ಶಿಕ್ಷಣ
Ambika-ಸಂಯುಕ್ತ ಪ್ರಯೋಗಾಲಯ – ಬಾಲ ವಿಜ್ಞಾನಿಗಳಿಗೊಂದು ಉಪಯುಕ್ತ ತಾಣ; ಪುತ್ತೂರಿನ ಅಂಬಿಕಾ ವಿದ್ಯಾಲಯ ರೂಪಿಸಿದ ವಿನೂತನ ವಿಜ್ಞಾನ ಕೇಂದ್ರ
ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆ ಈಗಾಗಲೇ ಸ್ಮಾರ್ಟ್ ಬೋರ್ಡ್ನಂತಹ ದುಬಾರಿ ವ್ಯವಸ್ಥೆಯನ್ನೂ ತರಗತಿಯೊಳಗೆ ಅಳವಡಿಸಿ ವಿದ್ಯಾರ್ಥಿಗಳ ಜ್ಞಾನ ವಿಸ್ತರಣೆಗೆ ಅನುವು ಮಾಡಿಕೊಟ್ಟಿದೆ. ಇದರ ಮುಂದುವರಿದ ಭಾಗವಾಗಿ ಇದೀಗ ಒಂದು ವಿನೂತನ ಕಾಂಪೋಸಿಟ್ ಲ್ಯಾಬ್ ಅನ್ನು ತನ್ನ ವಿದ್ಯಾಸಂಸ್ಥೆಯಲ್ಲಿ ಅಂಬಿಕಾ ಅಳವಡಿಸಿಕೊಂಡಿದೆ.
ಪುತ್ತೂರು: ಸ್ಪರ್ಧಾತ್ಮಕ ಜಗತ್ತಿಗೆ ವಿದ್ಯಾರ್ಥಿಗಳನ್ನು ತಯಾರು ಮಾಡುವ ಹಿನ್ನೆಲೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆ ನವನವೀನ ಶಿಕ್ಷಣ ವ್ಯವಸ್ಥೆಗಳ ಕಡೆಗೆ ಗಮನ ಹರಿಸುತ್ತಿದೆ. ಈಗಾಗಲೇ ಸಂಸ್ಥೆ ಸ್ಮಾರ್ಟ್ ಬೋರ್ಡ್ನಂತಹ ದುಬಾರಿ ವ್ಯವಸ್ಥೆಯನ್ನೂ ತರಗತಿಯೊಳಗೆ ಅಳವಡಿಸಿ ವಿದ್ಯಾರ್ಥಿಗಳ ಜ್ಞಾನ ವಿಸ್ತರಣೆಗೆ ಅನುವು ಮಾಡಿಕೊಟ್ಟಿದೆ. ಇದರ ಮುಂದುವರಿದ ಭಾಗವಾಗಿ ಇದೀಗ ಒಂದು ವಿನೂತನ ಕಾಂಪೋಸಿಟ್ ಲ್ಯಾಬ್ ಅನ್ನು ತನ್ನ ವಿದ್ಯಾಸಂಸ್ಥೆಯಲ್ಲಿ ಅಂಬಿಕಾ ಅಳವಡಿಸಿಕೊಂಡಿದೆ.

ಏನಿದು ಕಾಂಪೋಸಿಟ್ ಲ್ಯಾಬ್? :
ಹೆಸರೇ ಸೂಚಿಸುವಂತೆ ಇದೊಂದು ಸಂಯುಕ್ತ ಪ್ರಯೋಗಾಲಯ. ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಜೀವಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ನಡೆಸುವುದಕ್ಕಾಗಿ ನಿರ್ಮಾಣಗೊಂಡಿರುವ ಆಕರ್ಷಕ ಲ್ಯಾಬ್. ವಿಜ್ಞಾನ ಸಂಬಂಧಿ ನಾನಾ ಪ್ರಯೋಗವನ್ನು ನಡೆಸುವುದಕ್ಕೆ ಇದು ಆಶ್ರಯ ತಾಣ. ದಿನ ನಿತ್ಯ ನಾನಾ ತರಗತಿಯ ವಿದ್ಯಾರ್ಥಿಗಳು ಇಲ್ಲಿ ಬಂದು ವೈವಿಧ್ಯಮಯ ವಿಜ್ಞಾನ ವಿಶೇಷಗಳನ್ನು ಪ್ರಯೋಗದ ಮೂಲಕ ಅರಿತುಕೊಳ್ಳುತ್ತಾರೆ. ಶಿಕ್ಷಕರು ಮಾಡಿ ತೋರಿಸುವಾಗ ತನ್ಮಯರಾಗಿ ಎವೆಯಿಕ್ಕದೆ ನೋಡುತ್ತಾರೆ.

ಬಳಕೆಯ ವಿಧಾನ: ಒಂದನೆಯ ತರಗತಿಯಿಂದ ತೊಡಗಿ ಹತ್ತನೆಯ ತರಗತಿಯವರೆಗೆ ಪ್ರತಿಯೊಂದು ತರಗತಿಯ ವಿದ್ಯಾರ್ಥಿಗಳಿಗೂ ಈ ಕಾಂಪೋಸಿಟ್ ಲ್ಯಾಬ್ ಅನ್ನು ಒದಗಿಸಿಕೊಡಲಾಗುತ್ತದೆ. ವಾರದಲ್ಲಿ ಕನಿಷ್ಟ ಒಂದು ಬಾರಿಯಾದರೂ ಎಲ್ಲಾ ತರಗತಿಯ ಮಕ್ಕಳು ಈ ಲ್ಯಾಬ್ ಒಳಗೆ ಬರುವಂತೆ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ಈ ಲ್ಯಾಬ್‌ಗೆ ಬಂದ ನಂತರ ವಿದ್ಯಾರ್ಥಿಗಳು ಶಿಕ್ಷಕರು ಮಾಡಿತೋರಿಸುವ ವೈವಿಧ್ಯಮಯ ಪ್ರಯೋಗಗಳಿಗೆ ಸಾಕ್ಷಿಯಾಗಿ ವಿಜ್ಞಾನದ ಬಗೆಗಿನ ಕೌತುಕವನ್ನು ಹೆಚ್ಚಿಸಿಕೊಳ್ಳುವಂತೆ ಮಾಡಲಾಗುತ್ತದೆ. ಜತೆಗೆ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಸಂಬಂಧಿ ನೂತನ ಆವಿಷ್ಕಾರಗಳನ್ನು ಕಂಡುಹಿಡಿಯುವ ಆಸಕ್ತಿ ಮೂಡಿಸಿ, ಈ ಲ್ಯಾಬ್ ಅನ್ನು ಬಳಸಿಕೊಂಡು ವೈಜ್ಞಾನಿಕ ಸಾಧನೆ ನಡೆಸುವುದಕ್ಕೆ ಅವಕಾಶ ಒದಗಿಸಿಕೊಡಲಾಗುತ್ತದೆ.
ಕೇವಲ ಸಿಲೆಬಸ್‌ನಲ್ಲಿ ಹೇಳಿರುವ ವಿಜ್ಞಾನ ಪ್ರಯೋಗವನ್ನಷ್ಟೇ ಇಲ್ಲಿ ನಡೆಸುವುದಲ್ಲ. ಮಕ್ಕಳಿಗೆ ಆಸಕ್ತಿ ಮೂಡಿಸುವ ಬೇರೆ ಬೇರೆ ಪ್ರಯೋಗಗಳನ್ನೂ ಶಿಕ್ಷಕರು ಇಲ್ಲಿ ಕೈಗೆತ್ತಿಕೊಳ್ಳುತ್ತಾರೆ. ಅತ್ಯಂತ ವಿಶಾಲ ಹಾಗೂ ಸುವ್ಯವಸ್ಥಿತವಾಗಿ ಮೂಡಿಬಂದಿರುವ ಈ ಲ್ಯಾಬ್ ಮುಂದಿನ ದಿನಗಳಲ್ಲಿ ಬಾಲವಿಜ್ಞಾನಿಗಳನ್ನು ರೂಪಿಸುವ ತಾಣವಾಗಲಿದೆ ಎಂಬುದು ಸಂಸ್ಥೆಯ ಪ್ರಾಂಶುಪಾಲರಾದ ಮಾಲತಿ ಡಿ. ಅವರ ಅಭಿಪ್ರಾಯ.
ಈ ಕಾಂಪೋಸಿಟ್ ಲ್ಯಾಬ್ ಅತ್ಯಂತ ಸುಸಜ್ಜಿತವಾಗಿ ಮೂಡಿಬಂದಿದ್ದು ವಿವಿಧ ವಿಜ್ಞಾನ ವಿಷಯಗಳಿಗೆ, ಪ್ರಯೋಗಗಳಿಗೆ ಅಗತ್ಯವಿರುವ ಎಲ್ಲಾ ಪರಿಕರಗಳನ್ನೂ ಒಳಗೊಂಡಿದೆ. ಮಾತ್ರವಲ್ಲದೆ, ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಹೆಮ್ಮೆಯ ವ್ಯವಸ್ಥೆಯಾಗಿಯೂ ರೂಪುಗೊಂಡಿದೆ. ವಿದ್ಯಾರ್ಥಿಗಳ ನೆಚ್ಚಿನ ತಾಣವಾಗಿ ಪರಿವರ್ತನೆಗೊಂಡಿದೆ. ಎಳೆಯ ವಿದ್ಯಾರ್ಥಿಗಳ ವಿನೂತನ ವೈಜ್ಞಾನಿಕ ಯೋಚನೆಗಳ ಸಾಕಾರಕ್ಕೆ ಈ ಲ್ಯಾಬ್ ಉಪಯೋಗವಾಗುತ್ತಿದೆ.

ತನ್ಮಧ್ಯೆ, ಸಂಸ್ಥೆಯ ವಿಸ್ತರಣೆಯ ಕಾರ್ಯವೂ ನಡೆದಿದೆ. ನೆಲಮಹಡಿಯಲ್ಲದೆ ಮತ್ತೆರಡು ಮಹಡಿಗಳನ್ನು ಹೊಂದಿದ್ದ ಅಂಬಿಕಾ ವಿದ್ಯಾಲಯ ಇದೀಗ ಮತ್ತೊಂದು ನೂತನ ಮಹಡಿಯನ್ನು ಜೋಡಣೆ ಮಾಡಿಕೊಂಡಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ತರಗತಿಗಳನ್ನು ಈ ಮಹಡಿಯಲ್ಲಿ ಒದಗಿಸಿಕೊಡಲಾಗಿದೆ. ಹೀಗೆ ವಿಸ್ತೃತಗೊಂಡ ಮಹಡಿಯಲ್ಲಿ ಈ ಕಾಂಪೋಸಿಟ್ ಲ್ಯಾಬ್ ತಲೆಯೆತ್ತಿ ನಿಂತಿದೆ.

ಮೂಲವಿಜ್ಞಾನ ಕ್ಷೇತ್ರದಲ್ಲಿ ನಮ್ಮ ವಿದ್ಯಾರ್ಥಿಗಳು ದೊಡ್ಡ ಸಾಧನೆಯನ್ನು ಮಾಡುವಂತಾಗಬೇಕು. ದೇಶಕ್ಕೆ ಅತ್ಯುತ್ತಮ ವಿಜ್ಞಾನಿಗಳನ್ನು ಸಮರ್ಪಿಸುವ ಕಾರ್ಯ ನಮ್ಮ ವಿದ್ಯಾಸಂಸ್ಥೆಯಿಂದ ಆಗಬೇಕು ಎಂಬ ಬಹುದೊಡ್ಡ ಕನಸು ನಮ್ಮಲ್ಲಿದೆ. ಆ ಕನಸಿನ ಸಾಕಾರಕ್ಕೆ ಇಂತಹದ್ದೊಂದು ಉತ್ಕೃಷ್ಟ ಲ್ಯಾಬ್‌ನ ಅವಶ್ಯಕತೆ ಇದೆ. ಇದರ ಮೂಲಕ ವೈಜ್ಞಾನಿಕ ಆಸಕ್ತಿ, ಕುತೂಹಲಗಳನ್ನು ಎಳೆಯ ವಯಸ್ಸಿನಿಂದಲೇ ಮಕ್ಕಳಲ್ಲಿ ಮೂಡಿಸುವ ಪ್ರಯತ್ನ ನಡೆಸಲಾಗುತ್ತದೆ. – ಸುಬ್ರಮಣ್ಯ ನಟ್ಟೋಜ, ಅಧ್ಯಕ್ಷರು, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಪುತ್ತೂರು
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ನಿಧನ ವಾರ್ತೆ8 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು7 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ8 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ8 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ8 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಮಂಗಳೂರು4 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ9 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?
-
Uncategorized10 hours agoCJP protest-ಇಂದು CJP ಪ್ರತಿಭಟನೆ : ದೆಹಲಿಗೆ ಬರಬೇಕಾಗಿದ್ದ 250 ರೈಲು ರದ್ದು, ಹಲವು ರೈಲಿನ ವೇಳಾಪಟ್ಟಿ ಬದಲಾವಣೆ : ಮೆಟ್ರೋ ಸಂಚಾರ ಸ್ಥಗಿತ – ಇಂಟರ್ ನೆಟ್ ಬಂದ್..! ‘ಹೆದರಿದ್ರಾ ಮೋದಿಜೀ..?’ ಎಂದ CJP


















