ಕೊಡಗು
Yaduveer Odeyar-ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್; ಆಯ್ಕೆ ಸ್ವಾಗತಿಸಿದ ಸಂಸದ ಯದುವೀರ್ ಒಡೆಯರ್
ಕೊಡಗಿನ ವಿರಾಜಪೇಟೆಯಲ್ಲಿ ಮಾತನಾಡಿದ ಸಂಸದ ಯದುವೀರ್ ಒಡೆಯರ್, ರಾಜ್ಯ ಸರ್ಕಾರವು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಿರುವ ನಿರ್ಧಾರವನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.
ಕೊಡಗಿನ ವಿರಾಜಪೇಟೆಯಲ್ಲಿ ಮಾತನಾಡಿದ ಸಂಸದ ಯದುವೀರ್ ಒಡೆಯರ್, ರಾಜ್ಯ ಸರ್ಕಾರವು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಿರುವ ನಿರ್ಧಾರವನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.
ಬಾನು ಮುಷ್ತಾಕ್ ಒಬ್ಬ ಪ್ರಸಿದ್ಧ ಸಾಹಿತಿಯಾಗಿದ್ದು, ಅಂತರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಗಳನ್ನು ಗಳಿಸಿದ್ದಾರೆ ಮತ್ತು ಸಾಮಾಜಿಕ ಕಾರ್ಯಕರ್ತೆಯಾಗಿಯೂ ಗುರುತಿಸಿಕೊಂಡಿದ್ದಾರೆ. “ಮುಸ್ಲಿಂ ಮಹಿಳೆಯರಿಗೆ ಸಮಾನ ಹಕ್ಕುಗಳು ಮತ್ತು ಮಸೀದಿಗಳಿಗೆ ಪ್ರವೇಶಾವಕಾಶ ಕೊಡಬೇಕು” ಎಂದು ಒತ್ತಾಯಿಸಿದ್ದರಿಂದ ಆಕೆ ಸಾಮಾಜಿಕ ಬಹಿಷ್ಕಾರವನ್ನು ಎದುರಿಸಿದ್ದಾರೆ ಎಂದು ಯದುವೀರ್ ಹೇಳಿದರು.
ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರವಾಗಿದೆ. ರಾಜ್ಯ ಸರ್ಕಾರದ ಈ ಆಯ್ಕೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಈ ಆಯ್ಕೆಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಯದುವೀರ್, “ಸರ್ಕಾರಿ ಕಾರ್ಯಕ್ರಮದಲ್ಲಿ ಯಾವುದೇ ಧಾರ್ಮಿಕ ಪೂಜೆ ಇರುವುದಿಲ್ಲ. ಇದು ಜಾತ್ಯತೀತ ಉತ್ಸವವಾಗಿದೆ. ಧಾರ್ಮಿಕ ಆಚರಣೆಗಳನ್ನು ನಾವು ವೈಯಕ್ತಿಕವಾಗಿ ಮನೆಯಲ್ಲಿ ನಡೆಸಿಕೊಳ್ಳುತ್ತೇವೆ. ಸರ್ಕಾರಕ್ಕೆ ಇದು ಕೇವಲ ಒಂದು ಉತ್ಸವವಾಗಿದೆ. ಬಾನು ಮುಷ್ತಾಕ್ ಆಯ್ಕೆಯ ಬಗ್ಗೆ ನನಗೆ ಯಾವುದೇ ವಿರೋಧವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ಕೊಡಗು
Madikeri-ಮಡಿಕೇರಿ: ಅಡಿಕೆ ಹಾಳೆ ತಟ್ಟೆ, ಪೇಪರ್ ಕಪ್ ನಿಷೇಧ: ನಗರಸಭೆ ಆದೇಶಕ್ಕೆ ವ್ಯಾಪಾರಸ್ಥರು ಶಾಕ್..!
ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್‌ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ಮಡಿಕೇರಿ: ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್‌ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ನಿಷೇಧಕ್ಕೆ ಕಾರಣವೇನು?:
ನಗರಸಭೆಯ ಮಾಹಿತಿ ಪ್ರಕಾರ, ಪೇಪರ್ ಕಪ್ ಮತ್ತು ಅಡಿಕೆ ಹಾಳೆ ತಟ್ಟೆಗಳು ನೈಸರ್ಗಿಕವಾಗಿ ಕರಗುವ ವಸ್ತುಗಳೇ ಆದರೂ, ಅವುಗಳು ಸಂಪೂರ್ಣವಾಗಿ ಮಣ್ಣಿನಲ್ಲಿ ವಿಲೀನವಾಗಲು ದೀರ್ಘ ಸಮಯ ತೆಗೆದುಕೊಳ್ಳುತ್ತವೆ. ಇದರಿಂದ ನಗರದ ಕಸ ವಿಲೇವಾರಿ ಪ್ರಕ್ರಿಯೆಯಲ್ಲಿ ಸಮಸ್ಯೆಗಳು ಉಂಟಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಗರಸಭೆಯ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಂಡು ಈ ನಿಷೇಧ ಜಾರಿಗೊಳಿಸಲಾಗಿದೆ. ಇತ್ತೀಚೆಗಷ್ಟೇ ನಗರಸಭೆಯು ಒಂದು ಮತ್ತು ಅರ್ಧ ಲೀಟರ್ ನೀರಿನ ಬಾಟಲಿಗಳನ್ನು ನಿಷೇಧಿಸಿ ಗಮನ ಸೆಳೆದಿತ್ತು.
ಸಾರ್ವಜನಿಕರ ಮತ್ತು ವ್ಯಾಪಾರಸ್ಥರ ಆಕ್ರೋಶ:
ನಗರಸಭೆಯ ಈ ಹೊಸ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ನೀರಿನ ಬಾಟಲಿ ನಿಷೇಧಕ್ಕೆ ಬೆಂಬಲ ನೀಡಿದ್ದ ಜನತೆ, ಅಡಿಕೆ ಹಾಳೆ ಮತ್ತು ಪೇಪರ್ ತಟ್ಟೆಗಳ ನಿಷೇಧವನ್ನು ಖಂಡಿಸಿದ್ದಾರೆ.
“ಅಡಿಕೆ ಹಾಳೆ ಮತ್ತು ಪೇಪರ್ ಉತ್ಪನ್ನಗಳು ನೈಸರ್ಗಿಕವಾಗಿದ್ದು, ಮಣ್ಣಿನಲ್ಲಿ ಸುಲಭವಾಗಿ ಕರಗುತ್ತವೆ. ಮದುವೆ, ದೇವಸ್ಥಾನಗಳ ಉತ್ಸವ, ಕ್ರೀಡಾಕೂಟ ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಇವುಗಳ ಬಳಕೆಯೇ ಹೆಚ್ಚು. ಇವುಗಳನ್ನು ನಿಷೇಧಿಸುವುದು ಎಷ್ಟರ ಮಟ್ಟಿಗೆ ಸರಿ?” ಎಂದು ವ್ಯಾಪಾರಸ್ಥರು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, “ಸ್ಥಳೀಯವಾಗಿ ಮಾರಾಟ ನಿಷೇಧಿಸಿದರೂ ಪ್ರವಾಸಿಗರು ಹೊರಗಿನಿಂದ ಅಡಿಕೆ ತಟ್ಟೆ, ಪೇಪರ್ ಕಪ್‌ಗಳನ್ನು ತರುತ್ತಾರೆ, ಅವರನ್ನು ತಡೆಯುವುದು ಹೇಗೆ?” ಎಂದು ಜನರು ನಗರಸಭೆಯನ್ನು ಪ್ರಶ್ನಿಸುತ್ತಿದ್ದಾರೆ.
ಉಡುಪಿ
Helpline-ನೇಪಾಲ ಜಲಪ್ರಳಯ: ಉಡುಪಿ, ಕೊಡಗು ಯಾತ್ರಿಕರ ರಕ್ಷಣೆಗೆ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ
ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ/ಮಡಿಕೇರಿ: ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ ಜಿಲ್ಲೆಯವರಿಗೆ ಸೂಚನೆ:
ಉಡುಪಿ ಜಿಲ್ಲೆಯಿಂದ ಪ್ರವಾಸ ಅಥವಾ ಯಾತ್ರೆಗೆ ತೆರಳಿ ನೇಪಾಲದ ನೆರೆ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವವರ ವಿವರಗಳನ್ನು ತಕ್ಷಣವೇ ಜಿಲ್ಲಾಡಳಿತಕ್ಕೆ ನೀಡಲು ಕೋರಲಾಗಿದೆ. ಸಂಕಷ್ಟದಲ್ಲಿರುವವರ ಹೆಸರು, ವಿಳಾಸ, ಪ್ರಸ್ತುತ ಇರುವ ನಿಖರ ಸ್ಥಳ ಮತ್ತು ಮೊಬೈಲ್ ಸಂಖ್ಯೆಯನ್ನು ಕೆಳಗಿನ ಸಂಖ್ಯೆಗಳಿಗೆ ತಿಳಿಸಬಹುದು:
ಸಹಾಯವಾಣಿ: 1077
ದೂರವಾಣಿ: 0820-2574802
ಕೊಡಗು ಜಿಲ್ಲೆಯವರಿಗೆ ಸೂಚನೆ:
ಕೊಡಗು ಜಿಲ್ಲೆಯ ಯಾರಾದರೂ ಯಾತ್ರಿಕರು ನೇಪಾಲದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದರೆ, ಅವರ ಕುಟುಂಬದವರು ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕು. ಮಾಹಿತಿಗಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ:
ದೂರವಾಣಿ ಸಂಖ್ಯೆಗಳು: 08272-221077, 08272-221099
ಮೊಬೈಲ್/ವಾಟ್ಸಾಪ್ ಸಂಖ್ಯೆ: 8550001077
ಸಂಕಷ್ಟದಲ್ಲಿರುವವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಕೊಡಗು
Kodagu-ಕೊಡಗಿನಲ್ಲಿ ವರುಣನ ಅಬ್ಬರ: ಮರಳಿ ಮೈದುಂಬಿದ ಭಾಗಮಂಡಲದ ತ್ರಿವೇಣಿ ಸಂಗಮ..!
ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ವರುಣನ ಆರ್ಭಟ ಮರುಕಳಿಸಿದ್ದು, ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪವಿತ್ರ ಕ್ಷೇತ್ರ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಮೈದುಂಬಿ ಭರ್ತಿಯಾಗಿದೆ.
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ವರುಣನ ಆರ್ಭಟ ಮರುಕಳಿಸಿದ್ದು, ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪವಿತ್ರ ಕ್ಷೇತ್ರ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಮೈದುಂಬಿ ಭರ್ತಿಯಾಗಿದೆ.
ಜಲಾವೃತಗೊಂಡ ತಟದ ಪ್ರದೇಶಗಳು:
ನದಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ತಟದಲ್ಲಿರುವ ಪ್ರವಾಸಿ ಉದ್ಯಾನವನ ಹಾಗೂ ಸುತ್ತಮುತ್ತಲಿನ ಕೃಷಿ ಗದ್ದೆಗಳಿಗೆ ನೀರು ನುಗ್ಗಿದೆ. ನದಿ ಪಾತ್ರದ ನಿವಾಸಿಗಳು ಮತ್ತು ರೈತರಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಮಡಿಕೇರಿ, ವಿರಾಜಪೇಟೆ, ಬಿರುನಾಣಿ ಭಾಗದಲ್ಲಿ ಮಳೆ ಬಿರುಸಾಗಿದ್ದರೆ ಸೋಮವಾರಪೇಟೆ ಭಾಗದಲ್ಲಿ ನಿರಂತರ ಸಾಧಾರಣ ಮಳೆ ಸುರಿಯುತ್ತಿದೆ.
-
ಮಂಗಳೂರು11 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ15 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ17 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್17 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಬಿಗ್ ನ್ಯೂಸ್9 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ10 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು10 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ12 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!




















