Connect with us

ಅಂತರ ರಾಜ್ಯ

Modi’s degree certificate-ಪ್ರಧಾನಿ ಮೋದಿಯ ಪದವಿ ದಾಖಲೆ ಬಹಿರಂಗಪಡಿಸುವ ಅಗತ್ಯವಿಲ್ಲವೆಂದ ದೆಹಲಿ ಹೈಕೋರ್ಟ್

Published

on

Ad Widget

Ad Widget

Ad Widget

Ad Widget

ದೆಹಲಿ ಹೈಕೋರ್ಟ್, ಪ್ರಧಾನಿ ನರೇಂದ್ರ ಮೋದಿಯವರ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವ ಅಗತ್ಯವಿಲ್ಲ ಎಂದು ಮಹತ್ವದ ತೀರ್ಪು ನೀಡಿದೆ. ದೆಹಲಿ ವಿಶ್ವವಿದ್ಯಾಲಯವು ಪ್ರಧಾನಿಯ ಶೈಕ್ಷಣಿಕ ದಾಖಲೆಗಳನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರ ಮಾಹಿತಿ ಆಯೋಗ (ಸಿಐಸಿ) ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯವು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

Ad Widget

Ad Widget

Ad Widget

Ad Widget

ದೆಹಲಿ ಹೈಕೋರ್ಟ್, ಪ್ರಧಾನಿ ನರೇಂದ್ರ ಮೋದಿಯವರ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವ ಅಗತ್ಯವಿಲ್ಲ ಎಂದು ಮಹತ್ವದ ತೀರ್ಪು ನೀಡಿದೆ. ದೆಹಲಿ ವಿಶ್ವವಿದ್ಯಾಲಯವು ಪ್ರಧಾನಿಯ ಶೈಕ್ಷಣಿಕ ದಾಖಲೆಗಳನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರ ಮಾಹಿತಿ ಆಯೋಗ (ಸಿಐಸಿ) ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯವು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

Ad Widget

Ad Widget alt="Ad Widget"/>

Ad Widget

ನ್ಯಾಯಮೂರ್ತಿ ಸಚಿನ್ ದತ್ತಾ ದೆಹಲಿ ವಿಶ್ವವಿದ್ಯಾಲಯ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದರು. ಮಾಹಿತಿ ನೀಡುವ ಅಗತ್ಯವಿಲ್ಲ ಎಂದು ಹೇಳಿ ಕೇಂದ್ರ ಮಾಹಿತಿ ಆಯೋಗ ಹೊರಡಿಸಿದ್ದ ಆದೇಶವನ್ನು ರದ್ದು ಮಾಡಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

Ad Widget

Ad Widget <> Ad Widget

2016 ರಲ್ಲಿ ಕೇಂದ್ರ ಮಾಹಿತಿ ಆಯೋಗವು ದೆಹಲಿ ವಿಶ್ವವಿದ್ಯಾಲದಯ 1978 ರಲ್ಲಿ ಬಿಎ ಪರೀಕ್ಷೆ ಪಾಸಾದ ಎಲ್ಲ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ಸೂಚಿತ್ತು. ಪ್ರಧಾನಿ ಮೋದಿ ಕೂಡ ಅದೇ ವರ್ಷ ಪರೀಕ್ಷೆ ಪಾಸಾಗಿದ್ದಾರೆ ಎಂದು ಹೇಳಲಾಗಿತ್ತು. ಈ ಆದೇಶವನ್ನು ದೆಹಲಿ ವಿಶ್ವವಿದ್ಯಾಲಯವು ಪ್ರಶ್ನಿಸಿತ್ತು. 2017 ರ ಜನವರಿಯಲ್ಲಿ ವಿಚಾರಣೆ ನಡೆದು ತಡೆಯಾಜ್ಞೆ ನೀಡಲಾಗಿತ್ತು.

ಖಾಸಗಿ ಹಕ್ಕು ಮುಖ್ಯ: ತುಷಾರ್ ಮೆಹ್ತಾ
ವಿಚಾರಣೆಯಲ್ಲಿ ದೆಹಲಿ ವಿಶ್ವವಿದ್ಯಾಲಯದ ಪರವಾಗಿ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ಮಾಹಿತಿ ಹಕ್ಕಿಗಿಂತ ಖಾಸಗಿ ಹಕ್ಕು ಪ್ರಮುಖವಾಗಿದೆ. ಸಾರ್ವಜನಿಕ ಹಿತಾಸಕ್ತಿಯಿಲ್ಲದೆ ಕೇವಲ ಕುತೂಹಲಕ್ಕಾಗಿ ಆರ್‌ಟಿಐ ಮೂಲಕ ಖಾಸಗಿ ಮಾಹಿತಿಯನ್ನು ಕೇಳುವುದು ಸರಿಯಲ್ಲ. ಆರ್‌ಟಿಐ ಕುತೂಹಲ ತೀರಿಸಲು ಸೀಮಿತವಾಗಬಾರದು” ಎಂದು ವಾದಿಸಿದರು.

Ad Widget

Ad Widget

ದೆಹಲಿ ವಿಶ್ವವಿದ್ಯಾಲಯವು ಪ್ರಧಾನಿಯ ಶೈಕ್ಷಣಿಕ ದಾಖಲೆಗಳನ್ನು ನ್ಯಾಯಾಲಯಕ್ಕೆ ಒದಗಿಸಲು ಸಿದ್ಧವಿತ್ತಾದರೂ, ಆರ್‌ಟಿಐ ಅಡಿಯಲ್ಲಿ ಸಾರ್ವಜನಿಕ ಬಹಿರಂಗಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿತು.

ಆರ್‌ಟಿಐ ಅರ್ಜಿದಾರರಾದ ನೀರಜ್ ಶರ್ಮಾ ಪರವಾಗಿ ಹಿರಿಯ ವಕೀಲ ಸಂಜಯ್ ಹೆಗ್ಡೆ ವಾದ ಮಂಡಿಸಿದ್ದು, “ಸಾರ್ವಜನಿಕ ಹಿತಾಸಕ್ತಿಗಾಗಿ ಪ್ರಧಾನ ಮಂತ್ರಿಯವರ ಶೈಕ್ಷಣಿಕ ದಾಖಲೆಗಳನ್ನು ಬಹಿರಂಗಪಡಿಸಬಹುದು” ಎಂದು ಹೇಳಿದರು. ಸಾಮಾನ್ಯವಾಗಿ ವಿಶ್ವವಿದ್ಯಾಲಯಗಳು ಈ ಮಾಹಿತಿಯನ್ನು ಪ್ರಕಟಿಸುತ್ತವೆ. ನೋಟಿಸ್ ಬೋರ್ಡ್‌ಗಳು, ವೆಬ್‌ಸೈಟ್‌ಗಳು ಮತ್ತು ಪತ್ರಿಕೆಗಳಲ್ಲಿ ಪ್ರಕಟಿಸುತ್ತಿದ್ದವು ಎಂದು ಕೋರ್ಟ್‌ ಗಮನಕ್ಕೆ ತಂದಿದ್ದರು.

Ad Widget
Click to comment

Leave a Reply

ಅಂತರ ರಾಜ್ಯ

Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ

Published

on

Ad Widget

Ad Widget

Ad Widget

Ad Widget

ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

Ad Widget

Ad Widget alt="Ad Widget"/>

Ad Widget

ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.

Ad Widget

Ad Widget <> Ad Widget

ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.

Ad Widget
Continue Reading

ಅಂತರ ರಾಜ್ಯ

Sreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು

Published

on

Ad Widget

Ad Widget

Ad Widget

Ad Widget

ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.

Ad Widget

Ad Widget

Ad Widget

Ad Widget

ತ್ರಿಶೂರ್: ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.

Ad Widget

Ad Widget alt="Ad Widget"/>

Ad Widget

2022ರಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್‌ನ ಫಾಸ್ಟ್‌ಟ್ರ್ಯಾಕ್ ವಿಶೇಷ ನ್ಯಾಯಾಲಯ-11ರ ನ್ಯಾಯಾಧೀಶೆ ರಮ್ಯಾ ಮೆನನ್ ಅವರು, ಪೋಕ್ಸೋ ಕಾಯ್ದೆಯ ಸೆಕ್ಷನ್ 12 ಹಾಗೂ ಭಾರತೀಯ ದಂಡ ಸಂಹಿತೆ (IPC) 1860ರ ಸೆಕ್ಷನ್ 509ರ ಅಡಿಯಲ್ಲಿ ಶ್ರೀಜಿತ್ ರವಿ ಅವರನ್ನು ದೋಷಿ ಎಂದು ಘೋಷಿಸಿದ್ದಾರೆ.

Ad Widget

Ad Widget <> Ad Widget

2022ರ ಜುಲೈ 4ರಂದು ಇಬ್ಬರು ಅಪ್ರಾಪ್ತ ಬಾಲಕಿಯರು ಶಾಲೆಯಿಂದ ತ್ರಿಶೂರ್‌ನ ಅರನಟ್ಟುಕರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ಗೆ ಮರಳುತ್ತಿದ್ದ ವೇಳೆ ಘಟನೆ ನಡೆದಿತ್ತು. ಪ್ರಾಸಿಕ್ಯೂಷನ್ ಪ್ರಕಾರ, ಶ್ರೀಜಿತ್ ರವಿ ಕಾರಿನಲ್ಲಿ ಬಾಲಕಿಯರನ್ನು ಹಿಂಬಾಲಿಸಿ, ಅಪಾರ್ಟ್‌ಮೆಂಟ್‌ನ ಕಾರು ನಿಲುಗಡೆ ಪ್ರದೇಶದಲ್ಲಿ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದರು.

ವಿಚಾರಣೆ ವೇಳೆ ಬಾಲಕಿಯರು ನ್ಯಾಯಾಲಯದಲ್ಲಿ ಶ್ರೀಜಿತ್ ರವಿಯನ್ನು ಗುರುತಿಸಿದ್ದರು. ಆದರೆ, ಚಲನಚಿತ್ರ ನಟನಾಗಿದ್ದರೂ ಬಾಲಕಿಯರು ಆತನ ಹೆಸರನ್ನು ಗುರುತಿಸಲು ವಿಫಲರಾಗಿದ್ದಾರೆ ಎಂಬ ಅಂಶವನ್ನು ಮುಂದಿಟ್ಟುಕೊಂಡು ನಟನ ಪರ ವಕೀಲರು ಗುರುತಿಸುವಿಕೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದರು.

Ad Widget

Ad Widget

ಈ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ, ಬಾಲಕಿಯರು ಆರೋಪಿಯನ್ನು ಗುರುತಿಸಿದ್ದು, ಅವರ ದೈಹಿಕ ಚಹರೆಯ ಬಗ್ಗೆಯೂ ಸ್ಪಷ್ಟವಾಗಿ ವಿವರಿಸಿದ್ದಾರೆ ಎಂದು ತಿಳಿಸಿದೆ.

ಪೊಲೀಸ್ ತನಿಖೆಯಲ್ಲಿನ ಕೆಲವು ಲೋಪಗಳ ಬಗ್ಗೆಯೂ ನ್ಯಾಯಾಲಯ ಗಮನ ಸೆಳೆದಿದೆ. ವಿಶೇಷವಾಗಿ, ಘಟನೆ ನಡೆದ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸದಿರುವುದನ್ನು ಉಲ್ಲೇಖಿಸಿದೆ. ಆದರೆ, ತನಿಖೆಯಲ್ಲಿನ ಇಂತಹ ಲೋಪಗಳು ಬಾಲಕಿಯರು ನೀಡಿದ ಸಾಕ್ಷ್ಯಗಳ ವಿಶ್ವಾಸಾರ್ಹತೆಯನ್ನು ಕುಗ್ಗಿಸುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Ad Widget
Continue Reading

ಅಂತರ ರಾಜ್ಯ

Trisha-ವಿಜಯ್ ಸಿಎಂ ಬೆನ್ನಲ್ಲೇ ತ್ರಿಷಾ ರಾಜಕೀಯ ಎಂಟ್ರಿಗೆ ಸಿದ್ಧತೆ? ‘ಜಯಲಲಿತಾ ಉತ್ತರಾಧಿಕಾರಿ’ ಎಂದ ಅಭಿಮಾನಿಗಳು..!

Published

on

Ad Widget

Ad Widget

Ad Widget

Ad Widget

ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತ್ರಿಷಾ ಅವರ ರಾಜಕೀಯ ಪ್ರವೇಶದ ಬಗ್ಗೆಯೂ ಅಭಿಮಾನಿಗಳ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.

Ad Widget

Ad Widget

Ad Widget

Ad Widget

ಚೆನ್ನೈ: ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತ್ರಿಷಾ ಅವರ ರಾಜಕೀಯ ಪ್ರವೇಶದ ಬಗ್ಗೆಯೂ ಅಭಿಮಾನಿಗಳ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.

Ad Widget

Ad Widget alt="Ad Widget"/>

Ad Widget

ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ, ಅವರ ಆಪ್ತ ಸ್ನೇಹಿತೆ ಎಂದೇ ಗುರುತಿಸಿಕೊಂಡಿರುವ ತ್ರಿಷಾ ಕೂಡ ರಾಜಕೀಯಕ್ಕೆ ಬರಲಿದ್ದಾರೆ ಎಂಬ ಚರ್ಚೆಗಳು ಜೋರಾಗಿವೆ. ಈ ನಿರೀಕ್ಷೆಯೊಂದಿಗೆ ಅಭಿಮಾನಿಗಳ ಗುಂಪೊಂದು ‘ಇಳಯ ಪುರಟ್ಟಿ ತಲೈವಿ ತ್ರಿಷಾ’ ಹೆಸರಿನಲ್ಲಿ ಹೊಸ ವೇದಿಕೆಯನ್ನು ಆರಂಭಿಸಿದೆ.

Ad Widget

Ad Widget <> Ad Widget

ಸಾರ್ವಜನಿಕ ಹಿತಾಸಕ್ತಿ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ತ್ರಿಷಾ ಅವರನ್ನು ರಾಜಕೀಯ ಕ್ಷೇತ್ರಕ್ಕೆ ಕರೆತರುವ ಪ್ರಯತ್ನ ನಡೆಸುವುದಾಗಿ ಸಂಘಟನೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿ ವಿಜಯ್ ಅವರೊಂದಿಗೆ ತ್ರಿಷಾ ಕೂಡ ರಾಜಕೀಯ ಪಯಣ ಆರಂಭಿಸಿದರೆ ತಮಿಳುನಾಡಿನ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂಬ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ.

ಜಯಲಲಿತಾ ಹಾದಿಯಲ್ಲಿ ತ್ರಿಷಾ?
ಅಭಿಮಾನಿಗಳು ತ್ರಿಷಾ ಅವರಿಗೆ ‘ಇಳಯ ಪುರಟ್ಟಿ ತಲೈವಿ’ (ಯುವ ಕ್ರಾಂತಿಕಾರಿ ನಾಯಕಿ) ಎಂಬ ಬಿರುದನ್ನೂ ನೀಡಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ನಾಯಕಿ ದಿವಂಗತ ಜೆ. ಜಯಲಲಿತಾ ಅವರನ್ನು ‘ಪುರಟ್ಟಿ ತಲೈವಿ’ (ಕ್ರಾಂತಿಕಾರಿ ನಾಯಕಿ) ಎಂದು ಕರೆಯಲಾಗುತ್ತಿತ್ತು. ಇದೇ ಹಿನ್ನೆಲೆಯಲ್ಲಿ ತ್ರಿಷಾ ಅವರಿಗೂ ಅಂತಹದ್ದೇ ಬಿರುದು ನೀಡಿ, ಜಯಲಲಿತಾ ಅವರ ಉತ್ತರಾಧಿಕಾರಿ ಎಂಬಂತೆ ಬಿಂಬಿಸಲಾಗುತ್ತಿದೆ.

Ad Widget

Ad Widget

ಜಯಲಲಿತಾ ಅವರ ವ್ಯಕ್ತಿತ್ವ ಮತ್ತು ಆಡಳಿತ ಶೈಲಿಯನ್ನು ಮೆಚ್ಚಿಕೊಂಡಿರುವ ಅಭಿಮಾನಿಗಳು, ತಮಿಳುನಾಡಿಗೆ ಅವರಂತಹ ನಾಯಕಿಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಪ್ರತಿಯೊಂದು ಬೆಳವಣಿಗೆಯ ಬಗ್ಗೆಯೂ ಜಯಲಲಿತಾ ಮಾಹಿತಿ ಹೊಂದಿದ್ದರು. ಸರಕಾರಿ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ನಿರಂತರ ನಿಗಾ ಇರಿಸುತ್ತಿದ್ದರು ಎಂದು ಸಂಘಟನೆಯ ಪ್ರಕಟಣೆಯಲ್ಲಿ ಹೇಳಲಾಗಿದೆ.

ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದ ಜಯಲಲಿತಾ ಅವರ ಆಡಳಿತ ಶೈಲಿಯನ್ನು ಉಲ್ಲೇಖಿಸಿರುವ ಅಭಿಮಾನಿಗಳು, ತ್ರಿಷಾ ಅವರಲ್ಲೂ ಅಂತಹ ನಾಯಕತ್ವದ ಗುಣಗಳಿವೆ ಎಂದು ಪ್ರತಿಪಾದಿಸಿದ್ದಾರೆ.

ವಿಜಯ್-ತ್ರಿಷಾ ಜೋಡಿಯಿಂದ ಹೊಸ ರಾಜಕೀಯ ಅಧ್ಯಾಯ?
ವಿಜಯ್ ನೇತೃತ್ವದ ಟಿವಿಕೆ ಸರಕಾರದ ಕಾರ್ಯವೈಖರಿಯನ್ನು ಶ್ಲಾಘಿಸಿರುವ ಅಭಿಮಾನಿಗಳು, ತ್ರಿಷಾ ಕೂಡ ರಾಜಕೀಯ ಪ್ರವೇಶಿಸಿದರೆ ಜಯಲಲಿತಾ ಅವರ ಆಡಳಿತವನ್ನು ಹೋಲುವ ಉತ್ತಮ ಆಡಳಿತವನ್ನು ತಮಿಳುನಾಡಿನಲ್ಲಿ ಕಾಣಬಹುದು ಎಂಬ ಆಶಯ ವ್ಯಕ್ತಪಡಿಸಿದ್ದಾರೆ.

ತ್ರಿಷಾ ಅವರ ವ್ಯಕ್ತಿತ್ವ ಜಯಲಲಿತಾ ಅವರನ್ನು ಹೋಲುತ್ತದೆ. ವಿವಿಧ ಸಂದರ್ಭಗಳಲ್ಲಿ ಅವರ ಗುಣಗಳನ್ನು ಗಮನಿಸಿದ್ದೇವೆ. ಅವರ ಆಪ್ತರಿಗೂ ಈ ವಿಚಾರ ತಿಳಿದಿದೆ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ.

ಈ ಅಭಿಯಾನದ ಮೊದಲ ಹೆಜ್ಜೆಯಾಗಿ ‘ಇಳಯ ಪುರಟ್ಟಿ ತಲೈವಿ ತ್ರಿಷಾ ಪೇರವೈ’ ಎಂಬ ಸಂಘಟನೆಯನ್ನು ಆರಂಭಿಸಲಾಗಿದೆ. ಈ ವೇದಿಕೆಯ ಮೂಲಕ ಸಾರ್ವಜನಿಕ ಹಿತಾಸಕ್ತಿ ಮತ್ತು ಸಮಾಜಮುಖಿ ಚಟುವಟಿಕೆಗಳನ್ನು ನಡೆಸಿ, ಆ ಮೂಲಕ ತ್ರಿಷಾ ಅವರ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧಪಡಿಸುವುದು ಅಭಿಮಾನಿಗಳ ಉದ್ದೇಶವಾಗಿದೆ.

ಆದರೆ, ತ್ರಿಷಾ ಅವರು ರಾಜಕೀಯ ಪ್ರವೇಶಿಸುವ ಕುರಿತು ಈವರೆಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಹೀಗಾಗಿ ಸದ್ಯಕ್ಕೆ ಇದು ಅಭಿಮಾನಿಗಳ ಮಟ್ಟದಲ್ಲಿ ನಡೆಯುತ್ತಿರುವ ಅಭಿಯಾನ ಮತ್ತು ನಿರೀಕ್ಷೆಯಷ್ಟೇ ಆಗಿದೆ.

ಈ ಹಿಂದೆ ಟಿವಿ ಸಂದರ್ಶನವೊಂದರಲ್ಲಿ ತಮಾಷೆಯಾಗಿ ಮುಂದೆ ತಾನು ತಮಿಳುನಾಡಿನ ಮುಖ್ಯಮಂತ್ರಿಯಾಗುವುದಾಗಿ ತ್ರಿಷಾ ಹೇಳಿದ್ದ ವಿಡಿಯೊ ಕೂಡ ವಿಜಯ್ ಮುಖ್ಯಮಂತ್ರಿಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿತ್ತು.

ಗಮನಾರ್ಹವೆಂದರೆ, ಜಯಲಲಿತಾ ಕೂಡ ಆರಂಭದಲ್ಲಿ ನಟಿಯಾಗಿಯೇ ಜನಪ್ರಿಯತೆ ಗಳಿಸಿದ್ದರು. ಬಳಿಕ 1982ರಲ್ಲಿ ಎಂ.ಜಿ. ರಾಮಚಂದ್ರನ್ ಅವರ ಎಐಎಡಿಎಂಕೆ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶಿಸಿ, 1991ರಲ್ಲಿ ಮೊದಲ ಬಾರಿಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ತ್ರಿಷಾ ಅವರ ರಾಜಕೀಯ ಪ್ರವೇಶದ ಕುರಿತು ಅಭಿಮಾನಿಗಳಲ್ಲಿ ಮೂಡಿರುವ ಕುತೂಹಲ ತಮಿಳುನಾಡಿನ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!