ಅಂತರ ರಾಜ್ಯ
Chinnayya’s second wife-ನಾವು ಮತಾಂತರಗೊಂಡಿಲ್ಲ- ಶವ ಹೂತಿಟ್ಟಿದ್ದ ಬಗ್ಗೆ ಮಾಹಿತಿಯಿಲ್ಲ; ಚಿನ್ನಯ್ಯನ ಎರಡನೇ ಪತ್ನಿ ಹಾಗೂ ಸಹೋದರನಿಂದ ಸ್ಪಷ್ಟನೆ
“ಮಾಸ್ಕ್ಮ್ಯಾನ್” ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ, ತಾನು ಮತ್ತು ತನ್ನ ಗಂಡ ಯಾವುದೇ ಧರ್ಮಕ್ಕೆ ಮತಾಂತರವಾಗಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಶವವನ್ನು ಹೂತಿಟ್ಟಿದ್ದ ವಿಷಯದ ಬಗ್ಗೆ ತನಗೆ ಯಾವುದೇ ಮಾಹಿತಿಯಿಲ್ಲ ಮತ್ತು ತನ್ನ ಗಂಡನ ಹಿಂದೆ ಯಾರಿರಬಹುದು ಎಂಬುದೂ ಗೊತ್ತಿಲ್ಲ ಎಂದು ಅವರು ತಿಳಿಸಿದ್ದಾರೆ.
“ಮಾಸ್ಕ್ಮ್ಯಾನ್” ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ, ತಾನು ಮತ್ತು ತನ್ನ ಗಂಡ ಯಾವುದೇ ಧರ್ಮಕ್ಕೆ ಮತಾಂತರವಾಗಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಶವವನ್ನು ಹೂತಿಟ್ಟಿದ್ದ ವಿಷಯದ ಬಗ್ಗೆ ತನಗೆ ಯಾವುದೇ ಮಾಹಿತಿಯಿಲ್ಲ ಮತ್ತು ತನ್ನ ಗಂಡನ ಹಿಂದೆ ಯಾರಿರಬಹುದು ಎಂಬುದೂ ಗೊತ್ತಿಲ್ಲ ಎಂದು ಅವರು ತಿಳಿಸಿದ್ದಾರೆ.
ಧರ್ಮಸ್ಥಳವನ್ನು ಬಿಟ್ಟು, ಚಿನ್ನಯ್ಯ ಕಳೆದ 11 ವರ್ಷಗಳಿಂದ ತಮಿಳುನಾಡಿನ ಸತ್ಯಮಂಗಲದ ಚಿಕ್ಕರಸಂಪಾಳ್ಯ ಗ್ರಾಮದಲ್ಲಿ ಮಲ್ಲಿಕಾಳ ಜೊತೆ ವಾಸಿಸುತ್ತಿದ್ದಾನೆ. ಧರ್ಮಸ್ಥಳ ಪ್ರಕರಣದ ಹಿನ್ನೆಲೆಯಲ್ಲಿ ಮಾಧ್ಯಮಗಳು ಮಲ್ಲಿಕಾಳನ್ನು ಭೇಟಿಯಾದಾಗ, ಚಿನ್ನಯ್ಯ ಎರಡೂವರೆ ತಿಂಗಳ ಹಿಂದೆ ಕೂಲಿ ಕೆಲಸಕ್ಕೆಂದು ಹೊರಟು ಮರಳಿ ಬಂದಿಲ್ಲ ಎಂದು ಆಕೆ ಹೇಳಿದ್ದಾರೆ.
“ನಾನು ಮತ್ತು ನನ್ನ ಗಂಡ ಯಾವುದೇ ಧರ್ಮಕ್ಕೆ ಮತಾಂತರವಾಗಿಲ್ಲ. ಅವನ ಅಣ್ಣ ಕ್ರೈಸ್ತ ಪಾದ್ರಿಯಾಗಿದ್ದು, ಅವನು ಅನಾರೋಗ್ಯದಿಂದ ಬಳಲುತ್ತಿದ್ದಾನೆ. ಚಿನ್ನಯ್ಯ ಅವನಿಗೆ ಪಡಿತರ ತಂದುಕೊಡುವುದು, ಆಸ್ಪತ್ರೆಗೆ ಕರೆದೊಯ್ಯುವ ಕೆಲಸ ಮಾಡುತ್ತಿದ್ದ” ಎಂದು ಮಲ್ಲಿಕಾ ವಿವರಿಸಿದ್ದಾಳೆ.
ಧರ್ಮಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾಗ ಯಾವುದೇ ಸಾವಿನ ವಿಷಯದ ಬಗ್ಗೆ ಚಿನ್ನಯ್ಯ ತನ್ನೊಡನೆ ಚರ್ಚಿಸಿಲ್ಲ ಎಂದ ಆಕೆ, “ನಾವು ಮಂಜುನಾಥ ಸ್ವಾಮಿಯ ಭಕ್ತರಾಗಿದ್ದೇವೆ. ನಾನೂ ಧರ್ಮಸ್ಥಳದಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದೆ. ಇಲ್ಲಿಗೆ ಬಂದು 11 ವರ್ಷಗಳಾಗಿವೆ. ಈಗ ಚಿನ್ನಯ್ಯನನ್ನು ಭೇಟಿಯಾಗಲು ಹೋಗುವ ಯೋಚನೆಯಿಲ್ಲ. ಎಸ್ಐಟಿ ಪೊಲೀಸರು ಬಂದು ವಿಚಾರಣೆ ನಡೆಸಿ ಹೋಗಿದ್ದಾರೆ” ಎಂದು ತಿಳಿಸಿದರು.
ಚಿನ್ನಯ್ಯನ ಸಹೋದರನ ಹೇಳಿಕೆ
ಚಿನ್ನಯ್ಯನ ಸಹೋದರ ಆರ್ಮುಗಂ, “ಯಾರೇನೇ ಹೇಳಿದರೂ, ನನ್ನ ತಮ್ಮ ತುಂಬಾ ಒಳ್ಳೆಯವನು. ಯಾರಿಗೂ ತೊಂದರೆ ಕೊಟ್ಟವನಲ್ಲ. ಕೆಲಸಕ್ಕೆಂದು ಹೋಗಿ ಬರುತ್ತಿದ್ದ” ಎಂದು ಆತನನ್ನು ಸಮರ್ಥಿಸಿಕೊಂಡಿದ್ದಾನೆ. ಮಾಧ್ಯಮಗಳೊಂದಿಗೆ ಮಾತನಾಡಿದ ಆರ್ಮುಗಂ, “ನನ್ನ ತಮ್ಮನ ಹಿಂದೆ ಯಾರೋ ಇದ್ದಾರೆ ಎಂಬ ಅನುಮಾನವಿದೆ. ಚಿನ್ನಯ್ಯ ಧರ್ಮಸ್ಥಳದಿಂದ ಚಿಕ್ಕರಸಂಪಾಳ್ಯಕ್ಕೆ ಬಂದು ಹಲವು ವರ್ಷಗಳಾಗಿವೆ. ಈ ವಿಷಯದ ಬಗ್ಗೆ ಚಿನ್ನಯ್ಯನೇ ತಿಳಿಸಬೇಕು. ಅವನು ಯಾವುದೇ ಧರ್ಮಕ್ಕೆ ಮತಾಂತರವಾಗಿಲ್ಲ” ಎಂದು ಒತ್ತಿಹೇಳಿದ್ದಾನೆ.
ಅಂತರ ರಾಜ್ಯ
Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.
ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.
ಅಂತರ ರಾಜ್ಯ
Sreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.
ತ್ರಿಶೂರ್: ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.
2022ರಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್ನ ಫಾಸ್ಟ್ಟ್ರ್ಯಾಕ್ ವಿಶೇಷ ನ್ಯಾಯಾಲಯ-11ರ ನ್ಯಾಯಾಧೀಶೆ ರಮ್ಯಾ ಮೆನನ್ ಅವರು, ಪೋಕ್ಸೋ ಕಾಯ್ದೆಯ ಸೆಕ್ಷನ್ 12 ಹಾಗೂ ಭಾರತೀಯ ದಂಡ ಸಂಹಿತೆ (IPC) 1860ರ ಸೆಕ್ಷನ್ 509ರ ಅಡಿಯಲ್ಲಿ ಶ್ರೀಜಿತ್ ರವಿ ಅವರನ್ನು ದೋಷಿ ಎಂದು ಘೋಷಿಸಿದ್ದಾರೆ.
2022ರ ಜುಲೈ 4ರಂದು ಇಬ್ಬರು ಅಪ್ರಾಪ್ತ ಬಾಲಕಿಯರು ಶಾಲೆಯಿಂದ ತ್ರಿಶೂರ್ನ ಅರನಟ್ಟುಕರದಲ್ಲಿರುವ ತಮ್ಮ ಅಪಾರ್ಟ್ಮೆಂಟ್ಗೆ ಮರಳುತ್ತಿದ್ದ ವೇಳೆ ಘಟನೆ ನಡೆದಿತ್ತು. ಪ್ರಾಸಿಕ್ಯೂಷನ್ ಪ್ರಕಾರ, ಶ್ರೀಜಿತ್ ರವಿ ಕಾರಿನಲ್ಲಿ ಬಾಲಕಿಯರನ್ನು ಹಿಂಬಾಲಿಸಿ, ಅಪಾರ್ಟ್ಮೆಂಟ್ನ ಕಾರು ನಿಲುಗಡೆ ಪ್ರದೇಶದಲ್ಲಿ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದರು.
ವಿಚಾರಣೆ ವೇಳೆ ಬಾಲಕಿಯರು ನ್ಯಾಯಾಲಯದಲ್ಲಿ ಶ್ರೀಜಿತ್ ರವಿಯನ್ನು ಗುರುತಿಸಿದ್ದರು. ಆದರೆ, ಚಲನಚಿತ್ರ ನಟನಾಗಿದ್ದರೂ ಬಾಲಕಿಯರು ಆತನ ಹೆಸರನ್ನು ಗುರುತಿಸಲು ವಿಫಲರಾಗಿದ್ದಾರೆ ಎಂಬ ಅಂಶವನ್ನು ಮುಂದಿಟ್ಟುಕೊಂಡು ನಟನ ಪರ ವಕೀಲರು ಗುರುತಿಸುವಿಕೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದರು.
ಈ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ, ಬಾಲಕಿಯರು ಆರೋಪಿಯನ್ನು ಗುರುತಿಸಿದ್ದು, ಅವರ ದೈಹಿಕ ಚಹರೆಯ ಬಗ್ಗೆಯೂ ಸ್ಪಷ್ಟವಾಗಿ ವಿವರಿಸಿದ್ದಾರೆ ಎಂದು ತಿಳಿಸಿದೆ.
ಪೊಲೀಸ್ ತನಿಖೆಯಲ್ಲಿನ ಕೆಲವು ಲೋಪಗಳ ಬಗ್ಗೆಯೂ ನ್ಯಾಯಾಲಯ ಗಮನ ಸೆಳೆದಿದೆ. ವಿಶೇಷವಾಗಿ, ಘಟನೆ ನಡೆದ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸದಿರುವುದನ್ನು ಉಲ್ಲೇಖಿಸಿದೆ. ಆದರೆ, ತನಿಖೆಯಲ್ಲಿನ ಇಂತಹ ಲೋಪಗಳು ಬಾಲಕಿಯರು ನೀಡಿದ ಸಾಕ್ಷ್ಯಗಳ ವಿಶ್ವಾಸಾರ್ಹತೆಯನ್ನು ಕುಗ್ಗಿಸುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಅಂತರ ರಾಜ್ಯ
Trisha-ವಿಜಯ್ ಸಿಎಂ ಬೆನ್ನಲ್ಲೇ ತ್ರಿಷಾ ರಾಜಕೀಯ ಎಂಟ್ರಿಗೆ ಸಿದ್ಧತೆ? ‘ಜಯಲಲಿತಾ ಉತ್ತರಾಧಿಕಾರಿ’ ಎಂದ ಅಭಿಮಾನಿಗಳು..!
ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತ್ರಿಷಾ ಅವರ ರಾಜಕೀಯ ಪ್ರವೇಶದ ಬಗ್ಗೆಯೂ ಅಭಿಮಾನಿಗಳ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.
ಚೆನ್ನೈ: ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತ್ರಿಷಾ ಅವರ ರಾಜಕೀಯ ಪ್ರವೇಶದ ಬಗ್ಗೆಯೂ ಅಭಿಮಾನಿಗಳ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.
ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ, ಅವರ ಆಪ್ತ ಸ್ನೇಹಿತೆ ಎಂದೇ ಗುರುತಿಸಿಕೊಂಡಿರುವ ತ್ರಿಷಾ ಕೂಡ ರಾಜಕೀಯಕ್ಕೆ ಬರಲಿದ್ದಾರೆ ಎಂಬ ಚರ್ಚೆಗಳು ಜೋರಾಗಿವೆ. ಈ ನಿರೀಕ್ಷೆಯೊಂದಿಗೆ ಅಭಿಮಾನಿಗಳ ಗುಂಪೊಂದು ‘ಇಳಯ ಪುರಟ್ಟಿ ತಲೈವಿ ತ್ರಿಷಾ’ ಹೆಸರಿನಲ್ಲಿ ಹೊಸ ವೇದಿಕೆಯನ್ನು ಆರಂಭಿಸಿದೆ.
ಸಾರ್ವಜನಿಕ ಹಿತಾಸಕ್ತಿ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ತ್ರಿಷಾ ಅವರನ್ನು ರಾಜಕೀಯ ಕ್ಷೇತ್ರಕ್ಕೆ ಕರೆತರುವ ಪ್ರಯತ್ನ ನಡೆಸುವುದಾಗಿ ಸಂಘಟನೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿ ವಿಜಯ್ ಅವರೊಂದಿಗೆ ತ್ರಿಷಾ ಕೂಡ ರಾಜಕೀಯ ಪಯಣ ಆರಂಭಿಸಿದರೆ ತಮಿಳುನಾಡಿನ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂಬ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ.
ಜಯಲಲಿತಾ ಹಾದಿಯಲ್ಲಿ ತ್ರಿಷಾ?
ಅಭಿಮಾನಿಗಳು ತ್ರಿಷಾ ಅವರಿಗೆ ‘ಇಳಯ ಪುರಟ್ಟಿ ತಲೈವಿ’ (ಯುವ ಕ್ರಾಂತಿಕಾರಿ ನಾಯಕಿ) ಎಂಬ ಬಿರುದನ್ನೂ ನೀಡಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ನಾಯಕಿ ದಿವಂಗತ ಜೆ. ಜಯಲಲಿತಾ ಅವರನ್ನು ‘ಪುರಟ್ಟಿ ತಲೈವಿ’ (ಕ್ರಾಂತಿಕಾರಿ ನಾಯಕಿ) ಎಂದು ಕರೆಯಲಾಗುತ್ತಿತ್ತು. ಇದೇ ಹಿನ್ನೆಲೆಯಲ್ಲಿ ತ್ರಿಷಾ ಅವರಿಗೂ ಅಂತಹದ್ದೇ ಬಿರುದು ನೀಡಿ, ಜಯಲಲಿತಾ ಅವರ ಉತ್ತರಾಧಿಕಾರಿ ಎಂಬಂತೆ ಬಿಂಬಿಸಲಾಗುತ್ತಿದೆ.
ಜಯಲಲಿತಾ ಅವರ ವ್ಯಕ್ತಿತ್ವ ಮತ್ತು ಆಡಳಿತ ಶೈಲಿಯನ್ನು ಮೆಚ್ಚಿಕೊಂಡಿರುವ ಅಭಿಮಾನಿಗಳು, ತಮಿಳುನಾಡಿಗೆ ಅವರಂತಹ ನಾಯಕಿಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಪ್ರತಿಯೊಂದು ಬೆಳವಣಿಗೆಯ ಬಗ್ಗೆಯೂ ಜಯಲಲಿತಾ ಮಾಹಿತಿ ಹೊಂದಿದ್ದರು. ಸರಕಾರಿ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ನಿರಂತರ ನಿಗಾ ಇರಿಸುತ್ತಿದ್ದರು ಎಂದು ಸಂಘಟನೆಯ ಪ್ರಕಟಣೆಯಲ್ಲಿ ಹೇಳಲಾಗಿದೆ.
ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದ ಜಯಲಲಿತಾ ಅವರ ಆಡಳಿತ ಶೈಲಿಯನ್ನು ಉಲ್ಲೇಖಿಸಿರುವ ಅಭಿಮಾನಿಗಳು, ತ್ರಿಷಾ ಅವರಲ್ಲೂ ಅಂತಹ ನಾಯಕತ್ವದ ಗುಣಗಳಿವೆ ಎಂದು ಪ್ರತಿಪಾದಿಸಿದ್ದಾರೆ.
ವಿಜಯ್-ತ್ರಿಷಾ ಜೋಡಿಯಿಂದ ಹೊಸ ರಾಜಕೀಯ ಅಧ್ಯಾಯ?
ವಿಜಯ್ ನೇತೃತ್ವದ ಟಿವಿಕೆ ಸರಕಾರದ ಕಾರ್ಯವೈಖರಿಯನ್ನು ಶ್ಲಾಘಿಸಿರುವ ಅಭಿಮಾನಿಗಳು, ತ್ರಿಷಾ ಕೂಡ ರಾಜಕೀಯ ಪ್ರವೇಶಿಸಿದರೆ ಜಯಲಲಿತಾ ಅವರ ಆಡಳಿತವನ್ನು ಹೋಲುವ ಉತ್ತಮ ಆಡಳಿತವನ್ನು ತಮಿಳುನಾಡಿನಲ್ಲಿ ಕಾಣಬಹುದು ಎಂಬ ಆಶಯ ವ್ಯಕ್ತಪಡಿಸಿದ್ದಾರೆ.
ತ್ರಿಷಾ ಅವರ ವ್ಯಕ್ತಿತ್ವ ಜಯಲಲಿತಾ ಅವರನ್ನು ಹೋಲುತ್ತದೆ. ವಿವಿಧ ಸಂದರ್ಭಗಳಲ್ಲಿ ಅವರ ಗುಣಗಳನ್ನು ಗಮನಿಸಿದ್ದೇವೆ. ಅವರ ಆಪ್ತರಿಗೂ ಈ ವಿಚಾರ ತಿಳಿದಿದೆ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ.
ಈ ಅಭಿಯಾನದ ಮೊದಲ ಹೆಜ್ಜೆಯಾಗಿ ‘ಇಳಯ ಪುರಟ್ಟಿ ತಲೈವಿ ತ್ರಿಷಾ ಪೇರವೈ’ ಎಂಬ ಸಂಘಟನೆಯನ್ನು ಆರಂಭಿಸಲಾಗಿದೆ. ಈ ವೇದಿಕೆಯ ಮೂಲಕ ಸಾರ್ವಜನಿಕ ಹಿತಾಸಕ್ತಿ ಮತ್ತು ಸಮಾಜಮುಖಿ ಚಟುವಟಿಕೆಗಳನ್ನು ನಡೆಸಿ, ಆ ಮೂಲಕ ತ್ರಿಷಾ ಅವರ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧಪಡಿಸುವುದು ಅಭಿಮಾನಿಗಳ ಉದ್ದೇಶವಾಗಿದೆ.
ಆದರೆ, ತ್ರಿಷಾ ಅವರು ರಾಜಕೀಯ ಪ್ರವೇಶಿಸುವ ಕುರಿತು ಈವರೆಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಹೀಗಾಗಿ ಸದ್ಯಕ್ಕೆ ಇದು ಅಭಿಮಾನಿಗಳ ಮಟ್ಟದಲ್ಲಿ ನಡೆಯುತ್ತಿರುವ ಅಭಿಯಾನ ಮತ್ತು ನಿರೀಕ್ಷೆಯಷ್ಟೇ ಆಗಿದೆ.
ಈ ಹಿಂದೆ ಟಿವಿ ಸಂದರ್ಶನವೊಂದರಲ್ಲಿ ತಮಾಷೆಯಾಗಿ ಮುಂದೆ ತಾನು ತಮಿಳುನಾಡಿನ ಮುಖ್ಯಮಂತ್ರಿಯಾಗುವುದಾಗಿ ತ್ರಿಷಾ ಹೇಳಿದ್ದ ವಿಡಿಯೊ ಕೂಡ ವಿಜಯ್ ಮುಖ್ಯಮಂತ್ರಿಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿತ್ತು.
ಗಮನಾರ್ಹವೆಂದರೆ, ಜಯಲಲಿತಾ ಕೂಡ ಆರಂಭದಲ್ಲಿ ನಟಿಯಾಗಿಯೇ ಜನಪ್ರಿಯತೆ ಗಳಿಸಿದ್ದರು. ಬಳಿಕ 1982ರಲ್ಲಿ ಎಂ.ಜಿ. ರಾಮಚಂದ್ರನ್ ಅವರ ಎಐಎಡಿಎಂಕೆ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶಿಸಿ, 1991ರಲ್ಲಿ ಮೊದಲ ಬಾರಿಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ತ್ರಿಷಾ ಅವರ ರಾಜಕೀಯ ಪ್ರವೇಶದ ಕುರಿತು ಅಭಿಮಾನಿಗಳಲ್ಲಿ ಮೂಡಿರುವ ಕುತೂಹಲ ತಮಿಳುನಾಡಿನ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.
-
ಬಿಗ್ ನ್ಯೂಸ್21 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ21 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು22 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
Uncategorized13 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ನಿಧನ ವಾರ್ತೆ18 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ22 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಮಂಗಳೂರು23 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಸ್ಥಳೀಯ22 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು















