ. ಯಾವುದೇ ದ್ವೇಷ, ಸ್ವಾರ್ಥದಿಂದ ಬದುಕಿದಾಗ ನೆಮ್ಮದಿ ಸಾಧ್ಯವಿಲ್ಲ.
ಆದರೆ ಸಂತೋಷ, ನೆಮ್ಮದಿ ಬೇಕೆಂದರೆ ಆರೋಗ್ಯವೂ ಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಉಷಾ ಮೆಡಿಕಲ್ಸ್ ಅವಶ್ಯಕತೆಗಳನ್ನು ಪೂರೈಸುತ್ತಿದೆ ಎಂದರು.
ಮಾಡನ್ನೂರು ಜುಮ್ಮಾ ಮಸೀದಿ ಖತೀಬ ಎಸ್.ವಿ.ಮೊಹಮ್ಮದ್ ದಾರಿಮಿ ಉಪ್ಪಿನಂಗಡಿ ಮಾತನಾಡಿ, ಯಾವುದೇ ಒಂದು ರೋಗ ಬಂದರೆ ಅದಕ್ಕೆ ಔಷಧಿ ಇದ್ದೇ ಇರುತ್ತದೆ. ಅದರೆ ಅದನ್ನು ಕಂಡು ಹುಡುಕಬೇಕಾಗಿದೆ. ಗಣೇಶ್ ಭಟ್ ಅವರ ನಗುಮೊಗದ ಸೇವೆಯೇ ಅವರಿಗೆ ಶ್ರೀರಕ್ಷೆ. ಇದೊಂದು ಆರೋಗ್ಯ ಸೇವೆಯಾಗಿದೆ. ಆರೋಗ್ಯವಾಗಿದ್ದರಷ್ಟೇ ಸಮಾಜ ಅಭಿವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಷಾ ಮೆಡಿಕಲ್ಸ್‌ನ ಐದನೇ ಶಾಖೆಯೂ ಶೀಘ್ರ ಪ್ರಾರಂಭವಾಗಲಿ ಎಂದರು.
ಕಟ್ಟಡ ಮಾಲಕಿ ವಜ್ರೇಶ್ವರಿ ಜಿ.ಭಟ್ ಹಿರಣ್ಯ ಮಾತನಾಡಿ, ಉಷಾ ಮೆಡಿಕಲ್ಸ್ ನಮ್ಮ ಕಟ್ಟಡಕ್ಕೆ ಬಂದಿರುವುದು ಹೆಮ್ಮೆಯ ವಿಚಾರ. ಕಟ್ಟಡದ ಸೌಂದರ್ಯವೂ ಹೆಚ್ಚಿದಂತಾಗಿದೆ. ಸಂಸ್ಥೆ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಹೇಳಿ ಶುಭಹಾರೈಸಿದರು.
ಕರ್ನಾಟಕ ರಾಜ್ಯ ಕೆಮಿಸ್ಟ್ಸ್ ಮತ್ತು ಡ್ರಗ್ಗಿಸ್ಟ್ಸ್ ಅಸೋಸಿಯೇಷನ್ ಸದಸ್ಯ ಡಿ.ಐ.ಪುರುಷೋತ್ತಮ್, ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಮತ್ತಿತರರು ಆಗಮಿಸಿ ಶುಭಹಾರೈಸಿದರು.
ಉಷಾ ಮೆಡಿಕಲ್ ಮಾಲಕ ಪಿ.ಗಣೇಶ್ ಭಟ್ ಅವರ ಪತ್ನಿ ಅರುಣಾ ಜಿ.ಭಟ್, ಪುತ್ರ ಆದಿತ್ಯ ಕಶ್ಯಪ್ ಎಂ., ಸಿಬ್ಬಂದಿ ವರ್ಗ ಹಾಗೂ ಬಂಧುಬಳಗದವರು ಉಪಸ್ಥಿತರಿದ್ದು ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು.
ಕು. ವರ್ಷಲಕ್ಷ್ಮೀ ಪ್ರಾರ್ಥಿಸಿದರು. ಕಸಾಪ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರೆ, ಉಷಾ ಮೆಡಿಕಲ್ಸ್ ಮಾಲಕ ಪಿ.ಗಣೇಶ್ ಭಟ್ ವಂದಿಸಿದರು.
ಅಂತರ ರಾಜ್ಯ
Dhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?
ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಗ್ಗೆ ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ನ್ಯೂಸ್ 18 ಹಿಂದಿ ವರದಿ ಮಾಡಿದೆ.
ಗುರುಗ್ರಾಮ, ಅ. 10: ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಗ್ಗೆ ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ನ್ಯೂಸ್ 18 ಹಿಂದಿ ವರದಿ ಮಾಡಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಆಯೋಜಿಸಲು ಉದ್ದೇಶಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಧ್ರುವ್ ರಾಠಿ ದೆಹಲಿಗೆ ತೆರಳಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.
ವರದಿಯ ಪ್ರಕಾರ, ಗುರುಗ್ರಾಮದ ಸೆಕ್ಟರ್ 56ರ ಸೆಂಟ್ರಲ್ ಪಾರ್ಕ್ ವಿಹಾರ್‌ನಲ್ಲಿರುವ ರಾಠಿ ಅವರ ಕುಟುಂಬದ ನಿವಾಸಕ್ಕೆ ಶುಕ್ರವಾರ ತಡರಾತ್ರಿಯಿಂದಲೇ ಸುಮಾರು 50 ಪೊಲೀಸ್ ಸಿಬ್ಬಂದಿ ಜಮಾಯಿಸಿದ್ದರು. ಶನಿವಾರ ಬೆಳಗ್ಗೆ 7.48ರ ಸುಮಾರಿಗೆ ಅವರ ತಾಯಿ ಬಾಗಿಲು ತೆರೆದ ಬಳಿಕ ಪೊಲೀಸರು ಮನೆಯೊಳಗೆ ಪ್ರವೇಶಿಸಿ ರಾಠಿ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಆದರೆ, ಈ ಬೆಳವಣಿಗೆಗೆ ಸಂಬಂಧಿಸಿದಂತೆ ಪೊಲೀಸರು ಅಧಿಕೃತವಾಗಿ ನೀಡಿರುವ ಹೇಳಿಕೆ ಅಥವಾ ವಶಕ್ಕೆ ಪಡೆಯಲು ಕಾರಣವೇನು ಎಂಬ ಕುರಿತು ಹೆಚ್ಚಿನ ಮಾಹಿತಿ ವರದಿಯಲ್ಲಿ ಲಭ್ಯವಾಗಿಲ್ಲ
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
ಮಂಗಳೂರು19 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಬಿಗ್ ನ್ಯೂಸ್17 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ18 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು18 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ23 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಅಪರಾಧ20 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸಿನೆಮಾ23 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಬಿಗ್ ನ್ಯೂಸ್23 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ


















